ಕಡಬ ತಾಲೂಕು ಅನುಷ್ಠಾನಕ್ಕೆ ಹಸಿರು ನಿಶಾನೆ 


Team Udayavani, Jan 20, 2018, 1:56 PM IST

20-Jan-12.jpg

ಕಡಬ: ಪರಿಸರದ ಜನರ ಬಹುಕಾಲದ ಬೇಡಿಕೆಯಾಗಿರುವ ಕಡಬ ತಾಲೂಕು ಅನುಷ್ಠಾನವು ಕೊನೆಗೂ ಕೈಗೂಡಿದೆ. ಈಗಾಗಲೇ 42 ಗ್ರಾಮಗಳನ್ನೊಳಗೊಂಡು ನೂತನ ತಾಲೂಕಿನ ಅನುಷ್ಠಾನಕ್ಕಾಗಿ ರಾಜ್ಯ ಸರಕಾರ ಅಂತಿಮ ಅಧಿಸೂಚನೆ ಹೊರಡಿಸಿದ್ದು, ಇನ್ನು ಮುಂದೆ ಕಡಬವು ಪೂರ್ಣಪ್ರಮಾಣದ ತಾಲೂಕಾಗಿ ಕಾರ್ಯಾರಂಭ ಮಾಡಲಿದೆ.

ಈ ಹಿಂದೆ ಪ್ರಸ್ತಾವನೆಯಲ್ಲಿದ್ದ ಬೆಳ್ತಂಗಡಿ ತಾಲೂಕಿನ ಗ್ರಾಮಗಳನ್ನು ಕೈಬಿಟ್ಟು ಪುತ್ತೂರು ತಾಲೂಕಿನ 35 ಗ್ರಾಮಗಳು ಹಾಗೂ ಸುಳ್ಯ ತಾಲೂಕಿನ 7 ಗ್ರಾಮಗಳನ್ನು ಸೇರಿಸಿಕೊಂಡು ಒಟ್ಟು 42 ಗ್ರಾಮಗಳ ವ್ಯಾಪ್ತಿಯ ನೂತನ ಕಡಬ ತಾಲೂಕು ರೂಪುಗೊಂಡಿದೆ. ಹೊಸ ತಾಲೂಕಿನ ಒಟ್ಟು ಜನಸಂಖ್ಯೆ (2011ರ ಜನಗಣತಿಯಂತೆ) 1,20,086 ಆಗಿದ್ದು, ಒಟ್ಟು 149159.8 ಎಕರೆ ಭೌಗೋಳಿಕ ವಿಸ್ತೀರ್ಣವಿದೆ.

ನೂತನ ಗ್ರಾಮಗಳು
ಪ್ರಸ್ತುತ ಪುತ್ತೂರು ತಾಲೂಕಿನಲ್ಲಿರುವ ಕಡಬ, ಕೋಡಿಂಬಾಳ, ಬಂಟ್ರ, 102 ನೆಕ್ಕಿಲಾಡಿ, ಐತ್ತೂರು, ಬಿಳಿನೆಲೆ, ಕೊಂಬಾರು,
ನೂಜಿಬಾಳ್ತಿಲ, ರೆಂಜಿಲಾಡಿ, ಕುಟ್ರಾಪ್ಪಾಡಿ, ಬಲ್ಯ, ಪೆರಾಬೆ, ಕುಂತೂರು, ಆಲಂಕಾರು, ರಾಮಕುಂಜ, ಹಳೆನೇರೆಂಕಿ, ಕೊಯಿಲ, ದೋಳ್ಪಾಡಿ, ಕಾಣಿಯೂರು, ಚಾರ್ವಾಕ, ಬೆಳಂದೂರು, ಕಾಯಿಮಣ, ಕುದ್ಮಾರು, ಸವಣೂರು, ಪುಣ್ಚಪ್ಪಾಡಿ, ಪಾಲ್ತಾಡಿ, ಕೊಣಾಜೆ, ಶಿರಿಬಾಗಿಲು, ಗೋಳಿತ್ತೂಟ್ಟು, ಕೊಣಾಲು, ಆಲಂತಾಯ, ನೆಲ್ಯಾಡಿ, ಕೌಕ್ರಾಡಿ, ಇಚ್ಲಂಪಾಡಿ, ಶಿರಾಡಿ, ಸುಳ್ಯ ತಾಲೂಕಿನ ಏನೆಕಲ್ಲು, ಸುಬ್ರಹ್ಮಣ್ಯ, ಐನೆಕಿದು, ಬಳ್ಪ, ಕೇನ್ಯ, ಎಣ್ಮೂರು ಮತ್ತು ಎಡಮಂಗಲ ಗ್ರಾಮಗಳು ನೂತನ ಕಡಬ ತಾಲೂಕಿನ ವ್ಯಾಪ್ತಿಯಲ್ಲಿವೆ.

