Udayavni Special

‘ಅಲೆ ಬುಡಿಯೆರ್‌… !’: ‘ಕಂಬಳ’ಕ್ಕೆ ಹಸಿರು ನಿಶಾನೆ

Team Udayavani, Jul 3, 2017, 9:15 PM IST

Kambala-650.jpg

ನವದೆಹಲಿ: ತುಳುನಾಡಿನ ಸಾಂಪ್ರದಾಯಿಕ ಜಾನಪದ ಸಾಹಸ ಕ್ರೀಡೆ ‘ಕಂಬಳ’ವನ್ನು ಯಥಾ ಪ್ರಕಾರ ಮುಂದು ವರಿಸುವ ರಾಜ್ಯ ಸರಕಾರದ ‘ಕಂಬಳ ತಿದ್ದುಪಡಿ ಮಸೂದೆ’ಗೆ ಎದುರಾಗಿದ್ದ ಎಲ್ಲ ಕಾನೂನು ಅಡೆತಡೆ ಮತ್ತು ಗೊಂದಲ ನಿವಾರಣೆಯಾಗಿದ್ದು, ರಾಷ್ಟ್ರಪತಿಗಳು ಕಂಬಳ ತಿದ್ದುಪಡಿ ವಿಧೇಯಕಕ್ಕೆ ಅಂಕಿತ ಹಾಕುವ ಮೂಲಕ ತುಳುನಾಡಿನ ಈ ಜಾನಪದ ಕ್ರೀಡೆಗೆ ಮತ್ತೆ ಚಾಲನೆ ದೊರಕಿದಂತಾಗಿದೆ. ಕಳೆದ ತಿಂಗಳು ಕೇಂದ್ರ ಕಾನೂನು ಸಚಿವರಾಗಿರುವ ಡಿ.ವಿ. ಸದಾನಂದ ಗೌಡ ಅವರ ನೇತೃತ್ವದಲ್ಲಿ ಕಂಬಳ ಅಕಾಡೆಮಿ ಸಂಚಾಲಕ ಕೆ. ಗುಣಪಾಲ ಕಡಂಬ, ಜಿಲ್ಲಾ ಕಂಬಳ ಸಮಿತಿ ಸಂಚಾಲಕ ಸೀತಾರಾಮ ಶೆಟ್ಟಿ ಹಾಗೂ ಕಂಬಳ ಸಮಿತಿಯ ಅಶೋಕ್‌ ಕುಮಾರ್‌ ರೈ ಅವರು ಈ ವಿಶೇಷ ಮಸೂದೆಯನ್ನು ರಾಷ್ಟ್ರಪತಿ ಅಂಕಿತಕ್ಕೆ ಕಳುಹಿಸಿಕೊಡುವಲ್ಲಿ ಯಶಸ್ವಿಯಾಗಿದ್ದರು.

ಮಹತ್ವದ ಬೆಳವಣಿಗೆಯಲ್ಲಿ ರಾಜ್ಯ ಸರಕಾರವು ಸಚಿವ ಸಂಪುಟದ ಒಪ್ಪಿಗೆ ಪಡೆದು ಕೆಲವು ಪರಿಷ್ಕರಣೆಯೊಂದಿಗೆ 2ನೇ ಸಲ ಕೇಂದ್ರ ಸರಕಾರಕ್ಕೆ ಕಳುಹಿಸಿದ್ದ ‘ಕಂಬಳ ತಿದ್ದುಪಡಿ ಮಸೂದೆ’ಗೆ ಕಾನೂನು ಸಚಿವ ರವಿಶಂಕರ್‌ ಪ್ರಸಾದ್‌ ಇತ್ತೀಚೆಗಷ್ಟೇ ಸಹಿ ಹಾಕಿದ್ದರು. ಆ ಮೂಲಕ ಕಾನೂನು ಇಲಾಖೆಯಿಂದ ಹಲವು ತಿಂಗಳಿನಿಂದ ಎದುರಾಗಿದ್ದ ಕಾನೂನು ತೊಡಕು ಬಗೆಹರಿದಿದೆ. ಇದರೊಂದಿಗೆ ಉಭಯ ಸದನಗಳಲ್ಲಿ ಒಪ್ಪಿಗೆ ಪಡೆದು, ರಾಜ್ಯಪಾಲರ ಮೂಲಕ ಕೇಂದ್ರ ಸರಕಾರಕ್ಕೆ ಕಳುಹಿಸಿದ್ದ ಈ ‘ಕಂಬಳ ತಿದ್ದುಪಡಿ ಮಸೂದೆ’ಗೆ ಈಗ ಅರಣ್ಯ ಮತ್ತು ಪರಿಸರ, ಸಂಸ್ಕೃತಿ ಹಾಗೂ ಕಾನೂನು ಸಚಿವಾಲಯದ ಒಪ್ಪಿಗೆ ಸಿಕ್ಕಿದೆ. ಈ ಹಿಂದೆ ಕೇವಲ ಅರಣ್ಯ ಹಾಗೂ ಸಂಸ್ಕೃತಿ ಸಚಿವಾಲಯದಿಂದಷ್ಟೇ ಒಪ್ಪಿಗೆ ಲಭಿಸಿತ್ತು. ಆದರೆ, ವಿಧೇಯಕದಲ್ಲಿನ ಕೆಲವು ಪದ ಬಳಕೆಗೆ ಕಾನೂನು ಸಚಿವಾಲಯ ಆಕ್ಷೇಪವೆತ್ತಿದ್ದ ಕಾರಣ ಕಡತವನ್ನು ರಾಜ್ಯ ಸರಕಾರಕ್ಕೆ ವಾಪಸ್‌ ಕಳುಹಿಸಲಾಗಿತ್ತು.

