ರಾಜ್ಯದಲ್ಲಿ ಕಾಂಗ್ರೆಸ್‌ ಉಳಿಯಬೇಕಾದರೆ ಪರಮೇಶ್ವರ್‌ ಸಿಎಂ ಆಗಬೇಕು

Team Udayavani, Feb 3, 2017, 3:45 AM IST

Janardana-poojari.jpg

ಮಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಬದುಕುಳಿಯಬೇಕಾದರೆ ಕೆ.ಪಿ.ಸಿ.ಸಿ. ಅಧ್ಯಕ್ಷರಾಗಿರುವ ಡಾ| ಜಿ. ಪರಮೇಶ್ವರ್‌ ಮುಖ್ಯಮಂತ್ರಿಯಾಗಬೇಕು. ಅವರಿಗೆ ಮುಖ್ಯಮಂತ್ರಿಯಾಗುವ ಅರ್ಹತೆ ಇದೆ. ಜನ ಬೆಂಬಲವೂ ಇದೆ ಎಂದು ಕಾಂಗ್ರೆಸ್‌ ನಾಯಕ, ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ತಿಳಿಸಿದ್ದಾರೆ.

ಗುರುವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ದಲಿತ ನಾಯಕಧಿರೊಬ್ಬರು ಮುಖ್ಯಮಂತ್ರಿ ಆಗಬಾರಧಿದೇಕೆ ಎಂದು ಪ್ರಶ್ನಿಸಿದರು.

ಪಕ್ಷ  ಬಲವರ್ಧನೆಗೆ
ಬ್ರಹ್ಮ ಬರಬೇಕಾಗಿಲ್ಲ

ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಬಲಪಡಿಸಲು ಬ್ರಹ್ಮ ದೇವ ಬರಬೇಕಾಗಿಲ್ಲ. ಪಕ್ಷದ ಹಿರಿಯರು ಕೊಡುವ ಸಲಹೆಧಿಗಳನ್ನು ಮುಖ್ಯಮಂತ್ರಿ ಪಾಲಿಸಿದರೆ ಸಾಕು ಎಂದು ಪೂಜಾರಿ ತಿಳಿಸಿದರು.
 
ಇದು ಕಾರ್ಯಕರ್ತರು ಕಟ್ಟಿದ ಪಕ್ಷ. ನೀವು  ಕಟ್ಟಿದ್ದಲ್ಲ. ಕಾರ್ಯಕರ್ತರ ಸಲಹೆ ಆಲಿಸುವ ಹಾಗೂ ರಾಜ್ಯದ 6 ಕೋಟಿ ಜನರು ಬಯಸುತ್ತಿರುವುದು ಏನು ಎಂಬುದನ್ನು ಅರ್ಥ ಮಾಡಿಕೊಳ್ಳುವ ತಾಳ್ಮೆಯ ಮನೋಭಾವ ನಿಮ್ಮಲ್ಲಿರಬೇಕು ಎಂದು ಅವರು ಮುಖ್ಯಮಂತ್ರಿಗೆ ಸಲಹೆ ನೀಡಿದರು. 

ಕಾಂಗ್ರೆಸ್‌ಗೆ ರಾಜೀನಾಮೆ ನೀಡಿಧಿರುವ ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಅವರ ಜತೆ ಹೋಗಲು ಇನ್ನೂ ಕೆಲವರು ಸಿದ್ಧರಾಗಿದ್ದಾರಲ್ಲವೇ ಎಂಬ ಪ್ರಶ್ನೆಗೆ ಉತ್ತರಿಸಿದ ಪೂಜಾರಿ, ಇದು ಮುಖ್ಯಮಂತ್ರಿ ಅವರಿಗೆ ತಟ್ಟಿದ ಶನಿ ಕಾಟ ಎಂದು ನಾನು ಈ ಹಿಂದೆಯೇ ತಿಳಿಸಿದ್ದೇನೆ. ಶನಿ ಕಾಟ ಯಾರನ್ನೂ ಬಿಡುವುದಿಲ್ಲ  ಎಂದು ಹೇಳಿದರು. 