ಆಗಬೇಕಿರುವ ಕಚೇರಿಗಳು
ಸುಸಜ್ಜಿತ ಮಿನಿ ವಿಧಾನಸೌಧ, ನ್ಯಾಯಾಲಯ, ತಾ| ಮಟ್ಟದ ಸರಕಾರಿ ಆಸ್ಪತ್ರೆ, ಸಬ್‌ ರಿಜಿಸ್ಟ್ರಾರ್‌ ಕಚೇರಿ, ಖಜಾನೆ, ಅಗ್ನಿಶಾಮಕ ಠಾಣೆ, .ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ತೋಟಗಾರಿಕೆ, ಲೋಕೋಪಯೋಗಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೃಷಿ ಇಲಾಖೆ ಕಚೇರಿಗಳು, ಜಿ.ಪಂ. ಎಂಜಿನಿಯರಿಂಗ್‌ ವಿಭಾಗ, ಆಹಾರ ನಿರೀಕ್ಷಕರ ಕಚೇರಿ, ಸ.ಪ. ಕಾಲೇಜು, ಪ್ರತ್ಯೇಕ ಎಪಿಎಂಸಿ ಹಾಗೂ ಪ್ರತ್ಯೇಕ ತಾ.ಪಂ. ವ್ಯವಸ್ಥೆ ಮತ್ತು ಕಚೇರಿ ಆಗಬೇಕಿದೆ.

ಕಚೇರಿಗಳಿಗೆ ಸಿದ್ಧತೆ
ನೂತನ ತಾಲೂಕು ಅನುಷ್ಠಾನಕ್ಕೆ ಬೇಕಾಗುವ ಸಿದ್ಧತೆಗಳಿಗಾಗಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಹಲವು ಸುತ್ತಿನ ಸಭೆಗಳು ನಡೆದಿವೆ. ವಿವಿಧ ಇಲಾಖೆಗಳ ತಾಲೂಕುಮಟ್ಟದ ಕಚೇರಿಗಳು ಕಡಬದಲ್ಲಿ ತೆರೆಯಬೇಕಾಗಿರುವುದರಿಂದ ಆ ದಿಕ್ಕಿನಲ್ಲಿಯೂ ತಯಾರಿ ನಡೆಸಲಾಗುತ್ತಿದೆ. ಕರಡು ಅಧಿಸೂಚನೆ ಹೊರಡಿಸಿ ನೂತನ ತಾಲೂಕಿನ ಕುರಿತು ಸಾರ್ವಜನಿಕರಿಂದ ಸಲಹೆ, ಸೂಚನೆಗಳು ಹಾಗೂ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸುವಂತೆ ಕಾಲಾವಕಾಶ ನೀಡಿದ್ದ ರಾಜ್ಯ ಸರಕಾರ ಇದೀಗ ಅಂತಿಮ ಅಧಿಸೂಚನೆ ಹೊರಡಿಸಿದೆ. ಮುಂದಿನ ದಿನಗಳಲ್ಲಿ ವಿವಿಧ ಇಲಾಖೆಗಳ ತಾಲೂಕುಮಟ್ಟದ ಕಚೇರಿಗಳು ಕಡಬದಲ್ಲಿಯೇ ಕಾರ್ಯ ನಿರ್ವಹಿಸಲಿವೆ.
ಜಾನ್‌ಪ್ರಕಾಶ್‌ ರೋಡ್ರಿಗಸ್‌,
   ಕಡಬ ತಹಶೀಲ್ದಾರ್‌

ನೂತನ ಕಚೇರಿಗಳಿಗೆ ಜಾಗ ಮೀಸಲು
ತಾಲೂಕು ಮಟ್ಟದ ಕಚೇರಿಗಳನ್ನು ತೆರೆಯಲು ಕಡಬದಲ್ಲಿ ಜಮೀನು ಕಾದಿರಿಸಲಾಗಿದೆ. ಮಿನಿ ವಿಧಾನ ಸೌಧ ನಿರ್ಮಾಣಕ್ಕಾಗಿ 1.60 ಎಕ್ರೆ, ನಾಡ ಕಚೇರಿಗೆ1.00ಎಕ್ರೆ, ಶಿಕ್ಷಣ ಇಲಾಖೆಗೆ 14.56 ಎಕ್ರೆ, ಪೊಲೀಸ್‌ ಇಲಾಖೆಗೆ 2.5 ಎಕ್ರೆ, ಲೋಕೋಪಯೋಗಿ ಇಲಾಖೆಗೆ 0.20 ಎಕ್ರೆ, ಪಂಚಾಯತ್‌ ರಾಜ್‌ ಇಲಾಖೆಗೆ 5.62 ಎಕ್ರೆ, ನ್ಯಾಯಾಂಗ ಇಲಾಖೆಗೆ 2.50 ಎಕ್ರೆ, ಕೃಷಿ ಇಲಾಖೆಗೆ 0.10 ಎಕ್ರೆ, ಮೆಸ್ಕಾಂಗೆ 2.90 ಎಕ್ರೆ, ಆರೋಗ್ಯ ಇಲಾಖೆಗೆ2.11 ಎಕ್ರೆ ಭೂಮಿ ಕಾದಿರಿಸಲಾಗಿದೆ. ತೋಟಗಾರಿಕಾ ಇಲಾಖೆ ಕಚೇರಿಯನ್ನು ಪಂಜ ರಸ್ತೆಯ ಹಳೆಯ ಜೇನು ಕೃಷಿ ಕಚೇರಿಯ ಕಟ್ಟಡದಲ್ಲಿ ತೆರೆಯಲು ಸಿದ್ಧತೆ ನಡೆದಿದೆ. ತಾಲೂಕು ಪಂಚಾಯತ್‌ ಕಚೇರಿಗಳಿಗೆ ಹಳೆ ಸ್ಟೇಶನ್‌ನಲ್ಲಿರುವ ತಾಲೂಕು ಪಂಚಾಯತ್‌ ಅಧೀನದ ವಸತಿ ಗೃಹಗಳನ್ನು ಬಳಸಲು ಉದ್ದೇಶಿಸಲಾಗಿದೆ.

ಟಾಪ್ ನ್ಯೂಸ್

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.