ಕುಕ್ಕೆ: ಭಾರೀ ಮಳೆಗೆ ಉಕ್ಕಿಹರಿದ ದರ್ಪಣತೀರ್ಥ

Team Udayavani, Sep 24, 2019, 4:14 AM IST

f-44

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಸೋಮವಾರ ಸಂಜೆ ದಿಢೀರನೆ ಭಾರೀ ಮಳೆ ಸುರಿದಿದೆ. ಕ್ಷೇತ್ರದ ದರ್ಪಣ ತೀರ್ಥ ನದಿಯಲ್ಲಿ ಹಠಾತ್ತಾಗಿ ಪ್ರವಾಹ ಉಕ್ಕಿ ಹರಿದು ಸ್ವಲ್ಪ ಕಾಲ ಆತಂಕ ಸೃಷ್ಟಿಸಿತು.

ಕುಮಾರಪರ್ವತದ ತಪ್ಪಲು ಪ್ರದೇಶ ಮತ್ತು ಸ್ಥಳೀಯವಾಗಿ ಸತತ ನಾಲ್ಕು ತಾಸು ಮಳೆ ಸುರಿಯಿತು. ದರ್ಪಣ ತೀರ್ಥ ತುಂಬಿ ಹರಿದ ಪರಿಣಾಮ ಆದಿಸುಬ್ರಹ್ಮಣ್ಯ ದೇಗುಲದ ಹೊರಾಂಗಣಕ್ಕೆ ನೀರು ನುಗ್ಗಿದೆ. ಆದಿ ದೇಗುಲದ ಅಶ್ವತ್ಥಕಟ್ಟೆ ಮುಳುಗಡೆಗೊಂಡಿತ್ತು. ದೇಗುಲದ ಆವರಣದೊಳಕ್ಕೆ ನೆರೆ ನೀರು ಹರಿದಿದೆ. ತೀರ್ಥ ಸ್ನಾನ ನೆರವೇರಿಸುವಲ್ಲಿ ಮೆಟ್ಟಿಲ ತನಕ ನೀರು ಹರಿದಿದೆ. ಪಕ್ಕದಲ್ಲೇ ಇರುವ ಸಂಪುಟ ಶ್ರೀ ನರಸಿಂಹ ಸ್ವಾಮಿ ಮಠದ ಹಿಂಭಾಗದ ಕೆಲವು ಪ್ರದೇಶಗಳು ಮುಳುಗಡೆಗೊಂಡವು.

ಕಿರು ಸೇತುವೆ ಮುಳುಗಡೆ
ಇದೇ ಮೊದಲ ಬಾರಿಗೆ ದೇವರಗದ್ದೆಗೆ ತೆರಳುವ ಕಿರು ಸೇತುವೆ ಪೂರ್ಣ ಪ್ರಮಾಣದಲ್ಲಿ ಮುಳುಗಿತ್ತು. ಪರಿಸರದ ಹಲವು ವಸತಿಗೃಹಗಳಿಗೆ, ಸ್ಥಳೀಯ ನಾರಾಯಣ ಅವರ ಮನೆಗೆ ನೀರು ನುಗ್ಗಿದೆ. ದೇವರಗದ್ದೆ ಭಾಗಕ್ಕೆ ಸಂಪರ್ಕ ಕಡಿತಗೊಂಡಿತು. ದರ್ಪಣ ತೀರ್ಥ ನದಿ ಪಾತ್ರದ ಕೃಷಿ ಭೂಮಿ ಜಲಾವೃತಗೊಂಡವು. ಇಂತಹ ಮಳೆ ಈ ಹಿಂದೆ ಬಂದಿದ್ದರೂ ದರ್ಪಣ ತೀರ್ಥ ನದಿಯಲ್ಲಿ ಈ ಬಾರಿ ಇಷ್ಟೊಂದು ಪ್ರಮಾಣದಲ್ಲಿ ನೆರೆ ಹರಿದಿರುವುದು ಸ್ಥಳೀಯರಲ್ಲಿ ಅಚ್ಚರಿಗೆ ಕಾರಣವಾಗಿದೆ. ಮಳೆ ನಿಂತ ಅರ್ಧ ತಾಸಿನಲ್ಲಿ ಪ್ರವಾಹ ಕೂಡ ಇಳಿಯಿತು.