ಕಂಬಳ ತಿದ್ದುಪಡಿ ವಿಧೇಯಕಕ್ಕೆ ಶೀಘ್ರವೇ ರಾಷ್ಟ್ರಪತಿಯವರ ಅಂಕಿತ ಬೀಳುವ ಸಾಧ್ಯತೆಗಳ ಕುರಿತಾಗಿ ‘ಉದಯವಾಣಿ’ ಕಳೆದ ಜೂನ್‌ ತಿಂಗಳಿನಲ್ಲಿ ಒಂದು ವಿಶೇಷ ವರದಿಯನ್ನು ಪ್ರಕಟಿಸಿತ್ತು. (ಕಂಬಳ : ರಾಷ್ಟ್ರಪತಿ ಅಂಗಳದತ್ತ: ತಿದ್ದುಪಡಿ ಮಸೂದೆಗೆ ಕೊನೆಗೂ ಒಪ್ಪಿಗೆ)

ಕಂಬಳ ವಿಧೇಯಕದ ಹಿನ್ನೆಲೆ
ಪ್ರಾಣಿ ಹಿಂಸೆಯ ನೆಪವೊಡ್ಡಿ ಕಂಬಳ ಸಹಿತ ಇದೇ ರೀತಿಯ ಕ್ರೀಡೆಗಳನ್ನು ರದ್ದುಪಡಿಸುವಂತೆ ಪ್ರಾಣಿದಯಾ ಸಂಘದವರು 2014ರಲ್ಲಿ ಹೈಕೋರ್ಟ್‌ ಮೊರೆ ಹೋಗಿದ್ದರು. ಅನಂತರ ನ್ಯಾಯಾಲಯವು ಈ ರೀತಿಯ ಆಚರಣೆಗಳಿಗೆ ತಡೆಯಾಜ್ಞೆ ನೀಡಿತ್ತು. ಮುಂದೆ ತಮಿಳುನಾಡಿನಲ್ಲಿ ಜಲ್ಲಿಕಟ್ಟು ಉಳಿಸಲು ಬೃಹತ್‌ ಆಂದೋಲನ ನಡೆದು ಸರಕಾರ ಒಪ್ಪಿಗೆ ಪಡೆಯುವಲ್ಲಿ ಯಶಸ್ವಿಯಾಗಿತ್ತು. ಅನಂತರ 2016ರಲ್ಲಿ ಕಂಬಳದ ಪರ ಜನರ ಹೋರಾಟ ಜೋರಾದಾಗ ರಾಜ್ಯ ಸರಕಾರವೇ ಅದಕ್ಕೆ ಪೂರಕವಾಗಿ ಕಾನೂನು ರೂಪಿಸಲು ಮುಂದಾಯಿತು. ಅದರಂತೆ ‘ಪ್ರಾಣಿ ಹಿಂಸೆ‌ ತಡೆ (ಕರ್ನಾಟಕ ತಿದ್ದುಪಡಿ)ವಿಧೇಯಕ-2017’ ಅನ್ನು ಉಭಯ ಸದನಗಳಲ್ಲಿ ಒಪ್ಪಿಗೆ ಪಡೆದು ಫೆ.7ರಂದು ರಾಜ್ಯಪಾಲರ ಒಪ್ಪಿಗೆ ಕಳುಹಿಸಲಾಗಿತ್ತು. ರಾಜ್ಯಪಾಲರು ಅದನ್ನು