ಆ. 11ರಿಂದ 15ರ ವರೆಗೆ ಮನೆ- ಮನೆಯಲ್ಲೂ ರಾಷ್ಟ್ರ ಧ್ವಜ ಹಾರಾಟ

Team Udayavani, Jun 16, 2022, 6:45 AM IST

ಆ. 11ರಿಂದ 15ರ ವರೆಗೆ ಮನೆ- ಮನೆಯಲ್ಲೂ ರಾಷ್ಟ್ರ ಧ್ವಜ ಹಾರಾಟ

ಹಳೆಯಂಗಡಿ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಆಗಸ್ಟ್‌ 11ರಿಂದ 15ರ ವರೆಗೆ ಗ್ರಾಮೀಣ ಭಾಗದ ಪ್ರತೀ ಮನೆಯಲ್ಲಿಯೂ (ಹರ್‌ ಘರ್‌ ಝಂಡಾ) ರಾಷ್ಟ್ರ ಧ್ವಜವನ್ನು ಹಾರಾಡಿಸುವ ಬಗ್ಗೆ ಸ್ಥಳೀಯ ಸಮುದಾಯಗಳಿಗೆ, ಸರಕಾರ ಹಾಗೂ ಸರಕಾರೇತರ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಸರಕಾರದ ಪಂಚಾಯತ್‌ ರಾಜ್‌ ಇಲಾಖೆಯು ಸೂಚಿಸಿದೆ.

ಪಾಲಿಸ್ಟರ್‌, ಹತ್ತಿ, ಉಣ್ಣೆ, ರೇಷ್ಮೆ, ಖಾದಿ ಬಟ್ಟೆಯಿಂದ 20-30 ಅಳತೆಯ ಅಥವಾ ಅದರ ಅರ್ಧದ ಅಳತೆಯ ಧ್ವಜವನ್ನು ಬಳಸಿಕೊಳ್ಳಬೇಕು, ಪ್ಲಾಸ್ಟಿಕ್‌ ಧ್ವಜಕ್ಕೆ ಅವಕಾಶ ಇಲ್ಲ ಎಂದು ಪರೋಕ್ಷವಾಗಿ ತಿಳಿಸಿದೆ. ಸ್ವ ಸಹಾಯ ಸಂಘಗಳೇ ನಿರ್ಮಿಸಲು ಮುಂದಾದಲ್ಲಿ ಗ್ರಾ.ಪಂ. ಸಹಕಾರ ನೀಡಬೇಕು. ಗ್ರಾಮಸ್ಥರು ತಮ್ಮ ಮನೆಯ ಅಂಗಣದಲ್ಲಿಯೇ ಎತ್ತರದ ಪ್ರದೇಶದಲ್ಲಿ ಧ್ವಜವನ್ನು ಹಾರಿಸಲು ಪ್ರೇರಣೆ ನೀಡಲು ಗ್ರಾ.ಪಂ.ಗಳ ಮೂಲಕ ಜಾಗೃತಿ ಮೂಡಿಸಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ.

ಗ್ರಾಮೀಣ ಭಾಗದ ಸ್ಥಳೀಯ ಸಂಸ್ಥೆಗಳಾದ ಪಂಚಾಯತ್‌ ರಾಜ್‌ ಸಂಸ್ಥೆಗಳು, ಸ್ವ ಸಹಾಯ ಸಂಘ-ಒಕ್ಕೂಟ, ಅಂಗನವಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರ, ಉಪ ಕೇಂದ್ರ, ಸಹಕಾರ ಸಂಘ, ಉಪ ಅಂಚೆ ಕಚೇರಿ, ಆಶಾ, ಅಂಗನವಾಡಿ ಕಾರ್ಯಕರ್ತರು, ಗ್ರಾಮ ರೋಜ್‌ಗಾರ್‌ ಸೇವಕರು, ಶಿಕ್ಷಕರು ಈ ಬಗ್ಗೆ ಕಾರ್ಯಪ್ರವೃತ್ತರಾಗಬೇಕು. ಶಿಬಿರ, ಭಿತ್ತಿ ಪತ್ರಗಳ ಮೂಲಕ ಪ್ರಚಾರ ನಡೆಸಬೇಕು. ರಾಷ್ಟ್ರೀಯ ಭಾವೈಕ್ಯಕ್ಕಾಗಿ ಸರಕಾರ ಈ ಕಾರ್ಯವನ್ನು ಕೈಗೆತ್ತಿಕೊಂಡಿದೆ.

ಮನೆ ಮನೆಗೂ ರಾಷ್ಟ್ರಧ್ವಜ ಕಾರ್ಯಕ್ರಮದ ರೂಪರೇಖೆಯನ್ನು ಸಿದ್ಧಪಡಿಸಿ, ಈ ಅಭಿಯಾನದಲ್ಲಿ ಭಾಗಿಯಾದವರ ಪಾತ್ರ ಸ್ಪಷ್ಟಪಡಿಸಿಕೊಂಡು ಆಗಸ್ಟ್‌ 11ರಿಂದ 15ರ ಅವಧಿಯಲ್ಲಿ ಈ ಕಾರ್ಯಕ್ರಮ ಪ್ರತೀ ಮನೆಗೂ ತಲುಪುವಂತೆ ಮಾಡಬೇಕು. ಎಲ್ಲ ಸಮುದಾಯ ಹಾಗೂ ಸಾರ್ವಜನಿಕರನ್ನು ಇದರಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಇಲಾಖೆಯಿಂದ ಎಲ್ಲ ಇಲಾಖೆ, ಸ್ಥಳೀಯ ಸಂಸ್ಥೆಗಳಿಗೆ ಸೂಚನೆ ನೀಡಲಾಗಿದೆ.

ವಿವಿಧ ಸಂಘಟನೆಗಳು, ಸ್ಥಳೀಯರು ಹಾಗೂ ಶಾಲೆಗಳ ಸಹಭಾಗಿತ್ವದಲ್ಲಿ ಆಗಸ್ಟ್‌ 11ರಿಂದ 15ರ ವರೆಗೆ ಮನೆ ಮನೆಗೂ ರಾಷ್ಟ್ರಧ್ವಜ ಅಭಿಯಾನ ನಡೆಯಲಿದೆ. ಸರಕಾರದ ಮಾರ್ಗಸೂಚಿಯಂತೆ ಕಾರ್ಯಕ್ರಮ ಅನುಷ್ಠಾನ ಮಾಡಲಾಗುವುದು.
– ಪ್ರಸನ್ನ ಎಚ್‌., ಜಿ.ಪಂ. ಸಿಇಒ, ಉಡುಪಿ

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.