ಚೌತಿ ಆಚರಣೆ ಪರಿಸರ ಸ್ನೇಹಿಯಾಗಿರಲಿ

Team Udayavani, Sep 1, 2019, 7:01 PM IST

0109mlr39

ಮಂಗಳೂರು: ವಿಘ್ನವಿನಾಶಕ ಗಣಪತಿಯ ಆರಾಧನೆಗೆ ಸಕಲ ತಯಾರಿ ಸಂಪನ್ನಗೊಂಡಿದೆ. ವಿವಿಧೆಡೆ ಪೂಜಿಸಲ್ಪಡುವ ಗಣೇಶನ ವಿಗ್ರಹಗಳನ್ನು ರವಿವಾರ ಸಂಜೆ ಮೆರವಣಿಗೆಯೊಂದಿಗೆ ಕೊಂಡೊಯ್ದಿದ್ದು, ಚೌತಿ ಸಂಭ್ರಮ ಕಳೆಗಟ್ಟಿದೆ.

ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಹಿಂದೂ ಯುವ ಸೇವೆಯ 27ನೇ ವರ್ಷದ ಮಂಗಳೂರು ಗಣೇಶೋತ್ಸವ ಸಹಿತ ಬಹುತೇಕ ಭಾಗಗಳಲ್ಲಿ ಗಣೇಶನ ವಿಗ್ರಹಗಳನ್ನು ರವಿವಾರ ಸಂಜೆಯೇ ಮೆರವಣಿಗೆ ಮೂಲಕ ತರಲಾಯಿತು. ಈ ನಡುವೆ ಮನೆಗಳಲ್ಲಿ ಪೂಜೆ ನಡೆಸುವವರು ಅಲಂಕಾರ, ಪೂಜೆಗೆ ಬೇಕಾದ ಸಾಮಗ್ರಿಗಳ ಖರೀದಿಯಲ್ಲಿ ತೊಡಗಿದ್ದುದು ಸಾಮಾನ್ಯವಾಗಿತ್ತು.

ಪರಿಸರ ಸ್ನೇಹಿಯಾಗಿರಲಿ ಚೌತಿ!
ಗಣೇಶೋತ್ಸವವನ್ನು ಪರಿಸರ ಸ್ನೇಹಿಯಾಗಿ ಆಚರಿಸಲು ಎಲ್ಲರೂ ಕೈ ಜೋಡಿಸಬೇಕಾಗಿದೆ. ಗಣೇಶನ ಮೂರ್ತಿಯನ್ನು ತಯಾರಿಸಲು ಉಪಯೋಗಿಸುವಂತಹ ಲೋಹದ ಸಂಬಂಧ ಬಣ್ಣಗಳಲ್ಲಿ ಸೀಸ, ಇನ್ನಿತರ ವಿಷಕಾರಿ ರಾಸಾಯನಿಕಗಳಿರುತ್ತವೆ. ಪ್ರತಿ 100 ಗ್ರಾಂ ಲೋಹದ ಬಣ್ಣದಲ್ಲಿ 12 ಗ್ರಾಂ ಗಳಷ್ಟು ಸೀಸದ ಅಂಶ ಇದ್ದು, ಇದು ಮಕ್ಕಳ ಆರೋಗ್ಯಕ್ಕೆ ಒಳ್ಳೆಯದಲ್ಲ. ಹೀಗಾಗಿ ಇಂತಹ ಮೂರ್ತಿಗಳನ್ನು ಖರೀದಿ ಮಾಡದೆ ಇದ್ದರೆ ಉತ್ತಮ. ಜತೆಗೆ ಈ ಲೋಹ ಸಂಬಂಧಿ ಬಣ್ಣಗಳಿಂದ ಎಲ್ಲ ತರಹದ ಜೀವಿಗಳಿಗೂ ಅಪಾಯವಾಗುವುದು ಸಂಶೋಧನೆಗಳಿಂದ ತಿಳಿದು ಬಂದಿದೆ. ಹೀಗಾಗಿ ಮೂರ್ತಿಗಳ ವಿಸರ್ಜನೆಯಿಂದ ಕೆರೆ ಬಾವಿ ಕೊಳಗಳಲ್ಲಿ ನೀರು ಮಲಿನವಾಗದಂತೆ ಎಚ್ಚರ ವಹಿಸಬೇಕಾಗಿದೆ. ಬಕೇಟ್‌ಗಳಲ್ಲಿ ವಿಸರ್ಜಿಸಿ ಮನೆಯಲ್ಲಿ ಆಚರಿಸುವವರೂ ನೈಸರ್ಗಿಕ ಬಣ್ಣಗಳಿಂದ ತಯಾರಿಸಿರುವ ಮೂರ್ತಿಗಳನ್ನೇ ಕೊಂಡುಕೊಳ್ಳಿ. ಗಣೇಶನ ವಿಗ್ರಹಗಳನ್ನು ಗೊತ್ತು ಪಡಿಸಿದ ಜಾಗದಲ್ಲಿ, ಮನೆಗಳಲ್ಲಿ ಬಕೇಟ್‌ಗಳಲ್ಲಿ ವಿಸರ್ಜಿಸಿ. ಹೂ ಹಾಗೂ ಇನ್ನಿತರ ಸಾಮಗ್ರಿಗಳನ್ನು ಕೆರೆ, ನದಿ ಅಥವಾ ಸಮುದ್ರದ ನೀರಿಗೆ ಹಾಕಬೇಡಿ.

