Udayavni Special

ಹೆದ್ದಾರಿ ಬದಿ ತ್ಯಾಜ್ಯ ರಾಶಿ: ಆಡಳಿತ ಕ್ರಮ ಕೈಗೊಳ್ಳಲಿ  

Team Udayavani, May 28, 2018, 2:33 PM IST

28-may-12.jpg

ಬಂಟ್ವಾಳ : ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಇಕ್ಕೆಲ ತ್ಯಾಜ್ಯ ರಾಶಿಯಿಂದ ತುಂಬಿದ್ದು, ವಾಹನಗಳಲ್ಲಿ ತ್ಯಾಜ್ಯವನ್ನು ತಂದು ಎಸೆಯಲಾಗುತ್ತಿದೆ. ಫರಂಗಿಪೇಟೆ, ಪುದು, ಮಾರಿಪಳ್ಳ ತನಕ ಹೆದ್ದಾರಿ ಬದಿಯಲ್ಲಿ ಅಲ್ಲಲ್ಲಿ ತ್ಯಾಜ್ಯದ ರಾಶಿ ತುಂಬಿದ್ದು, ಸಾಂಕ್ರಾಮಿಕ ರೋಗ ಭೀತಿಯಿದೆ.

ಪುದು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ತ್ಯಾಜ್ಯ ವಿಲೇವಾರಿಗಾಗಿ ಕಳೆದ ಪಂ‌ಚಾಯತ್‌ ಆಡಳಿತಕ್ಕೆ ಜಿ.ಪಂ. ತ್ಯಾಜ್ಯ ನಿರ್ವಹಣೆ ಸಮಿತಿಯು ಸ್ಪಚ್ಛತೆ ಕಾಪಾಡಬೇಕೆಂಬ ನಿಟ್ಟಿನಲ್ಲಿ ನೋಟಿಸ್‌ ನೀಡಿದ್ದನ್ನು ಸ್ಮರಿಸಬಹುದು.

ಸಿಸಿ ಕೆಮರಾ ಅಳವಡಿಸಿ
ಹೆದ್ದಾರಿ ಬದಿಯಲ್ಲಿ ಪಂ.ನಿಂದ ಇಲ್ಲಿ ತ್ಯಾಜ್ಯ ಹಾಕಬಾರದು ಎಂಬ ಸೂಚನಾ ಫಲಕ ಹಾಕಲಾಗಿದೆ. ಆದರೆ ತ್ಯಾಜ್ಯ ಇರುವಲ್ಲಿ ಫಲಕ ಹಾಕಿದ್ದಾರೊ ಅಥವಾ ಫಲಕ ಇರುವಲ್ಲಿ ತ್ಯಾಜ್ಯ ಹಾಕುತ್ತಾರೋ ಎಂಬುದು ಗೊತ್ತಾಗದಷ್ಟು ಫಲಕದ ಕೆಳಗೆ ತ್ಯಾಜ್ಯ ರಾಶಿ ಇದೆ. ಈ ಪ್ರದೇಶದಲ್ಲಿ ಸಿಸಿ ಕೆಮರಾ ಆಳವಡಿಸಿದರೆ ತ್ಯಾಜ್ಯ ಹಾಕುವವರ ಮೇಲೆ ಕ್ರಮ ಜರಗಿಸಿ ಸಮಸ್ಯಗೆ ಪರಿಹಾರ ಕಂಡುಕೊಳ್ಳಬಹುದು.

ಮಾದರಿ ಕ್ರಮ
ಬಹುತೇಕ ಮಂದಿ ಬೆಳಗ್ಗಿನ ಹೊತ್ತು ಅಥವಾ ರಾತ್ರಿ ತ್ಯಾಜ್ಯ ಎಸೆದು ಹೋಗುತ್ತಾರೆ. ಇದನ್ನು ಬಂಟ್ವಾಳ ಪುರಸಭೆಯ ಹಾಲಿ ಮುಖ್ಯಾಧಿಕಾರಿ ಪತ್ತೆ ಮಾಡಿ ಎಂಟು ಮಂದಿಯ ಫೋಟೋ ತೆಗೆದುಕೊಳ್ಳುವ ಮೂಲಕ ನಗರ ಕೇಂದ್ರ ಬಿ.ಸಿ. ರೋಡ್‌ ಹೆದ್ದಾರಿಯಲ್ಲಿ ಕಸ ಹಾಕದಂತೆ ಕಠಿನ ಕ್ರಮ ಕೈಗೊಂಡಿದ್ದರು.