ಫೆ.23ರಂದು ಕೇಂದ್ರ ಸರಕಾರಕ್ಕೆ ಕಳುಹಿಸಿದ್ದರು. ಅಲ್ಲಿಂದ ಈ ವಿಧೇಯಕ ಗೃಹ ಸಚಿವಾಲಯಕ್ಕೆ ಬಂದಿದ್ದು, ಅನಂತರ ಅದನ್ನು ಪರಿಸರ, ಸಂಸ್ಕೃತಿ ಹಾಗೂ ಕಾನೂನು ಸಚಿವಾಲಯದ ಒಪ್ಪಿಗೆಗೆ ಕಳುಹಿಸಲಾಗಿತ್ತು. ಅದರಂತೆ ಪರಿಸರ ಮತ್ತು ಸಂಸ್ಕೃತಿ ಇಲಾಖೆ ತನ್ನ ಒಪ್ಪಿಗೆ ಸೂಚಿಸಿತ್ತು. ಆದರೆ, ಪ್ರಾಣಿ ಹಿಂಸೆ ವಿಚಾರವಾಗಿ ವಿಧೇಯಕದಲ್ಲಿ ಬಳಸಿದ ಪದವೊಂದು ಸೂಕ್ತವಲ್ಲದ ಕಾರಣ ಕಾನೂನು ಸಚಿವಾಲಯ ವಿಧೇಯಕಕ್ಕೆ ತನ್ನ ಒಪ್ಪಿಗೆ ನೀಡಿರಲಿಲ್ಲ. 

ಈ ವಿಧೇಯಕವನ್ನು ಪುನರ್‌ ಪರಿಶೀಲಿಸುವಂತೆ ಕೋರಿ ಕೇಂದ್ರವು ಎ.23ಕ್ಕೆ ರಾಜ್ಯಕ್ಕೆ ವಾಪಸು ಕಳುಹಿಸಿತ್ತು. ಮುಂದೆ ರಾಜ್ಯವು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಕೆಲ ಮಾರ್ಪಾಡುಗಳೊಂದಿಗೆ ಮೇ 8ರಂದು ಮತ್ತೆ ಗೃಹ ಸಚಿವಾಲಯಕ್ಕೆ ರವಾನಿಸಿತ್ತು. ಆದರೆ ಈ ವಿಧೇಯಕಕ್ಕೆ ಇತ್ತೀಚೆಗಷ್ಟೇ ಕಾನೂನು ಖಾತೆ ರಾಜ್ಯ ಸಚಿವ ಪಿ.ಪಿ. ಚೌಧರಿ ಸಹಿ ಮಾಡಿದ್ದರು. ಅವರು ಕ್ಯಾಬಿನೆಟ್‌ ದರ್ಜೆ ಸಚಿವರಲ್ಲದ ಕಾರಣ ಕಾನೂನು ಸಚಿವ ರವಿಶಂಕರ್‌ ಪ್ರಸಾದ್‌ ಕೂಡ ಸಹಿ ಮಾಡಬೇಕಿತ್ತು. ಈ ಎಲ್ಲ ಕಾರಣಗಳಿಂದ ಇಷ್ಟು ದಿನ ಬಾಕಿಯಾಗಿತ್ತು. 

