ಮಂಗಳೂರು: ಮಳೆ ಹೆಚ್ಚಿದ್ದಲ್ಲಿ ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ
Team Udayavani, Jun 30, 2022, 9:18 AM IST
ಜಲಾವೃತವಾದ ನೀರುಮಾರ್ಗ ಸಮೀಪದ ಬದಿಬಡಿ ಕ್ಷೇತ್ರ
ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಮಳೆ ಬಿರುಸಾಗಿದ್ದು, ಬುಧವಾರದಂತೆ ಗುರುವಾರವೂ ಬಿಡದೆ ಸುರಿಯುತ್ತಿದೆ. ಮಳೆ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಮಂಗಳೂರು ಮಹಾ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಶಾಲೆಗಳಲ್ಲಿ ವಿಶೇಷ ಎಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ಈಗಾಗಲೆ ಮಕ್ಕಳು ಶಾಲೆಗಳಿಗೆ ಬಂದಿದ್ದಲ್ಲಿ ಎಲ್ಲಾ ಮುಂಜಾಗೃತೆ ವಹಿಸಿ ಶಾಲೆಗಳು ಕಾರ್ಯ ನಿರ್ವಹಿಸಬೇಕು, ಮಕ್ಕಳು ಶಾಲೆಗೆ ಬರಲು ಅನಾನುಕೂಲವಾದ ಪ್ರದೇಶದಲ್ಲಿ ಅಂತಹ ಮಕ್ಕಳಿಗೆ ಈ ದಿನ ರಜೆ ನೀಡಬೇಕು. ಶಿಕ್ಷಣ ಇಲಾಖೆಯ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಶಾಲಾ ಮಕ್ಕಳ ಸುರಕ್ಷತೆ ಬಗ್ಗೆ ಕಟ್ಟೆಚ್ಚರ ವಹಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆವಿ ಸೂಚಿಸಿದ್ದಾರೆ.
ಪಿಯುಸಿ ಮತ್ತು ಪದವಿ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಇದನ್ನೂ ಓದಿ:ಟೈಲರ್ ಕನ್ಹಯ್ಯಾ ಹತ್ಯೆ ಆರೋಪಿಗೆ ಕರಾಚಿಯ ಉಗ್ರ ಸಂಘಟನೆ ತರಬೇತಿ; ಪಾಕ್ ಹೇಳಿದ್ದೇನು?
ತಾಲೂಕುಗಳಲ್ಲಿ ಆಯಾ ಶಿಕ್ಷಣಾಧಿಕಾರಿಗಳು ಪರಿಸ್ಥಿತಿ ಅವಲೋಕಿಸಿ ತೀರ್ಮಾನ ಮಾಡಬೇಕು ಎಂದು ಉಡುಪಿ ಜಿಲ್ಲಾಧಿಕಾರಿಯವರು ಸೂಚನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