ಅತಿಥಿ ಶಿಕ್ಷಕರಿಗೆ 6 ತಿಂಗಳಿನಿಂದ ವೇತನವೇ ಸಿಕ್ಕಿಲ್ಲ!

ತಾತ್ಕಾಲಿಕ ಹುದ್ದೆ, ಕಡಿಮೆ ಗೌರವಧನ; ಹಣವಿಲ್ಲದೆ ಪರದಾಟ

Team Udayavani, Dec 25, 2019, 6:50 AM IST

sz-28

ಸಾಂದರ್ಭಿಕ ಚಿತ್ರ

ಸವಣೂರು: ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಖಾಲಿಯಿರುವ ಶಿಕ್ಷಕರ ಬದಲಿಗೆ ಅತಿಥಿ ಶಿಕ್ಷಕರನ್ನು ಸರಕಾರ ತಾತ್ಕಾಲಿಕ ನೇಮಕಾತಿ ಮಾಡಿಕೊಂಡಿದೆ. ಆದರೆ 6 ತಿಂಗಳಿನಿಂದಲೂ ಅವರಿಗೆ ಗೌರವಧನ ನೀಡದೆ ದುಡಿಸಿಕೊಳ್ಳುತ್ತಿದೆ. ಪುತ್ತೂರು ತಾಲೂಕಿನಲ್ಲಿ 111, ಮಂಗಳೂರು 116, ಸುಳ್ಯ 155, ಬಂಟ್ವಾಳ 120, ಬೆಳ್ತಂಗಡಿ ತಾಲೂಕಿನಲ್ಲಿ 115 ಮಂದಿ ಅತಿಥಿ ಶಿಕ್ಷಕರಾಗಿದ್ದಾರೆ. ಪುತ್ತೂರು ತಾಲೂಕಿನಲ್ಲಿ ಕಳೆದ ತಿಂಗಳು 24 ಅತಿಥಿ ಶಿಕ್ಷಕರನ್ನು ಕೈಬಿಡಲಾಗಿದೆ.

ಅತಿಥಿ ಶಿಕ್ಷಕರ ಹುದ್ದೆ ತಾತ್ಕಾಲಿಕ. ಗೌರವಧನವೂ ಕಡಿಮೆ. ಅದೂ ಆರು ತಿಂಗಳಿಂದ ಕೈಗೆ ಸಿಗದೆ ಈ ಕುಟುಂಬಗಳೀಗ ಅತಂತ್ರ ಸ್ಥಿತಿ ಎದುರಿಸುತ್ತಿವೆ. ಸರಕಾರಿ ಕಿರಿಯ, ಹಿರಿಯ ಹಾಗೂ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗೆ ಅತಿಥಿ ಶಿಕ್ಷಕರನ್ನು ಜೂನ್‌ ತಿಂಗಳಿಂದಲೂ ನೇಮಕ ಮಾಡಿಕೊಳ್ಳಲಾಗಿದೆ. ಡಿಸೆಂಬರ್‌ ತಿಂಗಳಾದರೂ ಅವರ ಸ್ಥಿತಿಗತಿ ಬಗ್ಗೆ ಯಾರೂ ಕೇಳಿಲ್ಲ. ಹೀಗಾಗಿ, ಕುಟುಂಬ ನಿರ್ವಹಣೆ ಕಷ್ಟವಾಗಿದೆ.

