ಪುತ್ತೂರು, ಸುಳ್ಯ, ಉಪ್ಪಿನಂಗಡಿ, ಬೆಳ್ಳಾರೆ, ಸುಬ್ರಹ್ಮಣ್ಯ: ಭಾರೀ ಮಳೆ

Team Udayavani, Jun 29, 2018, 12:11 PM IST

29-june-8.jpg

ಪುತ್ತೂರು: ಪುತ್ತೂರು ತಾಲೂಕಿನ ನಗರ ಹಾಗೂ ಗ್ರಾಮಾಂತರ ಭಾಗಗಳಲ್ಲಿ ಮೂರು ದಿನಗಳಿಂದ ನಿರಂತರವಾಗಿ ಭಾರೀ ಮಳೆ ಸುರಿದಿದೆ. ತಾಲೂಕಿನ ನಗರ ಹಾಗೂ ಗ್ರಾಮಾಂತರ ಭಾಗಗಳಲ್ಲಿ ಮಂಗಳವಾರ ಮಧ್ಯಾಹ್ನದ ಬಳಿಕ ಮಳೆ ಬಿರುಸು ಪಡೆದುಕೊಂಡಿದೆ. ತಾಲೂಕಿನ ನೆಲ್ಯಾಡಿ, ಉಪ್ಪಿನಂಗಡಿ, ಕುಂಬ್ರ, ಈಶ್ವರಮಂಗಲ, ಸುಳ್ಯಪದವು, ಬೆಟ್ಟಂಪಾಡಿ, ಪುರುಷರಕಟ್ಟೆ ಮೊದಲಾದ ಕಡೆಗಳಲ್ಲಿ ಮಳೆ ನಿರಂತರತೆಯನ್ನು ಕಾಯ್ದುಕೊಂಡಿದೆ.

ನೇತ್ರಾವತಿ, ಕುಮಾರಧಾರಾ, ಪಯಸ್ವಿನಿ, ಸೀರೆ ಹೊಳೆಗಳು ತುಂಬಿ ಹರಿದಿದ್ದು, ಹಳ್ಳ, ತೋಡುಗಳು ನೀರಿನಿಂದ ತುಂಬಿಕೊಂಡಿವೆ. ಬುಧವಾರ ಅಪರಾಹ್ನದಿಂದ ಗುರುವಾರ ಮಧ್ಯಾಹ್ನದ ತನಕವೂ ಉತ್ತಮ ಮಳೆಯಾಗಿದೆ. ರಸ್ತೆಗಳಲ್ಲಿ ಚರಂಡಿ ಅವ್ಯವಸ್ಥೆಯ ಕಾರಣದಿಂದ ನೀರು ಹರಿಯುತ್ತಿರುವ ದೃಶ್ಯ ಎಲ್ಲೆಡೆ ಕಂಡುಬಂದಿದೆ. ಮಳೆಯಿಂದ ಹೆಚ್ಚು ತೊಂದರೆಯಾಗುವ ಕಡೆಗಳಲ್ಲಿ ಶಾಲೆಗಳಿಗೆ ಆಡಳಿತ ಮಂಡಳಿಗಳು ರಜೆ ನೀಡಿವೆ.

696.3 ಮಿ.ಮೀ.
ಪುತ್ತೂರು ನಗರದಲ್ಲಿ 113 ಮಿ.ಮೀ., ಉಪ್ಪಿನಂಗಡಿಯಲ್ಲಿ 134.06 ಮಿ.ಮೀ., ಶಿರಾಡಿಯಲ್ಲಿ 60.03 ಮಿ.ಮೀ., ಕೊಯಿಲದಲ್ಲಿ 117. 4 ಮಿ.ಮೀ., ಐತೂರುನಲ್ಲಿ 125 ಮಿ.ಮೀ., ಕಡಬದಲ್ಲಿ 146 ಮಿ.ಮೀ. ಮಳೆ ಸುರಿದಿದೆ. ತಾಲೂಕಿನಲ್ಲಿ ಒಟ್ಟು 696.3 ಮಿ.ಮೀ. ಹಾಗೂ 116 ಮಿ.ಮೀ. ಸರಾಸರಿ ಮಳೆಯಾಗಿದೆ. ನೇತ್ರಾವತಿ ಕುಮಾರಧಾರಾ ಸಂಗಮದ ಉಪ್ಪಿನಂಗಡಿ ಸ್ಥಳದಲ್ಲಿ ನೀರಿನ ಮಟ್ಟ 20 ಮೀ. ದಾಖಲಾಗಿದೆ.

ತಾಲೂಕಿನ ಸರ್ವೆ ಗ್ರಾಮದಲ್ಲಿ ರೈತರೊಬ್ಬರ ಭತ್ತದ ಗದ್ದೆಗೆ ನೀರು ನುಗ್ಗಿ 50 ಸಾವಿರ ರೂ. ನಷ್ಟ ಸಂಭವಿಸಿದೆ. ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪುತ್ತೂರು ವಿಭಾಗ ವ್ಯಾಪ್ತಿಯಲ್ಲಿ ಎರಡು ದಿನಗಳ ಅವಧಿಯಲ್ಲಿ 51 ವಿದ್ಯುತ್‌ ಕಂಬಗಳು ಧರೆಗುರುಳಿದ್ದು, ಅಂದಾಜು 7.5 ಲಕ್ಷ ರೂ. ನಷ್ಟ ಸಂಭವಿಸಿದೆ ಎಂದು ಮೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.

ಸುಳ್ಯ: 160.8 ಮೀ.ಮೀ. ಮಳೆ
ಸುಳ್ಯ: ತಾಲೂಕಿನಲ್ಲಿ ಗುರುವಾರ ಬೆಳಗ್ಗಿನ 24 ತಾಸು ಅಂತ್ಯಕ್ಕೆ 160.8 ಮಿ.ಮೀ ಮಳೆ ದಾಖಲಾಗಿದೆ. ಈ ವರ್ಷ ಮಳೆ ಆರಂಭಗೊಂಡ ಅನಂತರದ ಗರಿಷ್ಟ ಪ್ರಮಾಣದ ಮಳೆ ಇದಾಗಿದೆ. ಬೆಳ್ಳಾರೆ, ಸುಬ್ರಹ್ಮಣ್ಯ, ಜಾಲ್ಸೂರು, ಅರಂತೋಡು ಜಿ.ಪಂ ಕ್ಷೇತ್ರದ ವ್ಯಾಪ್ತಿಯ ನಾನಾ ಭಾಗದಲ್ಲಿ ಮಳೆ ಬುಧವಾರ ರಾತ್ರಿಯಿಡಿ ಉತ್ತಮ ಮಳೆಯಾಗಿದೆ. ಗುರುವಾರ ಮಧ್ಯಾಹ್ನ ತನಕ ಮಳೆಯಾಗಿದ್ದು, ದಿನವಿಡಿ ಮೋಡ ಕವಿದ ವಾತಾವರಣ ಕಂಡು ಬಂದಿತ್ತು. ಕನಕಮಜಲಿನ ಮುಹಿಯ್ಯುದ್ದಿನ್‌ ಮಸೀದಿ ಕಂಪೌಂಡ್‌ ಕುಸಿದು ಚರಂಡಿ ಬ್ಲಾಕ್‌ ಆಗಿತ್ತು. ಅನಂತರ ಸ್ಥಳೀಯರು ಚರಂಡಿ ದುರಸ್ತಿ ಕಾರ್ಯ ನಡೆಸಿದರು.

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.