ದ.ಕ.ಜಿ.ಪಂ.: ಆಡಳಿತ-ವಿಪಕ್ಷ  ಪ್ರತಿಭಟನೆ


Team Udayavani, Oct 17, 2017, 11:02 AM IST

17-STATE-18.jpg

ಮಂಗಳೂರು: ಐವರ್ನಾಡು ಗ್ರಾ.ಪಂ. ಪಿಡಿಒ ವರ್ಗಾವಣೆಗೆ ಸೂಚಿಸುವ ಮೂಲಕ ಉಸ್ತುವಾರಿ ಸಚಿವರು ಜಿ.ಪಂ. ಆಡಳಿತದಲ್ಲಿ ಹಸ್ತಕ್ಷೇಪ ನಡೆಸಿದ್ದಾರೆ ಎಂದು ಆಡಳಿತ ಪಕ್ಷ ಬಿಜೆಪಿ ಸದಸ್ಯರು ಹಾಗೂ ಜಿ.ಪಂ. ಅಧ್ಯಕ್ಷರು ಮರಳು ಮಾಫಿಯಾದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಹೆಸರು ಉಲ್ಲೇಖೀಸಿದರು ಎಂದು ಆರೋಪಿಸಿ ವಿಪಕ್ಷ ಕಾಂಗ್ರೆಸ್‌ ಸದಸ್ಯರು ಸದನದ ಬಾವಿಗಿಳಿದು ಪರಸ್ಪರ ಪ್ರತಿಭಟನೆ ನಡೆಸಿದ ಘಟನೆ ಸೋಮವಾರ ನಡೆದ ಜಿ.ಪಂ. ಸಾಮಾನ್ಯ ಸಭೆಯಲ್ಲಿ ನಡೆದಿದೆ.

ಆಡಳಿತ ಪಕ್ಷ ಹಾಗೂ ವಿಪಕ್ಷ ಸದನದಲ್ಲಿ ಏಕಕಾಲದಲ್ಲಿ ಸದನದ ಬಾವಿಗಿಳಿದು ಪರಸ್ಪರ ಪ್ರತಿಭಟನೆ ನಡೆಸಿರುವುದು ದ.ಕ. ಜಿ.ಪಂ. ಇತಿಹಾಸದಲ್ಲೇ ಇದೇ ಪ್ರಥಮವಾಗಿದೆ. ಪ್ರತಿಭಟನೆಯ ಹಿನ್ನೆಲೆಯಲ್ಲಿ ಸಭೆಯನ್ನು ಅನಿರ್ದಿಷ್ಟ ಅವಧಿಗೆ ಮುಂದೂಡಲಾಯಿತು.

ವಿಷಯ ಪ್ರಸ್ತಾವಿಸಿದ ಬಿಜೆಪಿ ಸದಸ್ಯ ಹರೀಶ್‌ ಕಂಜಿಪಿಲಿ ಅವರು ಐವರ್ನಾಡು ಗ್ರಾ.ಪಂ.ನಲ್ಲಿ ದಕ್ಷ ಅಧಿಕಾರಿಯಾಗಿದ್ದ ಹಾಗೂ ಗ್ರಾ.ಪಂ.ಗೆ ಗಾಂಧಿ ಪುರಸ್ಕಾರ ದೊರೆಯುವಲ್ಲಿ ಶ್ರಮಿಸಿದ್ದ ಪಿಡಿಒ ಡಿ. ಶೇಖರ್‌ ಅವರನ್ನು ಗಾಂಧಿ ಪುರಸ್ಕಾರ ಪ್ರದಾನ ಸಮಾರಂಭಕ್ಕೆ ಎರಡು ದಿನ ಬಾಕಿ ಇರುವಂತೆಯೇ ಸುಬ್ರಹ್ಮಣ್ಯ ಗ್ರಾ.ಪಂ.ಗೆ ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ವರ್ಗಾಯಿಸಿದ್ದಾರೆ. ಈ ನಿಯಮ ಬಾಹಿರ ವರ್ಗಾವಣೆ ಮಾಡಲಾಗಿದ್ದು ಇದರ ವಿರುದ್ಧ ಸುಳ್ಯದಲ್ಲಿ ಪ್ರತಿಭಟನೆ ಕೂಡ ನಡೆದಿದೆ. ಅದುದರಿಂದ ಅವರನ್ನು ಮರಳಿ ಐವರ್ನಾಡು ಗ್ರಾ.ಪಂ.ಗೆ ವರ್ಗಾಯಿಸಬೇಕು ಎಂದು ಆಗ್ರಹಿಸಿದರು. ಇದನ್ನು ಬಿಜೆಪಿಯ ಇತರ ಸದಸ್ಯರು ಬೆಂಬ ಲಿಸಿದರು.

