ಮಂಗಳೂರು, ಉಳ್ಳಾಲದ 9 ಕಡೆ ಹೆಲ್ತ್‌ ಕಿಯೋಸ್ಕ್

Team Udayavani, Mar 11, 2018, 6:15 AM IST

1003mlr17.jpg

ಮಂಗಳೂರು: ಮಂಗಳೂರು ಪಾಲಿಕೆ ಹಾಗೂ ಉಳ್ಳಾಲ ನಗರಸಭಾ ವ್ಯಾಪ್ತಿಯ ಒಟ್ಟು 9 ಕಡೆಗಳಲ್ಲಿ ತಲಾ 4.5 ಲಕ್ಷ ರೂ. ವೆಚ್ಚದಲ್ಲಿ ಹೆಲ್ತ್‌ ಕಿಯೋಸ್ಕ್ ಅನುಷ್ಠಾನಗೊಳ್ಳುತ್ತಿದ್ದು, ವಾರದೊಳಗೆ ಎಲ್ಲ ಕಿಯೋಸ್ಕ್ಗಳು ಪೂರ್ಣಪ್ರಮಾಣದಲ್ಲಿ ಕಾರ್ಯಾರಂಭಿಸಲಿವೆ ಎಂದು ಸಚಿವ ಯು.ಟಿ. ಖಾದರ್‌ ಹೇಳಿದರು.

ಅವರು ಶನಿವಾರ ನಗರದ ಸಕೀìಟ್‌ ಹೌಸ್‌ ಬಳಿ ಆರೋಗ್ಯ ಇಲಾಖೆಯಿಂದ ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಅನುಷ್ಠಾನಗೊಳ್ಳುವ ಹೆಲ್ತ್‌ ಕಿಯೋಸ್ಕ್ ಕುರಿತ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ನಗರ ಪ್ರದೇಶದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಗುಲಾಮ್‌ ನಬೀ ಆಜಾದ್‌ ಅವರು ಕೇಂದ್ರ ಆರೋಗ್ಯ ಸಚಿವರಾಗಿದ್ದ ವೇಳೆ ಎನ್‌ಎಚ್‌ಎಂ ಯೋಜನೆಯನ್ನು ಜಾರಿಗೆ ತಂದಿದ್ದರು. ಇದರಿಂದ ನಾನು ಆರೋಗ್ಯ ಸಚಿವನಾಗಿದ್ದ ವೇಳೆ ಮಂಗಳೂರಿನ 10 ಕಡೆಗಳಲ್ಲಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಆರಂಭಿಸಲಾಗಿತ್ತು. ಬಳಿಕ ಇದೇ ಎನ್‌ಎಚ್‌ಎಂ ಯೋಜನೆಯಲ್ಲಿ ಕೊಳೆಗೇರಿ ಪ್ರದೇಶ, ಜನನಿಬಿಡ ಪ್ರದೇಶದಲ್ಲಿ ಹೆಲ್ತ್‌ ಕಿಯೋಸ್ಕನ್ನು ತೆರೆಯುವ ಯೋಜನೆ ಹಾಕಿಕೊಳ್ಳಲಾಗಿತ್ತು. ಬೆಂಗಳೂರು ಹಾಗೂ ಮೈಸೂರಿನಲ್ಲಿ ಬಾಡಿಗೆ ಕಟ್ಟಡದಲ್ಲಿ ಇದೇ ರೀತಿಯ ಕೇಂದ್ರಗಳು ಆರಂಭಗೊಂಡಿವೆ. ಮಂಗಳೂರಿನಲ್ಲಿ ಡಿಎಚ್‌ಒ ತಂಡ ಪೂರ್ಣ ಪ್ರಮಾಣದ ಹೆಲ್ತ್‌ ಕಿಯೋಸ್ಕನ್ನು ತೆರೆಯಲು ಸಾಕಷ್ಟು ಪ್ರಯತ್ನ ಪಟ್ಟಿದೆ ಎಂದರು.

ಎಲ್ಲೆಲ್ಲಿ ?
ಪ್ರಸ್ತುತ ಮನಪಾ ವ್ಯಾಪ್ತಿಯ ಜಪ್ಪಿನಮೊಗರು, ಸರಿಪಳ್ಳ, ಕುದ್ರೋಳಿ, ಮೀನಕಳಿಯ, ಕೃಷ್ಣಾಪುರ ಹಾಗೂ ಉಳ್ಳಾಲದ ತೊಕ್ಕೊಟ್ಟು ಬಸ್‌ ನಿಲ್ದಾಣ, ಒಳಪೇಟೆಯ ಅಂಬೇಡ್ಕರ್‌ ಭವನದ ಬಳಿ, ಕೋಟೆಪುರ ಹಾಗೂ ಚೆಂಬುಗುಡ್ಡೆ ಪ್ರದೇಶದಲ್ಲಿ ಹೆಲ್ತ್‌ ಕಿಯೋಸ್ಕ್ ತೆರೆಯಲು ನಿರ್ಧರಿಸಲಾಗಿದೆ. ಪ್ರಸ್ತುತ ಸ್ಥಳೀಯಾಡಳಿತದಿಂದ ವಿದ್ಯುತ್‌ ಹಾಗೂ ನೀರಿನ ಸಂಪರ್ಕ ನೀಡಿ, ವಾರದೊಳಗೆ ಕಿಯೋಸ್ಕ್ ಆರಂಭಗೊಳ್ಳಲಿದೆ ಎಂದರು.