ಕಠಿನ ಕ್ರಮ ಅಗತ್ಯ
ಸಾಂಕ್ರಾಮಿಕ ರೋಗಗಳಿಗೆ ಆಮಂತ್ರಣ ನೀಡುವಂತೆ ಈ ತ್ಯಾಜ್ಯಗಳ ರಾಶಿ ಇದೆ. ಇದನ್ನು ಆದಷ್ಟು ಬೇಗ ವಿಲೇವಾರಿ ಮಾಡುವ ನಿಟ್ಟಿನಲ್ಲಿ ಸ್ಥಳೀಯ ಪಂ. ಪ್ರಯತ್ನಿಸಬೇಕು. ಸಿಸಿ ಕೆಮರಾ ಅಳವಡಿಸಿ ತ್ಯಾಜ್ಯ ಎಸೆಯುವವರ ಮೇಲೆ ಕ್ರಮ ಜರಗಿಸಬೇಕು. ತ್ಯಾಜ್ಯ ಹಾಕುವುದಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸಿ, ಸರಿಯಾಗಿ ನಿರ್ವಹಣೆ ಮಾಡುವ ನಿಟ್ಟಿನಲ್ಲಿ ಕ್ರಮ ಜರಗಿಸಬೇಕು.

ರಾ.ಹೆ. ರಸ್ತೆ ಬದಿ ಇದ್ದಂತಹ ತ್ಯಾಜ್ಯವನ್ನು ವಿಲೇವಾರಿ ಮಾಡಲು ಅಡ್ಯಾರ್‌ ಮತ್ತು ತುಂಬೆ ಗ್ರಾ.ಪಂ. ಹಾಲಿ ಆಡಳಿತ
ನಡೆಸಿರುವ ಮಾದರಿ ಕಾರ್ಯಕ್ರವನ್ನು ಸ್ಮರಿಸಬೇಕು. ಹೆದ್ದಾರಿಯಲ್ಲಿ ಇದ್ದಂತಹ ತ್ಯಾಜ್ಯ ರಾಶಿಯನ್ನು ತೆಗೆದು ಬಳಿಕ
ಅಲ್ಲಿ ಯಾರೂ ತ್ಯಾಜ್ಯ ಎಸೆಯದಂತೆ ಮಾಡಿದ ಪ್ರಯತ್ನ ಇಂದು ಸದ್ರಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಹೆದ್ದಾರಿ ಸ್ವಚ್ಛವಾಗಿರುವುದಕ್ಕೆ ಕಾರಣವಾಗಿದೆ.

ತ್ಯಾಜ್ಯ ಸಮಸ್ಯೆಗೆ ಶೀಘ್ರ ಪರಿಹಾರ
ಹೆದ್ದಾರಿಯ ಬದಿಯಲ್ಲಿ ತ್ಯಾಜ್ಯ ನಿರ್ಮೂಲನೆ ಮಾಡಲು ಬಹಳಷ್ಟು ಪ್ರಯತ್ನ ಪಡುತ್ತಿದ್ದೇವೆ. ಜನರಿಗೆ ಹೆದ್ದಾರಿ ಶುಚಿತ್ವದ ಬಗ್ಗೆ ಗಮನ ಇಲ್ಲ. ಫ್ಲ್ಯಾಟ್‌ಗಳಲ್ಲಿ ವಾಸ್ತವ್ಯ ಇರುವವರನ್ನು ಕರೆದು ಎಚ್ಚರಿಕೆ ಕೊಟ್ಟಿದ್ದೇವೆ. ಪಂ. ವತಿಯಿಂದ ಪ್ರತೀ 2 ದಿಗಳಿಗೊಮ್ಮ ಗುತ್ತಿಗೆದಾರರ ಮುಖಾಂತರ ವಾಹನದಲ್ಲಿ ತ್ಯಾಜ್ಯ ವಿಲೇವಾರಿ ಮಾಡಿಸಲಾಗುತ್ತಿದೆ. ಪುದು ಗ್ರಾ.ಪಂ. ನೂತನ ಆಡಳಿತ ಅಸ್ತಿತ್ವಕ್ಕೆ ಬಂದಿದೆ. ಮುಂದಿನ ದಿನಗಳಲ್ಲಿ ಆದಷ್ಟು ಬೇಗ ಸಭೆ ಕರೆದು ತ್ಯಾಜ್ಯ ನಿರ್ಮೂಲನೆ ಪರಿಹಾರ ಕಂಡುಕೊಳ್ಳಲಾಗುವುದು.
-ಪ್ರೇಮಾ, ಪಿಡಿಒ, ಪುದು ಗ್ರಾ.ಪಂ., ಫರಂಗಿಪೇಟೆ

