ಬಡ ವಿದ್ಯಾರ್ಥಿ ವೈದ್ಯಕೀಯ ಸೀಟಿಗೆ ಮುಖ್ಯಮಂತ್ರಿ ಕಚೇರಿಯಿಂದ ಸ್ಪಂದನೆ

Team Udayavani, Oct 24, 2018, 12:45 PM IST

24-october-10.gif

ಮಂಜನಾಡಿ: ಬಡತನದ ನಡುವೆಯೂ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣನಾಗಿ, ನೀಟ್‌ ಪರೀಕ್ಷೆ ಬರೆದು ಅರ್ಹತೆ ಹೊಂದಿದರೂ ಯಾವುದೇ ವೈದ್ಯಕೀಯ ಕಾಲೇಜುಗಳಲ್ಲಿ ಸೀಟು ದೊರಕದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ರಾಜ್ಯದ ಮುಖ್ಯಮಂತ್ರಿಗೆ ಪತ್ರ ಬರೆದುದ್ದು, ಈಗ ಸೀಟು ದೊರಕುವ ಭರವಸೆ ಸಿಕ್ಕಿದೆ.

ಮಂಜನಾಡಿ ಗ್ರಾಮದ ಕಲ್ಕಟ್ಟ ನಿವಾಸಿ ಸಾಧುಕುಂಞಿ ಎಂಬವರ ಪುತ್ರ ಅಬ್ದುಲ್‌ ನಾಸಿರ್‌ ಎಂಬವರ ಕೈಗೆ ಪತ್ರ ಸೇರಿದೆ. ಕಲ್ಕಟ್ಟ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾಥಮಿಕ, ಹೈಸ್ಕೂಲ್‌ ಶಿಕ್ಷಣ ಪೂರೈಸಿದ ಅಬ್ದುಲ್‌ ನಾಸಿರ್‌ ಕಲಿಕೆಯಲ್ಲಿ ಮುಂದಿದ್ದರು. ಎಸೆಸೆಲ್ಸಿ ಪರೀಕ್ಷೆಯಲ್ಲೂ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಇವರು ವೈದ್ಯನಾಗುವ ಕನಸು ಹೊಂದಿದ್ದರು.

ಮುಖ್ಯಮಂತ್ರಿಗಳಿಗೆ ಪತ್ರ
ಸಾಧುಕುಂಞಿ ದಂಪತಿಗೆ ಇರುವ ಏಳು ಮಕ್ಕಳಲ್ಲಿ ನಾಸಿರ್‌ ಕಿರಿಯ ಮಗ. ಮನೆಯಲ್ಲಿ ಹೆಚ್ಚಿನ ಶಿಕ್ಷಣ ಹೊಂದಿದವರು ಯಾರೂ ಇಲ್ಲ. ನಾಸೀರ್‌ ಓರ್ವನೇ ಹೆಚ್ಚಿನ ಶಿಕ್ಷಣ ಪಡೆಯುತ್ತಿದ್ದವರು. ತಂದೆಯ ಕ್ಯಾಂಟೀನ್‌ ವ್ಯಾಪಾರ ಹಾಗೂ ನಾಸೀರ್‌ ಸಹೋದರರು ಕೆಲಸ ನಿರ್ವಹಣೆಯಿಂದ ಕುಟುಂಬದ ನಿರ್ವಹಣೆಯಾಗುತ್ತಿದ್ದರೂ, ವೈದ್ಯಕೀಯ ಸೀಟಿಗೆ ಹಣ ಹೊಂದಿಸುವಷ್ಟು ಶಕ್ತರಲ್ಲ. 

