ಕರಾವಳಿ ಪ್ರವಾಸೋದ್ಯವಾಸೋದ್ಯಮ ಅಭಿವೃದ್ಧಿ ಪ್ರಾಧಿಕಾರ ರಚನೆಯಾಗಲಿ


Team Udayavani, Jun 3, 2018, 4:12 PM IST

3-june-18.jpg

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶಗಳಿವೆ. ಸಾಗರ ಪ್ರವಾಸೋದ್ಯಮ ಇದರಲ್ಲಿ ಮುಖ್ಯವಾಗಿ ಗುರುತಿಸಲ್ಪಡುತ್ತದೆ. ದೇಶದ ಪ್ರವಾಸೋದ್ಯಮ ಕ್ಷೇತ್ರವನ್ನು ಅವಲೋಕಿಸಿದರೆ ಸಾಗರತೀರ ಪ್ರವಾಸೋದ್ಯಮ ಒಂದು ಪ್ರಮುಖ ಆದಾಯ ತರುವ ಕ್ಷೇತ್ರ. ಕೇರಳ, ಗೋವಾ, ತಮಿಳುನಾಡು, ಮಹಾರಾಷ್ಟ್ರ ಮುಂತಾದ ರಾಜ್ಯಗಳನ್ನು ಇದಕ್ಕೆ ಉದಾಹರಣೆಯಾಗಿ ತೆಗೆದುಕೊಳ್ಳಬಹುದು. ಈ ಎಲ್ಲ ರಾಜ್ಯಗಳು ಸಾಗರ ತೀರ ಪ್ರವಾಸೋದ್ಯಮಕ್ಕೆ ವಿಶೇಷ ಆದ್ಯತೆಯನ್ನು ನೀಡಿದ ಪರಿಣಾಮ ವರ್ಷಕ್ಕೆ ಲಕ್ಷಾಂತರ ಮಂದಿಯನ್ನು ಆಕರ್ಷಿಸಲು ಸಾಧ್ಯವಾಗಿದೆ. ಉದ್ಯೋಗ ಅವಕಾಶಗಳ ಸೃಷ್ಟಿ, ವಾಣಿಜ್ಯ ಅಭಿವೃದ್ಧಿಗೆ ಮಹತ್ತರ ಕೊಡುಗೆಗಳನ್ನು ನೀಡುತ್ತಿದೆ. ಇನ್ನುಳಿದಂತೆ ಧಾರ್ಮಿಕ ಪ್ರವಾಸೋದ್ಯಮ, ಹೆಲ್ತ್‌ ಟೂರಿಸಂ ಪ್ರಮುಖ ಸ್ಥಾನವನ್ನು ಪಡೆದಿದೆ.

ಮಂಗಳೂರು ಸಹಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಇರುವ ಅವಕಾಶಗಳ ಸಮರ್ಪಕ ಬಳಕೆಯಾಗಿಲ್ಲ. ಈ ನಿಟ್ಟಿನಲ್ಲಿ ಕರಾವಳಿ ಭಾಗಕ್ಕೆ ಪ್ರತ್ಯೇಕ ಪ್ರಾಧಿಕಾರವೊಂದನ್ನು ರಚನೆ ಮಾಡಬೇಕು ಎಂಬುದು ಈ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿದೆ.

ಪ್ರಾಧಿಕಾರದ ರಚನೆ ಆವಶ್ಯಕ
ದಕ್ಷಿಣ ಕನ್ನಡ ಜಿಲ್ಲೆ 42 ಕಿ.ಮೀ. ಹಾಗೂ ಉಡುಪಿ ಜಿಲ್ಲೆ 98 ಕಿ.ಮೀ. ಸಮುದ್ರ ತೀರವನ್ನು ಹೊಂದಿದೆ. ಉಭಯ ಜಿಲ್ಲೆಗಳಲ್ಲಿ ಸಾಗರ ತೀರ ಪ್ರವಾಸಿ ಆಕರ್ಷಣೆಯ ಪ್ರಮುಖ ತಾಣಗಳಾಗಿ ಗುರುತಿಸಿಕೊಳ್ಳುವ ಎಲ್ಲ ಅರ್ಹತೆಗಳನ್ನು ಹೊಂದಿವೆ. ಕೆಲವು ಬೀಚ್‌ಗಳು ಈಗಾಗಲೇ ಬಹಳಷ್ಟು ಸಂಖ್ಯೆಯಲ್ಲಿ ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿವೆ. ಇನ್ನು ಕೆಲವು ಬೀಚ್‌ ಗಳು ನಿರ್ಲಕ್ಷ್ಯಕ್ಕೊಳಗಾಗಿವೆ. ಮಂಗಳೂರಿನಲ್ಲಿ ಪಣಂಬೂರು, ತಣ್ಣೀರುಬಾವಿ, ಸೋಮೇಶ್ವರ, ತಲಪಾಡಿ, ಉಳ್ಳಾಲ, ಸಸಿಹಿತ್ಲು , ಸುರತ್ಕಲ್‌ ಪ್ರಮುಖವಾಗಿ ಗುರುತಿಸಿಕೊಂಡಿರುವ ಬೀಚ್‌ಗಳು. ಆದರೆ ಈ ಬೀಚ್‌ಗಳನ್ನು ಪ್ರವಾಸೋದ್ಯಮ ತಾಣಗಳಾಗಿ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಸರಕಾರದ ವತಿಯಿಂದ ಹೆಚ್ಚಿನ ಕಾರ್ಯಯೋಜನೆಗಳು ಆಗಿಲ್ಲ. ಪಣಂಬೂರು ಬೀಚ್‌ ಖಾಸಗಿ ಸಹಭಾಗಿತ್ವದಲ್ಲಿ ಪ್ರವಾಸಿಗರನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಕರ್ಷಿಸುತ್ತಿದೆ.

