ತೊಕ್ಕೊಟ್ಟು ಜಂಕ್ಷನ್‌: ಮರಣ ಗುಂಡಿಗಳಾಗಿವೆ ಚರಂಡಿ ಮೇಲಿನ ಸ್ಲ್ಯಾಬ್‌


Team Udayavani, May 15, 2018, 7:40 AM IST

Tokkottu-15-5.jpg

ಉಳ್ಳಾಲ: ಮಂಗಳೂರಿನಿಂದ ಕೇರಳ ಗಡಿ ಪ್ರದೇಶವನ್ನು ಸಂಪರ್ಕಿಸುವ ಪ್ರಮುಖ ನಗರ ಪ್ರದೇಶ ಉಳ್ಳಾಲ ಬಳಿಯ ತೊಕ್ಕೊಟ್ಟು ಜಂಕ್ಷನ್‌ ವಾಹನ ಚಾಲಕರಿಗೆ ಮತ್ತು ರಸ್ತೆ ಬದಿಯಲ್ಲಿ ನಡೆದಾಡುವ ಸಾರ್ವಜನಿಕರಿಗೆ ಅಪಾಯಕಾರಿಯಾಗಿ ಪರಿಣಮಿಸಿದೆ. ಹೆದ್ದಾರಿ ಕಾಮಗಾರಿ ನಡೆಸುವ ಸಂಸ್ಥೆಯ ನಿರ್ಲಕ್ಷ್ಯದಿಂದ ಚರಂಡಿ ಮೇಲೆ ಹಾಕಿರುವ ಸ್ಲ್ಯಾಬ್‌ ಗಳು ಕುಸಿದು ಮರಣಗುಂಡಿಗಳಾಗಿ ಪರಿಣಮಿಸಿದ್ದು, ಪಾದಚಾರಿಗಳು ಮತ್ತು ವಾಹನ ಚಾಲಕರು ಪ್ರಾಣವನ್ನು ಕೈಯಲ್ಲಿಟ್ಟುಕೊಂಡು ಸಂಚರಿಸುವ ಸ್ಥಿತಿಯಿದೆ.

ಸಮಸ್ಯೆಗಳ ಆಗರ
ಒಂದೆಡೆ ಕುಂಟುತ್ತಾ ಸಾಗುತ್ತಿರುವ ಹೆದ್ದಾರಿ ಫ್ಲೈಓವರ್‌ ಕಾಮಗಾರಿ. ಇನ್ನೊಂದೆಡೆ ಇಕ್ಕಟ್ಟಾದ ಹೆದ್ದಾರಿ ರಸ್ತೆ, ತೊಕ್ಕೊಟ್ಟು ಜಂಕ್ಷನ್‌ನಿಂದ ಕಾಸರಗೋಡು ಕಡೆ ಸುಮಾರು 200ಮೀ. ಸಂಚರಿಸುವುದೇ ಕಷ್ಟಕರವಾಗಿದೆ. ತೊಕ್ಕೊಟ್ಟಿನಿಂದ ಎರಡು ಆಸ್ಪತ್ರೆ ಸಹಿತ ಮೆಡಿಕಲ್‌, ಬ್ಯಾಂಕ್‌ ಮತ್ತು ಭಟ್ನಗರ ಕಡೆ ಸಂಚರಿಸುವ ಪಾದಚಾರಿಗಳು ಈ ರಸ್ತೆ ಬದಿಯಲ್ಲಿ ಸಂಚರಿಸಬೇಕಾದರೆ ಪ್ರಾಣ ಕೈಯಲ್ಲಿಟ್ಟುಕೊಡು ಸಾಗುತ್ತಾರೆ. ಚರಂಡಿಯ ಮೇಲೆ ಹಾಕಿರುವ ಕಾಂಕ್ರೀಟ್‌ ಸ್ಲ್ಯಾಬ್‌ ಮೇಲೆ ವಾಹನಗಳು ಸಂಚರಿಸಿ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು, ಹೆದ್ದಾರಿ ಕಾಮಗಾರಿ ಮಾಡುವ ಸಂಸ್ಥೆಯಾಗಲಿ, ಸಂಬಂಧಪಟ್ಟ ಅಧಿಕಾರಿಗಳಾಗಲಿ ಇತ್ತ ಗಮನಹರಿಸುತ್ತಿಲ್ಲ.


