ಗೇರು ಬೆಳೆದು ಪ್ರಗತಿ ಸಾಧಿಸಿ: ಡಾ| ಡಿ. ವೀರೇಂದ್ರ ಹೆಗ್ಗಡೆ


Team Udayavani, Jul 18, 2017, 2:55 AM IST

DVH-17-7.jpg

ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ವಿವಿಧ ಕಾರಣಗಳಿಂದ ಗೇರು ನಿರ್ಲಕ್ಷಿತ ಬೆಳೆಯಾಗಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಬೇಡಿಕೆ ಹಾಗೂ ಮಾರುಕಟ್ಟೆ ಇರುವುದರಿಂದ ಹೆಚ್ಚಿನ ರೈತರು ಇದರತ್ತ ಆಕರ್ಷಿತರಾಗುತ್ತಿದ್ದಾರೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. ಖಾನಾಪುರ ತಾಲೂಕಿನ ಕಾರಲಗಾ ಗ್ರಾಮದ ಸರಕಾರಿ ಮರಾಠಿ ಪ್ರಾಥಮಿಕ ಶಾಲೆ ಆವರಣ ಬಳಿ ಖಾಸಗಿ ಜಮೀನಿನಲ್ಲಿ ಹಾಗೂ ಗಂಗವಾಳಿ ಗ್ರಾಮದಲ್ಲಿ ಕಸಿ ಗೇರು ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ನಮ್ಮ ಸಂಸ್ಥೆಯಿಂದ ಗೇರು ಸಸಿಗಳನ್ನು ಒದಗಿಸಲಾಗುತ್ತದೆ. ಅವುಗಳನ್ನು ತಮ್ಮ ಗದ್ದೆಗಳಲ್ಲಿ ನೆಟ್ಟು ಪೋಷಿಸಿ ಸಂರಕ್ಷಿಸಿ ಹಾಗೂ ಆದಾಯ ಪಡೆಯಬೇಕೆಂದು ಹೇಳಿದರು.

ಸಣ್ಣ ಹಿಡುವಳಿದಾರರು ಕಡಿಮೆ ಬಂಡವಾಳ, ಅಲ್ಪ ನೀರು ಹಾಗೂ ಶ್ರಮ ಬಳಸಿ ಗೇರುಬೆಳೆಸಿದರೆ ಹೆಚ್ಚು ಆದಾಯ ತರುವ ಬೆಳೆಯಾಗಿದೆ ಎಂದ ಅವರು, ಖಾನಾಪುರ ತಾಲೂಕಿನಲ್ಲಿ ಒಟ್ಟು 15 ಸಾವಿರ ಸಸಿಗಳನ್ನು ಉಚಿತವಾಗಿ ವಿತರಿಸಲಾಗುತ್ತದೆ. ರಾಜ್ಯ ಸರಕಾರ ರೈತರೊಂದಿಗೆ ಸೇರಿ ದೇಶದಲ್ಲಿ ಗೇರು ಬೆಳೆ ಉತ್ಪಾದನೆಯಲ್ಲಿ ಮಂಚೂಣಿಯಲ್ಲಿ ಇರಬೇಕೆಂಬ ನಿಟ್ಟಿನಲ್ಲಿ ಹತ್ತು ಹಲವು ಯೋಜನೆಗಳನ್ನು ಕೈಗೊಂಡಿದೆ ಎಂದರು. ಡಿ. ವೀರೇಂದ್ರ ಹೆಗ್ಗಡೆ, ಶಾಸಕ ಅರವಿಂದ ಪಾಟೀಲ ಹಾಗೂ ಗಣ್ಯರು ಸೇರಿ ಕಾರಲಗಾ ಗ್ರಾಮದ ಅನುರಾಧಾ ಘಾಡಿ ಹಾಗೂ ಗಂಗವಾಳಿ ಗ್ರಾಮದ ಪರಶುರಾಮ ಗೊದೋಳ್ಳಕರ ಇವರ ಜಮೀನಿನಲ್ಲಿ ಗೇರು ಸಸಿ ನೆಟ್ಟು ಯೋಜನೆಗೆ ಚಾಲನೆ ನೀಡಿದರು.

ಶಾಸಕ ಅರವಿಂದ ಪಾಟೀಲ ಮಾತನಾಡಿ, ಗೇರು ಸಸಿ ನಾಟಿ ಮಾಡಿ ಉತ್ಪನ್ನದ ಲಾಭ ಪಡೆದುಕೊಳ್ಳಬೇಕು. ಧರ್ಮಸ್ಥಳ ಯೋಜನೆ ಹಮ್ಮಿಕೊಳ್ಳುತ್ತಿರುವ ರೈತಪರ ಕಾರ್ಯ ಕ್ರಮಗಳು ಶ್ಲಾಘನೀಯವಾಗಿದೆ ಎಂದರು. ವಿಜಯಲಕ್ಷ್ಮೀ ಪ್ರತಿಷ್ಠಾನದ ಅನಂತ ಕೃಷ್ಣರಾವ್‌ ಮಾತನಾಡಿ, ರಾಜ್ಯದಲ್ಲಿ 400 ಗೇರು ಉದ್ಯಮಗಳು ಇದ್ದು ಶೆ.25ರಷ್ಟು ಕಚ್ಚಾ ವಸ್ತು ಲಭ್ಯವಿದೆ. ಶೇ. 75ರಷ್ಟು ಹೊರದೇಶದಿಂದ ಆಮದು ಮಾಡಿಕೊಳ್ಳಬೇಕಾಗುತ್ತದೆ ಎಂದರು.

ವಾಸುದೇವ ಭಟ್ಟ, ಅನಂತ ಕೃಷ್ಣರಾವ, ಶಿನಪ್ಪ ಎಂ, ಪ್ರಹ್ಲಾದ ರೇಮಾಣಿ, ಪ್ರಮೋದ ಕೋಚೆರಿ, ವಿಠಲ ಹಲಗೇಕರ, ಗ್ರೇಡ್‌ 2 ತಹಶೀಲ್ದಾರ ಮುದ್ನಾಳ, ಕೃಷಿ ಅಧಿಕಾರಿ ಸತೀಶ ಹಾದಿಮನಿ, ಧರ್ಮಸ್ಥಳ ಯೋಜನೆಯ ಪ್ರಾದೇಶಿಕ ನಿರ್ದೇಶಕ ಎನ್‌.ಜಯಶಂಕರ ಶರ್ಮ ಮತ್ತು ಇತರರು ಉಪಸ್ಥಿತರಿದ್ದರು.
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ವೃಕ್ಷ ರಕ್ಷಾ ವಿಶ್ವ ರಕ್ಷಾ ಅಭಿಯಾನ, ಪರ್ಯಾಯ ಶ್ರೀ ಪೇಜಾವರ ಅಧೋಕ್ಷಜ ಮಠ ಉಡುಪಿ, ಕರ್ನಾಟಕ ಗೇರು ಉತ್ಪಾದಕರ ಸಂಘ ಮತ್ತು ವಿಜಯಲಕ್ಷ್ಮೀ ಪ್ರತಿಷ್ಠಾನ ಮೂಡಬಿದರೆ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.