ಸರಕಾರಿ ಜಾಗದ ಅತಿಕ್ರಮಣ: ತನಿಖೆಗೆ ಗ್ರಾಮಸ್ಥರ ಆಗ್ರಹ

Team Udayavani, Aug 6, 2017, 6:10 AM IST

aa.jpg

ಮಡಂತ್ಯಾರು : ಕುಕ್ಕಳದಲ್ಲಿ ಸರಕಾರಿ ಜಾಗವನ್ನು ಅತಿಕ್ರಮಣ ಮಾಡಲಾಗಿದೆ. ಈ ಬಗ್ಗೆ ತನಿಖೆ ನಡೆಸಬೇಕು ಎಂದು ಶುಕ್ರವಾರ ಜರಗಿದ ಮಡಂತ್ಯಾರು ಗ್ರಾ.ಪಂ.ನ ಗ್ರಾಮಸಭೆಯಲ್ಲಿ  ಒತ್ತಾಯಿಸಲಾಯಿತು.

ಕುಕ್ಕಳದಲ್ಲಿ  ಕೃಷ್ಣಪ್ಪ ಬಂಗೇರ ಎಂಬವವರು ಸರಕಾರಿ ಜಾಗವನ್ನು ಅತಿಕ್ರಮಣ ಮಾಡಿದ್ದಾರೆ. ಈ ಬಗ್ಗೆ ಕಂದಾಯ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗಣೇಶ್‌ ಆರೋಪಿಸಿದರು.

ಕುಕ್ಕಳದಲ್ಲಿ 80 ಸೆಂಟ್ಸ್‌  ಪಟ್ಟ ಜಾಗ ಹೊಂದಿದ ವ್ಯಕ್ತಿ 20 ಎಕರೆ ಕುಮ್ಕಿಜಾಗವನ್ನು ಅತಿಕ್ರಮಿಸಿದ್ದು ಸಾರ್ವಜನಿಕರಿಗೆ ರಸ್ತೆ ನಿರ್ಮಾಣಕ್ಕೂ  ಜಾಗಬಿಡುತ್ತಿಲ್ಲ. ಕುಮ್ಕಿಜಾಗಕ್ಕೆ ಅರ್ಜಿ ಸಲ್ಲಿಸಿದವರಿಗೂ ಜಾಗ ನೀಡಿಲ್ಲ. ಸೂಕ್ತ ತನಿಖೆ ಮಾಡಿ ಕುಮ್ಕಿ ಜಾಗ ತೆರವುಗೊಳಿಸಿ ರಸ್ತೆ ನಿರ್ಮಾಣಕ್ಕೆ ಅನುವು ಮಾಡಿಕೊಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು.

