ಸಿಟಿ ಬಸ್‌ಗಳಲ್ಲಿ ಟಿಕೆಟ್ ಪಡೆಯದಿದ್ದರೆ ದಂಡ ಕಟ್ಟಬೇಕು !

Team Udayavani, Jun 30, 2019, 5:26 AM IST

bus

ಮಹಾನಗರ: ಕೆಎಸ್ಸಾರ್ಟಿಸಿ ಬಸ್‌ಗಳಲ್ಲಿ ನಡೆಯುತ್ತಿದ್ದ ಟಿಕೆಟ್ ತಪಾಸಣೆ ನಗರದಲ್ಲಿ ಓಡಾಡುವ ಸಿಟಿ ಬಸ್‌ಗಳಲ್ಲಿಯೂ ಬರಲಿದೆ. ಪ್ರಯಾಣಿಕರು ಟಿಕೆಟ್ ರಹಿತ ಪ್ರಯಾಣಿಸಿದರೆ ದಂಡ ಪಾವತಿ ಮಾಡಬೇಕಾಗಬಹುದು.

ಶನಿವಾರ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಸಿಟಿ ಬಸ್‌ ಮಾಲಕರು, ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿಗಳ ಸಮಕ್ಷಮದಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆದಿದೆ. ಮುಂದಿನ ಕೆಲ ದಿನಗಳಲ್ಲಿಯೇ ನಡೆಯುವ ಆರ್‌ಟಿಒ ಸಭೆಯಲ್ಲಿ ನಿರ್ಣಯ ಕೈಗೊಂಡು ಕಾರ್ಯರೂಪಕ್ಕೆ ಬರಲಿದೆ.

ನಗರದಲ್ಲಿ ಪ್ರತೀ ದಿನ ಓಡಾಡುವ ಹೆಚ್ಚಿನ ಸಿಟಿ ಬಸ್‌ಗಳಲ್ಲಿ ನಿರ್ವಾಹಕರು ಪ್ರಯಾಣಿಕರಿಗೆ ಟಿಕೆಟ್ ನೀಡುವುದಿಲ್ಲ. ಇದನ್ನು ತಡೆಯುವ ಉದ್ದೇಶದಿಂದ ಸಿಟಿ ಬಸ್‌ಗಳಲ್ಲಿ ಟಿಕೆಟ್ ಚೆಕ್ಕಿಂಗ್‌ ವ್ಯವಸ್ಥೆಯನ್ನು ಪರಿಚಯಿಸಲು ಇದೀಗ ಜಿಲ್ಲಾಡಳಿತ, ಸಾರಿಗೆ ಇಲಾಖೆ ಮುಂದಾಗಿದೆ. ಟಿಕೆಟ್ ತಪಾಸಣೆಗೆಂದು ಆರ್‌ಟಿಒ ತಂಡ ರಚನೆ ಮಾಡಲಿದ್ದು, ಅಗತ್ಯ ಬಿದ್ದರೆ ಹೊರ ಜಿಲ್ಲೆಗಳಿಂದಲೂ ಅಧಿಕಾರಿಗಳು ತಪಾಸಣೆಗೆ ಬರಲಿದ್ದಾರೆ. ಈ ತಂಡ ನಗರದಲ್ಲಿ ಸಂಚರಿಸುವ ಬಸ್‌ಗಳ ಮೇಲೆ ನಿಗಾ ವಹಿಸಲಿದೆ.

