ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ತುರ್ತು ಸಭೆ


Team Udayavani, Nov 6, 2017, 11:26 AM IST

6Nov–6.jpg

ಉಳ್ಳಾಲ: ತೊಕ್ಕೊಟ್ಟು ಜಂಕ್ಷನ್‌ನಲ್ಲಿ ಹೆದ್ದಾರಿ ಕಾಮಗಾರಿ ವಿಳಂಬದಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು,ಕಾಮಗಾರಿಯನ್ನು ನಿರ್ವಹಿಸಲು ಸಾಧ್ಯವಾಗದಿದ್ದಲ್ಲಿ ಜಿಲ್ಲಾಧಿಕಾರಿಗೆ ಪತ್ರ ಬರೆದುಕೊಡಿ ಎಂದು ಸಂಚಾರಿ ಮತ್ತು ಅಪರಾಧ ವಿಭಾಗದ ಡಿಸಿಪಿ ಉಮಾಪ್ರಶಾಂತ್‌ ಅವರು ರಾ.ಹೆ. ಕಾಮಗಾರಿ ಗುತ್ತಿಗೆ ವಹಿಸಿರುವ ಕಂಪೆನಿ ಸಿಬಂದಿಯನ್ನು ತರಾಟೆಗೆ ತೆಗೆದುಕೊಂಡರು.

ತೊಕ್ಕೊಟ್ಟು ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆಯಿಂದ ಶನಿವಾರ ಲಾರಿ ಸ್ಕೂಟರ್‌ ಮಧ್ಯೆ ನಡೆದ ಅಪಘಾತದಲ್ಲಿ ಜೀವನ್‌ ಮೃತಪಟ್ಟಿದ್ದರೂ ಈ ಪ್ರಕರಣಕ್ಕೆ ಸಂಬಂಧಿಸಿ ನಡೆದ ರಸ್ತೆ ತಡೆ ಹಿನ್ನೆಲೆಯಲ್ಲಿ ಸಾರ್ವಜನಿಕ ಮುಖಂಡರು, ಪೊಲೀಸರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಿರತ ಅಧಿಕಾರಿಗಳ ಸಮ್ಮುಖದಲ್ಲಿ ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ರವಿವಾರ ತುರ್ತು ಸಭೆ ನಡೆಯಿತು.

ಕಾನೂನಿನಡಿ ಹೈವೇ ಪ್ಯಾಟ್ರಲಿಂಗ್‌ ವಾಹನ ಇರಬೇಕು. ಆದರೆ ನಂತೂರಿನಿಂದ ತಲಪಾಡಿವರೆಗೆ ಒಂದೂ ಪ್ಯಾಟ್ರಲಿಂಗ್‌ ಆಗಲಿ, ಆಂಬ್ಯುಲೆನ್ಸ್‌ ವ್ಯವಸ್ಥೆಯೂ ಕಂಪೆನಿ ನಿರ್ವಹಿಸುತ್ತಿಲ್ಲ. ಹೆದ್ದಾರಿ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ ನಡೆಯುತ್ತಿದೆ. ಈಗ ಸಭೆ ಕರೆದ ಬಳಿಕ ದುರಸ್ತಿ ಕಾರ್ಯ ನಡೆಸುತ್ತೇನೆ ಅನ್ನುವವರಿಗೆ ಮುಂಚಿತವಾಗಿ ದುರಸ್ತಿ ಕಾರ್ಯ ನಡೆಸಲು ಯಾಕೆ ಸಾಧ್ಯವಾಗಲಿಲ್ಲ ಎಂದು ಪ್ರಶ್ನಿಸಿದ ಡಿಸಿಪಿ, ಶನಿವಾರದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿ ಸಭೆಯಲ್ಲಿ ಭಾಗವಹಿಸಿದ್ದ ಇಬ್ಬರು ಸಿಬಂದಿ ವಿರುದ್ಧ ಪ್ರಕರಣ ದಾಖಲಿಸುವುದಾಗಿ ಎಚ್ಚರಿಕೆ ನೀಡಿದೆ.

ಭೂಸ್ವಾಧೀನ ವಿಳಂಬ
ಕಂಪೆನಿ ಎಂಜಿನಿಯರ್‌ ಹರೀಶ್‌ ಮಾತನಾಡಿ, 2010 ರಿಂದ ಫ್ಲೈಓವರ್‌ ಕಾಮಗಾರಿ ಆರಂಭಿಸಲಾಗಿದೆ. ಆರಂಭದಲ್ಲಿ ಭೂಸ್ವಾಧೀನ ವಿಳಂಬವಾದ ಹಿನ್ನೆಲೆಯಲ್ಲಿ ಕಾಮಗಾರಿಗೆ ಹಿನ್ನೆಡೆಯಾಯಿತು. ತದನಂತರ ಸಾರ್ವಜನಿಕರ ಒತ್ತಾಯದ ಹಿನ್ನೆಲೆಯಲ್ಲಿ ಡಿಸೈನ್‌ ಬದಲಾಯಿತು. ಇದರಿಂದ ಇನ್ನಷ್ಟು ವಿಳಂಬವಾಯಿತು ಎಂದರು.

