
ಉಳ್ಳಾಲ: ಹೆಜ್ಜೇನು ದಾಳಿಗೆ ಬಾವಿಯಲ್ಲಿ ಅಡಗಿ ಕುಳಿತ 79 ರ ವೃದ್ಧ
ಇಬ್ಬರು ಗಂಭೀರ , ಓರ್ವನಿಗೆ ಗಾಯ
Team Udayavani, Mar 30, 2023, 4:31 PM IST

ಉಳ್ಳಾಲ: ಹೆಜ್ಜೇನು ದಾಳಿಯಿಂದ ತಪ್ಪಿಸಲು 79ರ ವೃದ್ಧ ಬಾವಿಗಿಳಿದು ಪಾರಾದರೆ, ಉಳಿದ ಇಬ್ಬರು ಗಂಭೀರ ಹಾಗೂ ಓರ್ವ ಗಾಯಗೊಂಡಿರುವ ಘಟನೆ ನರಿಂಗಾನ ಗ್ರಾಮದ ಬೋಳ ಎಂಬಲ್ಲಿ ನಡೆದಿದೆ.
ಉಳ್ಳಾಲ ತಾಲೂಕಿನ ನರಿಂಗಾನ ಗ್ರಾಮದ ಬೋಳ ನಿವಾಸಿ ರಾಬರ್ಟ್ ಕುಟಿನ್ಹ(79) ಬಾವಿಗೆ ಇಳಿದು ಪಾರಾದರೆ, ಅವರ ಪುತ್ರ ರಾಯಲ್ ಕುಟಿನ್ಹ(39)ಹೆಜ್ಜೇನು ದಾಳಿಗೆ ತುತ್ತಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಒಳರೋಗಿಗಳಾಗಿ ದಾಖಲಾಗಿದ್ದಾರೆ.
ಇದೇ ಸಂದರ್ಭ ಅಣ್ಣನ ಕೂಗು ಕೇಳಿ ಧಾವಿಸಿದ ರಾಬರ್ಟ್ ಕುಟಿನ್ಹ ಅವರ ಸಹೋದರ ಜೋಸೆಫ್ ಕುಟಿನ್ಹ ಅವರಿಗೂ ಗಾಯಗಳಾಗಿದ್ದು ಸದ್ಯ ಚೇತರಿಸಿಕೊಂಡಿದ್ದಾರೆ. ಜೋಸೆಫ್ ಕುಟಿನ್ಹ ಅವರ ಪುತ್ರ ಅಖಿಲ್ ಅವರಿಗೂ ಹೆಜ್ಜೇನು ಕಡಿದಿದೆ.
ರಾಬರ್ಟ್ ಕುಟಿನ್ಹ ಅವರು ಬೆಳಗ್ಗೆ ಒಣಗಿದ ಬಟ್ಟೆ ತೆಗೆಯಲೆಂದು ಮನೆಯ ಮಹಡಿ ಹತ್ತುವಾಗ ಘಟನೆ ಸಂಭವಿಸಿದೆ.
ಇದನ್ನೂ ಓದಿ: ಬುಡಕಟ್ಟು ಕುಟುಂಬಕ್ಕೆ ಥಿಯೇಟರ್ ಪ್ರವೇಶ ನಿರಾಕರಣೆ: ಥಿಯೇಟರ್ ವಿರುದ್ದ ನೆಟ್ಟಿಗರು ಗರಂ
ದಾಳಿಯಿಂದ ತಡೆಯಲಾರದೆ ಕೂಗಿಕೊಂಡಾಗ ರಕ್ಷಣೆಗೆಂದು ಧಾವಿಸಿದ ಪುತ್ರ ರಾಯಲ್ ಹೆಜ್ಜೇನುಗಳು ಕಡಿದಿವೆ. ಮಗನ ಸಹಾಯದಿಂದ ಮಹಡಿಯಿಂದ ಪವಾಡ ಸದೃಶ ಇಳಿದು ಪಾರಾದರೂ ಅವರಿಬ್ಬರ ಕೂಗು ಕೇಳಿದ ಜೋಸೆಫ್ ಕುಟಿನ್ಹ ಹಾಗೂ ಅಖಿಲ್ ರಕ್ಷಣೆಗೆ ಧಾವಿಸಿದಾಗ ಅವರಿಗೂ ನೊಣಗಳು ಕಡಿದಿವೆ. ರಾಬರ್ಟ್ ಕುಟಿನ್ಹ ಅವರಿಗೆ ಸುಮಾರು ನೂರೈವತ್ತು ಕಡೆ ಗಾಯಗಳಾಗಿದ್ದು ಮಹಡಿಯಿಂದ ಇಳಿದರೂ ಹೆಜ್ಜೇನು ಬೆಂಬಿಡದಾಗ ಬೇರೆ ದಾರಿಕಾಣದೆ ಕಟ್ಟಕಡೆಗೆ ಸಮೀಪದ ಬಾವಿಗೆ ಇಳಿದು ನೀರಿನಲ್ಲಿ ಮುಳುಗಿ ಸುಮಾರು ಹೊತ್ತಿನ ಬಳಿಕ ಮೇಲೆದ್ದು ಬಂದು ಜೀವ ಉಳಿಸಿಕೊಂಡಿದ್ದಾರೆ. ಪುತ್ರ ರಾಯಲ್ ಗೂ ಸುಮಾರು ಇಪ್ಪತ್ತೆರಡು ಕಡೆ ಗಾಯಗಳಾಗಿದ್ದು ಮುಖ ನೋವಿನಿಂದ ಊದಿಕೊಂಡಿದೆ. ಮನೆಯ ಸಿಟ್ ಔಟ್ ನಲ್ಲಿ ರಾಯಲ್ ಪತ್ನಿ ಹಾಗೂ ಮಗು ಕುಳಿತುಕೊಂಡಿದ್ದರೂ ಮನೆ ಮಂದಿ ಎಚ್ಚರಿಸಿದ ಕಾರಣ ಮನೆಯ ಕೊಠಡಿಯೊಳಗೆ ರಕ್ಷಣೆ ಪಡೆದಿದ್ದು ಕಿಟಕಿಗಳಿಗೆ ನೆಟ್ ಹಾಕಿದ್ದರಿಂದ ಅವರುಗಳು ಅಪಾಯದಿಂದ ಪಾರಾಗಿದ್ದಾರೆ . ಗಾಯಾಳುಗಳಿಗೆ ಚಿಕಿತ್ಸೆ ಮುಂದುವರಿದಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು
