ಕರಾವಳಿಯಲ್ಲಿ ಈಸ್ಟರ್‌ ಆಚರಣೆ

Team Udayavani, Apr 2, 2018, 7:59 AM IST

sa1.jpg

ಮಂಗಳೂರು/ಉಡುಪಿ: ಕ್ರೈಸ್ತರು ಎ. 1ರಂದು ಯೇಸು ಕ್ರಿಸ್ತರ ಪುನರುತ್ಥಾನದ ಹಬ್ಬ ಈಸ್ಟರನ್ನು ಚರ್ಚ್‌ಗಳಲ್ಲಿ ಶ್ರದ್ಧೆ ಮತ್ತು ಭಕ್ತಿಯಿಂದ ಆಚರಿಸಿದರು. ಚರ್ಚ್‌ಗಳಲ್ಲಿ ಶನಿವಾರ ರಾತ್ರಿ ಮತ್ತು ರವಿವಾರ ಬೆಳಗ್ಗೆ ಈಸ್ಟರ್‌ ಹಬ್ಬದ ಬಲಿಪೂಜೆಗಳು ನಡೆದವು. ಮಂಗಳೂರಿನ ಬಿಷಪ್‌ ರೈ| ರೆ| ಡಾ| ಅಲೋಶಿಯಸ್‌ ಪಾವ್ಲ್ ಡಿ’ಸೋಜಾ ಅವರು ರೊಜಾರಿಯೋ ಕೆಥೆಡ್ರಲ್‌ನಲ್ಲಿ ಶನಿವಾರ ರಾತ್ರಿ ಹಬ್ಬದ ಬಲಿ  ಪೂಜೆಯ ನೇತೃತ್ವ ವಹಿಸಿದ್ದರು.

ಆಯಾ ಚರ್ಚ್‌ಗಳಲ್ಲಿ ಸ್ಥಳೀಯ ಧರ್ಮ ಗುರುಗಳ ಮುಖಂಡತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಜರಗಿದವು. ಹೊಸ ಅಗ್ನಿಯ ಆಶೀರ್ವಚನದೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಹೊಸ ಅಗ್ನಿಯಿಂದ ಈಸ್ಟರ್‌ ಮೋಂಬತ್ತಿಯನ್ನು ಧರ್ಮಾಧ್ಯಕ್ಷರು/ ಗುರುಗಳು ಬೆಳಗಿಸಿದ ಬಳಿಕ ಭಾಗವಹಿಸಿದ್ದ ಸಮಸ್ತ ಕ್ರೈಸ್ತರು ಆ ಅಗ್ನಿಯ ಮೂಲಕ ಮೇಣದ ಬತ್ತಿಗಳನ್ನು ಉರಿಸಿ ಪ್ರಾರ್ಥನೆ ಸಲ್ಲಿಸಿದರು. ಬೈಬಲಿನ ಹಳೆಯ ಮತ್ತು ಹೊಸ ಒಡಂ ಬಡಿಕೆಯ ಆಯ್ದ ಭಾಗಗಳ ವಾಚನದ ಬಳಿಕ ಬಿಷಪರು/ ಧರ್ಮ ಗುರುಗಳು ಪ್ರವಚನ ಮತ್ತು ಸಂದೇಶ ನೀಡಿದರು.

ಪವಿತ್ರ ಜಲದ ಆಶೀರ್ವಚನ ಹಾಗೂ ಕ್ರೈಸ್ತ ವಿಶ್ವಾಸದ ಸತ್ಯದ ಮರು ದೃಢೀಕರಣ ಈ ಸಂದರ್ಭದಲ್ಲಿ ನಡೆ ಯಿತು. ಕ್ರೈಸ್ತ ಸಂತರನ್ನು ಸ್ಮರಿಸಿ ಅವರ ಶುಭಾಶೀರ್ವಾದಗಳನ್ನು ಕೋರಲಾಯಿತು. ಸಂಭ್ರಮದ ಬಲಿ ಪೂಜೆಯ ಬಳಿಕ ಭಾಗವಹಿಸಿದ ಕ್ರೈಸ್ತ ಬಾಂಧವರು ಈಸ್ಟರ್‌ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. 

ರವಿವಾರ ಕ್ರೈಸ್ತ ಬಾಂಧವರು ತಮ್ಮ ತಮ್ಮ ಮನೆಗಳಲ್ಲಿ ಈಸ್ಟರ್‌ ಹಬ್ಬದ ಊಟವನ್ನು ಸವಿದರು. ಕ್ರೈಸ್ತ ಸಭೆಯು ವಿಭೂತಿ ಬುಧ ವಾರದಿಂದ ಮೊದಲ್ಗೊಂಡು ಈಸ್ಟರ್‌ ಹಬ್ಬದವರೆಗಿನ 40 ದಿನ ಗಳ ತನಕ ವ್ರತಾಚರಣೆಗೆ ಕರೆ ನೀಡು ತ್ತದೆ. ಈ ಅವಧಿಯ ಕೊನೆಯ 7 ದಿನಗಳನ್ನು ಪವಿತ್ರ ಸಪ್ತಾಹ ವನ್ನಾಗಿ ಆಚರಿಸಲಾಗುತ್ತದೆ. ಗರಿಗಳ ರವಿವಾರದೊಂದಿಗೆ ಪ್ರಾರಂಭಗೊಳ್ಳುವ ಈ ಸಪ್ತಾಹ ಈಸ್ಟರ್‌ ರವಿವಾರ ದಂದು ಮುಕ್ತಾಯಗೊಳ್ಳುತ್ತದೆ. ಈ ಸಪ್ತಾಹದ ಗುರುವಾರ ಯೇಸುಕ್ರಿಸ್ತರ ಕೊನೆಯ ಭೋಜನದ ದಿನ, ಶುಕ್ರವಾರ ಯೇಸು ಕ್ರಿಸ್ತರು ಶಿಲುಬೆಯಲ್ಲಿ ಮರಣಿ ಸಿದ ದಿನ, ಶನಿವಾರ ಈಸ್ಟರ್‌ ಹಬ್ಬದ ಜಾಗರಣೆ ಹಾಗೂ ರವಿವಾರ ಈಸ್ಟರ್‌ ಅಥವಾ ಯೇಸು ಕ್ರಿಸ್ತರು ಮರಣವನ್ನು ಜಯಿಸಿ ಪುನರುತ್ಥಾನಗೊಂಡ ಹಬ್ಬ ವನ್ನು ಆಚರಿಸಲಾಗುತ್ತದೆ.

ಟಾಪ್ ನ್ಯೂಸ್

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.