ಸಾಮಾಜಿಕ ಕಾರ್ಯಕರ್ತ ರಾಝಿಕ್‌ ಉಳ್ಳಾಲ್‌ ಮಾತನಾಡಿ, ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ತೀರಾ ನಿರ್ಲಕ್ಷ್ಯದಿಂದ ನಡೆಯುತ್ತಿದೆ. ಸಾರ್ವಜನಿಕರ ತೊಂದರೆಗಳಿಗೆ ಸ್ಪಂದಿಸದೆ ಕಾಮಗಾರಿ ನಡೆಸಲಾಗುತ್ತಿದೆ. ಕೋಟಿ ರೂ. ಪ್ರಾಜೆಕ್ಟನ್ನು ಕೇವಲ 14 ಕಾರ್ಮಿಕರು ನಿರ್ವಹಿಸುತ್ತಿರುವುದು ದುರದೃಷ್ಟಕರ. ಇಲ್ಲಿ ಹೆದ್ದಾರಿ ಅವ್ಯವಸ್ಥೆಯಿಂದ ಯುವಕರು ಜೀವಗಳನ್ನು ಕಳೆದುಕೊಳ್ಳುತ್ತಲೇ ಇದ್ದಾರೆ. ಆದರೆ ಅತ್ತ ತಲಪಾಡಿಯಲ್ಲಿ ಸುಂಕ ವಸೂಲಿ ಕೇಂದ್ರದಲ್ಲಿ ರೌಡಿಗಳನ್ನು ನಿಲ್ಲಿಸಿ ಸುಂಕ ಸಂಗ್ರಹ ನಡೆಸಲಾಗುತ್ತಿದೆ. ಕಾಮಗಾರಿ ಮುಗಿಯದಿದ್ದರೂ ಸುಂಕ ವಸೂಲಿ ಮಾಡುತ್ತಿರುವುದರಲ್ಲಿ ನ್ಯಾಯಯುತವಲ್ಲ. ಎಲ್ಲಿಯೂ ಸೂಚನ ಫಲಕಗಳನ್ನು ಹಾಕಿ ಕಾಮಗಾರಿ ನಡೆಯುತ್ತಿರುವ ಬಗ್ಗೆ ಕಲ್ಲಾಪು ಖಾಸಗಿ ಸಭಾಂಗಣದ ಎದುರುಗಡೆ ಡಿವೈಡರ್‌ ಏರಿ ಹಲವು ವಾಹನಗಳು ಅಪಘಾತಕ್ಕೀಡಾಗುತ್ತಿದೆ. ತೊಕ್ಕೊಟ್ಟು ಜಂಕ್ಷನ್‌ನ ಅವ್ಯವಸ್ಥೆಯನ್ನು ಸೋಮವಾರ ಸಂಜೆಯೊಳಗೆ ದುರಸ್ತಿಗೊಳಿಸದೇ ಇದ್ದಲ್ಲಿ ಟೋಲ್‌ ಎದುರು ಕುಳಿತು ಧರಣಿ ನಡೆಸುವ ಎಚ್ಚರಿಕೆ ನೀಡಿದರು.

ತುರ್ತು ಕಾಮಗಾರಿಗೆ ನಿರ್ದೇಶನ
ತೊಕ್ಕೊಟ್ಟಿನಲ್ಲಿ ಶನಿವಾರ ಅಪಘಾತ ನಡೆದ ಸ್ಥಳಕ್ಕೆ ಸಂಚಾರಿ ವಿಭಾಗದ ಎಸಿಪಿ ಮಂಜುನಾಥ ಶೆಟ್ಟಿ , ಎಸ್‌.ಐ ಹಾಗೂ
ಹೆದ್ದಾರಿ ಕಾಮಗಾರಿ ಅಧಿಕಾರಿಗಳ ಜತೆಗೆ ಭೇಟಿ ನೀಡಿದರು.

ತೊಕ್ಕೊಟ್ಟು ಬಸ್‌ ನಿಲ್ದಾಣಕ್ಕೆ ತೆರಳುವ ಜಾಗದಲ್ಲಿ ತಾತ್ಕಾಲಿಕ ಮಾರ್ಗವನ್ನು ತೆರವುಗೊಳಿಸುವಂತೆ ಸೂಚಿಸಿದರು. ಬಸ್‌ ನಿಲ್ದಾಣ ಮತ್ತು ಹೆದ್ದಾರಿಯನ್ನು ಸಂಪರ್ಕಿಸುವ ಜಾಗದಲ್ಲಿ ಬ್ಯಾರಿಕೇಡ್‌ ಅಳವಡಿಸುವ ಮೂಲಕ ಏಕಮುಖ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಎಸ್‌.ಐ. ಗಳಲ್ಲಿ ಸೂಚಿಸಿದರು. ಚರಂಡಿ ಮುಚ್ಚಿ ರಸ್ತೆಯನ್ನು ಅಗಲೀಕರಣಗೊಳಿಸಿ ಸೋಮವಾರ ಸಂಜೆಯೊಳಗಡೆ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಆದೇಶಿಸಿದರು. ಠಾಣಾಧಿಕಾರಿ ಗೋಪಿಕೃಷ್ಣ, ಪಶ್ಚಿಮ ಹಾಗೂ ಪೂ.ವಿಭಾಗ ಸಂಚಾರಿ ಠಾಣೆಯ ಎಸ್‌.ಐ.ಗಳಾದ ಸುರೇಶ್‌ ಕುಮಾರ್‌, ಮೋಹನ್‌ ಕೊಟ್ಟಾರಿ, ಪಜೀರು ಗ್ರಾ.ಪಂ. ಮಾಜಿ ಅಧ್ಯಕ್ಷ ನಝೀರ್‌ ಮೊದಿನ್‌, ರವೀಂದ್ರ ಇನೋಳಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.