ಕರಾವಳಿಯಲ್ಲಿ ಸ್ಥಾಪನೆಯಾಗಲಿವೆ 26 ಸೈರನ್‌ ಟವರ್‌ಗಳು

Team Udayavani, Oct 30, 2020, 6:00 AM IST

ಕರಾವಳಿಯಲ್ಲಿ ಸ್ಥಾಪನೆಯಾಗಲಿವೆ 26 ಸೈರನ್‌ ಟವರ್‌ಗಳು

ಸಾಂದರ್ಭಿಕ ಚಿತ್ರ

ಮಂಗಳೂರು: ಚಂಡಮಾರುತ, ಸುನಾಮಿ ಸಂದರ್ಭ ಮುನ್ನೆಚ್ಚರಿಕೆ ನೀಡಿ ಕ್ಷಿಪ್ರ ಗತಿ ಯಲ್ಲಿ ಪರಿಹಾರ ಕಾರ್ಯಾಚರಣೆ ನಡೆ ಸುವುದಕ್ಕೆ ಅನುವಾಗುವಂತೆ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಒಟ್ಟು 26 ಮುನ್ನೆಚ್ಚರಿಕೆ ಸೈರನ್‌ ಟವರ್‌ಗಳು ಸ್ಥಾಪನೆಯಾಗಲಿವೆ.

ರಾಷ್ಟ್ರೀಯ ಚಂಡ ಮಾರುತ ಅಪಾಯ ಮುನ್ಸೂ ಚನೆ, ಉಪಶಮನ ಯೋಜನೆ (ಎನ್‌ಸಿಆರ್‌ ಎಂಪಿ) ಯಡಿ ಅನುಷ್ಠಾನ  ಗೊಳ್ಳುವ ಯೋಜನೆಯ 26.92 ಕೋ.ರೂ. ಪರಿಷ್ಕೃತ ಅಂದಾಜು ಪಟ್ಟಿಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಈಗ ಅನುಷ್ಠಾನದ ಹಂತ ತಲುಪಿದೆ.

ಅರಬಿ ಸಮುದ್ರದಲ್ಲಿ ಇತ್ತೀಚಿನ ವರ್ಷಗಳಲ್ಲಿ ಆಗಾಗ ಚಂಡಮಾರುತಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಂಭಾವ್ಯ ಅನಾಹುತಗಳನ್ನು ಕಡಿಮೆಗೊಳಿಸಲು ಸೈರನ್‌ ಟವರ್‌ ನಿರ್ಮಾಣ ಯೋಜನೆಯನ್ನು ಎನ್‌ಸಿಆರ್‌ಎಂಪಿ ರೂಪಿಸಿತ್ತು. ಎರಡು ವರ್ಷಗಳ ಹಿಂದೆ ಸ್ಥಳ ಸಮೀಕ್ಷೆ ನಡೆಸಿ ಒಟ್ಟು 26 ಸ್ಥಳ ಆಯ್ಕೆ ಮಾಡಲಾಗಿತ್ತು.

ಆಶ್ರಯತಾಣಗಳು ಬಹುತೇಕ ಪೂರ್ಣ
ಚಂಡುಮಾರುತ ಸಹಿತ ಪ್ರಕೃತಿ ವಿಕೋಪಗಳು ತಲೆದೋರಿದಾಗ ಜನರಿಗೆ ತುರ್ತು ಆಶ್ರಯ ಕಲ್ಪಿಸಲು ದಕ್ಷಿಣ ಕನ್ನಡದಲ್ಲಿ ಉಳ್ಳಾಲ ಮತ್ತು ಹೊಸಬೆಟ್ಟು ಹಾಗೂ ಉಡುಪಿಯಲ್ಲಿ ತೆಕ್ಕಟ್ಟೆ ಮತ್ತು ಕಾಪುನಲ್ಲಿ ಬಹುಉದ್ದೇಶದ ಸಾವಿರ ಜನರ ಸಾಮರ್ಥ್ಯದ ಆಶ್ರಯ ತಾಣಗಳನ್ನು ನಿರ್ಮಿಸಲಾಗುತ್ತಿದ್ದು, ಬಹುತೇಕ ಪೂರ್ಣಗೊಂಡಿದೆ. ಇದರ ಜತೆಗೆ ತ್ವರಿತ ಕಾರ್ಯಾಚರಣೆಗೆ ನೆರವಾಗುವಂತೆ ಈ ಯೋಜನೆಯಡಿ ಕರಾವಳಿ ತೀರದಲ್ಲಿ ಸೇತುವೆ ಮತ್ತು ರಸ್ತೆಗಳನ್ನು ಕೂಡ ನಿರ್ಮಿಸಲಾಗಿದೆ.

