12 ಗಂಟೆ ಈಜಿ ಜೀವ ಉಳಿಸಿಕೊಂಡ ಮೀನುಗಾರ!

ಕೋಸ್ಟಲ್‌ ಪೊಲೀಸ್‌, ಕೋಸ್ಟ್‌ಗಾರ್ಡ್‌ ಕಾರ್ಯಾಚರಣೆ - ರಕ್ಷಣೆ

Team Udayavani, Oct 24, 2019, 5:12 AM IST

q-30

ಪಣಂಬೂರು/ ಮಂಗಳೂರು: ಮಂಗಳೂರು ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಬೋಟ್‌ನಿಂದ ಸಮುದ್ರಕ್ಕೆ ಬಿದ್ದು ನಾಪತ್ತೆಯಾಗಿದ್ದ ಮೀನುಗಾರರೊಬ್ಬರನ್ನು ಬುಧವಾರ ಕರಾವಳಿ ತಟ ರಕ್ಷಣಾ ಪಡೆಯವರು ಪ್ರಕ್ಷುಬ್ಧ ಸಮುದ್ರ ಮಧ್ಯೆ ಯಶಸ್ವಿ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ.

ಒಡಿಶಾದ ಮೀನುಗಾರ ಲೋಂಡ (35) ರಕ್ಷಿಸಲ್ಪಟ್ಟ ಮೀನುಗಾರ. ಮಂಗಳೂರಿನಿಂದ ಅ. 23ರಂದು ಬೆಳಗ್ಗೆ 3 ಗಂಟೆಗೆ ಎಫ್‌ಬಿ ಶೈನಲ್‌ ಏಂಜಲ್‌ ದೋಣಿ ಆಳಸಮುದ್ರ ಮೀನುಗಾರಿಕೆಗೆ ತೆರಳಿತ್ತು. ಸಮುದ್ರ ಪ್ರಕ್ಷುಬ್ಧವಾಗಿದ್ದುದರಿಂದ ಲೋಂಡ ಆಯತಪ್ಪಿ ಸಮುದ್ರಕ್ಕೆ ಬಿದ್ದಿದ್ದರು. ಅವರು ಸಮುದ್ರಕ್ಕೆ ಬಿದ್ದಿರುವುದು ಸಹಮೀನುಗಾರರ ಅರಿವಿಗೆ ಬಂದಿರಲಿಲ್ಲ. ಬಳಿಕ ಅವರ ಮೊಬೈಲ್‌ ಫೋನ್‌ ಬೋಟ್‌ನಲ್ಲೇ ಇದ್ದುದರಿಂದ ತಿಳಿಯಿತು. ತತ್‌ಕ್ಷಣ ಸಹ ಮೀನು ಗಾರರು ಕರಾವಳಿ ಕಾವಲು ಪೊಲೀಸ್‌ ಇಲಾಖೆಗೆ ಮಾಹಿತಿ ನೀಡಿದ್ದರು.

ಸಮುದ್ರ ಪ್ರಕ್ಷುಬ್ಧವಾಗಿದ್ದುದರಿಂದ ಸ್ಪೀಡ್‌ ಬೋಟ್‌ಗಳು ತಲುಪಲು ಸಾಧ್ಯವಾಗದ ಕಾರಣ ಕಣ್ಗಾವಲಿನಲ್ಲಿ ನಿರತವಾಗಿದ್ದ ಕೋಸ್ಟ್‌ಗಾರ್ಡ್‌ನ ಸಾವಿತ್ರಿಬಾಯಿ ಫುಲೆ ಹಡಗಿಗೆ ಮಾಹಿತಿ ನೀಡಿ ರಕ್ಷಣೆಗೆ ಕಳುಹಿಸಲಾಯಿತು. ನಾಪತ್ತೆಯಾದ ಮೀನುಗಾರನನ್ನು ಮಲ್ಪೆ ಲೈಟ್‌ ಹೌಸ್‌ನಿಂದ 10 ನಾಟಿ ಕಲ್‌ ಮೈಲು ದೂರದಲ್ಲಿ ಪತ್ತೆಹಚ್ಚಿ ರಕ್ಷಿಸಲಾಯಿತು. ಜೀವ ಉಳಿಸಿಕೊಳ್ಳಲು ಸತತವಾಗಿ ಈಜುತ್ತ ಬಸವಳಿದಿದ್ದ ಲೋಂಡ ಅವರಿಗೆ ಆಹಾರ ಮತ್ತು ಪ್ರಥಮ ಚಿಕಿತ್ಸೆ ನೀಡಲಾಗಿದ್ದು, ಅವರ ದೇಹಸ್ಥಿತಿ ಸ್ಥಿರವಾಗಿದೆ ಎಂದು ವರದಿಯಾಗಿದೆ. ಅವರನ್ನು ಎನ್‌ಎಂಪಿಟಿಗೆ ಕರೆತಂದು ಕೋಸ್ಟಲ್‌ ಪೊಲೀಸರಿಗೆ ಹಸ್ತಾಂತರಿಸಲಾಯಿತು.

ಥರ್ಮೊಕೋಲ್‌ ಸಹಾಯ
ಕೋಸ್ಟ್‌ ಗಾರ್ಡ್‌ ಹಡಗು ಲೋಂಡ ಅವರನ್ನು ಪತ್ತೆ ಹಚ್ಚುವುದಕ್ಕೆ ಮುನ್ನ ಅವರು ಸತತ 12 ಗಂಟೆಗಳ ಕಾಲ ಸಮುದ್ರದಲ್ಲಿ ಈಜುತ್ತಾ ಸಹಾಯಕ್ಕಾಗಿ ಎದುರು ನೋಡುತ್ತಿದ್ದರು. ಮಾತ್ರವಲ್ಲದೆ ಸಮುದ್ರಕ್ಕೆ ಬಿದ್ದ ಸ್ಥಳದಿಂದ ನಿಧಾನವಾಗಿ ಈಜುತ್ತಾ ಮುಂದೆ ಹೋಗಿದ್ದರು. ಸಮುದ್ರದಲ್ಲಿ ತೇಲುತ್ತಿದ್ದ ಥರ್ಮೊಕೋಲ್‌ ತುಂಡು ಸಿಕ್ಕಿದ್ದು, ಅದರ ನೆರವಿನಿಂದ ಈಜುತ್ತ ಸಹಾಯ ಎದುರು ನೋಡುತ್ತಿದ್ದರು ಎಂದು ಮೂಲಗಳು ತಿಳಿಸಿವೆ.

ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕಡಲು ಪ್ರಕ್ಷುಬ್ಧಗೊಂಡಿದ್ದು, ಬಲವಾದ ಗಾಳಿ ಬೀಸುತ್ತಿತ್ತು. ಕೋಸ್ಟ್‌ಗಾರ್ಡ್‌ ಮತ್ತು ಕರಾವಳಿ ಕಾವಲು ಪೊಲೀಸರು ಇಂಥ ಅಪಾಯದ ಸನ್ನಿವೇಶದಲ್ಲಿಯೂ ಸಮುದ್ರದಲ್ಲಿ ಯಶಸ್ವಿ ಕಾರ್ಯಾಚರಣೆ ನಡೆಸಿದ್ದಾರೆ.

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.