ಉದ್ಯೋಗ ಖಾತರಿ ಕಾರ್ಮಿಕರಿಗೆ ರಿಯಾಯಿತಿ!

Team Udayavani, Mar 21, 2019, 1:00 AM IST

udyoga-khatri.jpg

ಮಂಗಳೂರು: ತಾಪಮಾನ ಹೆಚ್ಚುತ್ತಿರುವ ಕಾರಣ ಉದ್ಯೋಗ ಖಾತರಿ ಯೋಜನೆಯಡಿ ರಾಜ್ಯದ ಎಲ್ಲ ಜಿಲ್ಲೆಗಳ
ಗ್ರಾಮೀಣ ಪ್ರದೇಶಗಳಲ್ಲಿ ಕೆಲಸ ನಿರ್ವಹಿಸುವ ನೋಂದಾಯಿತ ಕಾರ್ಮಿಕರಿಗೆ ದುಡಿಯುವ ಕೆಲಸದ ಪ್ರಮಾಣದಲ್ಲಿ ರಿಯಾಯಿತಿ ನೀಡಿ ಸರಕಾರ ಆದೇಶಿಸಿದೆ.

ಇದರಂತೆ ಈ ತಿಂಗಳಿನಲ್ಲಿ ಉದ್ಯೋಗ ಖಾತರಿ ಯೋಜನೆಯ ಕೆಲಸಗಾರರಿಗೆ ಶೇ. 25ರಷ್ಟು ರಿಯಾಯಿತಿ ದೊರೆಯಲಿದೆ. ಅಂದರೆ, 1 ದಿನದಲ್ಲಿ ಶೇ. 100ರಷ್ಟು ಕಾಮಗಾರಿ ಮಾಡಬೇಕಾದ ಇವರು ಈ ತಿಂಗಳಿನಲ್ಲಿ ಶೇ. 75ರಷ್ಟು ಪ್ರಮಾಣದಲ್ಲಿ ಮಾತ್ರ ಕೆಲಸ ಮಾಡಬಹುದು. ಎಪ್ರಿಲ್‌ ಹಾಗೂ ಮೇ ತಿಂಗಳಿನಲ್ಲಿ ಶೇ. 30ರಷ್ಟು, ಜೂನ್‌ನಲ್ಲಿ ಶೇ. 20ರಷ್ಟು ರಿಯಾಯಿತಿ ದೊರೆಯಲಿದೆ.

156 ತಾಲೂಕು ಬರಪೀಡಿತ
ರಾಜ್ಯದ 30 ಜಿಲ್ಲೆಗಳ 176 ತಾಲೂಕುಗಳ ಪೈಕಿ 156 ತಾಲೂಕುಗಳನ್ನು ಬರಪೀಡಿತ ಎಂದು ಸರಕಾರ ಘೋಷಿಸಿದೆ. ಈ ತಾಲೂಕುಗಳಲ್ಲಿ ಉಷ್ಣಾಂಶ ಹೆಚ್ಚಾಗಿದ್ದು, ಈ ಕಾರಣದಿಂದ ನರೇಗಾ ಯೋಜನೆಯಡಿ ನಿಗದಿಪಡಿಸಿದ ಕಾಮಗಾರಿಗಳ ಕೆಲಸದ ಪ್ರಮಾಣವನ್ನು ನಿರ್ವಹಿಸುವುದು ಕಷ್ಟ. ಹೀಗಾಗಿ ಮಾ. 16ರಂದು ರಾಜ್ಯ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ರಾಜ್ಯದ ಎಲ್ಲ ಜಿಲ್ಲಾಧಿಕಾರಿ/ಜಿ.ಪಂ. ಸಿಇಒಗಳೊಂದಿಗೆ ನಡೆದ ಸಂವಾದದಲ್ಲಿ ಚರ್ಚಿಸಿ, ಕೆಲಸದ ಪ್ರಮಾಣದಲ್ಲಿ ರಿಯಾಯಿತಿ ಪ್ರಕಟಿಸಲು ಸೂಚಿಸಲಾಗಿದೆ. ಕಳೆದ ವರ್ಷ ಕೂಡ ಈ ರಿಯಾಯಿತಿ ನೀಡಲಾಗಿತ್ತು. 