ಸೂಚನಾ ಪತ್ರ ಪ್ರದರ್ಶಿಸಿದ ಬಿಜೆಪಿ ಸದಸ್ಯ
ಐವರ್ನಾಡು ಪಿಡಿಒ ಅವರ ವರ್ಗಾವಣೆ ಕೋರಿ ಕಾಂಗ್ರೆಸ್‌ ನಾಯಕರೋರ್ವರು ನೀಡಿರುವ ಕೋರಿಕೆ ಪತ್ರದಲ್ಲಿ ಪಿಡಿಒ ವರ್ಗಾಯಿಸುವಂತೆ ಸೂಚನೆ ನೀಡಿ ಉಸ್ತುವಾರಿ ಸಚಿವರು ಸಹಿ ಮಾಡಿದ್ದಾರೆ ಎನ್ನಲಾದ ಪತ್ರವನ್ನು ಹರೀಶ್‌ ಕಂಜಿಪಿಲಿ ಸಭೆಯಲ್ಲಿ ಪ್ರದರ್ಶಿಸಿ ಸದಸ್ಯರಿಗೆ ವಿತರಿಸಿದರು. ಇದು ಜಿ.ಪಂ. ಆಡಳಿತದಲ್ಲಿ ಉಸ್ತುವಾರಿ ಸಚಿವರು ನಡೆಸಿರುವ ಹಸ್ತಕ್ಷೇಪವಾಗಿದೆ ಎಂದು ಬಿಜೆಪಿ ಸದಸ್ಯರು ಸದನದ ಬಾವಿಗಿಳಿದರು.

ಮರಳು ಮಾಫಿಯಾ ಉಲ್ಲೇಖ
ಉಸ್ತುವಾರಿ ಸಚಿವರ ಪತ್ರದ ಬಗ್ಗೆ ಸಭೆಯಲ್ಲಿ ಆಡಳಿತ ಮತ್ತು ವಿಪಕ್ಷ ಸದಸ್ಯರ ನಡುವೆ ವಾಗ್ವಾದ ನಡೆಯುತ್ತಿದ್ದ ವೇಳೆ ಜಿ.ಪಂ. ಅಧ್ಯಕ್ಷರು ಉಲ್ಲೇಖೀಸಿದ ಮರಳು ಮಾಫಿಯಾ ಮಾತು ಕಾಂಗ್ರೆಸ್‌ ಸದಸ್ಯರ ತೀವ್ರ ಆಕ್ರೋಶಕ್ಕೆ ಕಾರಣವಾಯಿತು. ಸಭೆಯಲ್ಲಿ ಉತ್ತರ ನೀಡುವ ಸಂದರ್ಭದಲ್ಲಿ ಮರಳು ಮಾಫಿಯಾ ದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಹೆಸರನ್ನು ಜಿ.ಪಂ. ಅಧ್ಯಕ್ಷರು ಉಲ್ಲೇಖ ಮಾಡಿದರು ಎಂದು ಕಾಂಗ್ರೆಸ್‌ ಸದಸ್ಯರು ಆರೋಪಿಸಿದರೆ ತಾನು ಜಿಲ್ಲಾ ಉಸ್ತುವಾರಿ ಸಚಿವರ ಹೆಸರು ಉಲ್ಲೇಖೀಸಿಲ್ಲ ಎಂದು ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಹೇಳಿದರು. ಇದನ್ನು ಒಪ್ಪದ ಕಾಂಗ್ರೆಸ್‌ ಸದಸ್ಯರು ಅಧ್ಯಕ್ಷರ ವಿರುದ್ಧ ಸದನದ ಬಾವಿಗಿಳಿದು ಪ್ರತಿಭಟಿಸಿದರು. ಇದರೊಂದಿಗೆ ಏಕಕಾಲದಲ್ಲಿ ಆಡಳಿತ ಮತ್ತು ವಿಪಕ್ಷದ ಸದಸ್ಯರಿಂದ ಪ್ರತಿಭಟನೆ ನಡೆಯಿತು. ಸ್ವಲ್ಪ ಸಮಯದ ಬಳಿಕ ಬಿಜೆಪಿ ಸದಸ್ಯರು ಮತ್ತ ಆಸನಗಳಿಗೆ ಹಿಂದಿರುಗಿ ವರ್ಗಾವಣೆಗೊಂಡಿರುವ ಪಿಡಿಒ ಅವರನ್ನು ಮರಳಿ ಐವರ್ನಾಡು ಗ್ರಾ.ಪಂ.ಗೆ ನಿಯೋಜನೆಗೊಳಿಸುವಂತೆ ಆಗ್ರಹಿಸಿದರು.

