ಹಿಂದೂ ಹೆಸರಿನಲ್ಲಿ ಓಡಾಡಿಕೊಂಡಿದ್ದ ಶಾರೀಕ್ ನನ್ನು ಟ್ರೇಸ್ ಮಾಡುವುದು ಕಷ್ಟವಾಗಿತ್ತು: ಆರಗ

Team Udayavani, Nov 23, 2022, 1:38 PM IST

ಹಿಂದೂ ಹೆಸರಿನಲ್ಲಿ ಓಡಾಡಿಕೊಂಡಿದ್ದ ಶಾರೀಕ್ ನನ್ನು ಟ್ರೇಸ್ ಮಾಡುವುದು ಕಷ್ಟವಾಗಿತ್ತು: ಆರಗ

ಮಂಗಳೂರು: ಗೋಡೆ ಬರಹ ಪ್ರಕರಣದಲ್ಲಿ ಆರೋಪಿಯಾಗಿದ್ದ ಶಾರೀಕ್ ಹಿಂದೂ ಹೆಸರಿನಲ್ಲಿ, ಐಡಿ ಮಾಡಿಕೊಂಡು ಓಡಾಡುತ್ತಿದ್ದ. ಹೀಗಾಗಿ ಅವನ ಮೇಲೆ ಅನುಮಾನ ಬಂದಿರಲಿಲ್ಲ. ಅಲ್ಲದೆ ಪದೇ ಪದೇ ಸ್ಥಳ ಬದಲಾವಣೆ ಮಾಡುತ್ತಿದ್ದ. ಹೀಗಾಗಿ ಟ್ರೇಸ್ ಮಾಡುವುದು ಕಷ್ಟವಾಗಿತ್ತು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳೂರು ಕುಕ್ಕರ್ ಬಾಂಬ್ ಪ್ರಕರಣದ ಆರೋಪಿ ಶಾರೀಕ್ ಜಾಮೀನಿನ ಮೂಲಕ ಹೊರಬಂದ ಬಳಿಕ ತೀರ್ಥಹಳ್ಳಿಯ ಕೆಲವು ದಿನದವರೆಗೆ ಪೊಲೀಸ್ ಕಣ್ಣಿಟ್ಟಿದ್ದರು. ಆದರೆ ನಂತರ ತಪ್ಪಿಸಿಕೊಂಡಿದ್ದ. ಆತ ಬೇರೆ ರಾಜ್ಯಗಳಲ್ಲಿ ಸಂಚರಿಸಿದ್ದ ಎಂದರು.

ಪ್ರಕರಣದ ತನಿಖೆಯನ್ನು ಎನ್ ಐಎಗೆ ಹಸ್ತಾಂತರಿಸುವ ಬಗ್ಗೆ ಒಂದೆರಡು ದಿನಗಳಲ್ಲಿ ನಿರ್ಣಯಯವಾಗಲಿದೆ. ಮಂಗಳೂರಿನಲ್ಲಿ ಎನ್ ಐಎ ಘಟಕ ಸ್ಥಾಪಿಸಬೇಕೆಂಬ ಬೇಡಿಕೆ ಬಗ್ಗೆ ಈಗಾಗಲೆ ಕೇಂದ್ರ ಸರಕಾರದ ಗಮನಕ್ಕೆ ತರಲಾಗಿದೆ ಎಂದರು.

ತೀರ್ಥಹಳ್ಳಿ ಟೆರರಿಸ್ಟ್ ಹಬ್ ಆಗುತ್ತಿದೆಯೇ ಎಂಬ ಪ್ರಶ್ನೆ ಉತ್ತರಿಸಿದ ಗೃಹ ಸಚಿವರು, ತೀರ್ಥಹಳ್ಳಿಯು ಸಾಹಿತಿ, ರಾಜಕಾರಣಿಗಳನ್ನು ಕೊಟ್ಟ ತಾಲೂಕು. ಕರಾವಳಿ ಕೇರಳದ ಲಿಂಕ್ ನಿಂದ ಕೆಲ ಯುವಕರು ಈ ರೀತಿ ಮಾಡುತ್ತಿದ್ದಾರಷ್ಟೇ ಎಂದರು.

ಇದನ್ನೂ ಓದಿ:ಕುಕ್ಕೆ ಸುಬ್ರಹ್ಮಣ್ಯಕ್ಕೆ ಕ್ರಿಕೆಟಿಗ ಕೆ.ಎಲ್.ರಾಹುಲ್ ಭೇಟಿ

ಆರೋಪಿ ಶಾರೀಕ್ ನ ಆರೋಗ್ಯ ಸುಧಾರಣೆಗೆ ಹೆಚ್ಚಿನ ಗಮನ ನೀಡುವ ಬಗ್ಗೆ ವೈದ್ಯರೊಂದಿಗೆ ಮಾತನಾಡಿದ್ದೇನೆ. ಎಂಟು ಮಂದಿ ತಜ್ಞ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಆತ ಗುಣಮುಖನಾದ ಮೇಲೆ ಹೆಚ್ಚಿನ ವಿಚಾರಣೆ ನಡೆಯಲಿದೆ ಎಂದರು.

