ಭಾರಿ ಮಳೆ: ನಾಳೆ ಕಡಬ ಮತ್ತು ಸುಳ್ಯ ತಾಲೂಕಿನ ಶಾಲಾ- ಕಾಲೇಜುಗಳಿಗೆ ರಜೆ ಘೊಷಣೆ
Team Udayavani, Aug 2, 2022, 9:24 PM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಭಾರಿ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಕಡಬ ಮತ್ತು ಸುಳ್ಯ ತಾಲೂಕುಗಳಲ್ಲಿಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು ಮಂಗಳವಾರ (ಆ.3) ಆದೇಶ ಹೊರಡಿಸಿದ್ದಾರೆ.
ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಲವಡೆ ತಗ್ಗು ಪ್ರದೇಶಗಳು ಜಲಾವೃತವಾಗುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಕಡಬ ಮತ್ತು ಸುಳ್ಯ ತಾಲೂಕಿನ ಎಲ್ಲಾ ಅಂಗನವಾಡಿಗಳು, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಇದನ್ನೂ ಓದಿ: ದಿವ್ಯಾ ಹಾಗರಗಿ ಸಲ್ಲಿಸಿದ್ದ ಪಿಐಎಲ್ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್
ಸೋಮವಾರ ರಾತ್ರಿ ಗುಡ್ಡ ಕುಸಿದು ಇಬ್ಬರು ಮಕ್ಕಳು ಮೃತಪಟ್ಟ ಸುಬ್ರಹ್ಮಣ್ಯ ಸಮೀಪದ ಪರ್ವತಮಿಖಿ ಘಟನಾ ಸ್ಥಳಕ್ಕೆ ಇಂದು ಬೆಳಗ್ಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.ಭೇಟಿ ನೀಡಿದರು.