 ಸೋಮೇಶ್ವರ ಹಾಗೂ ತಣ್ಣೀರುಬಾವಿ ಬೀಚ್‌ಗಳು ಸರಕಾರಿ- ಸಾರ್ವಜನಿಕ ಸಹಭಾಗಿತ್ವದಲ್ಲಿ ಅಭಿವೃದ್ಧಿಗೊಳ್ಳುತ್ತಿವೆ. ಸಸಿಹಿತ್ಲು ಬೀಚ್‌ ಸμìಂಗ್‌ ಕ್ರೀಡೆಯ ಕೇಂದ್ರವಾಗಿ ಗುರುತಿಸಿಕೊಂಡಿದ್ದು ಮಂಗಳೂರಿನಲ್ಲಿ ಸಾಗರ ಪ್ರವಾಸೋದ್ಯಮಕ್ಕೆ ಹೊಸ ಆಯಾಮವನ್ನು ನೀಡಿದೆ. ಬೀಚ್‌ಗಳನ್ನು ಇನ್ನಷ್ಟು ಆಕರ್ಷಣೀಯಗೊಳಿಸಿ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರವಾಸಿಗರನ್ನು ಆಕರ್ಷಿಸುವ ಕಾರ್ಯವಾದರೆ ಮಂಗಳೂರಿನ ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ಲಭಿಸುತ್ತದೆ. ಉದ್ಯೋಗಾವಕಾಶಗಳು ಸೃಷ್ಟಿಯಾಗುತ್ತವೆ.

ಸಾಗರ ತೀರದಂತೆಯೇ ಒಳನಾಡಿನಲ್ಲಿ ಹಲವಾರು ಹಿನ್ನೀರು ತಾಣಗಳು, ಕುದ್ರುಗಳಿದ್ದು ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶಗಳಿವೆ. ಪರಿಸರ ಸಹ್ಯ ಪ್ರವಾಸೋದ್ಯಮವನ್ನು ಇಲ್ಲಿ ಬೆಳೆಸಬಹುದಾಗಿದೆ. ಕೇರಳ ಇದೇ ಮಾದರಿಯನ್ನು ಅನುಸರಿಸುತ್ತಿದೆ. ಅಲ್ಲಿ ಹಿನ್ನೀರುಗಳಲ್ಲಿ ಇರುವ ಬೋಟ್‌ ಹೌಸ್‌ ಗಳು ಇದಕ್ಕೆ ಉದಾಹರಣೆಯಾಗಿದೆ. ಪ್ರಸ್ತುತ ಹಿನ್ನೀರುಗಳಲ್ಲಿ ಶಾಶ್ವತ ಬೋಟ್‌ ಹೌಸ್‌ ಎಂಬ ಹೊಸ ಪರಿಕಲ್ಪನೆ ಪ್ರವರ್ಧಮಾನಕ್ಕೆ ಬರುತ್ತಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ವಿವಿಧ ಧರ್ಮಗಳಿಗೆ ಸೇರಿದ ಅನೇಕ ಪ್ರಸಿದ್ಧ ಧಾರ್ಮಿಕ ಕೇಂದ್ರಗಳಿವೆ. ದೇಶ ವಿದೇಶಗಳಿಂದ ಬಹಳಷ್ಟು ಪ್ರವಾಸಿಗರು ಇಲ್ಲಿಗೆ ಆಗಮಿಸುತ್ತಿದ್ದು, ಧಾರ್ಮಿಕ ಪ್ರವಾಸೋದ್ಯಮ ಅಭಿವೃದ್ಧಿಗೂ ಇಲ್ಲಿ ಹೆಚ್ಚಿನ ಅವಕಾಶಗಳಿವೆ. ಇದೇ ರೀತಿ ಮಂಗಳೂರು ಹಾಗೂ ಮಣಿಪಾಲ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣದಲ್ಲೂ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದೆ. ಹೆಲ್ತ್‌ ಟೂರಿಸಂಗೂ ಕೂಡ ಇಲ್ಲಿ ಬಹಳಷ್ಟು ಅವಕಾಶಗಳಿವೆ.