ತೊಕ್ಕೊಟ್ಟು ಸಂತ ಸೆಬೆಸ್ತಿಯನ್ನರ ಪಿಯು ಕಾಲೇಜಿನಲ್ಲಿ 2017 ರಲ್ಲಿ ದ್ವಿತೀಯ ಪಿಯುಸಿ ಪೂರೈಸಿದ ಅಬ್ದುಲ್‌ ನಾಸೀರ್‌, ವೈದ್ಯಕೀಯ ಶಿಕ್ಷಣವನ್ನೇ ಪಡೆಯಬೇಕು ಅನ್ನುವ ಉದ್ದೇಶದಿಂದ 2018ರ ಮೇ 6ರಂದು ನೀಟ್‌ ಪರೀಕ್ಷೆಯಲ್ಲಿ ಉತ್ತಮ ರ್‍ಯಾಂಕ್‌ ಪಡೆದುಕೊಂಡಿದ್ದಾರೆ. ಆದರೆ ವೈದ್ಯಕೀಯ ಸೀಟಿಗಾಗಿ ಕಾದು ಕುಳಿತರೂ ಯಾವುದೇ ಕಾಲೇಜಿನಲ್ಲಿ ಸೀಟು ದೊರೆಯಲಿಲ್ಲ. ಇದರಿಂದ ನೊಂದ ವಿದ್ಯಾರ್ಥಿ ಅಬ್ದುಲ್‌ ನಾಸೀರ್‌ ರಾಜ್ಯದ ಮುಖ್ಯಮಂತ್ರಿ ಗಳಿಗೆ ತನ್ನ ಅಸಹಾಯಕತೆಯನ್ನು ವ್ಯಕ್ತಪಡಿಸಿ ಪತ್ರ ರವಾನಿಸಿದ್ದರು. ವಾರದೊಳಗೆ ಸ್ಪಂದನೆ ಅ.12 ರಂದು ಬರೆದಿರುವ ಪತ್ರಕ್ಕೆ ಬೆಂಗಳೂರು, ವಿಧಾನಸೌಧದಲ್ಲಿರುವ ಮುಖ್ಯಮಂತ್ರಿಗಳ ಸಚಿವಾಲಯದಿಂದ ಅ.17 ರಂದು ಸ್ಪಂದನೆಯ ಪತ್ರ ವಿದ್ಯಾರ್ಥಿ ಕೈ ಸೇರಿದೆ.  ವೈದ್ಯಕೀಯ ಸೀಟಿನ ಮನವಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸರಕಾರದ ಪ್ರಧಾನ ಕಾರ್ಯದರ್ಶಿ, ಶಿಕ್ಷಣ ಇಲಾಖೆ, ಉನ್ನತ ಶಿಕ್ಷಣ ಬೆಂಗಳೂರು ಇವರಿಗೆ ಪತ್ರದ ಮೂಲಕ ಸೂಚಿಸಲಾಗಿದೆ.

ಪ್ರವೇಶದ ಭರವಸೆ ವೈದ್ಯನಾಗಬೇಕೆಂಬ ಮಹದಾಸೆ ಇತ್ತು. ಅದಕ್ಕಾಗಿ ಪಿಯುಸಿ ಮುಗಿಸಿ ಒಂದು ವರ್ಷ ಕಾದು ನೀಟ್‌ ಪರೀಕ್ಷೆ ಬರೆದಿದ್ದು, ಕೌನ್ಸಿಲಿಂಗೂ ತೆರಳಿದ್ದೆ. ಆದರೆ ಯಾವುದೇ ಪ್ರಯೋಜನವಾಗಲಿಲ್ಲ. ಸೀಟು ಒದಗಿಸುವಂತೆ ರಾಜ್ಯದ ಮುಖ್ಯಮಂತ್ರಿಗಳಿಗೆ ಪತ್ರವನ್ನು ಬರೆದಿದ್ದೇನೆ. ಸ್ಪಂದನೆಯೂ ಸಿಕ್ಕಿದೆ. ಪ್ರವೇಶ ಸಿಗಬಹುದೆಂಬ ಭರವಸೆ ಇದೆ.
– ಅಬ್ದುಲ್‌ ನಾಸೀರ್‌,
ವೈದ್ಯಕೀಯ ಸೀಟಿಗೆ ಪತ್ರ ಬರೆದವರು

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.