ಸ್ವಚ್ಛತೆಯಿಂದ ಉತ್ತಮ ಆರೋಗ್ಯ: ಅನುಸೂಯ

Team Udayavani, Aug 3, 2017, 8:10 AM IST

0208kpk3.jpg

ಸುಳ್ಯ: ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವುದರಿಂದ ಉತ್ತಮ ಆರೋಗ್ಯ ದೊರೆಯಲು ಸಾಧ್ಯ ಎಂದು ಪೆರುವಾಜೆ ಗ್ರಾ.ಪಂ. ಅಧ್ಯಕ್ಷೆ ಅನಸೂಯಾ ಹೇಳಿದರು.

ಡಾ. ಕೆ.ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜ ಕಾರ್ಯ ವಿಭಾಗದ ಆಶ್ರಯದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಬುಧವಾರ ಸ್ವಚ್ಛ ಕ್ಯಾಂಪಸ್‌ ಅಭಿಯಾನ ಮತ್ತು ಮಾಹಿತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ನಮ್ಮ ಸುತ್ತಮುತ್ತಲಿನ ಪರಿಸರದ ಬಗ್ಗೆ ನಮಗೆ ಕಾಳಜಿ ಇರಬೇಕು. ವಿದ್ಯಾರ್ಥಿ ಜೀವನದಲ್ಲಿ ಅಂತಹ ಮನೋಭಾವನೆ ಮೂಡಿದಾಗ ಸ್ವಚ್ಛ ಊರು, ಗ್ರಾಮದ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.

ಸ್ವಸ್ಥ ಆರೋಗ್ಯದಿಂದ ಸಮಾಜ
ಮುಖ್ಯ ಅತಿಥಿ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಾಸುದೇವ ಪೆರುವಾಜೆ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಸ್ವಚ್ಛ ಭಾರತದ ಪರಿಕಲ್ಪನೆಯ ಆಶಯ ಹೊಂದಿದ್ದಾರೆ. ಇದು ಗುರಿ ಮುಟ್ಟಲು ವಿದ್ಯಾರ್ಥಿ ಸಮುದಾಯದ ಪಾಲ್ಗೊಳ್ಳುವಿಕೆ ಮಹತ್ತರವಾದುದು ಎಂದರು.

ಸ್ವಸ್ಥ ಆರೋಗ್ಯ, ವಾತಾವರಣ, ಸಮಾ ಜದ ನಿರ್ಮಾಣದ ದಿಶೆಯಲ್ಲಿ  ಸ್ವಚ್ಛತೆ ಬಹುಮುಖ್ಯವಾಗಿದ್ದು, ಅದರೊಂದಿಗೆ ಜಲಸಂರಕ್ಷಣೆಯ ಕಾರ್ಯವೂ ಆಗಬೇಕು ಎಂದು ಅವರು ಅಭಿಪ್ರಾಯಿಸಿದರು.

ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ ಮಾತನಾಡಿ, ಪ್ರಕೃತಿಗೆ ವಿರುದ್ಧವಾಗಿ ಪ್ರತಿಕ್ರಿಯಿಸಿದಾಗ, ಅದು ಮನುಷ್ಯನ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಹಾಗಾಗಿ ಪರಿಸರವನ್ನು ಹಾಳಗೆಡಹದೆ, ಶುಚಿತ್ವದಿಂದ ಕಾಪಾಡಿಕೊಳ್ಳಬೇಕು ಎಂದು ಅವರು ಹೇಳಿದರು.

ಆಂತರಿಕ ಸ್ವಚ್ಛತೆ, ಬಾಹ್ಯ ಸ್ವಚ್ಛತೆ
ಪ್ಲಾಸ್ಟಿಕ್‌, ತ್ಯಾಜ್ಯದಿಂದ ಪರಿಸರದಲ್ಲಿ ಅನೇಕ ರೋಗಗಳು ಸೃಷ್ಟಿಯಾಗುತ್ತಿವೆ. ಹಾಗಾಗಿ ಆಂತರಿಕ ಸ್ವಚ್ಛತೆ ಎಷ್ಟು ಮುಖ್ಯವೋ, ಬಾಹ್ಯ ಸ್ವಚ್ಛತೆಯು ಅಷ್ಟೆ ಮುಖ್ಯ. ಈ ಬಗ್ಗೆ ಪ್ರತಿಯೊಬ್ಬರು ಅರಿವು ಹೊಂದಿರಬೇಕು ಎಂದು ಅವರು ಹೇಳಿದರು.

ಸಭಾಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ ಕಾಂತಮಂಗಲ ಮಾತನಾಡಿ, ಕಸ, ತ್ಯಾಜ್ಯ ಕಂಡಾಗ ಅದನ್ನು ತೆರವುಗೊಳಿಸುವುದು ಅಧಿಕಾರಿಗಳ, ಜನಪ್ರತಿನಿಧಿಗಳ ಕೆಲಸ ಎಂದು ಭಾವಿಸಬಾರದು. ಬದಲಿಗೆ ನಮ್ಮ ಜವಾಬ್ದಾರಿಯು ಹೌದು. ಪ್ರತಿಯೊಬ್ಬರೂ ಸ್ವಚ್ಛತೆ ನಮ್ಮ ಕರ್ತವ್ಯ ಎಂದು ಪರಿಭಾವಿಸಬೇಕು ಎಂದು ಅವರು ಹೇಳಿದರು.ಸಮಾಜಕಾರ್ಯ ವಿಭಾಗ ಇಂತಹ ಪರಿಸರ ಸಂರಕ್ಷಣೆಯ ಕೆಲಸ ಜತೆಗೆ ಬಡವರಿಗೆ ಸರಕಾರದಿಂದ ದೊರೆಯುವ ಸೌಲಭ್ಯವನ್ನು ದೊರಕಿಸುವ ಕೊಡುವ ನಿಟ್ಟಿನಲ್ಲಿ ಕೈ ಜೋಡಿಸಬೇಕು ಎಂದರು.ಈ ಸಂದರ್ಭದಲ್ಲಿ ಪ್ರತಿ ತರಗತಿಗೆ, ಕ್ಯಾಂಟಿನ್‌ಗೆ ಡಸ್ಟ್‌ ಬಿನ್‌ ಅನ್ನು ಕೊಡುಗೆಯಾಗಿ ನೀಡಲಾಯಿತು.

ಉಪನ್ಯಾಸಕ ಈಶ್ವರ್‌ ಉಪಸ್ಥಿತರಿದ್ದರು. ಸಮಾಜಕಾರ್ಯ ಸಂಘದ ಅಧ್ಯಕ್ಷ ಅನಿಲ್‌ ಸ್ವಾಗತಿಸಿ, ಜತೆ ಕಾರ್ಯದರ್ಶಿ ಆಶಾ ವಂದಿಸಿದರು. ಸುಶ್ಮಿತಾ ಅವರು ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.