
ಭಾರಿ ಮಳೆ : ನಾಳೆ ದಕ್ಷಿಣ ಕನ್ನಡದ ಶಾಲಾ, ಕಾಲೇಜುಗಳಿಗೆ ರಜೆ
Team Udayavani, Jun 30, 2022, 5:52 PM IST

ಮಂಗಳೂರು :ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಸಂಜೆಯಿಂದ ಭಾರಿ ಮಳೆಯಾಗುತ್ತಿದ್ದು ಮುಂಜಾಗ್ರತಾ ಕ್ರಮವಾಗಿ ನಾಳೆ, ಶುಕ್ರವಾರ (ಜುಲೈ 1 )ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.
ದಕ್ಷಿಣ ಕನ್ನಡದಲ್ಲಿ ಬೆಳಗ್ಗೆ 8.30 ರವರೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ, ಆದರೆ ಜಿಲ್ಲಾಡಳಿತ, ನಾಳೆ ಸಹ ಅಸಹಜವಾಗಿ ಹೆಚ್ಚಿನ ಮಳೆಯಾಗುವ ನಿರೀಕ್ಷೆಇರುವ ಕಾರಣ ಸಾರ್ವಜನಿಕ ಹಿತಾಸಕ್ತಿಯನ್ನು ಪರಿಗಣಿಸಿ ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲೆಗಳು, ಪಿಯು ಮತ್ತು ಪದವಿ ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಿಸಲು ನಿರ್ಧರಿಸಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಗುರುವಾರ ಮಂಗಳೂರು ನಗರದ ಹಲವೆಡೆ ರಸ್ತೆ ಗಳಲ್ಲಿ ನೀರು ನಿಂತು ಜನ ಜೀವನ ಅಸ್ತವ್ಯಸ್ತವಾಗಿತ್ತು. ಹಲವೆಡೆ ಭೂ ಕುಸಿತವಾಗಿರುವ ಬಗ್ಗೆ ವರದಿಯಾಗಿದೆ.
ನಾಳೆ ಎಸೆಸೆಲ್ಸಿ ಪೂರಕ ಪರೀಕ್ಷೆಗಳು, ಪೂರ್ವನಿರ್ಧರಿತ ತರಬೇತಿಗಳು ನಡೆಯಲಿದೆ, ಯಾವುದೇ ರಜೆ ಇದಕ್ಕೆ ಅನ್ವಯಿಸುವುದಿಲ್ಲ ಎಂದು ಡಿಡಿಪಿಐ ತಿಳಿಸಿದ್ದಾರೆ.
ಇದನ್ನೂ ಓದಿ : ಭಾರಿ ಮಳೆ : ನಾಳೆ ಉಡುಪಿ ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜುಗಳಿಗೆ ರಜೆ
ಕಾಸರಗೋಡು, ಮಂಜೇಶ್ವರ ತಾಲೂಕಿನ ಎಲ್ಲಾ ಶಾಲೆಗಳಿಗೂ ರಜೆ
ಭಾರೀ ಮಳೆಯ ಕಾರಣ ಕಾಸರಗೋಡು ಮತ್ತು ಮಂಜೇಶ್ವರ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಅಂಗನವಾಡಿಗಳಿಗೆ ಜಿಲ್ಲಾಧಿಕಾರಿ. ಭಂಡಾರಿ ಸ್ವಾಗತ್ ರಣವೀರ್ ಚಂದ್ ನಾಳೆ (ಜುಲೈ 1) ರಜೆ ಘೋಷಿಸಿದ್ದಾರೆ. ಆದರೆ ಕಾಲೇಜುಗಳಿಗೆ ರಜೆ ಅನ್ವಯವಾಗುವುದಿಲ್ಲ.
ಟಾಪ್ ನ್ಯೂಸ್
