ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಯಲ್ಲಿ ಬೆಂಕಿ:ನಾಲ್ಕು ಮಕ್ಕಳ ರಕ್ಷಣೆ
Team Udayavani, Dec 9, 2018, 2:23 PM IST
ಮಂಗಳೂರು: ನಗರದಲ್ಲಿರುವ ಲೇಡಿಗೋಷನ್ ಆಸ್ಪತ್ರೆಯಲ್ಲಿ ಭಾನುವಾರ ಅಗ್ನಿ ಅವಘಡ ಸಂಭವಿಸಿದೆ. ಎನ್ಐಸಿಯುನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ನಾಲ್ವರು ಮಕ್ಕಳನ್ನು ರಕ್ಷಿಸಲಾಗಿದೆ.
ಶಾರ್ಟ್ ಸರ್ಕ್ಯೂಟ್ನಿಂದಾಗಿ ಬೆಂಕಿ ಕಾಣಿಸಿಕೊಂಡಿದ್ದು, ಆಸ್ಪತ್ರೆ ಸಿಬಂದಿ ತಕ್ಷಣ ಮಕ್ಕಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
ರಕ್ಷಣೆಗೊಳಗಾದ ಮಕ್ಕಳಿಗೆ ವೆನ್ಲಾಕ್ ಆಸ್ಪತ್ರೆಯ ಎನ್ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.
ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕದಳದ ಸಿಬಂದಿಗಳು , ಪೊಲೀಸರು ಬೆಂಕಿಯನ್ನು ತಹಬದಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ.
ಅದೃಷ್ಟವಷಾತ್ ಭಾರೀ ಅನಾಹುತ ತಪ್ಪಿಹೋಗಿದೆ.