ದೇಗುಲಗಳಲ್ಲಿ ಪೂಜೆಗಳಿಗೆ ಸಿದ್ಧತೆ
ಗಣೇಶ ಹಬ್ಬಕ್ಕಾಗಿ ಎಲ್ಲೆಡೆ ಸಂಭ್ರಮದ ತಯಾರಿ ನಡೆಯುತ್ತಿದೆ. ವಿವಿಧ ದೇವಸ್ಥಾನಗಳಲ್ಲಿ ಈಗಾಗಲೇ ಹಬ್ಬದ ಸಿದ್ಧತೆ ಮುಗಿದಿದೆ. ಪೊಲೀಸ್‌ ಲೇನ್‌ ಶ್ರೀ ಮುನೀಶ್ವರ ಮಹಾಗಣಪತಿ ದೇವಸ್ಥಾನ, ಕದ್ರಿ ದೇವಸ್ಥಾನ, ಕುದ್ರೋಳಿ ಕ್ಷೇತ್ರ, ಬಿಕರ್ನಕಟ್ಟೆ ಶ್ರೀ ಕ್ಷೇತ್ರ ಬಲಮುರಿ ಸಿದ್ಧಿವಿನಾಯಕ ದೇವಸ್ಥಾನ, ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನ, ಮಣ್ಣಗುಡ್ಡೆ ಹರಿದಾಸ್‌ ಲೇನ್‌ ಶ್ರೀ ಮಡಕೈ ನವದುರ್ಗಾ ಮಹಾಗಣಪತಿ ದೇವಸ್ಥಾನ ಸಹಿತ ವಿವಿಧೆಡೆ ಶ್ರೀ ಸಿದ್ಧಿವಿನಾಯಕನಿಗೆ ವಿವಿಧ ಪೂಜೆ ಪುರಸ್ಕಾರಗಳು ನಡೆಯಲಿವೆ.

ವಿವಿಧ ಸಂಘ- ಸಂಸ್ಥೆಗಳಿಂದಲೂ ಗಣೇಶೋತ್ಸವ ಜರಗಲಿದೆ. ದೇವರ ವಿಗ್ರಹ ಪ್ರತಿಷ್ಠಾಪನೆಯಿಂದ ಹಿಡಿದು ಭಜನೆ, ಮಹಾಪೂಜೆ, ವಿವಿಧ ಹೋಮಗಳು, ಸಾಂಸ್ಕೃತಿಕ ಕಾರ್ಯ ಕ್ರಮಗಳು ನಡೆಯಲಿವೆ. ಅಲ್ಲಲ್ಲಿ ಗರಿಷ್ಠ ಏಳು ದಿನಗಳ ಕಾಲ ಗಣಪನನ್ನು ಪೂಜಿಸಿ ವೈಭವದ ಶೋಭಾಯಾತ್ರೆಯೊಂದಿಗೆ ಮೂರ್ತಿಯನ್ನು ವಿಸರ್ಜನೆ ನಡೆಯಲಿದೆ.

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-14

ಹಬ್ಬದ ಮೂಡ್‌ನ‌ಲ್ಲಿ ಸ್ಯಾಂಡಲ್‌ವುಡ್‌ ತಾರೆಯರು

ಕುಷ್ಟಗಿ: ಹಿಂದೂ- ಮುಸ್ಲಿಂ ಗೆಳೆಯರ ಬಳಗದ ಗಣೇಶೋತ್ಸವಕ್ಕೆ ನಾಲ್ಕು ದಶಕಗಳ ಸಂಭ್ರಮ

ಕುಷ್ಟಗಿ: ಹಿಂದೂ- ಮುಸ್ಲಿಂ ಗೆಳೆಯರ ಬಳಗದ ಗಣೇಶೋತ್ಸವಕ್ಕೆ ನಾಲ್ಕು ದಶಕಗಳ ಸಂಭ್ರಮ

ಗ್ರಾಮೀಣ ಭಾಗದಲ್ಲಿ ಅರ್ಥಪೂರ್ಣ ಗಣೇಶ ಚತುರ್ಥಿ ಆಚರಣೆ

ಗ್ರಾಮೀಣ ಭಾಗದಲ್ಲಿ ಅರ್ಥಪೂರ್ಣ ಗಣೇಶ ಚತುರ್ಥಿ ಆಚರಣೆ

tdy-7

ಗಂಗಾವತಿಯಲ್ಲಿ ಪೊಲೀಸ್ ಬಂದೋಬಸ್ತಿನಲ್ಲಿ ಸಡಗರದ ಗಣೇಶ ಚತುರ್ಥಿ ಆಚರಣೆ

ಅಂಜೂರ ಮರದಿಂದ 32 ಅಡಿ ಗಣೇಶನ ಮೂರ್ತಿ ತಯಾರು

ಅಂಜೂರ ಮರದಿಂದ 32 ಅಡಿ ಗಣೇಶನ ಮೂರ್ತಿ ತಯಾರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.