ಶಾಸಕ ಮೊದಿನ್‌ ಬಾವಾ
ಕ್ಷಮೆ ಯಾಚಿಸಲಿ

ಶಾಸಕ ಮೊದಿನ್‌ ಬಾವಾ ಅವರು ರಸ್ತೆ ದುರಸ್ತಿ ವಿಚಾರದಲ್ಲಿ ಕೆಎಐಡಿಬಿ ಅಧಿಕಾರಿಯೊಬ್ಬರನ್ನು ಏಕವಚನದಲ್ಲಿ ಬೈದು ನಿಂದಿಸಿದ್ದಾರೆ ಎನ್ನಲಾದ ಪ್ರಕರಣ ಸಾಮಾಜಿಕ ಜಾಲ ತಾಣದಲ್ಲಿ ವೈರಲ್‌ ಆಗಿ ಹರಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಜನಾರ್ದನ ಪೂಜಾರಿ, ಅದರ ಫಲವನ್ನು ಅವರು (ಶಾಸಕರು) ಅನುಭವಿಸುತ್ತಾರೆ. ತಪ್ಪು ಮಾಡುವುದು ಸಹಜ. ಆದ್ದರಿಂದ ಈ ಬಗ್ಗೆ ಅವರು ಜನತೆಯ ಕ್ಷಮೆ ಯಾಚಿಸಬೇಕು ಎಂದು ಹೇಳಿದರು. 

ಉದ್ಯಮಿಗಳಿಗೆ ಚಹಾಕೂಟ:
ಜೇಟ್ಲಿ ವಿರುದ್ಧ  ಟೀಕೆ

ವಿತ್ತ ಸಚಿವ ಅರುಣ್‌ ಜೇಟ್ಲಿ ಅವರು ಗುರುವಾರ ಬೆಳಗ್ಗೆ ಉದ್ಯಮಿಗಳಿಗೆ ಚಹಾ ಕೂಟ ಏರ್ಪಡಿಸಿರುವುದನ್ನು ಪೂಜಾರಿ ಟೀಕಿಸಿದರು. 

ಉದ್ಯಮಿಗಳನ್ನು ಚಹಾಕೂಟಕ್ಕೆ ಕರೆದು ಅವರಿಂದ ಅಹವಾಲು ಅಲಿಸಿದ ವಿತ್ತ ಸಚಿವರ ಕ್ರಮ ಸರಿಯಲ್ಲ. ಬದಲಾಗಿ ಅವರು ಹಳ್ಳಿಗಳಿಗೆ ಹೋಗಿ ರೈತರ ಮತ್ತು ಬಡವರ ಸಮಸ್ಯೆ ಆಲಿಸಬೇಕಿತ್ತು. ಬರಗಾಲದ ಪರಿಣಾಮ ಸಾಲ ಮರು ಪಾವತಿಸಲಾಗದೆ ರೈತರು ಆತ್ಮಹತ್ಯೆ ಮೊರೆ ಹೋಗುತ್ತಾರೆಯೇ ಹೊರತು ಬೇರೆ ಯಾವುದೇ ಕಾರಣದಿಂದ ಅಲ್ಲ. ರೈತರ ಸಾಲ ಮನ್ನಾ ಮಾಡುವ ಬಗ್ಗೆ ಬಜೆಟ್‌ನಲ್ಲಿ ಪ್ರಕಟಿಸಿದ್ದರೆ ರೈತರ ಆತ್ಮಹತ್ಯೆ ಪ್ರಮಾಣ ಕಡಿಮೆಯಾಗುತ್ತಿತ್ತು. ಪ್ರಧಾನಿ ಮೋದಿ ಬಾಯಿಯಲ್ಲಿ ಆಡುತ್ತಿರುವ ಮಾತುಗಳು ಕೃತಿಗಿಳಿಯಬೇಕಾಗಿತ್ತು ಎಂದು ಪೂಜಾರಿ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್‌ ನಾಯಕರಾದ ಕಳ್ಳಿಗೆ ತಾರಾನಾಥ ಶೆಟ್ಟಿ, ಉಮೇಶ್ಚಂದ್ರ, ಅರುಣ್‌ ಕುವೆಲ್ಲೊ, ಕರುಣಾಕರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Cyber Frauds:  ಸೈಬರ್‌ ವಂಚನೆ- 3 ವರ್ಷಗಳಲ್ಲಿ ಭಾರತೀಯರು ಕಳೆದುಕೊಂಡ ಹಣ 25,000 ಕೋಟಿ!

Cyber Frauds:  ಸೈಬರ್‌ ವಂಚನೆ- 3 ವರ್ಷಗಳಲ್ಲಿ ಭಾರತೀಯರು ಕಳೆದುಕೊಂಡ ಹಣ 25,000 ಕೋಟಿ!

