ಎತ್ತಿನಹೊಳೆ ಯೋಜನೆ: ಇಂದಿನಿಂದ ಸುಪ್ರೀಂ ವಿಚಾರಣೆ

Team Udayavani, Sep 5, 2019, 5:59 AM IST

ettinahole

ಮಂಗಳೂರು: ಕರಾವಳಿಯ ಜೀವನಾಡಿ ನೇತ್ರಾವತಿಗೆ ಆತಂಕ ತರಿಸುವ ಎತ್ತಿನಹೊಳೆ ನೀರಾವರಿ ಯೋಜನೆಯ ವಿರುದ್ಧ ಕಾನೂನು ಹೋರಾಟ ಈಗ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದು, ಗುರುವಾರ ವಿಚಾರಣೆ ಆರಂಭವಾಗಲಿದೆ.

ಎತ್ತಿನಹೊಳೆ ಯೋಜನೆಯ ವಿರುದ್ಧ ಪರಿಸರವಾದಿಗಳು ಸಲ್ಲಿಸಿದ್ದ ಎರಡು ಅರ್ಜಿಗಳನ್ನು ಹಸಿರು ನ್ಯಾಯ ಪೀಠ (ಎನ್‌ಜಿಟಿ)ವು ಮೇಯಲ್ಲಿ ವಜಾಗೊಳಿಸಿ ತೀರ್ಪು ನೀಡಿತ್ತು. ಎನ್‌ಜಿಟಿ ಪೀಠದ ತೀರ್ಪು ಪ್ರಶ್ನಿಸಿ ಪರಿಸರ ಹೋರಾಟಗಾರ ಕೆ.ಎನ್‌. ಸೋಮಶೇಖರ್‌ ಒಂದು ತಿಂಗಳ ಹಿಂದೆಯಷ್ಟೇ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಿರುವ ನ್ಯಾಯಪೀಠವು ಈ ಬಗ್ಗೆ ಗುರುವಾರ ವಿಚಾರಣೆ ಆರಂಭಿಸಲಿದೆ. ಇದರೊಂದಿಗೆ ಪಶ್ಚಿಮ ಘಟ್ಟದ ಜೀವ ವೈವಿಧ್ಯಕ್ಕೆ ಧಕ್ಕೆಯುಂಟು ಮಾಡುತ್ತಿರುವ ಎತ್ತಿನಹೊಳೆ ನೀರಾವರಿ ಯೋಜನೆಯ ವಿರುದ್ಧ ಸರ್ವೋಚ್ಚ ನ್ಯಾಯಾಲಯ ದಲ್ಲಿ ಮಹತ್ವದ ಕಾನೂನು ಹೋರಾಟ ಪ್ರಾರಂಭವಾಗಲಿದೆ.

ಎತ್ತಿನಹೊಳೆ ಕಾಮಗಾರಿಗೆ ಸಂಬಂಧಿಸಿದಂತೆ ಅರಣ್ಯ ತೆರವಿಗೆ ಅವಕಾಶ ನೀಡಿರುವುದನ್ನು ಪ್ರಶ್ನಿಸಿ ಎನ್‌ಜಿಟಿ ಮುಂದೆ ಸೋಮಶೇಖರ್‌ ಮತ್ತು ಸಕಲೇಶಪುರದ ವಕೀಲ ಕಿಶೋರ್‌ ಕುಮಾರ್‌ ಅರ್ಜಿ ಸಲ್ಲಿಸಿದ್ದರು. ಕುಡಿಯುವ ನೀರಿನ ಯೋಜನೆಯಾಗಿರುವ ಹಿನ್ನೆಲೆಯಲ್ಲಿ ಇತರ ಆಕ್ಷೇಪಗಳು ಪರಿಗಣನೆಗೆ ಬರುವುದಿಲ್ಲವಾದ್ದರಿಂದ ಅರ್ಜಿ ಮತ್ತು ಮೇಲ್ಮನವಿ ಅರ್ಜಿಯನ್ನು ತಿರಸ್ಕರಿಸುವುದಾಗಿ ನ್ಯಾಯಪೀಠ ಮೂರು ತಿಂಗಳ ಹಿಂದೆ ಆದೇಶ ಹೊರಡಿಸಿತ್ತು. ಎನ್‌ಜಿಟಿ ನೀಡಿರುವ ಈ ತೀರ್ಪನ್ನು ಪ್ರಶ್ನಿಸಿ ಅರ್ಜಿದಾರರು ಸುಪ್ರೀಂ ಕೋರ್ಟಿನ ಮೊರೆಹೋಗಿದ್ದಾರೆ.

ಈ ಬಗ್ಗೆ “ಉದಯವಾಣಿ’ ಜತೆಗೆ ಮಾತನಾಡಿದ ಅರ್ಜಿದಾರ ಕೆ.ಎನ್‌. ಸೋಮಶೇಖರ್‌, ಎನ್‌ಜಿಟಿ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದು, ಇದರ ವಿಚಾರಣೆ ಗುರುವಾರದಿಂದ ಆರಂಭವಾಗಲಿದೆ. ಎನ್‌ಜಿಟಿಗೆ ಸಲ್ಲಿಸಿರುವ ಅರ್ಜಿಗೆ ಪೂರಕವಾಗಿ ತೀರ್ಪು ಬಾರದ ಹಿನ್ನೆಲೆಯಲ್ಲಿ ಈ
ವಿಚಾರವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಗಿದೆ. ಎತ್ತಿನಹೊಳೆ ಯೋಜನೆಯ ಮೂಲಕ ಪಶ್ಚಿಮ ಘಟ್ಟಕ್ಕೆ ಆಗುತ್ತಿರುವ ಹಾನಿ ಮತ್ತು ಯೋಜನೆಯ ನಿಗೂಢತೆಯ ವಿರುದ್ಧ ಕಾನೂನು ಹೋರಾಟವನ್ನು ಸುಪ್ರೀಂ ಕೋರ್ಟ್‌ನಲ್ಲಿ ನಡೆಸಲಾಗುವುದು ಎಂದಿದ್ದಾರೆ.

ಟಾಪ್ ನ್ಯೂಸ್

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.