ಗಾಯಾಳು ರಿಕ್ಷಾ ಚಾಲಕರ ಚಿಕಿತ್ಸಾ ವೆಚ್ಚವನ್ನು ಸಂಪೂರ್ಣವಾಗಿ ಸರಕಾರವೇ ಭರಿಸಲಿದೆ. ಅವರ ಕುಟುಂಬಕ್ಕೆಆರ್ಥಿಕ ಸಹಾಯ ಕೂಡ ಸರಕಾರದಿಂದ ಒದಗಿಸುವ ಬಗ್ಗೆ ಬೆಂಗಳೂರಿಗೆ ತೆರಳಿದ ಮೇಲೆ ನಿರ್ಣಯ ತೆಗೆದುಕೊಳ್ಳುತ್ತೇವೆ ಎಂದರು.

ಭಯಾನಕ ಘಟನೆಯೊಂದು ತಪ್ಪಿದೆ. ಭಯೋತ್ಪಾದನಾ ಕೃತ್ಯ ನಿರ್ಮೂಲನೆಗೆ ಕೇಂದ್ರ ರಾಜ್ಯ ಸರಕಾರಗಳು ಗಮನ ಹರಿಸಿದೆ. ಇತ್ತೀಚಿನ ವರ್ಷಗಳಲ್ಲಿ ಇಂತಹ ಕೃತ್ಯಗಳು ಕಡಿಮೆಯಾಗಿವೆ ಎಂದು ಗೃಹ ಸಚಿವರು ಹೇಳಿದರು.

ಶಿಘ್ರದಲ್ಲಿ ಎನ್ಐಎಗೆ

ಆರೋಪಿಗಳ ಹಣದ ಮೂಲದ ಬಗ್ಗೆ ತನಿಖೆ‌ ನಡೆಯುತ್ತಿದೆ. ಅದನ್ನು ‌ತನಿಖೆ ಮಾಡುತ್ತಿದ್ದೇವೆ. ಆದರೆ ಈಗ ಅದನ್ನು ಬಹಿರಂಗ ಪಡಿಸಲು ಸಾಧ್ಯವಿಲ್ಲ. ಸದ್ಯ ಆರೋಪಿಯ ಪ್ರಾಣ ಉಳಿಸಬೇಕು, ಅದು ನಮಗೆ ಅತೀ ಅಗತ್ಯ. ಅವನ ವಿಚಾರಣೆ ಬಳಿಕ ಮತ್ತಷ್ಟು ಸತ್ಯ ಹೊರಗೆ ಬರುತ್ತದೆ ಎಂದು ಡಿಜಿಪಿ ಪ್ರವೀಣ್ ಸೂದ್ ಹೇಳಿದರು.

ಎನ್ಐಎ ಮತ್ತು ಕೇಂದ್ರದ ತನಿಖಾ ಸಂಸ್ಥೆಗಳು ನಮ್ಮ ಜೊತೆ ಇದೆ. ಅಧಿಕೃತವಾಗಿ ಸದ್ಯದಲ್ಲೇ ಈ ಪ್ರಕರಣ ಎನ್ ಐಎಗೆ ಹಸ್ತಾಂತರವಾಗಲಿದೆ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಲೆಟರ್ ಕೂಡ ಕೊಡಲಾಗಿದೆ ಎಂದರು.

ತಮಿಳುನಾಡು, ಕೇರಳ ಎಲ್ಲಾ ಕಡೆಗಳಲ್ಲೂ ನಮ್ಮ ತನಿಖೆಯಾಗುತ್ತಿದೆ. ನಮ್ಮ ಪೊಲೀಸರು ಕೂಡ ಈ ಬಗ್ಗೆ ವಿಚಾರಣೆ ಮುಂದುವರೆಸ್ತಾರೆ. ನಾವು ಹಲವು ಜನರನ್ನ ವಶಕ್ಕೆ ಪಡೆಯುತ್ತೇವೆ, ಆದರೆ ಅವರು ಆರೋಪಿಗಳೇ ಆಗಿರಲ್ಲ. ಅವರನ್ನು ‌ನಾವು ಬಂಧಿಸುತ್ತಿಲ್ಲ, ವಿಚಾರಣೆಗೆ ಕರೆ ತರುತ್ತೇವೆ ಅಷ್ಟೇ. ಬೆಂಗಳೂರು ಸೇರಿ ಎಂಟು ಕಡೆ ದಾಳಿ ನಡೆಸಿ ನಾಲ್ಕು ಜನರನ್ನ ವಶಕ್ಕೆ ಪಡೆದಿದ್ದೇವೆ ಅಷ್ಟೇ. ಆರೋಪಿಗಳು ಅಂತ ಯಾರನ್ನೂ ನಾವು ವಶಕ್ಕೆ ಪಡೆದಿಲ್ಲ. ನಾವು ಎಲ್ಲಾ ರೀತಿಯಿಂದ ತನಿಖೆ ಮಾಡುತ್ತಿದ್ದೇವೆ ಎಂದರು.

ಟಾಪ್ ನ್ಯೂಸ್

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Amit Shah

Modi 3.0 ಅವಧಿಯಲ್ಲಿ ನಕ್ಸಲ್‌ ಮುಕ್ತ ದೇಶ: ಅಮಿತ್‌ ಶಾ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.