ಹುದ್ದೆ ರದ್ದು: ಮತ್ತೂಂದು ಅಘಾತ
ಕೆಲವು ಸರಕಾರಿ ಶಾಲೆಗಳಲ್ಲಿ ಖಾಲಿ ಇರುವ ಸ್ಥಾನಗಳಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿತ್ತು. ಬೇರೆ ಜಿಲ್ಲೆ ಹಾಗೂ ಪ್ರದೇಶಗಳಿಂದ ವರ್ಗಾವಣೆ ಮತ್ತು ಭಡ್ತಿ ಹೊಂದಿ ಬಂದಿರುವ ಶಿಕ್ಷಕರು ಹಾಜರಾದ ಕಡೆಗಳಲ್ಲಿ ಅತಿಥಿ ಶಿಕ್ಷಕರ ಹುದ್ದೆಗಳನ್ನು ಸರಕಾರ ರದ್ದು ಮಾಡುತ್ತಿರುವುದು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಸಿದೆ. ಇತ್ತ ಖಾಸಗಿ ಶಾಲೆಯೂ ಇಲ್ಲ, ಅತ್ತ ಸರಕಾರಿ ಅತಿಥಿ ಶಿಕ್ಷಕರಾಗಿಯೂ ಕೆಲಸವಿಲ್ಲದೆ ಪುತ್ತೂರು ತಾಲೂಕೊಂದರಲ್ಲೇ 24 ಜನರನ್ನು ನಡುನೀರಿನಲ್ಲಿ ಕೈಬಿಟ್ಟಂತಾಗಿದೆ. ಅರಿಯಡ್ಕ, ಪಳ್ಳತ್ತಾರು, ಬಿಳಿನೆಲೆ ಕೈಕಂಬ, ಚೇರು, ಇಡ್ಯಡ್ಕ, ನಾರ್ಯಬೈಲು, ಕಟ್ಟತ್ತಾರು, ಕಣಿಯಾರುಬೈಲು, ವಳಕಡಮ, ಕೊರ್ಬಂಡ್ಕ, ಮಾಲೆತ್ತೋಡಿ, ಮೊಗೇರಡ್ಕ, ಕೊಣಾಜೆ, ಇಡೊಟ್ಟು, ವಾಳ್ಯ, ಮುಕ್ವೆ, ಸಜಂಕಾಡಿ, ಒಟ್ಯ, ಕುಮಾರಮಂಗಲ, ಕುಂಡಾಜೆ, ನೂಜಿ ರೆಂಜಲಾಡಿ, ಆರೇಲ್ತಡಿ ಶಾಲೆಗಳ ತಲಾ 1 ಅತಿಥಿ ಶಿಕ್ಷಕರು, ಕಳ್ಳಪ್ಪಾರು ಶಾಲೆಯ 2 ಹುದ್ದೆ ರದ್ದ ಪಡಿಸಲಾಗಿದೆ.

ಅತಿಥಿ ಶಿಕ್ಷಕರ ಜಿಲ್ಲಾ ಮಟ್ಟದ ಸಭೆ ಮಂಗಳೂರು ಪುರಭವನದಲ್ಲಿ ಡಿ. 15ರಂದು ಜಿಲ್ಲಾ ಸಮಿತಿ ಅಧ್ಯಕ್ಷೆ ರೂಪಾ ಅಧ್ಯಕ್ಷತೆಯಲ್ಲಿ ನಡೆದಿದೆ. ವೇತನಕ್ಕಾಗಿ ಡಿ. 31ರವರೆಗೆ ಕಾಯುವುದು, ಈ ಅವಧಿ ಯಲ್ಲಿ ವೇತನ ಬಿಡುಗಡೆ ಮಾಡದಿದ್ದರೆ ಜನವರಿ ಮೊದಲ ವಾರದಲ್ಲಿ ಡಿಸಿ ಕಚೇರಿಯ ಮುಂದೆ ಪ್ರತಿಭಟನೆ ನಡೆಸುವುದು, ಸಮಾನ ಕೆಲಸಕ್ಕೆ ಸಮಾನ ವೇತನ ಎಂಬ ಸುಪ್ರೀಂ ಕೋರ್ಟ್‌ ಆದೇಶದಂತೆ 2019ರ ಜೂನ್‌ನಿಂದಲೇ ಈ ವೇತನ ನೀಡುವುದು, ಈ ಶೆಕ್ಷಣಿಕ ವರ್ಷದಲ್ಲಿ ಅತಿಥಿ ಶಿಕ್ಷಕರನ್ನೇ ಮುಂದವರಿಸಿ ಮುಂದಿನ ಶೈಕ್ಷಣಿಕ ಅವಧಿಯಲ್ಲಿ ಜೂನ್‌ನಿಂದಲೇ ಕಾರ್ಯ ನಿರ್ವಹಿಸುವಂತೆ ಮೊದಲ ಆದ್ಯತೆ ನೀಡು ವುದು ಎಂದು ನಿರ್ಣಯಿಸಲಾಯಿತು.

ಬಿಡುಗಡೆ ಆಗಿಲ್ಲ
ಅತಿಥಿ ಶಿಕ್ಷಕರಿಗೆ ವೇತನ ರಾಜ್ಯ ಸರಕಾರದಿಂದ ಇನ್ನೂ ಬಿಡುಗಡೆಯಾಗಿಲ್ಲ. ಬಿಡುಗಡೆಯಾದ ಕೂಡಲೇ ಅತಿಥಿ ಶಿಕ್ಷಕರ ಖಾತೆಗೆ ಜಮೆ ಮಾಡಲಾಗುವುದು.
– ವಾಲ್ಟರ್‌ ಡಿ’ಮೆಲ್ಲೊ
ಉಪನಿರ್ದೇಶಕ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಂಗಳೂರು

ಪ್ರವೀಣ್‌ ಚೆನ್ನಾವರ

ಟಾಪ್ ನ್ಯೂಸ್

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.