ಸಭೆ ಮುಂದೂಡಿಕೆ
ಜಿ.ಪಂ. ಅಧ್ಯಕ್ಷರು ಉಸ್ತುವಾರಿ ಸಚಿವರನ್ನು ಉಲ್ಲೇಖೀಸಿ ಮರಳು ಮಾಫಿಯಾ ಮಾತುಗಳನ್ನು ಆಡಿದ್ದಾರೆ ಎಂದು ಪ್ರತಿಭಟಿಸಿ ಕಾಂಗ್ರೆಸ್‌ ಸದಸ್ಯರು ಧರಣಿ ಮುಂದುವರಿಸಿದಾಗ ಸಭೆಯನ್ನು ಅನಿರ್ದಿ ಷ್ಟಾವಧಿಗೆ ಮುಂದೂಡಲಾಯಿತು. 

ಮರುನಿಯೋಜನೆಗೆ ನಿರ್ಣಯ
ಪಿಡಿಒ ಶೇಖರ್‌ ಅವರನ್ನು ಮರಳಿ ಐವರ್ನಾಡು ಗ್ರಾ.ಪಂ.ಗೆ ನಿಯೋಜಿಸುವಂತೆ ನಿರ್ಣಯ ಕೈಗೊಳ್ಳಲು ಬಿಜೆಪಿ ಸದಸ್ಯರು ಒತ್ತಾ ಯಿಸಿದರು. ಇದಕ್ಕೆ ಕಾಂಗ್ರೆಸ್‌ ಸದಸ್ಯರು ವಿರೋಧ ವ್ಯಕ್ತ ಪಡಿಸಿದರು. ಪಿಡಿಒ ಅವ ರನ್ನು ಐವರ್ನಾಡು ಗ್ರಾ.ಪಂ.ಗೆ ಮರು ನಿಯೋಜನೆ ಗೊಳಿಸುವಂತೆ ಬಹುಮತದ ನಿರ್ಣಯವಾಗಿ ದಾಖಲಿಸುವಂತೆ ಅಧ್ಯಕ್ಷರು ಸೂಚಿಸಿದರು.