ಅರಿವು ಕಾರ್ಯಕ್ರಮ

ಟಿಕೆಟ್ ತಪಾಸಣೆ ನಡೆಸಿ, ದಂಡ ವಿಧಿಸುವ ಮುನ್ನ ಸುಮಾರು 4 ವಾರಗಳ ಕಾಲ ‘ಬಸ್‌ ಟಿಕೆಟ್ ಪಡೆದು ಪ್ರಯಾಣಿಸಿ’ ಎಂದು ಪ್ರಯಾಣಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಬಳಿಕ ಟಿಕೆಟ್ ತಪಾಸಣೆ ಜಾರಿಗೆ ಬರುತ್ತದೆ. ಸಿಟಿ ಬಸ್‌ ಮಾಲಕರ ಸಂಘದ ವತಿಯಿಂದ ಸ್ಟೇಟ್ಬ್ಯಾಂಕ್‌-ಅತ್ತಾವರ-ಮಂಗಳಾದೇವಿ (ರೂಟ್ ನಂ.27) ರೂಟ್‌ನಲ್ಲಿ ಈಗಾಗಲೇ ಟಿಕೆಟ್ ಚೆಕ್ಕಿಂಗ್‌ ವ್ಯವಸ್ಥೆ ಕಾರ್ಯನಿರ್ವಹಿಸುತ್ತಿದೆ. ಇಲ್ಲಿ ಕೇವಲ ನಿರ್ವಾಹಕರಿಗೆ ಅರಿವು ಮೂಡಿಸಲಾಗುತ್ತದೆ. ಇದೀಗ ಸಾರಿಗೆ ಇಲಾಖೆಯೇ ಈ ನಿರ್ಧಾರಕ್ಕೆ ಬಂದಿರುವುದರಿಂದ ಪ್ರಯಾಣಿಕರು ಕೂಡ ದಂಡ ತೆತ್ತಬೇಕಾಗಿ ಬರಬಹುದು.

ನಗರದಲ್ಲಿ ಓಡುವ ಕೆಲವು ಸಿಟಿ, ಸರ್ವಿಸ್‌ ಬಸ್‌ ಮಾಲಕರು ಬಸ್‌ಗಳನ್ನು ಲೀಸ್‌ಗೆ ನೀಡಿದ್ದು, ಮಾಲಕರು ನಿಯಮಗಳನ್ನು ಪಾಲನೆ ಮಾಡಬೇಕು. ಇಲ್ಲವಾದರೆ ಕಠಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಭೆಯಲ್ಲಿ ಮಾಲಕರಿಗೆ ಎಚ್ಚರಿಕೆ ನೀಡಲಾಯಿತು. ಸಿಟಿ ಬಸ್‌ಗಳ ಚಲನವಲನಗಳನ್ನು ತಿಳಿಯುವ ಉದ್ದೇಶದಿಂದ ಬಸ್‌ಗಳಲ್ಲಿ ಈಗಾಗಲೇ ಜಿಪಿಎಸ್‌ ತಂತ್ರಜ್ಞಾನವನ್ನು ಅಳವಡಿಸಲಾಗಿದೆ. ಆದರೆ, ಕೆಲವೊಂದು ಬಸ್‌ಗಳಲ್ಲಿ ಈ ನಿಯಮ ಪಾಲನೆ ಮಾಡಲಾಗುತ್ತಿಲ್ಲ ಎಂದು ಬಗ್ಗೆ ಸಭೆಯಲ್ಲಿ ಮಾಲಕರ ಗಮನ ಸೆಳೆಯಲಾಯಿತು.

ಆರ್‌ಟಿಒ ಸಭೆಯಲ್ಲಿ ನಿರ್ಣಯ

ಸಿಟಿ ಬಸ್‌ಗಳಲ್ಲಿ ನಿರ್ವಾಹಕರು ಎಲ್ಲ ಪ್ರಯಾಣಿಕರಿಗೆ ಟಿಕೆಟ್ ನೀಡಬೇಕು ಮತ್ತು ಪ್ರಯಾಣಿಕರು ಟಿಕೆಟ್ ರಹಿತ ಪ್ರಯಾಣ ಮಾಡಬಾರದು ಎಂಬ ಉದ್ದೇಶದಿಂದ ಟಿಕೆಟ್ ಚೆಕ್ಕಿಂಗ್‌ ವ್ಯವಸ್ಥೆ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದಿದೆ. ಮುಂಬರುವ ಆರ್‌ಟಿಒ ಸಭೆಯಲ್ಲಿ ಈ ಬಗ್ಗೆ ನಿರ್ಣಯ ಕೈಗೊಳ್ಳಲಾಗುವುದು.
– ಚಂದ್ರ ಉಪ್ಪಾರ, ಮಂಗಳೂರು ಪ್ರಾದೇಶಿಕ ಸಾರಿಗೆ ಅಧಿಕಾರಿ

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.