ಮಂಗಳೂರಿನಲ್ಲಿ ಮೊದಲ ಕೋವಿಡ್‌-19 ಪಾಸಿಟಿವ್‌

ಭಟ್ಕಳ ಮೂಲದ ವ್ಯಕ್ತಿಯಲ್ಲಿ ಸೋಂಕು ದೃಢ ; ದುಬಾೖಯಿಂದ ಆಗಮಿಸಿದ್ದ ರೋಗಿ

Team Udayavani, Mar 23, 2020, 5:04 AM IST

ಮಂಗಳೂರಿನಲ್ಲಿ ಮೊದಲ ಕೋವಿಡ್‌-19 ಪಾಸಿಟಿವ್‌

ಮಂಗಳೂರು: ಮಂಗಳೂರು ವೆನ್ಲಾಕ್ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಭಟ್ಕಳ ಮೂಲದ 22 ವರ್ಷದ ವ್ಯಕ್ತಿಯಲ್ಲಿ ಕೋವಿಡ್‌-19 ಸೋಂಕು ಪತ್ತೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದು ಮೊದಲ ಕೋವಿಡ್‌-19 ಪ್ರಕರಣ.

ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ರವಿವಾರ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‌, ದುಬಾೖಯಿಂದ ಮಾ. 19ರಂದು ಸಂಜೆ 5.45ಕ್ಕೆ ಸ್ಪೈಸ್‌ ಜೆಟ್‌ ವಿಮಾನದಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ವ್ಯಕ್ತಿ ಬಂದಿಳಿದಿದ್ದ. ಈ ವೇಳೆ ಆತನನ್ನು ತಪಾಸಣೆ ನಡೆಸಿದಾಗ ರೋಗ ಲಕ್ಷಣಗಳಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ ನೇರವಾಗಿ ವಿಮಾನ ನಿಲ್ದಾಣದಿಂದ ಆ್ಯಂಬುಲೆನ್ಸ್‌ ಮುಖಾಂತರ ವೆನ್ಲಾಕ್ ಆಸ್ಪತ್ರೆಗೆ ಕಳುಹಿಸಿಕೊಡಲಾಗಿತ್ತು. ಮಾ. 20ರಂದು ವೆನ್ಲಾಕ್ ಆಸ್ಪತ್ರೆಯಿಂದ ಆತನ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿದ್ದು, ರವಿವಾರ ವರದಿ ಕೈ ಸೇರಿದ್ದು, ಆತನಲ್ಲಿ ಕೋವಿಡ್‌-19 ಪಾಸಿಟಿವ್‌ ಇರುವುದು ದೃಢಪಟ್ಟಿದೆ ಎಂದರು.

ಕೋವಿಡ್‌-19 ದೃಢಪಟ್ಟ ಹಿನ್ನೆಲೆಯಲ್ಲಿ ರೋಗಿಯನ್ನು ಪ್ರತ್ಯೇಕ ಐಸೋಲೇಶನ್‌ ವಾರ್ಡ್‌ನಲ್ಲಿ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಆತನ ಬಗ್ಗೆ ಎಲ್ಲ ರೀತಿಯಿಂದಲೂ ನಿಗಾ ವಹಿಸಲಾಗುತ್ತಿದೆ. ವ್ಯಕ್ತಿಯ ಆರೋಗ್ಯದಲ್ಲಿ ಚೇತರಿಕೆ ಇದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

