Udayavni Special

ಹದಗೆಟ್ಟ ಗುತ್ತಿಗಾರು- ಬಳ್ಪ ರಸ್ತೆ ದುರಸ್ತಿ


Team Udayavani, Jul 15, 2017, 2:00 AM IST

Balpa-Road-14-7.jpg

ಸುಳ್ಯ: ಅವ್ಯವಸ್ಥೆಯಿಂದ ಕೂಡಿರುವ ರಸ್ತೆಯಲ್ಲಿ ಸಾಗುವುದೇ ಒಂದು ಹರಸಾಹಸವಾದರೆ, ಓಡಾಟ ನಡೆಸಿ ಸುಸ್ತಾದ ಜನತೆಗೆ ಈಗ ರಸ್ತೆ ದುರಸ್ತಿ ಕೈಗೊಳ್ಳುವ ದುಃಸ್ಥಿತಿ ಒದಗಿದೆ. ಇದು 10 ವರ್ಷಗಳಿಂದಲೂ ದುರಸ್ತಿಗೊಳ್ಳದ ಗುತ್ತಿಗಾರು-ಕಮಿಲ ಮಾರ್ಗವಾಗಿ ಬಳ್ಪವನ್ನು ಸಂಪರ್ಕಿಸುವ ಜಿ.ಪಂ. ರಸ್ತೆಯ ಕಥೆ.

ಸಿಗದ ಸಹಕಾರ
ಚುನಾವಣೆ ಸಂದರ್ಭ ನೀಡಿದ ಭರವಸೆ ಕೇವಲ ಭರವಸೆಯಾಗಿಯೇ ಉಳಿದ ಪರಿಣಾಮ ಗ್ರಾಮಸ್ಥರಿಗೆ ಈ ಸ್ಥಿತಿ ಬಂದಿದೆ. ಹೊಂಡ ಗುಂಡಿಗಳಿಂದ ಕೂಡಿದ, ಚರಂಡಿ ವ್ಯವಸ್ಥೆಯೂ ಇಲ್ಲದಿರುವ ಈ ರಸ್ತೆಯನ್ನು ಗ್ರಾಮಸ್ಥರು ಮೂರ್‍ನಾಲ್ಕು ದಿನಗಳಿಂದ ಕಲ್ಲು, ಮರಳು ಹಾಕಿ ತಾತ್ಕಾಲಿಕವಾಗಿ ಸರಿಪಡಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ. ಆದರೆ ಈ ಕೆಲಸಕ್ಕೆ ಯಾವುದೇ ಜನಪ್ರತಿನಿಧಿಗಳು ಇದುವರೆಗೆ ಸಹಕಾರ ನೀಡಿಲ್ಲ ಎಂಬುದು ಜನರ ಆಕ್ರೋಶಕ್ಕೆ ಕಾರಣ.

ಗುತ್ತಿಗಾರು ಕಮಿಲ ಬಳ್ಪದ 5.4 ಕಿಮೀ. ಉದ್ದದ ರಸ್ತೆ ತೀವ್ರ ಹದಗೆಟ್ಟಿದೆ. ಈ ಪೈಕಿ ಕಮಿಲ ಬಳಿಯಿಂದ ಅರಣ್ಯದೊಳಗೆ ಸಾಗಿ ಬಳ್ಪ ಸಂಪರ್ಕಿಸುವ ರಸ್ತೆವರೆಗೂ ಸಂಚಾರಕ್ಕೆ ಅಯೋಗ್ಯವಾಗಿದೆ. ಶಾಲಾ ಮಕ್ಕಳ ವಾಹನ ಅಲ್ಲದೇ ಸರಕಾರಿ ಬಸ್ಸುಗಳ ಸಂಚಾರವೂ ಕಷ್ಟವಾಗಿದೆ. ಹೀಗಾಗಿ ಮುಂದೆ ಇಲ್ಲಿ ಸಂಚಾರ ನಡೆಸುವುದಿಲ್ಲ ಎಂದು ವಾಹನಗಳ ಚಾಲಕರು ಹೇಳುತ್ತಿರುವುದರಿಂದ ಈ ಭಾಗದ ಜನತೆಗೆ ಸಂಪರ್ಕ ಕಡಿದುಹೋಗಬಹುದೆಂಬ ಭೀತಿಯಲ್ಲಿದ್ದಾರೆ. ದುರವಸ್ಥೆಗೊಂಡಿರುವ ಈ ರಸ್ತೆಯಲ್ಲಿ ಮಳೆಗಾಲದ ಸಂದರ್ಭ ಸಂಚಾರ ಕಷ್ಟವಾಗಲಿದೆ ಎಂದು ಪತ್ರಿಕೆಗಳಲ್ಲಿ ವರದಿ ಪ್ರಕಟವಾಗಿದ್ದವು. ದುರಸ್ತಿ, ಡಾಮರೀಕರಣಕ್ಕೂ ಜನರು ಆಗ್ರಹಿಸುತ್ತಿದ್ದರು. ಆದರೂ ಕನಿಷ್ಠ ತೇಪೆ ಹಾಕುವ ಕಾರ್ಯಕ್ಕೂ ಸಂಬಂಧಿಸಿದ ಇಲಾಖೆ ಮುಂದಾಗಿಲ್ಲ ಎಂಬುದು ಜನರ ಆರೋಪ.