ಟಾಪ್ ನ್ಯೂಸ್

ರೋಣ: ಧಾರಾಕಾರ ಮಳೆಗೆ ಅಪಾಯ ಮಟ್ಟ ಮೀರಿ ಹರಿಯುತ್ತಿದೆ ಬೆಣ್ಣಿಹಳ್ಳ; ಪ್ರವಾಹ ಭೀತಿ

ರೋಣ: ಧಾರಾಕಾರ ಮಳೆಗೆ ಅಪಾಯ ಮಟ್ಟ ಮೀರಿ ಹರಿಯುತ್ತಿದೆ ಬೆಣ್ಣಿಹಳ್ಳ; ಪ್ರವಾಹ ಭೀತಿ

ನಮ್ಮೂರಿನಲ್ಲಿ ಪಾನಿಪುರಿ, ಪಾನ್ ಮಸಾಲಾ ಮಾರುವವರು ಗುಜರಾತ್ ನವರು: ಸಿ.ಎಂ.ಇಬ್ರಾಹಿಂ

ನಮ್ಮೂರಿನಲ್ಲಿ ಪಾನಿಪುರಿ, ಪಾನ್ ಮಸಾಲಾ ಮಾರುವವರು ಗುಜರಾತ್ ನವರು: ಸಿ.ಎಂ.ಇಬ್ರಾಹಿಂ

ದತ್ತಪೀಠದಲ್ಲಿ ಮತ್ತೊಂದು ವಿವಾದ: ಗುಹೆಯೊಳಗೆ ನಮಾಜ್, ಗೋರಿ ಪೂಜೆ ಆರೋಪ

ದತ್ತಪೀಠದಲ್ಲಿ ಮತ್ತೊಂದು ವಿವಾದ: ಗುಹೆಯೊಳಗೆ ನಮಾಜ್, ಗೋರಿ ಪೂಜೆ ಆರೋಪ; ವಿಡಿಯೋ ವೈರಲ್

4fire1

ಶಾರ್ಟ್‌ ಸರ್ಕ್ಯೂಟ್‌ನಿಂದ ಮನೆಯಲ್ಲಿ ಬೆಂಕಿ: ತಪ್ಪಿದ ಭಾರಿ ದುರಂತ

ಎಲ್ಲಾ ಪ್ರಾದೇಶಿಕ ಭಾಷೆ ಪೂಜನೀಯ: ಪ್ರಧಾನಿ ಮೋದಿ ಹೇಳಿಕೆಗೆ ಕಿಚ್ಚ ಸುದೀಪ್ ಹೇಳಿದ್ದೇನು?

ಎಲ್ಲಾ ಪ್ರಾದೇಶಿಕ ಭಾಷೆ ಪೂಜನೀಯ: ಪ್ರಧಾನಿ ಮೋದಿ ಹೇಳಿಕೆಗೆ ಕಿಚ್ಚ ಸುದೀಪ್ ಹೇಳಿದ್ದೇನು?

ಬೆಳ್ತಂಗಡಿ: ಗೋಡಂಬಿಯಾಕಾರದ ಮೊಟ್ಟೆ ಇಡುತ್ತಿರುವ ಕೋಳಿ

ಬೆಳ್ತಂಗಡಿ: ಗೋಡಂಬಿಯಾಕಾರದ ಮೊಟ್ಟೆ ಇಡುತ್ತಿರುವ ಕೋಳಿ

1rain

ಮೂಡಲಗಿಯ ಐದು ಸೇತುವೆಗಳು ಸಂಪೂರ್ಣ ಮುಳಗಡೆ: ಸಂಚಾರ ಸ್ಥಗಿತಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

suratkal

ರಸ್ತೆಯಂಚಿಗೆ ವಾಹನ ಇಳಿದರೆ ಎತ್ತಲು ಕ್ರೇನ್‌ ಬರಬೇಕು!

mangalore-city-corporation

ವಾರ್ಡ್‌ ಕಮಿಟಿ ಸ್ವರೂಪದ ಏರಿಯಾ ಸಭಾ!