ಮೀನುಗಾರರು, ರಿಕ್ಷಾ ಚಾಲಕರು ಹೀಗೆ ಎಲ್ಲ ವಿಧದ ಕಾರ್ಮಿಕ ವರ್ಗಕ್ಕೂ ಅನುಕೂಲವಾಗುವ ರೀತಿಯಲ್ಲಿ ಈ ಕೇಂದ್ರಗಳನ್ನು ತೆರೆಯಲಾಗಿದೆ. ಒಂದು ನಿಮಿಷ ಕೇಂದ್ರಕ್ಕೆ ಬಂದು ತಮ್ಮ ಆರೋಗ್ಯ ಪರೀಕ್ಷೆ ಮಾಡಲು ಅನುಕೂಲವಾಗಲಿದೆ. ಡಿಎಚ್‌ಒ ನೇತೃತ್ವದಲ್ಲಿ ಇದು ಕಾರ್ಯನಿರ್ವಹಿಸಲಿದ್ದು, ನರ್ಸ್‌ ಹಾಗೂ ಲ್ಯಾಬ್‌ ಟೆಕ್ನೀಶಿಯನ್‌ ಕೇಂದ್ರದಲ್ಲಿರುತ್ತಾರೆ.

ಜತೆಗೆ ಮೆಡಿಕಲ್‌ ಕಾಲೇಜುಗಳ ವೈದ್ಯರೂ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ. 15 ದಿನಕ್ಕೊಮ್ಮೆ ವೈದ್ಯರು ಭೇಟಿ ನೀಡುವ ಕುರಿತು ಕೂಡ ಕ್ರಮ ಕೈಗೊಳ್ಳಲಾಗಿದ್ದು, ಈ ಕುರಿತು ಬೋರ್ಡ್‌ ಹಾಕಿ ಜನರಿಗೆ ಮಾಹಿತಿ ನೀಡಲಾಗುತ್ತದೆ. ಪ್ರಸ್ತುತ ಕೇಂದ್ರದ ಸಮಯ ಮಧ್ಯಾಹ್ನ 2.30ರಿಂದ 4.30ರ ವರೆಗೆ ನಿಗದಿ ಪಡಿಸಲಾಗಿದ್ದು, ಮುಂದಿನ ದಿನಗಳಲ್ಲಿ ಸಮಯ ಬದಲಾಯಿಸಲಾಗುತ್ತದೆ.

ಈ ಸಂದರ್ಭದಲ್ಲಿ ಮೇಯರ್‌ ಭಾಸ್ಕರ್‌ ಕೆ, ಉಪಮೇಯರ್‌ ಮಹಮ್ಮದ್‌ ಕುಂಜತ್ತಬೈಲ್‌, ಉಳ್ಳಾಲ ನಗರಸಭಾಧ್ಯಕ್ಷ ಕೆ. ಹುಸೈನ್‌, ಮಂಗಳೂರು ತಾ.ಪಂ. ಅಧ್ಯಕ್ಷ ಮೊಹಮ್ಮದ್‌ ಮೋನು, ಡಿಎಚ್‌ಒ ಡಾ| ರಾಮಕೃಷ್ಣ ರಾವ್‌ ಮೊದಲಾದವರು ಉಪಸ್ಥಿತರಿದ್ದರು.

ಹೆಲ್ತ್‌ ಕಿಯೋಸ್ಕ್ ಕಾರ್ಯಗಳೇನು?
ಪ್ರಸವಪೂರ್ವ ಮತ್ತು ಪ್ರಸವದ ಅನಂತರದ ಸೇವೆ, ಚುಚ್ಚುಮದ್ದು ಸೇವೆ, ಐಯುಸಿಡಿ ಅಳವಡಿಕೆ, ನಿಶ್ಚಯ್‌ ಕಿಟ್‌ ಮೂಲಕ ಗರ್ಭಿಣಿ ಎಂದು ಗುರುತಿಸುವುದು, ರಕ್ತಹೀನತೆ ಮತ್ತು ಅಪೌಷ್ಟಿಕತೆಯ ಪತ್ತೆಹಚ್ಚುವಿಕೆ, ಅಸಾಂಕ್ರಾಮಿಕ ರೋಗಗಳಾದ ಮಧುಮೇಹ ಮತ್ತು ಅಧಿಕ ರಕ್ತದೊತ್ತಡದ ಪತ್ತೆಹಚ್ಚುವಿಕೆ, ಕ್ಷಯರೋಗ ಪತ್ತೆಗೆ ಕಫ ಸಂಗ್ರಹಣೆ, ಮಲೇರಿಯಾ ಪತ್ತೆಗೆ ರಕ್ತಲೇಪನದ ಸಂಗ್ರಹ, ಮೂತ್ರ ಪರೀಕ್ಷೆ, ವಿವಿಧ ಆರೋಗ್ಯ ಯೋಜನೆಗಳ ಮಾಹಿತಿ ಹೆಲ್ತ್‌ ಕಿಯೋಸ್ಕ್ನಲ್ಲಿ ಲಭ್ಯವಾಗಲಿದೆ.

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.