ಡಿ.ಸಿ.ಮನ್ನಾ ಜಾಗ ಅರಣ್ಯ ಇಲಾಖೆಗೆ ಪಾರೆಂಕಿ ಗ್ರಾಮದ ಸರ್ವೆ ನಂ.102ರಲ್ಲಿ  8 ಎಕರೆ, 38 ಸೆಂಟ್ಸ್‌  ಡಿಸಿ ಮನ್ನ ಜಾಗ ಇದೆ. ಡಿಸಿ ಮನ್ನಾ ಜಾಗದಲ್ಲಿ ದರ್ಖಾಸು ಆಗಿ 6 ಸೆಂಟ್ಸ್‌ ಮಾತ್ರ ಬಾಕಿ ಉಳಿದಿದೆ. ಅತಿಕ್ರಮಣ ಆಗಿದೆ. ಅದು ಯಾರ ಬಳಿ ಇದೆ ಎನ್ನುವ ಮಾಹಿತಿ ಇಲ್ಲ. ರಕ್ತೇಶ್ವರಿ ಪದವಿನಲ್ಲಿ ಸಾಮಾಜಿಕ ಅರಣ್ಯ ಎಂದು ಅರಣ್ಯ ಇಲಾಖೆಗೆ ಹೋಗಿದೆ. ಡಿಸಿ ಮನ್ನಾ ಜಾಗ ಅರಣ್ಯಕ್ಕೆ ಹೋಗುತ್ತದೆಯೇ ಎಂದು ಫ್ರಾನ್ಸಿಸ್‌ ವಿ.ವಿ. ಪ್ರಶ್ನಿಸಿದರು. ಡಿಸಿ ಮನ್ನ ಜಾಗ ಆರ್‌ಟಿಸಿಯಲ್ಲಿ  ಅರಣ್ಯ ಇಲಾಖೆಗೆ ಹೋಗುವುದಾದರೆ ನಮ್ಮ ಆರ್‌ಟಿಸಿಗೆ ಬರೆದುಕೊಡಲು ಸಾಧ್ಯವೆ ಎಂದು ಗ್ರಾಮಸ್ಥರು ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಗ್ರಾಮ  ಪಂಚಾಯತ್‌ ಅಧ್ಯಕ್ಷರು ಕಾನೂನಿನ ಚೌಕಟ್ಟಿನಲ್ಲಿ ಯಾವುದೇ ಅವಕಾಶ ಇಲ್ಲ.ಕಂದಾಯಇಲಾಖೆ ಗ್ರಾ.ಪಂ.ಗೆ ಯಾವುದೇ ಮಾಹಿತಿ ನೀಡದೆ ಕೆಲಸ ಮಾಡುತ್ತಿದೆ ಅದಕ್ಕಾಗಿ ತಹಶಿಲ್ದಾರರಿಗೆ ದೂರು ಕೊಟ್ಟಿದ್ದೇವೆ ಎಂದರು.
ಪಾರೆಂಕಿ ಗ್ರಾಮದಲ್ಲಿ ಗೋಮಾಳ ಜಾಗ ಎಷ್ಟಿದೆ  ನಿಮ್ಮ ಇಲಾಖೆಯಲ್ಲಿ ಒಬ್ಬೊಬ್ಬರಿಗೆ ಒಂದು ಕಾನೂನು ಇದೆಯೆ ಎಂದು ಪ್ರಶ್ನಿಸಿದರು. ಗ್ರಾಮ ಸಭೆಗೆ ಬಂದು ಬರೆದುಕೊಂಡು ಹೋಗುತ್ತೀರಿ. ಉತ್ತರ ಕೊಡುವುದಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತ ಪಡಿಸಿದರು.

ಗೋಮಾಳದಲ್ಲಿ  94ಸಿ ಜಾಗ ನೀಡುವ ಅವಕಾಶ ಇಲ್ಲ ಎಂದಾದರೆ ಅದನ್ನು ಅಳತೆ ಮಾಡಿ ಪಶುಸಂಗೋಪನೆಗೆ ನೀಡಿ ಎಂದು ರಿಚರ್ಡ್‌ ಹೇಳಿದರು. ವಾರ್ಡ್‌ 1,2,3ರಲ್ಲಿ ತೆರೆದ ಬಾವಿ ರಚನೆ ಆಗಬೇಕು ಎಂದವರು ಒತ್ತಾಯಿಸಿದರು.

ಮನೆ ಹಂಚಿಕೆ 
ಅಧ್ಯಕ್ಷತೆ ವಹಿಸಿದ್ದ ಮಡಂತ್ಯಾರು ಗ್ರಾ.ಪಂ. ಅಧ್ಯಕ್ಷ  ಗೋಪಾಲಕೃಷ್ಣ  ಮಾತನಾಡಿ, ಉದ್ಯೋಗ ಖಾತರಿ ಯೋಜನೆಯ ಬಗ್ಗೆ ಹಲವು ಕಾರ್ಯಕ್ರಮದಲ್ಲಿ ಮಾಹಿತಿ ನೀಡುತ್ತಿದ್ದೇವೆ. ಹೆಚ್ಚಿನವರು ಪ್ರಯೋಜನ ಪಡೆಯುತ್ತಿಲ್ಲ. ಅದರ ಸದುಪಯೋಗ ಪಡೆದುಕೊಳ್ಳಬೇಕು. ಮುಂದಿನ ಸಭೆಯಲ್ಲಿ ಮನೆ ಹಂಚಿಕೆಯ ನಿರ್ಣಯ ನಡೆಯಲಿದೆ. ಮನೆ ಬೇಕಾದ ಅರ್ಹರು ಅರ್ಜಿ ಸಲ್ಲಿಸಬಹುದು ಎಂದು ಹೇಳಿದರು.
ತೋಟಗಾರಿಕೆ ಇಲಾಖೆಯ ಮಹಾವೀರ ನೋಡಲ್‌ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು. ವಿವಿಧ ಇಲಾಖಾಧಿಕಾರಿಗಳು ಮಾಹಿತಿ ನೀಡಿದರು.