ಜಿ.ಪಂ., ತಾ.ಪಂ. ಚುನಾವಣೆ ಶೀಘ್ರ ನಡೆಸಲಿ: ಸಲೀಂ ಅಹ್ಮದ್‌

ಜಿ.ಪಂ., ತಾ.ಪಂ. ಚುನಾವಣೆ ಶೀಘ್ರ ನಡೆಸಲಿ: ಸಲೀಂ ಅಹ್ಮದ್‌

ರಾಜ್ಯ ಹೆದ್ದಾರಿಗೆ ಮರ ಬಿದ್ದು ಸಂಚಾರಕ್ಕೆ ತೊಡಕು

ರಾಜ್ಯ ಹೆದ್ದಾರಿಗೆ ಮರ ಬಿದ್ದು ಸಂಚಾರಕ್ಕೆ ತೊಡಕು

ಕರಾವಳಿ ಜನರ ಸಮಗ್ರ ಅಭಿವೃದ್ಧಿಗೆ ಮತ್ಸ್ಯೋದ್ಯಮದ ನೆರವು

ಕರಾವಳಿ ಜನರ ಸಮಗ್ರ ಅಭಿವೃದ್ಧಿಗೆ ಮತ್ಸ್ಯೋದ್ಯಮದ ನೆರವು

MUST WATCH

udayavani youtube

ಮೆಸ್ಕಾಂ ಸಿಬ್ಬಂದಿ ಮೇಲೆ ತಂಡದಿಂದ ಹಲ್ಲೆ! ದೃಶ್ಯ ಸಿಸಿಟಿವಿಯಲ್ಲಿ ಸೆರೆ

udayavani youtube

ಹೈನುಗಾರಿಕೆ ಯಶಸ್ಸು ಕಾಣಲು ಇಲ್ಲಿದೆ formula!

udayavani youtube

ಜಮ್ಮು ಕಾಶ್ಮೀರ ಹೆದ್ದಾರಿಯಲ್ಲಿ ನಿರ್ಮಾಣ ಹಂತದ ಸುರಂಗ ಕುಸಿತ 9 ಮಂದಿ ಸಿಲುಕಿರುವ ಶಂಕೆ

udayavani youtube

ಎಸ್ಸೆಸ್ಸೆಲ್ಸಿ ಫಲಿತಾಂಶ : ಶಿರಸಿ ಸರಕಾರಿ ಶಾಲಾ ವಿದ್ಯಾರ್ಥಿಗಳ ಸಾಧನೆ

udayavani youtube

ಒಳ್ಳೆಯ ಆರೋಗ್ಯಕ್ಕೆ ಯಾವ ರೀತಿ ವ್ಯಾಯಾಮ ಮಾಡಬೇಕು ?

ಹೊಸ ಸೇರ್ಪಡೆ

children

ಮೇ 22ಕ್ಕೆ ಮಕ್ಕಳ ಐಸಿಯು ಘಟಕ ಉದ್ಘಾಟನೆ

ರೋಣ: ಧಾರಾಕಾರ ಮಳೆಗೆ ಅಪಾಯ ಮಟ್ಟ ಮೀರಿ ಹರಿಯುತ್ತಿದೆ ಬೆಣ್ಣಿಹಳ್ಳ; ಪ್ರವಾಹ ಭೀತಿ

ರೋಣ: ಧಾರಾಕಾರ ಮಳೆಗೆ ಅಪಾಯ ಮಟ್ಟ ಮೀರಿ ಹರಿಯುತ್ತಿದೆ ಬೆಣ್ಣಿಹಳ್ಳ; ಪ್ರವಾಹ ಭೀತಿ

ನಮ್ಮೂರಿನಲ್ಲಿ ಪಾನಿಪುರಿ, ಪಾನ್ ಮಸಾಲಾ ಮಾರುವವರು ಗುಜರಾತ್ ನವರು: ಸಿ.ಎಂ.ಇಬ್ರಾಹಿಂ

ನಮ್ಮೂರಿನಲ್ಲಿ ಪಾನಿಪುರಿ, ಪಾನ್ ಮಸಾಲಾ ಮಾರುವವರು ಗುಜರಾತ್ ನವರು: ಸಿ.ಎಂ.ಇಬ್ರಾಹಿಂ

ಕುಷ್ಟಗಿ: ಕೃತಿಕಾ ಮಳೆಗೆ ಭರ್ತಿಯಾದ ರಾಯನಕೆರೆ; ಜನರಲ್ಲಿ ಸಂತಸ

ಕುಷ್ಟಗಿ: ಕೃತಿಕಾ ಮಳೆಗೆ ಭರ್ತಿಯಾದ ರಾಯನಕೆರೆ; ಜನರಲ್ಲಿ ಸಂತಸ

heddari

ಕೆಸರು ತುಂಬಿ ಅವ್ಯವಸ್ಥೆಯ ಆಗರವಾದ ಕಲ್ಲಡ್ಕ ಪೇಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.