ಮತ್ತೆ ಸದನದ ಒಪ್ಪಿಗೆ ಬೇಡ
‘ಕಂಬಳ ಮಸೂದೆ ಈಗಾಗಲೇ ಉಭಯ ಸದನಗಳ ಒಪ್ಪಿಗೆ ಪಡೆದಿರುವ ಕಾರಣ ಮತ್ತೆ ರಾಜ್ಯ ವಿಧಾನ ಮಂಡಲದಲ್ಲಿ ಮಂಡಿಸುವ ಅಗತ್ಯವಿಲ್ಲ. ಗೃಹ ಸಚಿವಾಲಯದಿಂದ ನೇರವಾಗಿ ಅದನ್ನು ರಾಷ್ಟ್ರಪತಿಗೆ ಕಳುಹಿಸಿಕೊಡಲಾಲಾಗಿತ್ತು. ಹೀಗಾಗಿ ಕಂಬಳ ಮಸೂದೆಯನ್ನು ಕಾನೂನಾಗಿ ಜಾರಿಗೊಳಿಸುವುದಕ್ಕೆ ಇನ್ನು ಕೇಂದ್ರ ಅಥವಾ ರಾಜ್ಯ ಸರಕಾರದ ಮಟ್ಟದಲ್ಲಿ ಯಾವುದೇ ಅಡೆತಡೆಗಳಿಲ್ಲ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಕೋವಿಡ್ 19 ಮಣಿಸಲು ಸಾಮಾಜಿಕ ಅಂತರ & ಲಾಕ್ ಡೌನ್ ಅತೀ ದೊಡ್ಡ ಲಸಿಕೆ: ಸಚಿವ ಹರ್ಷವರ್ಧನ್

ಕೋವಿಡ್ 19 ಮಣಿಸಲು ಸಾಮಾಜಿಕ ಅಂತರ & ಲಾಕ್ ಡೌನ್ ಅತೀ ದೊಡ್ಡ ಲಸಿಕೆ: ಸಚಿವ ಹರ್ಷವರ್ಧನ್

ರಾಜ್ಯದ ಗಡಿ ದಾಟಿ ತಮಿಳುನಾಡು ಪೊಲೀಸರು ಚೆಕಿಂಗ್ ಕಾರ್ಯಾಚರಣೆಗೆ ಬೊಮ್ಮಾಯಿ ಗರಂ

ರಾಜ್ಯದ ಗಡಿ ದಾಟಿ ತಮಿಳುನಾಡು ಪೊಲೀಸರ ಚೆಕಿಂಗ್ ಕಾರ್ಯಾಚರಣೆಗೆ ಬೊಮ್ಮಾಯಿ ಗರಂ

ಭಾರತದ ಈ ಎರಡು ರಾಜ್ಯ, ಕೇಂದ್ರಾಡಳಿತ ಪ್ರದೇಶಗಳತ್ತ ಮಾತ್ರ ಕೋವಿಡ್ ವೈರಸ್ ಸುಳಿದಿಲ್ಲ

ಭಾರತದ ಈ ಎರಡು ರಾಜ್ಯ, ಕೇಂದ್ರಾಡಳಿತ ಪ್ರದೇಶಗಳತ್ತ ಮಾತ್ರ ಕೋವಿಡ್ ವೈರಸ್ ಸುಳಿದಿಲ್ಲ!

ನಕಲಿ ಪಾಸ್‌ ಮಾಡಿದವರ ವಿರುದ್ಧ ಕ್ರಮ: ಬಸವರಾಜ ಬೊಮ್ಮಾಯಿ

ನಕಲಿ ಪಾಸ್‌ ಮಾಡಿದವರ ವಿರುದ್ಧ ಕ್ರಮ: ಬಸವರಾಜ ಬೊಮ್ಮಾಯಿ

ಫೋರ್ಬ್ಸ್ ಪಟ್ಟಿಯಲ್ಲಿ ಅಂಬಾನಿ, ದಮನಿ

ಫೋರ್ಬ್ಸ್ ಪಟ್ಟಿಯಲ್ಲಿ ಅಂಬಾನಿ, ದಮನಿ

24ಗಂಟೆಯಲ್ಲಿ 549 ಕೋವಿಡ್ ಪ್ರಕರಣ ಪತ್ತೆ, 49 ಸಾವಿರ ವೆಂಟಿಲೇಟರ್ಸ್ ಗೆ ಬೇಡಿಕೆ

24ಗಂಟೆಯಲ್ಲಿ 549 ಕೋವಿಡ್ ಪ್ರಕರಣ ಪತ್ತೆ, 49 ಸಾವಿರ ವೆಂಟಿಲೇಟರ್ಸ್ ಗೆ ಬೇಡಿಕೆ: ಸಚಿವಾಲಯ

ಇಂದಿರಾ ಕ್ಯಾಂಟೀನ್‌ನಲ್ಲಿ ಉಚಿತ ಆಹಾರ ನೀಡಲಿ:ಸಿದ್ದರಾಮಯ್ಯ

ಇಂದಿರಾ ಕ್ಯಾಂಟೀನ್‌ನಲ್ಲಿ ಉಚಿತ ಆಹಾರ ನೀಡಲಿ:ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದಿನಿಂದ ಇಡೀ ರಾಜ್ಯಕ್ಕೆ ಒಂದೇ ದೂರವಾಣಿ ಸಂಖ್ಯೆಯಿಂದ ಬಿಜೆಪಿ ಸಹಾಯವಾಣಿ: ನಳಿನ್ ಕುಮಾರ್