ಈ ಎಲ್ಲ ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಲು ರಾಜ್ಯ ಸರಕಾರದ ವತಿಯಿಂದ ಈ ಭಾಗಕ್ಕೆ ಪ್ರತ್ಯೇಕವಾದ ಒಂದು ಸಂಸ್ಥೆ ಇದ್ದರೆ ಹೆಚ್ಚಿನ ಅನುಕೂಲವಾಗುತ್ತದೆ. ಕರಾವಳಿ ಭಾಗದಲ್ಲಿರುವ ಪ್ರವಾಸೋದ್ಯಮ ಅವಕಾಶಗಳಿಗೆ ಪೂರಕವಾಗಿ ಯೋಜನೆಗಳನ್ನು ರೂಪಿಸಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಇದರಿಂದ ಸಾಧ್ಯವಾಗುತ್ತದೆ ಎನ್ನುವುದು ಪ್ರಾಧಿಕಾರ ರಚನೆಯ ಬೇಡಿಕೆಯ ಹಿಂದಿರುವ ಮುಖ್ಯ ಉದ್ದೇಶ.

ಪ್ರಾಧಿಕಾರದ ಸ್ವರೂಪ
ಕರಾವಳಿ ಪ್ರವಾಸೋದ್ಯಮ ಪ್ರಾಧಿಕಾರ ಆಲಂಕಾರಿಕಾ ಸಂಸ್ಥೆಯಾಗದೆ ಇದಕ್ಕೆ ಒಂದಷ್ಟು ಅನುದಾನಗಳು ಮೀಸಲಿಟ್ಟು, ಅನುಷ್ಠಾನದ ಅಧಿಕಾರಗಳನ್ನು ನೀಡಬೇಕು. ಐಎಎಸ್‌ ಶ್ರೇಣಿಯ ಅಧಿಕಾರಿಯೋರ್ವರನ್ನು ಮುಖ್ಯಸ್ಥರಾಗಿ ಮಾಡಿ ಕೆಲವು ಮುಖ್ಯ ಅಧಿಕಾರಗಳನ್ನು ನೀಡಬೇಕು.  ಪ್ರವಾಸೋದ್ಯಮ ಅಭಿವೃದ್ಧಿ, ಉತ್ತೇಜನಕ್ಕಾಗಿ ವಿಶೇಷ ಯೋಜನೆಗಳನ್ನು ಸಿದ್ಧಪಡಿಸುವುದು, ಸಾಗರ ತೀರ ಪ್ರವಾಸೋದ್ಯಮ ಅಭಿವೃದ್ಧಿ ನೀಲಿ ನಕಾಶೆ ಸಿದ್ಧಪಡಿಸುವುದು, ಸ್ಥಳೀಯರಿಗೆ ಪ್ರೋತ್ಸಾಹ ನೀಡುವುದರ ಜತೆಗೆ ಪ್ರವಾಸೋದ್ಯಮದಲ್ಲಿ ತೊಡಗಿಸಿಕೊಂಡಿರುವ ದೇಶ, ವಿದೇಶಗಳ ಪ್ರಮುಖರನ್ನು ಇಲ್ಲಿಗೆ ಆಕರ್ಷಿಸುವುದು, ಹೂಡಿಕೆಗಳು ಹರಿದುಬರುವ ನಿಟ್ಟಿನಲ್ಲಿ ಉಪಕ್ರಮಗಳು, ಯೋಜನೆಗಳು ಸಮರ್ಪಕವಾಗಿ ಅನುಷ್ಠಾನಗೊಳಿಸುವುದು,
ಪ್ರವಾಸೋದ್ಯಮ ತಾಣಗಳ ಸಮರ್ಪಕ ನಿರ್ವಹಣೆ ಮುಂತಾದ ಹೊಣೆಗಾರಿಕೆಯನ್ನು ವಹಿಸಿಕೊಡುವ ಮೂಲಕ ಪ್ರಾಧಿಕಾರವನ್ನು ಕ್ರಿಯಾಶೀಲ ಅಂಗವಾಗಿ ಮಾಡಿದರೆ ಕರಾವಳಿಯಲ್ಲಿ ಪ್ರವಾಸೋದ್ಯಮ ಕ್ಷೇತ್ರ ಪ್ರಕಾಶಿಸಬಹುದಾಗಿದೆ ಎಂಬುದು ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹಲವಾರು ವರ್ಷಗಳಿಂದ ತೊಡಗಿಸಿಕೊಂಡಿರುವವರ ಅಭಿಪ್ರಾಯ.

ಪ್ರವಾಸೋದ್ಯಮದ ಅವಕಾಶ
.ಸಾಗರ ಪ್ರವಾಸೋದ್ಯಮ: ಬೀಚ್‌, ಸಾಗರ ಕ್ರೀಡೆಗಳು, ಬೀಚ್‌ ಹೋಮ್‌ಸ್ಟೇಗಳು, ಬೀಚ್‌ ಉತ್ಸವಗಳು
.ಹಿನ್ನೀರು ಪ್ರವಾಸೋದ್ಯಮ: ಬೋಟ್‌ ಹೌಸ್‌, ರೆಸಾರ್ಟ್‌, ರೆಸಾರ್ಟ್‌ಗಳು
.ಧಾರ್ಮಿಕ ಪ್ರವಾಸೋದ್ಯಮ 
.ಹೆಲ್ತ್‌ ಟೂರಿಸಂ

ಕೇಶವ ಕುಂದರ್ 

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.