ವ್ಯಾಪ್ತಿ ಮೀರಿ ಸೇವೆ ನೀಡುತ್ತಿರುವ ಆಸ್ಪತ್ರೆ 


Team Udayavani, Jan 10, 2018, 11:18 AM IST

10–Jan-8.jpg

ಮೂಲ್ಕಿ : ಜಿಲ್ಲೆ ಬದಲಾಯ್ತು, ತಾಲೂಕು ಬದಲಾಯ್ತು ಆದರೆ ಪಶುಸಂಗೋಪನಾ ಇಲಾಖೆಯ ಪಶು ವೈದ್ಯಾಲಯ ಮಾತ್ರ ಅದೇ ಇದೆ.

ಹೌದು ಸುಮಾರು ಆರು ದಶಕಗಳ ಹಿಂದೆ ಅವಿಭಜಿತ ದ.ಕ. ಜಿಲ್ಲೆಯ ವ್ಯಾಪ್ತಿಗೆ ಸೇರಿದ್ದ ಮೂಲ್ಕಿ ಸಮೀಪದ ಕಾರ್ನಾಡಿನಲ್ಲಿದ್ದ ಪಶು ಸಂಗೋಪನಾ ಇಲಾಖೆಯ ಪಶು ವೈದ್ಯಾಲಯ ಮಂಗಳೂರು ತಾಲೂಕು ಹಾಗೂ ದ.ಕ. ಜಿಲ್ಲೆಯ ವ್ಯಾಪ್ತಿಯಲ್ಲಿದ್ದರೂ, ಉಡುಪಿ ಜಿಲ್ಲೆಯ ಜನರಿಗೆ ಸೇವೆಯನ್ನು ಒದಗಿಸುತ್ತಿದೆ. ಉಡುಪಿ ಜಿಲ್ಲೆಯ ಪಡುಬಿದ್ರಿ, ಹೆಜಮಾಡಿ ಮತ್ತು ಪಲಿಮಾರು ಪ್ರದೇಶದ ಜನರು ತಮ್ಮ ಸಾಕು ಪ್ರಾಣಿ, ಜಾನುವಾರುಗಳಿಗೆ ಚಿಕಿತ್ಸೆ ಹಾಗೂ ಅಗತ್ಯ ಸೌಲಭ್ಯ ಪಡೆಯಲು ಬೇರೆ ದಾರಿಯಿಲ್ಲದೆ ಇದೇ ಆಸ್ಪತ್ರೆಯನ್ನು ಅವಲಂಬಿಸುವಂತಾಗಿದೆ. ಕಾರಣ ಪಶು ವೈದ್ಯಕೀಯ ಚಿಕಿತ್ಸೆಗೆ ಬೇಕಾದ ಕೇಂದ್ರಗಳನ್ನು ಈವರೆಗೂ ತೆರೆದಿಲ್ಲ.

ವ್ಯಾಪ್ತಿ ಬದಲಾದರೂ ಜನ ಬರುತ್ತಾರೆ
ಹಿಂದೆ ಇಲ್ಲಿ ಸಾಕಷ್ಟು ವ್ಯವಸ್ಥೆ ಇತ್ತು. ಸಿಬಂದಿ, ಔಷಧವನ್ನೂ ಇಲಾಖೆ ಒದಗಿಸುತ್ತಿತ್ತು. ಆದರೆ ಈಗ ಈ ಆಸ್ಪತ್ರೆಯ ವ್ಯಾಪ್ತಿ ಕೇವಲ ಮೂಲ್ಕಿ ನ.ಪಂ., ಕಿಲ್ಪಾಡಿ ಮತ್ತು ಶಿಮಂತೂರು ಗ್ರಾಮಗಳು ಮಾತ್ರ. ಹೀಗಾಗಿ ಔಷಧ ಸೌಲಭ್ಯ, ಸಿಬಂದಿಯ ಕೊರತೆಯೂ ಕಾಡುತ್ತಿದೆ. ಆದರೆ ಹಿಂದಿನಿಂದಲೂ ಇಲ್ಲಿಗೆ ಬರುತ್ತಿದ್ದವರಿಗೆ ಬೇರೆ ವ್ಯವಸ್ಥೆಯಾಗದ ಕಾರಣ
ಜನರು ಇಲ್ಲಿಗೆ ಬಂದು ಅಗತ್ಯ ಸೇವೆ ಪಡೆಯುತ್ತಿದ್ದಾರೆ.

