ಹಿಂಗಾರು ಪ್ರವೇಶ; ಕರಾವಳಿಯಲ್ಲಿ ಮಂಜಿನ ವಾತಾವರಣ

Team Udayavani, Oct 28, 2020, 11:47 PM IST

ಹಿಂಗಾರು ಪ್ರವೇಶ; ಕರಾವಳಿಯಲ್ಲಿ ಮಂಜಿನ ವಾತಾವರಣ

ಕಾಪು ಪರಿಸರದಲ್ಲಿ ಬುಧವಾರ ಬೆಳಗ್ಗೆ ಕಂಡು ಬಂದ ದೃಶ್ಯ

ಮಂಗಳೂರು/ಕಾಪು: ಭಾರತೀಯ ಹವಾಮಾನ ಇಲಾಖೆ ಮಾಹಿತಿಯಂತೆ ದಕ್ಷಿಣ ಭಾರತಕ್ಕೆ ಇದೀಗ ಹಿಂಗಾರು ಪ್ರವೇಶ ಪಡೆದಿದೆ.

ವಾಡಿಕೆಯಂತೆ ಸಾಮಾನ್ಯವಾಗಿ ಅಕ್ಟೋಬರ್‌ ಎರಡನೇ ವಾರದಲ್ಲಿ ಹಿಂಗಾರು ಮಾರುತ ಅಪ್ಪಳಿಸುತ್ತದೆ. ಕಳೆದ 5 ವರ್ಷಗಳಿಗೆ ಹೋಲಿಸಿದರೆ 2016ರಲ್ಲಿ ಅ. 28 ರಂದು, 2017ರಲ್ಲಿ ಅ. 11ರಂದು, 2018ರಲ್ಲಿ ಅ. 21ರಂದು, 2019ರಲ್ಲಿ ಅ. 16ರಂದು ಹಿಂಗಾರು ಪ್ರವೇಶಿಸಿತ್ತು. ನಾಲ್ಕು ವರ್ಷದ ಬಳಿಕ ಈ ಬಾರಿ ಅ. 28ರಂದು ಹಿಂಗಾರು ಕಾಲಿಟ್ಟಿದೆ. ಅಕ್ಟೋಬರ್‌ ಮೊದಲ ವಾರದಲ್ಲಿ ಬಂಗಾಲಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿಂಗಾರು ಮೇಲೆ ಪರಿಣಾಮ ಬೀರಿತ್ತು. ಇದೇ ಕಾರಣಕ್ಕೆ ತುಸು ತಡವಾಗಿ ಹಿಂಗಾರು ಅಪ್ಪಳಿಸಿದೆ.

ಕರಾವಳಿಯ ವಿವಿಧೆಡೆ ಮಂಗಳವಾರ ರಾತ್ರಿ ಮಂಜು ಮುಸುಕಿದ ವಾತಾವರಣ ಕಂಡು ಬಂದಿದೆ. ಬುಧವಾರ ಮುಂಜಾನೆ ವರೆಗೂ ಇದೇ ಸ್ಥಿತಿ ಇತ್ತು. ಬೆಳಗ್ಗೆ ಹೊರಬರುತ್ತಿದ್ದಂತೆಯೇ ಗಾಢವಾದ ಮಂಜು ಕವಿದ ವಾತಾವರಣ ಕಂಡು ಕರಾವಳಿಯ ಜನರು ಪುಳಕಿತರಾದರು.
ಕರಾವಳಿ ಪ್ರದೇಶಗಳು ಮಾತ್ರವಲ್ಲದೇ ಬಯಲು ಪ್ರದೇಶಗಳಲ್ಲೂ ಮಂಜು ಮುಸುಕಿದ ವಾತಾರಣ ಇದ್ದು ಇದು ಮಳೆಯ ಮುನ್ಸೂಚನೆಯೋ ಅಥವಾ ಮಳೆ ದೂರವಾಗಿ ಚಳಿಗಾಲ ಆರಂಭವಾಗುವುದರ ಮುನ್ಸೂಚನೆಯೋ ಎಂಬ ಆತಂಕ ಜನರನ್ನು ಕಾಡತೊಡಗಿದೆ.

ಸುಳ್ಯದ ವಿವಿಧೆಡೆ ಮಳೆ
ಸುಳ್ಯ: ತಾಲೂಕಿನ ವಿವಿಧೆಡೆ ಮಂಗಳವಾರ ರಾತ್ರಿ ಗುಡುಗು ಸಹಿತ ಸ್ವಾತಿ ಮಳೆ ಸುರಿದಿದೆ. ಮಡಪ್ಪಾಡಿಯಲ್ಲಿ ಗರಿಷ್ಠ 33 ಮಿ.ಮೀ. ಮಳೆಯಾಗಿದೆ.

ವಾಡಿಕೆಯಂತೆ ಮಳೆ
ಹವಾಮಾನ ಇಲಾಖೆ ಅಧಿಕಾರಿಗಳು ಹೇಳುವಂತೆ ರಾಜ್ಯದಲ್ಲಿ ಈ ಬಾರಿ ವಾಡಿಕೆಯಂತೆ ಹಿಂಗಾರು ಮಳೆ ಸುರಿಯುವ ಸಾಧ್ಯತೆ ಇದೆ. ಹಿಂಗಾರು ಸಮಯದಲ್ಲಿ ಅಂದರೆ ಅಕ್ಟೋಬರ್‌ 1 ರಿಂದ ಡಿಸೆಂಬರ್‌ ಅಂತ್ಯದವರೆಗೆ ಕಳೆದ ವರ್ಷ ರಾಜ್ಯದಲ್ಲಿಯೇ ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇ.157ರಷ್ಟು ಮಳೆ ಪ್ರಮಾಣ ಹೆಚ್ಚಳವಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ.74 ಮತ್ತು ಉಡುಪಿ ಜಿಲ್ಲೆಯಲ್ಲಿ ಶೇ. 136ರಷ್ಟು ಮಳೆ ಪ್ರಮಾಣ ಹೆಚ್ಚಳವಾಗಿತ್ತು. ಕಳೆದ ಐದು ವರ್ಷಗಳಿಗೆ ಹೋಲಿಸಿದರೆ ಕರಾವಳಿ ಭಾಗದಲ್ಲಿ ಇಷ್ಟೊಂದು ಪ್ರಮಾಣದ ಮಳೆ ಸುರಿದಿದ್ದು, ಕಳೆದ ವರ್ಷ.

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Moodabidri: ಬೃಹತ್ ಜೈನ ಆರಾಧನಾ ಕೋಶ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Moodabidri: ಬೃಹತ್ ಜೈನ ಆರಾಧನಾ ಕೋಶದ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

ಬಸ್‌ಗಳಿಗೆ ಬಾಗಿಲು ಅಳವಡಿಕೆ ; ಡಿಸಿ ಗಡುವು ಸಮೀಪಿಸಿದರೂ ಬಗೆಹರಿಯದ ಗೊಂದಲ!

ಬಸ್‌ಗಳಿಗೆ ಬಾಗಿಲು ಅಳವಡಿಕೆ ; ಡಿಸಿ ಗಡುವು ಸಮೀಪಿಸಿದರೂ ಬಗೆಹರಿಯದ ಗೊಂದಲ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.