ಕಾರಿಂಜ: ನಿಂದನಾತ್ಮಕ ಭಾಷಣ; ಜಿಲ್ಲಾಧಿಕಾರಿಯಿಂದ ಜಗದೀಶ ಕಾರಂತ ವಿರುದ್ಧ ಪ್ರಕರಣ ದಾಖಲು

Team Udayavani, Nov 24, 2021, 1:48 PM IST

ಕಾರಿಂಜ: ನಿಂದನಾತ್ಮಕ ಭಾಷಣ; ಜಿಲ್ಲಾಧಿಕಾರಿಯಿಂದ ಜಗದೀಶ ಕಾರಂತ ವಿರುದ್ಧ ಪ್ರಕರಣ ದಾಖಲು

ಪುಂಜಾಲಕಟ್ಟೆ: ಬಂಟ್ವಾಳ ತಾಲೂಕಿನ ಕಾವಳಮೂಡೂರು ಗ್ರಾಮದ ಶ್ರೀ ಕಾರಿಂಜೇಶ್ವರ ದೇವಸ್ಥಾನದ ವಠಾರದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ವಿರುದ್ಧ ನಿಂದನಾತ್ಮಕ ಮಾತುಗಳನ್ನಾಡಿದ ಹಿಂದೂ ಜಾಗರಣ ವೇದಿಕೆ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಜಗದೀಶ ಕಾರಂತ ವಿರುದ್ಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬಗ್ಗೆ ದ.ಕ.ಜಿಲ್ಲಾ  ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಅವರು ದೂರು ನೀಡಿದ್ದು, ಶ್ರೀ ಕಾರಿಂಜೇಶ್ವರ ದೇವಸ್ಥಾನದ ಪಾವಿತ್ರ್ಯತೆ ಉಳಿಸುವಂತೆ, ಪರಿಸರದಲ್ಲಿ ನಡೆಯುತ್ತಿರುವ ಗಣಿಗಾರಿಕೆ ನಿಲ್ಲಿಸುವಂತೆ, ದೇವಸ್ಥಾನಕ್ಕೆ ಅನ್ಯ ಮತೀಯರ ಪ್ರವೇಶ ನಿರ್ಬಂಧಿಸುವಂತೆ ಆಗ್ರಹಿಸಿ ಬಂಟ್ವಾಳ ತಾ.ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ಕಾರಿಂಜ ರಥಬೀದಿಯಲ್ಲಿ ನಡೆದ ರುದ್ರಗಿರಿಯ ರಣಕಹಳೆ ಜನಜಾಗೃತಿ ಸಭೆಯಲ್ಲಿ ಜಗದೀಶ ಕಾರಂತ ಅವರು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಅವರನ್ನುದ್ದೇಶಿಸಿ ಮಾತಾನಾಡಿದ್ದರು.

ಇದನ್ನೂ ಓದಿ:ಶಿವಮೊಗ್ಗದಲ್ಲಿ ಸಂಪತ್ತಿನ ಭಾರಿ ಕೃಷಿ ಮಾಡಿದ ಅಧಿಕಾರಿ: ಎಸಿಬಿ ಸುಸ್ತು!

ಬಂಟ್ವಾಳ ತಾಲೂಕಿನ ಕಾರಿಂಜೇಶ್ವರ ದೇವಸ್ಥಾನದ ಸುತ್ತಮುತ್ತ ನಡೆಯುವ ಗಣಿಗಾರಿಕೆಯನ್ನು ನಿಲ್ಲಿಸಲು ಡಿಸೆಂಬರ್ 21 ರವರೆಗೆ ಗಡುವು ಕೊಟ್ಟಿದ್ದೇವೆ, ಇಲ್ಲದಿದ್ದರೆ ಡಿಸೆಂಬರ್ 21 ಕ್ಕೆ ಎಲ್ಲರೂ ಸಿದ್ಧರಾಗಿ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ, ಜಿಲ್ಲಾಧಿಕಾರಿಗಳ ಕಛೇರಿಗೆ ಲಗ್ಗೆ ಹಾಕಿ, ಅವನ ಕೊರಳು ಪಟ್ಟಿಯನ್ನು ಹಿಡಿಯುತ್ತೀವಿ. ತಾಕತ್ತಿದ್ದರೆ ಕಲ್ಲುಗಣಿಗಾರಿಕೆಯನ್ನು ನಿಲ್ಲಿಸೋ, ಇಲ್ಲವಾದರೇ ಟ್ರಾನ್ಸ್ ಫರ್ ತೆಗೆದುಕೊಂಡು ಹೋಗೋ, ಎಂಬಿತ್ಯಾದಿ ರೀತಿಯಲ್ಲಿ ಏಕವಚನ ಮತ್ತು ಅಸಭ್ಯವಾಗಿ ಮಾತುಗಳನ್ನಾಡುವ ಮೂಲಕ ಜಿಲ್ಲಾಧಿಕಾರಿ ಹುದ್ದೆಗೆ ಅಗೌರವ ತೋರಿಸಿರುವುದಲ್ಲದೇ, ಸರಕಾರಿ ಅಧಿಕಾರಿಗೆ ಬೆದರಿಕೆಯೊಡ್ಡುವ ರೀತಿಯಲ್ಲಿ ಪ್ರಚೋದನೆಯನ್ನು ಹಾಗೂ ಅಪರಾಧಕ್ಕೆ  ದುಷ್ಪ್ರೇರಣೆ ನೀಡಿರುತ್ತಾರೆ. ಜಗದೀಶ್ ಕಾರಂತ್ ಅವರು ಅಪರಾಧ ಕೃತ್ಯವನ್ನು ಎಸಗುವ ಮನೋಧೋರಣೆ  ಹೊಂದಿ ಪ್ರಚೋದಾನಾ ಕಾರಿಯಾಗಿ ಬೆದರಿಕೆಯೊಡ್ಡಿರುವುದರಿಂದ ಮತ್ತು ಸಾವಿರಾರು ಜನಕ್ಕೆ ಅಪರಾಧ ಕೃತ್ಯವೆಸಗಲು ಪ್ರೇರಣೆ ನೀಡಿ ಅಪರಾಧ ಭೀತಿಯನ್ನುಂಟು ಮಾಡಿರುತ್ತಾರೆ.

ಈ ಬಗ್ಗೆ ಜಿಲ್ಲಾಧಿಕಾರಿ ಸರ್ಕಾರಿ ಅಧಿಕಾರಿಗೆ  ಬೆದರಿಕೆ ಹಾಕಿದ್ದರ ಕುರಿತು ಜಗದೀಶ ಕಾರಂತ ವಿರುದ್ಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.

ಟಾಪ್ ನ್ಯೂಸ್

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.