ಕರಾವಳಿಯಲ್ಲಿ ಸಂಭ್ರಮದ ಈದುಲ್‌ ಫಿತ್ರ ಆಚರಣೆ

Team Udayavani, Jun 6, 2019, 10:07 AM IST

RAMZAN

ಮಂಗಳೂರು/ಉಡುಪಿ/ಕಾಸರಗೋಡು: ರಮ್ಜಾನ್‌ ತಿಂಗಳ ಉಪವಾಸದ ಬಳಿಕ ಶವ್ವಾಲ್‌ ತಿಂಗಳ ಆರಂಭದ ದಿನವಾದ ಬುಧವಾರ ಮುಸ್ಲಿಮರು ಈದುಲ್‌ ಫಿತ್ರ ಹಬ್ಬವನ್ನು ಮಂಗಳೂರು ಸಹಿತ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳು ಸೇರಿದಂತೆ ಕರಾವಳಿಯಾದ್ಯಂತ ಸಂಭ್ರಮ, ಸಡಗರದಿಂದ ಆಚರಿಸಿದರು.

ಕರಾವಳಿ ಜಿಲ್ಲೆಗಳ ಎಲ್ಲ ಪ್ರಮುಖ ಮಸೀದಿಗಳಲ್ಲಿ ಬೆಳಗ್ಗೆ ಸಾಮೂಹಿಕ ನಮಾಝ್, ಧರ್ಮ ಗುರುಗಳು ಈದ್‌ ಸಂದೇಶ ಮತ್ತು ಪ್ರವಚನ ನೀಡಿದರು. ಪ್ರಮುಖ ಮಸೀದಿಗಳಲ್ಲಿ ಸೌಹಾರ್ದ ಸಭೆ ನಡೆಯಿತು.

ಮಂಗಳೂರು ಬಾವುಟಗುಡ್ಡೆಯ ಈದ್ಗಾ ಪ್ರಾರ್ಥನಾ ಮಂದಿರದಲ್ಲಿ ದ.ಕ. ಜಿಲ್ಲಾ ಖಾಝಿ ಅಲ್‌ಹಾಜ್‌ ತ್ವಾಖಾ ಅಹ್ಮದ್‌ ಮುಸ್ಲಿಯಾರ್‌ ನೇತೃತ್ವದಲ್ಲಿ ಈದ್‌ ನಮಾಝ್ ನಡೆಯಿತು.

ಮಾನವ ಸಂಬಂಧ ವೃದ್ಧಿಗೆ ಪ್ರೇರಣೆ ನೀಡಲಿ
ಈದುಲ್‌ ಫಿತ್ರ ಹಬ್ಬವು ಕುಟುಂಬ, ಸಮಾಜ, ದೇಶ ಮತ್ತು ಜಾಗತಿಕ ಮಟ್ಟದಲ್ಲಿ ಮನುಷ್ಯ- ಮನುಷ್ಯರ ನಡುವಣ ಸಂಬಂಧ ವೃದ್ಧಿಗೆ ಪ್ರೇರಣೆ ನೀಡಲಿ. ಹಳಸಿದ ಸಂಬಂಧಗಳು ಮರು ಜೋಡಣೆಯಾಗಲಿ. “ಕೆಡುಕನ್ನು ಒಳಿತಿನ ಮೂಲಕ ಎದುರಿಸಿ’ ಎಂಬ ಕುರ್‌ಆನ್‌ ಸಂದೇಶ ಹಾಗೂ ಪರಸ್ಪರ ಪ್ರೀತಿ, ವಿಶ್ವಾಸದ ಮೂಲಕ ಜಗತ್ತನ್ನು ಗೆದ್ದಿರುವ ಪ್ರವಾದಿ ಬೋಧನೆ ನಮಗೆಲ್ಲಾ ಮಾರ್ಗದರ್ಶಿಯಾಗಲಿ ಎಂದು ಖಾಝಿ ತ್ವಾಖಾ ಅಹ್ಮದ್‌ ಮುಸ್ಲಿಯಾರ್‌ ಸಂದೇಶದಲ್ಲಿ ಹೇಳಿದರು.

ಪವಿತ್ರ ರಮ್ಜಾನ್‌ ತಿಂಗಳ 30 ಉಪವಾಸ ವ್ರತ, ದಾನ ಧರ್ಮಗಳನ್ನು ಮಾಡುತ್ತಾ, ಯಾವುದೇ ಕೆಡುಕಿಗೆ ಆಸ್ಪದ ನೀಡದ ಮುಸ್ಲಿಮರು, ಸಾಕಷ್ಟು ಒಳಿತಿನ, ಪುಣ್ಯದ ಕಾರ್ಯಗಳನ್ನು ಮಾಡಿದ್ದಾರೆ. ಅದರ ಸಂತೋಷದಲ್ಲಿ ಈದುಲ್‌ ಫಿತ್ರ ಆಚರಿಸುತ್ತಿದ್ದಾರೆ ಎಂದರು. ಶಾಹ ಅಮೀರ್‌ ಅಲಿ ಮಸೀದಿಯ ಇಮಾಮ್‌ ಮೌಲಾನ ರಿಯಾಝುಲ್‌ ಹಖ್‌ ಈದ್‌ ನಮಾಝ್ ಬಗ್ಗೆ ಮಾಹಿತಿ ನೀಡಿದರು.