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

‘ಪ್ರೇಮದ ಹೂಗಾರ ಈ ಹಾಡುಗಾರ… ಹೂ ನೀಡುತಾನೆ.. ಮುಳು ಬೇಡುತಾನೆ..’: ಹೋಗಿ ಬನ್ನಿ SPB

‘ಪ್ರೇಮದ ಹೂಗಾರ ಈ ಹಾಡುಗಾರ… ಹೂ ನೀಡುತಾನೆ.. ಮುಳು ಬೇಡುತಾನೆ..’: ಹೋಗಿ ಬನ್ನಿ SPB

ಎಸ್.ಪಿ.ಬಾಲಸುಬ್ರಹ್ಮಣ್ಯಂ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸಂತಾಪ

ಎಸ್.ಪಿ.ಬಾಲಸುಬ್ರಹ್ಮಣ್ಯಂ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸಂತಾಪ

ಎಸ್‍ಪಿಬಿ ಎಂಬ ಸ್ವರ ಮಾಣಿಕ್ಯ: ಹರಿಕಥೆ ದಾಸರ ಮಗ ಗಾನ ಸರಸ್ವತಿಯ ದಾಸನಾದ ಹಿನ್ನಲೆ

ಎಸ್‍ಪಿಬಿ ಎಂಬ ಸ್ವರ ಮಾಣಿಕ್ಯ: ಹರಿಕಥೆ ದಾಸರ ಮಗ ಗಾನ ಸರಸ್ವತಿಯ ದಾಸನಾದ ಹಿನ್ನಲೆ

ಸರ್ಕಾರಿ ಗೌರವಗಳೊಂದಿಗೆ ಸ್ವಕ್ಷೇತ್ರದಲ್ಲಿ ಶಾಸಕ ನಾರಾಯಣರಾವ್ ಅಂತ್ಯಕ್ರಿಯೆ

ಸರ್ಕಾರಿ ಗೌರವಗಳೊಂದಿಗೆ ಸ್ವಕ್ಷೇತ್ರದಲ್ಲಿ ಶಾಸಕ ನಾರಾಯಣರಾವ್ ಅಂತ್ಯಕ್ರಿಯೆ

ಫಲಿಸದ ಅಭಿಮಾನಿಗಳ ಹಾರೈಕೆ ; ಗಾನ ನಿಧಿ ಎಸ್.ಪಿ. ಬಾಲಸುಬ್ರಮಣ್ಯಂ ಸ್ವರ ಲೀನ

ಫಲಿಸದ ಅಭಿಮಾನಿಗಳ ಹಾರೈಕೆ ; ಗಾನ ನಿಧಿ ಎಸ್.ಪಿ. ಬಾಲಸುಬ್ರಮಣ್ಯಂ ಸ್ವರ ಲೀನ

ಬಿಹಾರ ವಿಧಾನಸಭೆ ಚುನಾವಣೆಗೆ ದಿನಾಂಕ ನಿಗದಿ

ಬಿಹಾರ ವಿಧಾನಸಭೆ ಚುನಾವಣೆಗೆ ದಿನಾಂಕ ನಿಗದಿ: ಅ.28 ರಿಂದ ನ. 7ವರಗೆ 3 ಹಂತದಲ್ಲಿ ಮತದಾನ

ಸಚಿನ್‌ ಪ್ರತಾಪ್

ರಾ. ಕಬಡ್ಡಿ ಸಂಭಾವ್ಯ ತಂಡಕ್ಕೆ ಆಯ್ಕೆಯಾಗಿದ್ದ ರಾಜ್ಯದ ಆಟಗಾರನಿಗೆ ತರಬೇತಿಗಿಲ್ಲ ಆಹ್ವಾನ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ತೋಟದ ನಡುವೆ ಸಾಗುವ ಮಿನಿ ಟಿಪ್ಪರ್ ಆವಿಷ್ಕಾರ ಮಾಡಿದ ಪಾಲ್ತಾಡಿಯ ಯುವಕ