165 ಮಂದಿಯ ನಿಗಾಕ್ಕೆ ಕ್ರಮ
ಕೋವಿಡ್‌-19 ಪಾಸಿಟಿವ್‌ ಪತ್ತೆಯಾದ ಹಿನ್ನೆಲೆಯಲ್ಲಿ ಭಟ್ಕಳದ ವ್ಯಕ್ತಿಯೊಂದಿಗೆ ಅಂದು ವಿಮಾನದಲ್ಲಿ ಸಂಚರಿಸಿದ್ದ ಎಲ್ಲ 165 ಮಂದಿಯ ವೈಯಕ್ತಿಕ ಮಾಹಿತಿಗಳನ್ನು ಪಡೆಯಲಾಗಿದ್ದು, ಅವರ ಮೇಲೆ ನಿಗಾ ವಹಿಸಿ ತಪಾಸಣೆ ನಡೆಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಿಂಧೂ ಬಿ. ರೂಪೇಶ್‌ ವಿವರಿಸಿದರು.ಎಡಿಸಿ ಎಂ.ಜೆ. ರೂಪಾ, ಜಿಲ್ಲಾ ಆರೋಗ್ಯಾ ಧಿಕಾರಿ ಡಾ| ರಾಜೇಶ್‌, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಗಾಯತ್ರಿ ನಾಯಕ್‌ ಉಪಸ್ಥಿತರಿದ್ದರು.

ಯುವಕನಿಗೆ ಸಮಸ್ಯೆಯಾಗದು
ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕೋವಿಡ್‌-19 ವೈರಸ್‌ಗೆ ಸಂಬಂಧಿಸಿದಂತೆ 104 ಮಂದಿಯ ಗಂಟಲು ಸ್ರಾವವನ್ನು ಇಲ್ಲಿಯವರೆಗೆ ಪರೀಕ್ಷೆಗೆ ಕಳುಹಿಸಲಾಗಿದ್ದು, ರವಿವಾರದಂದು 1 ಪಾಸಿಟಿವ್‌ ಪ್ರಕರಣ ದೃಢಪಟ್ಟಿದೆ. 15 ಪರೀಕ್ಷಾ ವರದಿಗಳು ಸ್ವೀಕೃತಿಗೆ ಬಾಕಿ ಇವೆ. ಪಾಸಿಟಿವ್‌ ಪ್ರಕರಣ ಕಂಡು ಬಂದ ಯುವಕ 22 ವರ್ಷದವರನಾಗಿರುವುದರಿಂದ ಅವನಿಗೆ ಯಾವುದೇ ಸಮಸ್ಯೆ ಆಗದೆಂದು ವೈದ್ಯರು ಹೇಳಿದ್ದಾರೆ. ಆತನೊಂದಿಗೆ ಸಹ ಪ್ರಯಾಣಿಕರಾಗಿದ್ದ 165 ಮಂದಿಯನ್ನೂ ನಿಗಾದಲ್ಲಿಡಲು ಕ್ರಮ ಕೈಗೊಳ್ಳಲಾಗುವುದು ಎಂದರು.