ರಸ್ತೆ ಸುರಕ್ಷೆ ಇಲ್ಲ

ಕಿರಿದಾದ ಹೆದ್ದಾರಿ ಮತ್ತು ಚರಂಡಿಯ ಸ್ಲ್ಯಾಬ್‌ ಒಂದೇ ಮಟ್ಟದಲ್ಲಿದ್ದು, ಘನ ವಾಹನಗಳನ್ನು ದ್ವಿಚಕ್ರ ವಾಹನ ಸವಾರರು ಹಿಂದಿಕ್ಕಲು ಹೋಗಿ ಗುಂಡಿಗೆ ಬಿದ್ದು ಕೈಕಾಲು ಮುರಿದುಕೊಂಡ ಅನೇಕ ಘಟನೆಗಳು ಇಲ್ಲಿ ನಡೆದಿವೆ. ರಾತ್ರಿ ವೇಳೆ ಪಾದಚಾರಿಗಳು ಈ ಗುಂಡಿಗೆ ಬಿದ್ದು ಕೈಕಾಲು ಮುರಿದುಕೊಂಡರೂ ಈ ಚರಂಡಿಯ ಕಾಂಕ್ರೀಟ್‌ ದುರಸ್ತಿಗೆ ಯಾರೂ ಮುಂದಾಗಿಲ್ಲ.

ಸರಿಯಾದ ಫುಟ್‌ ಪಾತ್‌ ಇಲ್ಲ 
ತೊಕ್ಕೊಟ್ಟು ಜಂಕ್ಷನ್‌ ಸಂಪರ್ಕಿಸುವಲ್ಲಿ ಚರಂಡಿಯನ್ನು ಮುಚ್ಚದೇ ಇರುವು ದರಿಂದ ಪಾದಚಾರಿಗಳು ರಸ್ತೆಯಲ್ಲೇ ಸಂಚರಿಸುವ ಸ್ಥಿತಿಯಿದೆ. ಮಂಗಳೂರು ವಿವಿ ಕಡೆಯ ರಸ್ತೆಯಿಂದ ಮಂಗಳೂರು ಮತ್ತು ಕೇರಳ ಕಡೆ ಸಂಚರಿಸುವ ವಾಹನಗಳು ಮತ್ತು ಮಂಗಳೂರಿನಿಂದ ಕೇರಳ, ಉಳ್ಳಾಲ ಕಡೆ ಸಂಪರ್ಕಿಸುವ ವಾಹನಗಳು ಈ ರಸ್ತೆಯಲ್ಲಿ ವೇಗವಾಗಿ ಬರುವುದರಿಂದ ಪಾದಚಾರಿಗಳು ಇದೇ ರಸ್ತೆಯಲ್ಲಿ ತೊಕ್ಕೊಟ್ಟು ಜಂಕ್ಷನ್‌ ದಾಟುವುದು ಅಪಾಯಕಾರಿಯಾಗಿದೆ. ಚರಂಡಿಯನ್ನು ಮುಚ್ಚಿ ಫುಟ್‌ಪಾತ್‌ ನಿರ್ಮಾಣ ಅಥವಾ ಫುಟ್‌ಪಾತ್‌ನಲ್ಲಿ ನಿರ್ಮಾಣಗೊಂಡಿರುವ ಅಂಗಡಿಗಳನ್ನು ಬದಿಗೆ ಸರಿಸಿದರೆ ಪ್ರಯಾಣಿಕರು ಸಂಚರಿಸಲು ಸಹಕಾರಿಯಾಗಲಿದೆ.

ಆಡಳಿತ ಮೌನ
ಉಳ್ಳಾಲ ನಗರಸಭಾ ವ್ಯಾಪ್ತಿಗೆ ಬರುವ ತೊಕ್ಕೊಟ್ಟು ಜಂಕ್ಷನ್‌ನಲ್ಲಿ ಸಮಸ್ಯೆ ಇದ್ದರೂ ಸ್ಥಳಿಯಾಡಳಿತ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇದನ್ನು ದುರಸ್ತಿ ಮಾಡಲು ಸಂಬಂಧಿತ ಇಲಾಖೆಗೆ ಸೂಚಿಸಿಲ್ಲ. ಇನ್ನೊಂದೆಡೆ ಜಿಲ್ಲಾಡಳಿತವೂ ಹೆದ್ದಾರಿ ಕಾಮಗಾರಿಯ ಬಗ್ಗೆ ನಿರ್ಲಕ್ಷ್ಯ ಧೋರಣೆ ಮಾಡುತ್ತಿದ್ದು, ಯಾವುದೇ ಕ್ರಮ ಕೈಗೊಂಡಿಲ್ಲ.