ಇಂದಿನಿಂದ ಇಡೀ ರಾಜ್ಯಕ್ಕೆ ಒಂದೇ ದೂರವಾಣಿ ಸಂಖ್ಯೆಯಿಂದ ಬಿಜೆಪಿ ಸಹಾಯವಾಣಿ: ನಳಿನ್ ಕುಮಾರ್

“ಸ್ಮಾರ್ಟ್‌ ಮಾರುಕಟ್ಟೆ’ ನಿರ್ಮಾಣಕ್ಕೆ ಸಜ್ಜು

“ಸ್ಮಾರ್ಟ್‌ ಮಾರುಕಟ್ಟೆ’ ನಿರ್ಮಾಣಕ್ಕೆ ಸಜ್ಜು

3 ಪ್ರದೇಶಗಳ ಕೋವಿಡ್ 19 ಪತ್ತೆ ವೆನ್ಲಾಕ್ ನಲ್ಲಿ

3 ಪ್ರದೇಶಗಳ ಕೋವಿಡ್ 19 ಪತ್ತೆ ವೆನ್ಲಾಕ್ ನಲ್ಲಿ

ತುಂಬೆ ಅಣೆಕಟ್ಟಿನಲ್ಲಿ 4.88 ಮೀ. ನೀರು

ತುಂಬೆ ಅಣೆಕಟ್ಟಿನಲ್ಲಿ 4.88 ಮೀ. ನೀರು

ಎ. 5ರಂದು 55 ಮೆ. ವ್ಯಾ. ವಿದ್ಯುತ್‌ ಬೇಡಿಕೆ ಕುಸಿತ

ಎ. 5ರಂದು 55 ಮೆ. ವ್ಯಾ. ವಿದ್ಯುತ್‌ ಬೇಡಿಕೆ ಕುಸಿತ

MUST WATCH

udayavani youtube

Coronavirus Lockdown : ಮಟ್ಟುಗುಳ್ಳ ಮಂದಗತಿಯ ಮಾರುಕಟ್ಟೆ Saddens Muttugulla Growers

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

ಹೊಸ ಸೇರ್ಪಡೆ

ಕೋವಿಡ್ 19 ಮಣಿಸಲು ಸಾಮಾಜಿಕ ಅಂತರ & ಲಾಕ್ ಡೌನ್ ಅತೀ ದೊಡ್ಡ ಲಸಿಕೆ: ಸಚಿವ ಹರ್ಷವರ್ಧನ್

ಕೋವಿಡ್ 19 ಮಣಿಸಲು ಸಾಮಾಜಿಕ ಅಂತರ & ಲಾಕ್ ಡೌನ್ ಅತೀ ದೊಡ್ಡ ಲಸಿಕೆ: ಸಚಿವ ಹರ್ಷವರ್ಧನ್

ರಾಜ್ಯದ ಗಡಿ ದಾಟಿ ತಮಿಳುನಾಡು ಪೊಲೀಸರು ಚೆಕಿಂಗ್ ಕಾರ್ಯಾಚರಣೆಗೆ ಬೊಮ್ಮಾಯಿ ಗರಂ

ರಾಜ್ಯದ ಗಡಿ ದಾಟಿ ತಮಿಳುನಾಡು ಪೊಲೀಸರ ಚೆಕಿಂಗ್ ಕಾರ್ಯಾಚರಣೆಗೆ ಬೊಮ್ಮಾಯಿ ಗರಂ

ಮಹಾರಾಷ್ಟ್ರ: ಎಲ್ಲಾ ಶಾಸಕರು, ಸಚಿವರ ಸಂಬಳದಲ್ಲಿ ಶೇ.30ರಷ್ಟು ಕಡಿತ: ಸಂಪುಟ ಒಪ್ಪಿಗೆ