ಟಾಪ್ ನ್ಯೂಸ್

rwytju11111111111

ರಾಯರ ವಾರದಂದು ನಿಮ್ಮ ರಾಶಿಫಲ ಹೇಗಿದೆ ನೋಡಿ!

ಕಡತಯಜ್ಞ : ಲಭಿಸಿತು ಅಗಾಧ ಜಾಗ! ಪ್ರಧಾನಿ ಸೂಚನೆಯನುಸಾರ ಸಮರೋಪಾದಿ ಕೆಲಸ

ಕಡತಯಜ್ಞ : ಲಭಿಸಿತು ಅಗಾಧ ಜಾಗ! ಪ್ರಧಾನಿ ಸೂಚನೆಯನುಸಾರ ಸಮರೋಪಾದಿ ಕೆಲಸ

ಚಿತ್ರಮಂದಿರಗಳ ಸಮಸ್ಯೆಯಲ್ಲಿ ಬಾಲಿವುಡ್‌

ಚಿತ್ರಮಂದಿರಗಳ ಸಮಸ್ಯೆಯಲ್ಲಿ ಬಾಲಿವುಡ್‌

ಅತ್ಯಂತ ಯಶಸ್ವಿ ಆಡಳಿತಗಾರ ಮೋದಿ: ಗೃಹ ಸಚಿವ ಅಮಿತ್‌ ಶಾ

ಅತ್ಯಂತ ಯಶಸ್ವಿ ಆಡಳಿತಗಾರ ಮೋದಿ: ಗೃಹ ಸಚಿವ ಅಮಿತ್‌ ಶಾ

ಚೀನಾ ಕಾಯ್ದೆಗೆ ಆಕ್ಷೇಪ; ಗಡಿ ಕಾಯ್ದೆ ಬಾಂಧವ್ಯಕ್ಕೆ ಧಕ್ಕೆ ತರಲಿದೆ

ಚೀನಾ ಕಾಯ್ದೆಗೆ ಆಕ್ಷೇಪ; ಗಡಿ ಕಾಯ್ದೆ ಬಾಂಧವ್ಯಕ್ಕೆ ಧಕ್ಕೆ ತರಲಿದೆ

ಖೇಲ್‌ರತ್ನಕ್ಕೆ 11 ಹೆಸರು ಶಿಫಾರಸು; ನೀರಜ್‌ ಚೋಪ್ರಾ,ಮಿಥಾಲಿ, ಚೆಟ್ರಿ ಹೆಸರು ಮುಂಚೂಣಿಯಲ್ಲಿ

ಖೇಲ್‌ರತ್ನಕ್ಕೆ 11 ಹೆಸರು ಶಿಫಾರಸು; ನೀರಜ್‌ ಚೋಪ್ರಾ,ಮಿಥಾಲಿ, ಚೆಟ್ರಿ ಹೆಸರು ಮುಂಚೂಣಿಯಲ್ಲಿ

ಸಂಕಷ್ಟದಲ್ಲಿ ಕನ್ನಡ ಪುಸ್ತಕೋದ್ಯಮ; ಕೋವಿಡ್‌ದಿಂದಾಗಿ ಬಿದ್ದಿದೆ ಪೆಟ್ಟು

ಸಂಕಷ್ಟದಲ್ಲಿ ಕನ್ನಡ ಪುಸ್ತಕೋದ್ಯಮ; ಕೋವಿಡ್‌ದಿಂದಾಗಿ ಬಿದ್ದಿದೆ ಪೆಟ್ಟು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶ್ರೀಕ್ಷೇತ್ರ ಧರ್ಮಸ್ಥಳ: ದೇವರ ದರ್ಶನ ಸಮಯ ಬದಲು