ಅವೈಜ್ಞಾನಿಕ ಚರಂಡಿ
ಎಷ್ಟೋ ಬಾರಿ ಚರಂಡಿಗೆ ಬಿದ್ದು ಗಾಯಗೊಂಡ ಪಾದಚಾರಿಗಳನ್ನು ಉಪಚರಿಸಿದ್ದೇವೆ. ಹಲವು ಬಾರಿ ದ್ವಿಚಕ್ರ, ತ್ರಿಚಕ್ರ ವಾಹನ ಚಾಲಕರು ಈ ಗುಂಡಿಗೆ ಬಿದ್ದು ವಾಹನಗಳನ್ನು ತೆಗೆಯಲು ಸಾಧ್ಯವಾಗದೆ ಕಷ್ಟಪಟ್ಟಿದ್ದಾರೆ. ಚರಂಡಿ ಅವೈಜ್ಞಾನಿಕವಾಗಿದ್ದು, ರಸ್ತೆ ವಿಸ್ತರಿಸಿ ಚರಂಡಿ ಪುನರ್‌ ನಿರ್ಮಾಣ ಮಾಡಿದರೆ ಉತ್ತಮ.
– ಮಹಮ್ಮದ್‌ ಅಬ್ಬುಸಾಲಿ, ಸ್ಥಳೀಯ ವ್ಯಾಪಾರಸ್ಥರು

ಪರ್ಯಾಯ ವ್ಯವಸ್ಥೆಯಿಲ್ಲ
ತೊಕ್ಕೊಟ್ಟು ಜಂಕ್ಷನ್‌ ನಿಂದ ಭಟ್ನಗರ ಕಡೆ ಸಂಚರಿಸಲು ಪರ್ಯಾಯ ವ್ಯವಸ್ಥೆ ಇಲ್ಲ. ಜಂಕ್ಷನ್‌ನಲ್ಲಿ ಸಂಚರಿಸಬೇಕಾದರೆ ಪಾದಚಾರಿಗಳು ರಸ್ತೆಯನ್ನೇ ಆಶ್ರಯಿಸುವ ಸ್ಥಿತಿಯಿದೆ. ವೀರಮಾರುತಿ ವ್ಯಾಯಾಮ ಶಾಲೆ ಯವರೆಗೆ ಸರ್ವೀಸ್‌ ರಸ್ತೆಯೊಂದಿಗೆ ಚರಂಡಿ, ಫುಟ್‌ಪಾತ್‌ ನಿರ್ಮಾಣ ಮಾಡಿದರೆ ಉತ್ತಮ.
– ಸಂದೀಪ್‌, ಟಿ.ಸಿ. ರೋಡ್‌

ಸುಗಮ ಸಂಚಾರಕ್ಕೆ ಕ್ರಮ
ತೊಕ್ಕೊಟ್ಟು ಜಂಕ್ಷನ್‌ ನಲ್ಲಿ ಚರಂಡಿ ಕಾಂಕ್ರೀಟ್‌ ಕುಸಿತದ ಬಗ್ಗೆ ಮಾಹಿತಿಯಿಲ್ಲ. ಈ ಕುರಿತು ಕಾಮಗಾರಿ ನಡೆಸುತ್ತಿರುವ ನವಯುಗ್‌ ಸಂಸ್ಥೆಗೆ ಮಾಹಿತಿ ನೀಡಿ ಅದನ್ನು ಸರಿಪಡಿಸಿ ಪಾದಚಾರಿಗಳು ಮತ್ತು ವಾಹನ ಚಾಲಕರ ಸುಗಮ ಸಂಚಾರಕ್ಕೆ ಕ್ರಮ ಕೈಗೊಳ್ಳಲಾಗುವುದು.
– ವಿಜಯ ಕುಮಾರ್‌, ಯೋಜನಾ ಅಧಿಕಾರಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ

— ವಸಂತ ಕೊಣಾಜೆ

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.