ರಾಜ್ಯದಲ್ಲಿ ಒಟ್ಟು 50 ಲಕ್ಷಕ್ಕೂ ಅಧಿಕ ಜಾಬ್‌ ಕಾರ್ಡ್‌ಗಳನ್ನು ಜಾರಿಗೊಳಿಸಲಾಗಿದ್ದು, ಇದರಲ್ಲಿ 25 ಲಕ್ಷಕ್ಕೂ ಅಧಿಕ ಕಾರ್ಡ್‌ಗಳು ಪ್ರಸ್ತುತ ಕಾರ್ಯನಿರತವಾಗಿವೆ. ಇವರಿಗೆ ಈ ರಿಯಾಯಿತಿ ಲಾಭ ದೊರೆಯಲಿದೆ.

ಗ್ರಾಮೀಣ ಅಭಿವದ್ಧಿಗಾಗಿ “ಉದ್ಯೋಗ ಖಾತರಿ’
ರಸ್ತೆ, ಬಾವಿ, ಶ್ಮಶಾನ  ನಿರ್ಮಾಣ ಸೇರಿದಂತೆ ಗ್ರಾಮದ ಸಮಗ್ರ ಅಭಿವೃದ್ಧಿ, ದನದ ಹಟ್ಟಿ ನಿರ್ಮಾಣ, ಕೆರೆ ಅಭಿವೃದ್ಧಿ ಸೇರಿದಂತೆ ಅರ್ಹ ಫಲಾನುಭವಿ ರೈತರ ಕೃಷಿ ಸಂಬಂಧಿತ ಕೆಲಸಗಳು ಹಾಗೂ ತೋಟಗಾರಿಕೆ ಅಭಿವೃದ್ಧಿ ಚಟುವಟಿಕೆಗಳನ್ನು ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೈಗೊಳ್ಳಲು ಅವಕಾಶವಿದೆ. ಗ್ರಾ.ಪಂ. ವ್ಯಾಪ್ತಿಯ ಅರ್ಹ ಪ್ರತೀ ಕುಟುಂಬಕ್ಕೆ ಕನಿಷ್ಠ 100 ದಿನಗಳ ಉದ್ಯೋಗ ನೀಡಲಾಗುತ್ತದೆ. 1 ದಿನಕ್ಕೆ ಇಂತಿಷ್ಟು ವೇತನ ನಿಗದಿಪಡಿಸಲಾಗಿದ್ದು, ವರ್ಷಕ್ಕೆ ಸುಮಾರು 22,400 ರೂ. ದೊರೆಯಲಿದೆ. 1 ದಿನದಲ್ಲಿ 1 ಕ್ಯೂಬಿಕ್‌ ಮೀಟರ್‌ನಷ್ಟು ಕೆಲಸ ನಡೆಸಬೇಕಾಗುತ್ತದೆ. ಇದರಲ್ಲಿ ಬಿಸಿಲಿನ ಕಾರಣದಿಂದ ಶೇಕಡಾವಾರು ರಿಯಾಯಿತಿ ನೀಡಲು ಇದೀಗ ಸರಕಾರ ನಿರ್ಧರಿಸಿದೆ.

ಉದ್ಯೋಗ ಖಾತರಿ ಯೋಜನೆಯಲ್ಲಿ ಕೆಲಸ ಮಾಡಬೇಕಾದರೆ ಆ ಕಾಮಗಾರಿಯ ಪೂರ್ಣ ಹೆಸರನ್ನು ಗ್ರಾಮ ಸಭೆಯ ಮುಂದಿರಿಸಿ, ಗ್ರಾ.ಪಂ. ಅನುಮತಿ ಪಡೆದು, ತಾ.ಪಂ ಹಾಗೂ ಜಿ.ಪಂ.ನಲ್ಲಿ ಅನುಮೋದನೆ ದೊರೆಯಬೇಕಿದೆ. ಬಳಿಕ ಸಂಬಂಧಿತರಿಗೆ ವೈಯಕ್ತಿಕ “ಜಾಬ್‌ ಕಾರ್ಡ್‌’ ಜಾರಿಗೊಳಿಸಲಾಗುತ್ತದೆ. ಬಳಿಕ ಸಂಬಂಧಿತ ಕಾರ್ಮಿಕನ ಬ್ಯಾಂಕ್‌ ಅಕೌಂಟ್‌ಗೆ ಹಣ ಸಲ್ಲಿಕೆಯಾಗುತ್ತದೆ.

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.