ತಿರುಗಾಡಿದರೆ ಕ್ರಮ
ಸ್ವಯಂ ಪ್ರೇರಿತ ಬಂದ್‌ ಮಾಡುವ ಮೂಲಕ ರವಿವಾರ ಜನ ಉತ್ತಮ ಸ್ಪಂದನೆ ನೀಡಿದ್ದಾರೆ. ಮಾ. 31ರವರೆಗೆ ಜಿಲ್ಲೆಯಲ್ಲಿ ಇದು ಮುಂದುವರಿಯಲಿದ್ದು, ಜನ ಇದೇ ರೀತಿ ಸಹಕರಿಸಬೇಕು. ಅಗತ್ಯ ಸೇವೆಗಳಿಗೆ ಬಂದ್‌ನಿಂದ ವಿನಾಯಿತಿ ಇರುತ್ತದೆ. ಜನ ಗುಂಪುಗೂಡುವಿಕೆ, ಕಾರ್ಯಕ್ರಮಗಳನ್ನು ಏರ್ಪಡಿಸುವಿಕೆ ಮಾಡಬಾರದು. ತುರ್ತು ಸಂದರ್ಭ ಇದ್ದಲ್ಲಿ ಮಾತ್ರ ವೈಯಕ್ತಿಕ ವಾಹನಗಳಲ್ಲಿ ಪ್ರಯಾಣ ಮಾಡಬಹುದು. ಶಿಕ್ಷಕರಿಗೆ ರಜೆ ನೀಡಲಾಗುವುದು. ರಸ್ತೆಯಲ್ಲಿ ಅನಗತ್ಯ ತಿರುಗಾಡುವುದು, ವಿದೇಶದಿಂದ ಬಂದವರಿಗೆ ಕೈಗೆ ಹಾಕಿರುವ ಗುರುತನ್ನು ಅಳಿಸಿರುವ ಬಗ್ಗೆ ದೂರುಗಳು ಬಂದಿದ್ದು, ಅಂತಹವರಿಗೆ ಪೊಲೀಸರ ಮುಖಾಂತರ ಎಚ್ಚರಿಕೆ ನೀಡಲಾಗುವುದು ಎಂದು ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಮುಂಜಾಗ್ರತೆಯೇ ಮದ್ದು
ಮಂಗಳೂರಿನಲ್ಲಿ ಮೊದಲ ಕೋವಿಡ್‌-19 ಪಾಸಿಟಿವ್‌ ಪ್ರಕರಣ ಪತ್ತೆಯಾಗಿರುವುದರಿಂದ ಜನ ಸಾಕಷ್ಟು ಮುಂಜಾಗ್ರತೆ ವಹಿಸಬೇಕು. ವ್ಯಕ್ತಿಗಳ ನಡುವೆ ಅಂತರ ಕಾಯ್ದುಕೊಳ್ಳುವುದು, ಅವಶ್ಯವಿದ್ದಲ್ಲಿ ಮಾತ್ರ ಹೊರಗಡೆ ತೆರಳುವುದು, ಕಾರ್ಯಕ್ರಮಗಳನ್ನು ಆಯೋಜಿಸದೇ ಇರುವುದು, ಆಗಾಗ ಕೈ ತೊಳೆದುಕೊಳ್ಳುವುದನ್ನು ರೂಢಿಸಿಕೊಳ್ಳಬೇಕು. ಆದಷ್ಟು ಮನೆಯಲ್ಲೇ ಇದ್ದು, ಕರ್ತವ್ಯ ನಿರ್ವಹಿಸಬೇಕು. ಮಕ್ಕಳು ಮತ್ತು ವಯೋವೃದ್ಧರನ್ನು ಹೊರಗೆ ಹೋಗಲು ಬಿಡದೆ, ಮನೆಯೊಳಗೇ ಇರುವಂತೆ ನೋಡಿಕೊಳ್ಳಬೇಕು ಎಂಬುದು “ಉದಯವಾಣಿ’ ಕಳಕಳಿ.

ಕೊಲ್ಲಿ ವಿಮಾನ ಹಾರಾಟ ಸ್ಥಗಿತ
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೊಲ್ಲಿ ರಾಷ್ಟ್ರಗಳಿಂದ ಬರುವ ಎಲ್ಲ ವಿಮಾನಗಳು ರವಿವಾರದಿಂದ ತಾತ್ಕಾಲಿಕವಾಗಿ ಸ್ಥಗಿತಗೊಂಡಿವೆ.

ದುಬಾೖಯಿಂದ ಶನಿವಾರ ರಾತ್ರಿ ಹೊರಟ ವಿಮಾನ ರವಿವಾರ ಮುಂಜಾನೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದು, ಇದರಲ್ಲಿ ಒಟ್ಟು 109 ಮಂದಿ ಪ್ರಯಾಣಿಕರನ್ನು ತಪಾಸಣೆಗೊಳಪಡಿಸಲಾಗಿದೆ. ಎಲ್ಲರನ್ನು ಮನೆಯಲ್ಲೇ ನಿಗಾದಲ್ಲಿರಿಸಲು ಸೂಚಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‌ ತಿಳಿಸಿದ್ದಾರೆ.

ದೇಶೀಯ ವಿಮಾನಗಳು ಬೆಂಗಳೂರು, ಮುಂಬಯಿ, ಚೆನ್ನೈ, ಹೈದರಾಬಾದ್‌ಗೆ ರವಿವಾರ ಸಂಚಾರ ನಡೆಸಿದ್ದು, ಸೋಮವಾರವೂ ದೇಶದ ವಿವಿಧ ಭಾಗಗಳಿಗೆ ಹಾರಾಟ ನಡೆಸಲಿವೆ.

ಟಾಪ್ ನ್ಯೂಸ್

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.