ಸೌಹಾರ್ದ ಸಭೆ
ಈದ್‌ ನಮಾಝ್ ಬಳಿಕ ಮಸೀದಿ ಆವರಣದಲ್ಲಿ ಸರ್ವಧರ್ಮೀಯ ಗಣ್ಯರ ಸಮ್ಮುಖ ಸೌಹಾರ್ದ ಸಭೆ ನಡೆಯಿತು. ಉಡುಪಿ ಜಿಲ್ಲೆಯ ವಿವಿಧ ಮಸೀದಿಗಳಲ್ಲಿ ನಮಾಜು ನಡೆಯಿತು., ಮುಸ್ಲಿಮರು ಪರಸ್ಪರ ಶುಭಾಶಯ ಕೋರಿದರು. ಕೆಥೊಲಿಕ್‌ ಸಭಾದವರು ಜಾಮಿಯ ಮಸೀದಿಗೆ ತೆರಳಿ ಹಬ್ಬದ ಶುಭಾಶಯ ಕೋರಿದರು. ಕಾಸರಗೋಡು ಜಿಲ್ಲೆಯ ವಿವಿಧ ಮಸೀದಿಗಳಲ್ಲಿ ಈದುಲ್‌ ಫಿತ್ರ ಹಬ್ಬ ನಡೆಯಿತು.

ವಿಶೇಷ ವ್ಯವಸ್ಥೆ
ಬಾವುಟಗುಡ್ಡೆ ಈದ್ಗಾದಲ್ಲಿ ನಮಾಝ್ಗೆ ಚಪ್ಪರ ಮೂಲಕ ವಿಶೇಷ ವ್ಯವಸ್ಥೆ ಮಾಡಲಾಗಿತ್ತು. ಪೊಲೀಸರು ಸಂಚಾರ ನಿಯಂತ್ರಿಸಿ ವಿಶೇಷ ಬಂದೋಬಸ್ತ್ ಏರ್ಪಡಿಸಿದ್ದರು. ವಿವಿಧೆಡೆ ಮುಸ್ಲಿಂ ಬಾಂಧವರು ಸಿಹಿ ಹಂಚಿ ಸಂಭ್ರಮಿಸಿದರು.

ಶಾಂತಿ, ಸಹೋದರತ್ವದ ಹಬ್ಬ : ಖಾದರ್‌
ಸಚಿವ ಯು.ಟಿ. ಖಾದರ್‌ ಮಾತನಾಡಿ, ಈದುಲ್‌ ಫಿತ್ರ ಶಾಂತಿ, ಸಹೋದರತೆ, ಏಕತೆ, ಪರಸ್ಪರ ಸಹಕಾರ ಹಾಗೂ ಇನ್ನೊಬ್ಬರ ಕಷ್ಟದಲ್ಲಿ ಭಾಗಿಯಾಗುವಂತಹ ಮೌಲ್ಯಾಧಾರಿತ ಸಂದೇಶ ಸಾರುವ ಹಬ್ಬ ಎಂದು ಹೇಳಿದರು.

ಒಂದು ತಿಂಗಳ ಉಪವಾಸದ ಸಂದರ್ಭ ಅನುಸರಿಸಿದ ಶಾಂತಿ, ಸಹನೆಯ ಗುಣಗಳನ್ನು ಮುಂದೆಯೂ ಜೀವನದಲ್ಲಿ ಅಳವಡಿಸಿಕೊಂಡು ಹೋಗಬೇಕು; ಈ ದಿಶೆಯಲ್ಲಿ ಹಬ್ಬ ಆಚರಣೆ ಪ್ರೇರಣೆ ಒದಗಿಸಲಿ ಎಂದರು.

ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಐವನ್‌ ಡಿ’ಸೋಜಾ, ಝೀನತ್‌ ಬಕ್‌ ಕೇಂದ್ರ ಜುಮಾ ಮಸೀದಿ ಅಧ್ಯಕ್ಷ ವೈ. ಅಬ್ದುಲ್ಲ ಕುಂಞಿ ಹಬ್ಬದ ಸಂದೇಶ ನೀಡಿದರು. ಮಂಗಳೂರು ಪೊಲೀಸ್‌ ಆಯುಕ್ತ ಸಂದೀಪ್‌ ಪಾಟೀಲ್‌ ಈದ್‌ ಹಬ್ಬದ ಶುಭಾಶಯ ಸಲ್ಲಿಸಿದರು. ಮಾಜಿ ಶಾಸಕ ಜೆ.ಆರ್‌.ಲೋಬೊ, ಸಂತ ಅಲೋಶಿಯಸ್‌ ಕಾಲೇಜು ಪ್ರಾಂಶುಪಾಲ ರೆ| ಡಾ| ಪ್ರವೀಣ್‌ ಮಾರ್ಟಿಸ್‌, ಡಿಸಿಪಿ ಹನುಮಂತರಾಯ ಮೊದಲಾದವರು ಉಪಸ್ಥಿತರಿದ್ದರು. ಝೀನತ್‌ ಬಕ್‌ ಮಸೀದಿಯ ಟ್ರಸ್ಟಿ ಎಸ್‌.ಎಂ. ರಶೀದ್‌ ಹಾಜಿ ಸ್ವಾಗತಿಸಿ, ವಂದಿಸಿದರು.

ಟಾಪ್ ನ್ಯೂಸ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ

Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.