udayavani youtube

Udupi Krishna temple to be open for public from September 28 | Udayavani

udayavani youtube

ಕೋವಿಡ್ ‌ಕಾಲದಲ್ಲಿ ರಸ್ತೆ ರಾಜಕಾರಣ: ಪ್ರತಿಕ್ರಿಯಿಸಿದ ಸಂತ ಅಲೋಶಿಯಸ್ ಸಂಸ್ಥೆ

udayavani youtube

ಮಂಗಳೂರು ನಗರದ ಲೈಟ್ ಹೌಸ್ ರೋಡ್ ಗೆ ‘ಮುಲ್ಕಿ ಸುಂದರರಾಮ ಶೆಟ್ಟಿ ರಸ್ತೆ’ ಎಂದು ಮರುನಾಮಕರಣ

udayavani youtube

District Excise Department seized Millions worth of Marijuana | Udayavaniಹೊಸ ಸೇರ್ಪಡೆ

ಹಳ್ಳಿಗಳಿಗೆ ಕುಡಿವ ನೀರು ಪೂರೈಸಿ

ಹಳ್ಳಿಗಳಿಗೆ ಕುಡಿವ ನೀರು ಪೂರೈಸಿ

‘ಪ್ರೇಮದ ಹೂಗಾರ ಈ ಹಾಡುಗಾರ… ಹೂ ನೀಡುತಾನೆ.. ಮುಳು ಬೇಡುತಾನೆ..’: ಹೋಗಿ ಬನ್ನಿ SPB

‘ಪ್ರೇಮದ ಹೂಗಾರ ಈ ಹಾಡುಗಾರ… ಹೂ ನೀಡುತಾನೆ.. ಮುಳು ಬೇಡುತಾನೆ..’: ಹೋಗಿ ಬನ್ನಿ SPB

ಎಸ್.ಪಿ.ಬಾಲಸುಬ್ರಹ್ಮಣ್ಯಂ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸಂತಾಪ

ಎಸ್.ಪಿ.ಬಾಲಸುಬ್ರಹ್ಮಣ್ಯಂ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸಂತಾಪ

ಎಸ್‍ಪಿಬಿ ಎಂಬ ಸ್ವರ ಮಾಣಿಕ್ಯ: ಹರಿಕಥೆ ದಾಸರ ಮಗ ಗಾನ ಸರಸ್ವತಿಯ ದಾಸನಾದ ಹಿನ್ನಲೆ

ಎಸ್‍ಪಿಬಿ ಎಂಬ ಸ್ವರ ಮಾಣಿಕ್ಯ: ಹರಿಕಥೆ ದಾಸರ ಮಗ ಗಾನ ಸರಸ್ವತಿಯ ದಾಸನಾದ ಹಿನ್ನಲೆ

ಸರ್ಕಾರಿ ಗೌರವಗಳೊಂದಿಗೆ ಸ್ವಕ್ಷೇತ್ರದಲ್ಲಿ ಶಾಸಕ ನಾರಾಯಣರಾವ್ ಅಂತ್ಯಕ್ರಿಯೆ

ಸರ್ಕಾರಿ ಗೌರವಗಳೊಂದಿಗೆ ಸ್ವಕ್ಷೇತ್ರದಲ್ಲಿ ಶಾಸಕ ನಾರಾಯಣರಾವ್ ಅಂತ್ಯಕ್ರಿಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.