ಹಿಂದೆ ಸುಮಾರು 10- 15 ಗ್ರಾಮಗಳು ಈ ಆಸ್ಪತ್ರೆಯ ವ್ಯಾಪ್ತಿಗೆ ಸೇರಿದ್ದು, ವೈದ್ಯರ ಸೇವೆ ನಿರಂತರವಾಗಿ ನಡೆಯುತ್ತಿತ್ತು. ಬೇಕಾದಷ್ಟು ಸಿಬಂದಿ, ವ್ಯವಸ್ಥೆಗಳೆಲ್ಲ ಇದ್ದವು. ಆದರೆ ಈಗ ಇಲ್ಲಿ ಒಬ್ಬರು ವೈದ್ಯರು ಮತ್ತು ತಾತ್ಕಾಲಿಕ ಹೊರ ಗುತ್ತಿಗೆಯ ಒಬ್ಬರು ಸಹಾಯಕ ಸಿಬಂದಿ ಮಾತ್ರ ಇದ್ದಾರೆ. ಜತೆಗೆ ನಿತ್ಯ ವರದಿಗಾಗಿ ಸರಕಾರ ಕಂಪ್ಯೂಟರ್‌ ಒದಗಿಸಿದ್ದು, ಇದಕ್ಕೂ ಸಿಬಂದಿ ನೇಮಕವಾಗಿಲ್ಲ.

ಸರಕಾರ ಜಿಲ್ಲೆಯನ್ನು ಮಾತ್ರವಲ್ಲ, ಈ ಆಸ್ಪತ್ರೆಯನ್ನೂ ವಿಂಗಡಣೆ ಮಾಡಿದೆ. ಎಲ್ಲವೂ ಕಡತದಲ್ಲಿ ದಾಖಲಾಗಿದೆ.
ಆದರೆ ಪಡುಬಿದ್ರಿ, ಹೆಜಮಾಡಿ, ಪಲಿಮಾರು ಮಾತ್ರವಲ್ಲ ಹಳೆಯಂಗಡಿ, ಪಡುಪಣಂಬೂರು, ಸಸಿಹಿತ್ಲು ಭಾಗದ
ಜನರು ತಮ್ಮ ಮನೆಯ ಪ್ರಾಣಿಗಳ ಚಿಕಿತ್ಸೆಗಾಗಿ ಇದೇ ಆಸ್ಪತ್ರೆಯನ್ನು ಅವಲಂಬಿಸಿದ್ದಾರೆ. ಹೆಚ್ಚಾಗಿ ವೈದ್ಯರು
ಚಿಕಿತ್ಸೆ ನೀಡಲು ಮನೆಮನೆಗೆ ತೆರಳುತ್ತಾರೆ. ಆದರೆ ಇಲ್ಲಿ ಮಾತ್ರ ಜನರು ಆಸ್ಪತ್ರೆಗೆ ಬಂದು ಗಂಟೆಗಟ್ಟಲೆ ಕಾಯುತ್ತಾರೆ. ಸಿಬಂದಿ ಕೊರತೆ ಇದ್ದರೂ, ಇಲ್ಲಿನ ವೈದ್ಯರು ಈ ಬಗ್ಗೆ ತಲೆಕೆಡಿಸಿಕೊಳ್ಳದೆ ತಮ್ಮಿಂದ ಆಗುವಷ್ಟು ಸೇವೆಯನ್ನು ನೀಡುತ್ತಿದ್ದಾರೆ.

ಜಾನುವಾರುಗಳಿಗೆ ಬರುವ ಕಾಲುಬಾಯಿ ರೋಗ, ಪಳಕಳೆ ರೋಗದ ಲಸಿಕೆ ಮತ್ತು ಮದ್ದುಗಳ ಆವಶ್ಯಕತೆಯಿರುವಷ್ಟು ಒದಗಿಸಲಾಗುತ್ತಿದೆ. ಕೃತಕ ಗರ್ಭಧಾರಣೆ ವ್ಯವಸ್ಥೆಗೂ ಸಹಾಯಕರು ಇಲ್ಲದೆ ತೊಂದರೆಯಾಗುತ್ತಿದೆ. ಜಾನುವಾರು ಅಧಿಕಾರಿ ಎಂಬ ಹುದ್ದೆಗೆ ಸಿಬಂದಿ ಇಲ್ಲದೆ ವೈದ್ಯರೇ ಚಿಕಿತ್ಸೆಗಾಗಿ ಹೊರಹೋಗುವ ಸಂದರ್ಭದಲ್ಲಿ ಆಸ್ಪತ್ರೆಗೆ ಬೀಗ ಹಾಕಿ ತೆರಳಬೇಕಾಗುತ್ತದೆ. ಬಂದ ಜನರು ವೈದ್ಯರು ವಾಪಸ್‌ ಬರುವವರೆಗೆ ಕಾಯುವುದು ಅನಿವಾರ್ಯವಾಗಿದೆ.