ಆದ ಮೇಲಷ್ಟೇ ಗ್ಯಾರಂಟಿ
ರಸ್ತೆ ದುರಸ್ತಿಗೆ ಪ್ರಧಾನ ಮಂತ್ರಿ ಗ್ರಾಮ ಸಡಕ್‌ ಯೋಜನೆಯಡಿ 1.5 ಕಿಮೀ ರಸ್ತೆ ಡಾಮರೀಕರಣ, 2017-18ನೇ ಸಾಲಿನ ಗ್ರಾಮೀಣ ರಸ್ತೆಗಳ ನಿರ್ವಹಣೆ ಹಾಗೂ ದುರಸ್ತಿ ಕ್ರಿಯಾಯೋಜನೆಯಲ್ಲಿ ಶಾಸಕರ ಅನುದಾನದಿಂದ 5 ಲಕ್ಷ ರೂ. ಕಾದಿರಿಸಲಾಗಿದೆ. ಮಳೆಗಾಲದ ಅನಂತರ ದುರಸ್ತಿ ಮಾಡಲಾಗುತ್ತದೆ ಎಂದು ಜಿ.ಪಂ. ಸದಸ್ಯೆ ಆಶಾ ತಿಮ್ಮಪ್ಪ ತಿಳಿಸಿದ್ದಾರೆ. ಇಲಾಖೆ ಕೂಡಾ ಇದೇ ಹೇಳಿಕೆ ನೀಡುತ್ತಿದೆ. ಅದು ಈಡೇರಿದ ಮೇಲೆಯೇ ನಂಬುವಂಥ ಸ್ಥಿತಿ ಗ್ರಾಮಸ್ಥರದ್ದು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಮೂವರು ಮಕ್ಕಳಿಗೆ ಕೋವಿಡ್-19 ಸೋಂಕು; ರಾಜ್ಯದಲ್ಲಿ 191ಕ್ಕೇರಿದ ಸೋಂಕಿತರ ಸಂಖ್ಯೆ