ಸೈರನ್‌ ಮೂಲಕ ಎಚ್ಚರಿಕೆ
ಕರಾವಳಿಯಲ್ಲಿ ಚಂಡಮಾರುತ, ತ್ಸುನಾಮಿ ಮುಂತಾದ ಪ್ರಾಕೃತಿಕ ವಿಕೋಪಗಳ ಮುನ್ಸೂಚನೆಗಳು ಹವಾಮಾನ ಇಲಾಖೆ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಏಜೆನ್ಸಿ ಗಳಿಂದ ಲಭ್ಯವಾದ ಕೂಡಲೇ ಎಚ್ಚರಿಕೆ ಮತ್ತು ಸಂದೇಶ ವನ್ನು ಈ ಮೆಗಾ ಟವರ್‌ಗಳಿಗೆ ರವಾನಿಸ ಲಾಗುತ್ತದೆ. ಅಪಾಯದ ಮುನ್ನೆಚ್ಚರಿಕೆಯನ್ನು ಸೈರನ್‌ ಟವರ್‌ ಮೂಲಕ ಸುಮಾರು 10 ಕಿ.ಮೀ. ಸುತ್ತಳತೆಯ ವರೆಗೆ ನೀಡಲು ಸಾಧ್ಯವಾಗುತ್ತದೆ. ಇದು ಸ್ಥಳೀಯವಾಗಿ ತ್ವರಿತ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಲು ಮತ್ತು ಪರಿಹಾರ ತಂಡಗಳಿಗೆ ಸೂಕ್ತ ಪರಿಹಾರ ವ್ಯವಸ್ಥೆಗಳನ್ನು ಪರಿಣಾಮಕಾರಿಯಾಗಿ ರೂಪಿಸಲು ನೆರವಾಗುತ್ತದೆ.

ಆಯ್ಕೆಯಾಗಿರುವ ತಾಣಗಳು
ದ.ಕ. ಮತ್ತು ಉಡುಪಿ ಜಿಲ್ಲೆಗಳಲ್ಲಿ ತಲಾ 8 ಹಾಗೂ ಉ.ಕ.ದಲ್ಲಿ 10 ಸ್ಥಳಗಳನ್ನು ಆಯ್ಕೆ ಮಾಡಲಾಗಿದೆ.

ದಕ್ಷಿಣ ಕನ್ನಡ
ಉಳ್ಳಾಲ, ಸೋಮೇಶ್ವರ, ತಣ್ಣೀರುಬಾವಿ, ಪಣಂಬೂರು, ಸುರತ್ಕಲ್‌, ಸಸಿಹಿತ್ಲು ಬೀಚ್‌, ಹೊಸ ಬೆಟ್ಟು , ಡಿ.ಸಿ. ಕಚೇರಿ ಬಳಿ.

ಉಡುಪಿ
ಪಡುಬಿದ್ರಿ, ಕಾಪು, ಮಲ್ಪೆ, ಕೋಡಿ, ಮಟ್ಟು, ಮರವಂತೆ, ಶಿರೂರು ಬೀಚ್‌ ಬಳಿ ಮತ್ತು ತೆಕ್ಕಟ್ಟೆ ಪ್ರದೇಶ.

ಉತ್ತರ ಕನ್ನಡ
ಮುರುಡೇಶ್ವರ ಬೀಚ್‌, ಎಕೋ ಬೀಚ್‌ ಪಾರ್ಕ್‌, ಓಂ ಮತ್ತು ಕುಡ್ಲೆ ಬೀಚ್‌ ನಡುವಣ ಪ್ರದೇಶ, ಗೋಕರ್ಣ ಬೀಚ್‌, ಆರ್‌.ಟಿ. ಬೀಚ್‌, ಮಂಕಿ, ಬೇಲೇಕೇರಿ, ಪುಜಾಗೇರಿ ಕಾಲೇಜು ಆವರಣ, ಶಿರಾಲಿ, ಚಿಟ್ಟಕುಳ ಗ್ರಾಮ.

ಕರಾ ವಳಿಯಲ್ಲಿ ಸಂಭಾವ್ಯ ಪ್ರಕೃತಿ ವಿಕೋಪ ನಿರ್ವಹಣೆ ಯಲ್ಲಿ ಮುನ್ನೆಚ್ಚ ರಿಕೆ ಟವರ್‌ಗಳನ್ನು ನಿರ್ಮಿಸುವ ಯೋಜನೆ ಈ ಹಿಂದೆ ರೂಪಿತವಾಗಿದೆ. ಸರಕಾರ ದಿಂದ ಅನುಮೋದನೆ ಆಗಿರುವ ಬಗ್ಗೆ ಮಾಹಿತಿ ಇದ್ದು, ಅಧಿಕೃತವಾಗಿ ಜಿಲ್ಲಾಡಳಿತಕ್ಕೆ ಆದೇಶ ಬಂದಿಲ್ಲ. ಇದು ಬಂದ ಕೂಡಲೇ ಮುಂದಿನ ಕ್ರಮ ಕೈಗೊಳ್ಳಲಾಗುವುದು.
– ಡಾ| ಕೆ.ವಿ. ರಾಜೇಂದ್ರ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ

 ಕೇಶವ ಕುಂದರ್‌

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.