ಸರಕಾರದ ಯೋಜನೆಗಳು
ಸರಕಾರದ ವಿವಿಧ ಯೋಜನೆಯಡಿ ಪಶುಭಾಗ್ಯ ಕಾರ್ಯಕ್ರಮದಡಿ ಈ ವರ್ಷ 8 ದನ ಹಾಗೂ 3 ಆಡುಗಳು ಸರಕಾರದಿಂದ ಮಂಜೂರಾಗಿದ್ದು ಇದನ್ನು ನಿಯಮದಂತೆ ಆಸ್ಪತ್ರೆಯ ವ್ಯಾಪ್ತಿಯೊಳಗೆ ಆರ್ಹರಿಗೆ ವಿತರಿಸಲಾಗಿದೆ. ಈ ವ್ಯವಸ್ಥೆಯಲ್ಲಿ ಬ್ಯಾಂಕ್‌ ಹಾಗೂ ಸರಕಾರದ ನಿಯಮದಡಿ ಫ‌ಲಾನುಭವಿಗಳಿಗೆ ಯೋಜನೆಯ ಲಾಭ ಪಡೆಯಲು ಸಾಧ್ಯವಿದೆ. ಸಾಲ ವ್ಯವಸ್ಥೆಯಲ್ಲಿ ಎಸ್‌.ಸಿ. ಮತ್ತು ಎಸ್‌.ಟಿ. ಯವರಿಗೆ ಜಾನುವಾರು ಖರೀದಿಗೆ ಶೇ. 50ರಷ್ಟು ಸಮಪಾಲು ಸರಕಾರ ಸಬ್ಸಿಡಿ ರೂಪದಲ್ಲಿ ಕೊಟ್ಟರೆ ಇತರರಿಗೆ ಶೇ. 25ರಷ್ಟು ಸಬ್ಸಿಡಿ ನೀಡಲಾಗುತ್ತದೆ. ಸುಮಾರು 100 ಚೀಲ ಮೇವಿಗಾಗಿ ಜೋಳದ ಬೀಜಗಳನ್ನೂ ಹುಲ್ಲು ಬೆಳೆಸಲು ರೈತರಿಗೆ ಉಚಿತವಾಗಿ ವಿತರಿಸಲಾಗಿದೆ. ಈ ಯೋಜನೆಯು ಗ್ರಾಮ ಸಭೆಯಲ್ಲಿ ಹೆಚ್ಚು ಪ್ರಚಾರವಾಗಿದ್ದರಿಂದ ಹೆಚ್ಚಿನ ರೈತರು ನೇರವಾಗಿ ಆಸ್ಪತ್ರೆಗೆ ಬಂದು ಮಾಹಿತಿ ಪಡೆಯುತ್ತಿದ್ದಾರೆ.

15ಕ್ಕೂ ಹೆಚ್ಚು ಗ್ರಾಮ
ಇಲಾಖೆ ನಿರ್ದೇಶನದಂತೆ ಮೂಲ್ಕಿ ನ.ಪಂ. ವ್ಯಾಪ್ತಿಯ ಕಿಲ್ಪಾಡಿ, ಶಿಮಂತೂರು ಗ್ರಾಮಗಳು ಆಸ್ಪತ್ರೆಯ ವ್ಯಾಪ್ತಿಯಲ್ಲಿದ್ದರೂ ಪ್ರಸ್ತುತ ಸುಮಾರು 15ಕ್ಕೂ ಹೆಚ್ಚು ಗ್ರಾಮದ ಜನರು ಇದೇ ಆಸ್ಪತ್ರೆಯನ್ನು ಅವಲಂಬಿಸಿದ್ದಾರೆ.
ಇಲಾಖೆಯಿಂದ ಹೈನುಗಾರಿಕೆಯ ಸವಲತ್ತುಗಳ ಬಗ್ಗೆ ಬಹಳಷ್ಟು ಪ್ರಚಾರ ಕಾರ್ಯ ನಡೆಯುತ್ತಿದೆ. ಆದರೆ,
ಆಸ್ಪತ್ರೆ ವ್ಯಾಪ್ತಿಗೆ ಸಾಕಾಗುವಷ್ಟು ಮಾತ್ರ ಔಷಧಗಳು ಪೂರೈಕೆಯಾಗುತ್ತಿದ್ದು, ಹೆಚ್ಚಿನ ಪ್ರಮಾಣದಲ್ಲಿ ಔಷಧದ
ಕೊರತೆಯೂ ಕಾಡುತ್ತಿದೆ. ಜತೆಗೆ ಸಿಬಂದಿಇಲ್ಲದೆಯೂ ಸಮಸ್ಯೆಯಾಗುತ್ತಿದೆ.

ಸಿಬಂದಿ ನೇಮಕ ಮಾಡಲಿ
ಜಾನುವಾರುಗಳ ಸೇವೆಯು ಮನಸ್ಸಿಗೆ ಹಿತಕೊಡುವ ಕಾರ್ಯ. ಹೀಗಾಗಿ ನಮ್ಮ ಆಸ್ಪತ್ರೆ ವ್ಯಾಪ್ತಿಯ ಗ್ರಾಮ
ಹಾಗೂ ಉಳಿದೆಡೆಗಳಿಂದ ಬರುವ ಜನರಿಗೂ ಸಹಕರಿಸಲು ಸಿದ್ಧರಿದ್ದೇವೆ. ಸರಕಾರ ಅಗತ್ಯ ಸಿಬಂದಿ ನೇಮಕ
ಮಾಡಬೇಕು. 
ಡಾ| ಕೆ.ಪಿ. ಪ್ರಸನ್ನ,
  ಆಸ್ಪತ್ರೆ ವೈದ್ಯಾಧಿಕಾರಿ

ಸರ್ವೋತ್ತಮ ಅಂಚನ್‌

ಟಾಪ್ ನ್ಯೂಸ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.