ಮೂವರು ಮಕ್ಕಳಿಗೆ ಕೋವಿಡ್-19 ಸೋಂಕು; ರಾಜ್ಯದಲ್ಲಿ 191ಕ್ಕೇರಿದ ಸೋಂಕಿತರ ಸಂಖ್ಯೆ

ಕೋವಿಡ್ 19 ವಿರುದ್ಧ ಹೋರಾಟ; ಏ.30ರವರೆಗೆ ಲಾಕ್ ಡೌನ್ ಮುಂದುವರಿಕೆ: ಒಡಿಶಾ ಸಿಎಂ

ಕೋವಿಡ್ 19 ವಿರುದ್ಧ ಹೋರಾಟ; ಏ.30ರವರೆಗೆ ಲಾಕ್ ಡೌನ್ ಮುಂದುವರಿಕೆ: ಒಡಿಶಾ ಸಿಎಂ ಘೋಷಣೆ

ನೀರು ತರಲು ಹೋಗಿ ಕಾಲು ಜಾರಿ ಕೆರೆಗೆ ಬಿದ್ದು ಮೂರು ಮಕ್ಕಳ ದುರ್ಮರಣ

ನೀರು ತರಲು ಹೋಗಿ ಕಾಲು ಜಾರಿ ಕೆರೆಗೆ ಬಿದ್ದು ಮೂರು ಮಕ್ಕಳ ದುರ್ಮರಣ

Leopard-climbs-tree

ವಿಡಿಯೋ: ಬೇಟೆಯೊಂದಿಗೆ ಅನಾಯಾಸವಾಗಿ ದೈತ್ಯಗಾತ್ರದ ಮರ ಏರಿದ ಚಿರತೆ, ನೆಟ್ಟಿಗರು ಫುಲ್ ಫಿದಾ

ಲಾಕ್ ಡೌನ್ ಜೊತೆ ನೋ ಮ್ಯಾನ್ ಝೋನ್

ಲಾಕ್ ಡೌನ್ ಜೊತೆ ನೋ ಮ್ಯಾನ್ ಝೋನ್: ಮಂಗನ ಕಾಯಿಲೆ ತಡೆಗೆ ಮಲೆನಾಡಿನಲ್ಲಿ ಕ್ರಮ

ಚೀನಾದಿಂದ ಹರಡಿದ Covidಗೆ ಜಾಗತಿಕವಾಗಿ ಎಷ್ಟು ಲಕ್ಷ ಕೋಟಿ ನಷ್ಟ,ನಿರುದ್ಯೋಗ ಭೀತಿ; ಮುಂದೇನು

ಚೀನಾದಿಂದ ಹರಡಿದ Covidಗೆ ಜಾಗತಿಕವಾಗಿ ಎಷ್ಟು ಲಕ್ಷ ಕೋಟಿ ನಷ್ಟ,ನಿರುದ್ಯೋಗ ಭೀತಿ; ಮುಂದೇನು?

ಬೀದಿ ನಾಯಿಗೆ ತುತ್ತು ಹಾಕಿದ ಕ್ರಿಕೆಟಿಗ ಶೆಲ್ಡನ್ ಜಾಕ್ಸನ್‌

ಬೀದಿ ನಾಯಿಗೆ ತುತ್ತು ಹಾಕಿದ ಕ್ರಿಕೆಟಿಗ ಶೆಲ್ಡನ್ ಜಾಕ್ಸನ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತೆಂಕುತಿಟ್ಟು ಯಕ್ಷಗಾನದ ಹಿರಿಯ ಸ್ತ್ರೀ ವೇಷಧಾರಿ ಕುರ್ನಾಡು ಶಿವಣ್ಣ ಆಚಾರ್ಯ ಇನ್ನಿಲ್ಲ

ತೆಂಕುತಿಟ್ಟು ಯಕ್ಷಗಾನದ ಹಿರಿಯ ಸ್ತ್ರೀ ವೇಷಧಾರಿ ಕುರ್ನಾಡು ಶಿವಣ್ಣ ಆಚಾರ್ಯ ಇನ್ನಿಲ್ಲ

ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಸಲಗ

ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಸಲಗ

ಕೇಂದ್ರದಿಂದ ಶೀಘ್ರ ಪಡಿತರ ಪೂರೈಕೆ: ನಳಿನ್‌

ಕೇಂದ್ರದಿಂದ ಶೀಘ್ರ ಪಡಿತರ ಪೂರೈಕೆ: ನಳಿನ್‌

ಇಚ್ಲಂಪಾಡಿ; ಒಕ್ಕಲಿಗ ಗೌಡ ಗ್ರಾಮ ಸಮಿತಿಯಿಂದ 125 ಕುಟುಂಬಗಳಿಗೆ ಆಹಾರ ಸಾಮಾಗ್ರಿ ವಿತರಣೆ

ಇಚ್ಲಂಪಾಡಿ; ಒಕ್ಕಲಿಗ ಗೌಡ ಗ್ರಾಮ ಸಮಿತಿಯಿಂದ 125 ಕುಟುಂಬಗಳಿಗೆ ಆಹಾರ ಸಾಮಾಗ್ರಿ ವಿತರಣೆ

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಓಟಾಟ

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಓಟಾಟ

MUST WATCH

udayavani youtube

Coronavirus Lockdown : ಮಟ್ಟುಗುಳ್ಳ ಮಂದಗತಿಯ ಮಾರುಕಟ್ಟೆ Saddens Muttugulla Growers

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

ಹೊಸ ಸೇರ್ಪಡೆ

state-news-tdy-1

ಮಾಡದ ತಪ್ಪಿಗೆ ಕೂಲಿ ಕಾರ್ಮಿಕರು ಬಂಧಿ

09-April-15

ಜಿಲ್ಲೆಯಲ್ಲಿ ಶೇ. 50 ಪಡಿತರ ವಿತರಣೆ

ಗ್ರಾಮೀಣ ತರಕಾರಿಗಳಿಗೆ ಉತ್ತಮ ಬೇಡಿಕೆ

ಗ್ರಾಮೀಣ ತರಕಾರಿಗಳಿಗೆ ಉತ್ತಮ ಬೇಡಿಕೆ

09-April-14

ಕೊನೆ ಭಾಗದ ಜಮೀನಿಗೆ ನೀರು ಹರಿಸಿ

ಮಳೆಗಾಲದ ಸಿದ್ಧತೆ ಮೇಲೆ ಕೋವಿಡ್ ಕರಿಛಾಯೆ!

ಮಳೆಗಾಲದ ಸಿದ್ಧತೆ ಮೇಲೆ ಕೋವಿಡ್ ಕರಿಛಾಯೆ!