ಶ್ರೀಕ್ಷೇತ್ರ ಧರ್ಮಸ್ಥಳ: ದೇವರ ದರ್ಶನ ಸಮಯ ಬದಲು

ವೇತನ ಮೂರ್‍ನಾಲ್ಕು ತಿಂಗಳು ವಿಳಂಬ; ಜೀವನಕ್ಕೆ ಪರದಾಡುವ ಸ್ಥಿತಿ

ವೇತನ ಮೂರ್‍ನಾಲ್ಕು ತಿಂಗಳು ವಿಳಂಬ; ಜೀವನಕ್ಕೆ ಪರದಾಡುವ ಸ್ಥಿತಿ

ಕಾಳು ಮೆಣಸು ಧಾರಣೆ ಚೇತರಿಕೆ

ಕಾಳು ಮೆಣಸು ಧಾರಣೆ ಚೇತರಿಕೆ

ನ್ಯಾಯಾಧೀಶರಿಂದ ಪರಿಶೀಲನೆ, ಅಧಿಕಾರಿಗಳಿಗೆ ತರಾಟೆ

ನ್ಯಾಯಾಧೀಶರಿಂದ ಪರಿಶೀಲನೆ, ಅಧಿಕಾರಿಗಳಿಗೆ ತರಾಟೆ

ಬಂಟ್ವಾಳ: ವ್ಯಕ್ತಿ ಮೃತಪಟ್ಟ 6 ತಿಂಗಳ ಬಳಿಕ ಮೊಬೈಲ್ ಗೆ ಬಂತು ಲಸಿಕೆ ಪೂರ್ಣಗೊಂಡ ಸಂದೇಶ.!

ಬಂಟ್ವಾಳ: ವ್ಯಕ್ತಿ ಮೃತಪಟ್ಟ 6 ತಿಂಗಳ ಬಳಿಕ ಮೊಬೈಲ್ ಗೆ ಬಂತು ಲಸಿಕೆ ಪೂರ್ಣಗೊಂಡ ಸಂದೇಶ.!

MUST WATCH

udayavani youtube

ಹಿಂದೂಗಳ ನಡುವೆ ನಮಾಜ್ : ಹೇಳಿಕೆಗಾಗಿ ಕ್ಷಮೆಯಾಚಿಸಿದ ವಕಾರ್ ಯೂನಿಸ್

udayavani youtube

ಅಂಗಾಂಗ ದಾನ ಎಂದರೇನು ಏನಿದರ ಮಹತ್ವ ?

udayavani youtube

ಸಾವಯವ ಕೃಷಿಯಲ್ಲಿ ಅನುಸರಿಸಬೇಕಿರುವ ಪ್ರಮುಖ ಅಂಶಗಳ ಬಗ್ಗೆ ನಿಮಗೆ ಗೊತ್ತೇ?

udayavani youtube

ಶಾಲೆಗೆ ಬಂತು ಬಿಸಿಯೂಟ : ದೋಟಿಹಾಳ ಶಾಲಾ ಮಕ್ಕಳ ಒಂದು ಕಿಲೋಮೀಟರ್ ಪಾದಯಾತ್ರೆಗೆ ಬ್ರೇಕ್

udayavani youtube

ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಯನ್ನು ಉಳಿಸಬೇಕಾಗಿದೆ : ಆರ್. ಅಶೋಕ್

ಹೊಸ ಸೇರ್ಪಡೆ

rwytju11111111111

ರಾಯರ ವಾರದಂದು ನಿಮ್ಮ ರಾಶಿಫಲ ಹೇಗಿದೆ ನೋಡಿ!

ಕಡತಯಜ್ಞ : ಲಭಿಸಿತು ಅಗಾಧ ಜಾಗ! ಪ್ರಧಾನಿ ಸೂಚನೆಯನುಸಾರ ಸಮರೋಪಾದಿ ಕೆಲಸ

ಕಡತಯಜ್ಞ : ಲಭಿಸಿತು ಅಗಾಧ ಜಾಗ! ಪ್ರಧಾನಿ ಸೂಚನೆಯನುಸಾರ ಸಮರೋಪಾದಿ ಕೆಲಸ

ಚಿತ್ರಮಂದಿರಗಳ ಸಮಸ್ಯೆಯಲ್ಲಿ ಬಾಲಿವುಡ್‌

ಚಿತ್ರಮಂದಿರಗಳ ಸಮಸ್ಯೆಯಲ್ಲಿ ಬಾಲಿವುಡ್‌

ಶ್ರೀಕ್ಷೇತ್ರ ಧರ್ಮಸ್ಥಳ: ದೇವರ ದರ್ಶನ ಸಮಯ ಬದಲು

ಶ್ರೀಕ್ಷೇತ್ರ ಧರ್ಮಸ್ಥಳ: ದೇವರ ದರ್ಶನ ಸಮಯ ಬದಲು

ತನಿಖೆಯಿಂದ ವಾಂಖೆಡೆ ತೆರವಿಲ್ಲ; ಎನ್‌ಸಿಬಿ ಸ್ಪಷ್ಟನೆ

ತನಿಖೆಯಿಂದ ವಾಂಖೆಡೆ ತೆರವಿಲ್ಲ; ಎನ್‌ಸಿಬಿ ಸ್ಪಷ್ಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.