ಕ್ಷೇತ್ರದಲ್ಲಿ ಹರಿಯುವ ಕುಮಾರಧಾರಾ ನದಿಯಲ್ಲಿ ಅಷ್ಟೇನೂ ಪ್ರವಾಹ ಕಂಡು ಬಂದಿಲ್ಲ. ಗುತ್ತಿಗಾರು, ಪಂಜ, ಬಳ್ಪ ಐನಕಿದು, ಬಾಳುಗೋಡು ಕಲ್ಮಕಾರು, ಯೇನೆಕಲ್‌ ಕಡೆಗಳಲ್ಲಿ ಸಾಮಾನ್ಯ ಮಳೆಯಾಗಿದೆ.

ಭಕ್ತರಲ್ಲಿ ಆತಂಕ ಬೇಡ
ಕ್ಷೇತ್ರಕ್ಕೆ ಆಗಮಿಸುವ ಭಕ್ತರು ಯಾವುದೇ ಗೊಂದಲಕ್ಕೆ ಒಳಗಾಗುವ ಅಗತ್ಯವಿಲ್ಲ. ದರ್ಪಣ ತೀರ್ಥ ನದಿಯಲ್ಲಿ ನೆರೆ ಹರಿದರೂ ಯಾವುದೇ ರೀತಿಯ ಸಮಸ್ಯೆಗಳಾಗಿಲ್ಲ. ಭಕ್ತರಿಗೂ ತೊಂದರೆಯಾಗಿಲ್ಲ ಎಂದು ದೇಗುಲದ ಪ್ರಕಟನೆ ತಿಳಿಸಿದೆ.

ಜಲಸ್ಫೋಟ ನೆನಪಿಸಿತು
ಕುಮಾರಧಾರಾ ನದಿಯಲ್ಲಿ ಅಷ್ಟೇನೂ ಹರಿವಿಲ್ಲದೆ ದರ್ಪಣ ತೀರ್ಥದಲ್ಲಿ ಮಾತ್ರ ಭಾರೀ ಪ್ರಮಾಣದಲ್ಲಿ ಕೆಂಬಣ್ಣದ ನೆರೆ ನೀರು ಹರಿದುಬಂದಿರುವುದು ಅಚ್ಚರಿ ಮತ್ತು ಆತಂಕ ಮೂಡಿಸಿತು. ದರ್ಪಣ ತೀರ್ಥ ಹುಟ್ಟುವ ಕುಮಾರ ಪರ್ವತ, ಪಶ್ಚಿಮ ಘಟ್ಟದ ಭಾಗದಲ್ಲಿ ಭಾರೀ ಮಳೆ ಆಗಿರುವ ಕಾರಣ ಇಷ್ಟು ನೆರೆ ಬಂದಿದೆ ಎನ್ನಲಾಗಿದೆ. ಕೆಲವೇ ತಿಂಗಳುಗಳ ಹಿಂದೆ ಬೆಳ್ತಂಗಡಿ ತಾಲೂಕಿನಲ್ಲಿ ಇದೇ ರೀತಿ ಒಮ್ಮೆಲೆ ಹೊಳೆ, ನದಿಗಳಲ್ಲಿ ದಿಢೀರ್‌ ನೆರೆ ಉಕ್ಕಿಬಂದು ಹಾನಿ ಉಂಟು ಮಾಡಿತ್ತು. ಆದರೆ ಅಲ್ಲಿ ನಡೆದಂತೆ ದರ್ಪಣ ತೀರ್ಥದಲ್ಲಿ ಮರ, ಬಂಡೆ ಇತ್ಯಾದಿಗಳು ಕೊಚ್ಚಿಕೊಂಡು ಬಂದಿಲ್ಲ ಎನ್ನುವುದು ಸಮಾಧಾನದ ಸಂಗತಿ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.