11-chikkodi

Chikkodi: ವ್ಯಕ್ತಿಯ ಭೀಕರ ಕೊಲೆ; ಬೆಚ್ಚಿ ಬಿದ್ದ ಜನತೆ

Innanje Railway Station; A gold chain was stolen from a woman who was traveling from Madurai to Mumbai

Innanje Railway Station; ಮಧುರೈನಿಂದ ಮುಂಬಯಿಗೆ ತೆರಳುತ್ತಿದ್ದ ಮಹಿಳೆಯ ಚಿನ್ನದ ಸರ ಕಳವು

IND-W vs SA-W; 7000 ರನ್ ದಾಖಲೆ ಬರೆದ ಸ್ಮೃತಿ ಮಂಧನಾ; ನಾಯಕಿ ಹರ್ಮನ್ ದಾಖಲೆ ಪತನ

IND-W vs SA-W; 7000 ರನ್ ದಾಖಲೆ ಬರೆದ ಸ್ಮೃತಿ ಮಂಧನಾ; ನಾಯಕಿ ಹರ್ಮನ್ ದಾಖಲೆ ಪತನ

panaji

Panaji: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಹೆಸರಲ್ಲಿ ವಂಚನೆ; ದೂರು ದಾಖಲು

ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲು ದುರಂತ: ಮೃತರ ಸಂಖ್ಯೆ 15ಕ್ಕೆ ಏರಿಕೆ, 60 ಜನರಿಗೆ ಗಾಯ

ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲು ದುರಂತ: ಮೃತರ ಸಂಖ್ಯೆ 15ಕ್ಕೆ ಏರಿಕೆ, 60 ಜನರಿಗೆ ಗಾಯ

Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ವಿಭಿನ್ನ ಪ್ರತಿಭಟನೆ

Mangaluru: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ವಿಭಿನ್ನ ಪ್ರತಿಭಟನೆ

ಕರಾವಳಿಯಲ್ಲಿ ಇಲ್ಲ ವಾಡಿಕೆ ಮಳೆ!

Rain ಕರಾವಳಿಯಲ್ಲಿ ಇಲ್ಲ ವಾಡಿಕೆ ಮಳೆ!

Mangaluru ಬ್ರೇಕ್‌ ಸಮಸ್ಯೆ; ಬಸ್‌ ಚಾಲಕನ ಸಮಯಪ್ರಜ್ಞೆ; ತಪ್ಪಿದ ದುರಂತ

Mangaluru ಬ್ರೇಕ್‌ ಸಮಸ್ಯೆ; ಬಸ್‌ ಚಾಲಕನ ಸಮಯಪ್ರಜ್ಞೆ; ತಪ್ಪಿದ ದುರಂತ

Mangaluru ದ್ವಿಚಕ್ರ ವಾಹನ ಕಳವು; ದೂರು ದಾಖಲು

Mangaluru ದ್ವಿಚಕ್ರ ವಾಹನ ಕಳವು; ದೂರು ದಾಖಲು

Nalin Kumar Kateel ವಿರುದ್ಧ ಸುಳ್ಳು ಸಂದೇಶ: ಕ್ರಮಕ್ಕೆ ಬಿಜೆಪಿ ಒತ್ತಾಯ

Nalin Kumar Kateel ವಿರುದ್ಧ ಸುಳ್ಳು ಸಂದೇಶ: ಕ್ರಮಕ್ಕೆ ಬಿಜೆಪಿ ಒತ್ತಾಯ

MUST WATCH

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

udayavani youtube

ಗಂಗೊಳ್ಳಿಯಲ್ಲಿ ಈದ್ ಅಲ್ ಅಝ್ಹಾ ಆಚರಣೆ

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

ಹೊಸ ಸೇರ್ಪಡೆ

Dendoor Katte: 2 cows, 1 calf found illegally transported in separate cases

Dendoor Katte: ಪ್ರತ್ಯೇಕ ಪ್ರಕರಣಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 2 ಹಸು, 1 ಕರು ಪತ್ತೆ

Cyber Frauds:  ಸೈಬರ್‌ ವಂಚನೆ- 3 ವರ್ಷಗಳಲ್ಲಿ ಭಾರತೀಯರು ಕಳೆದುಕೊಂಡ ಹಣ 25,000 ಕೋಟಿ!

Cyber Frauds:  ಸೈಬರ್‌ ವಂಚನೆ- 3 ವರ್ಷಗಳಲ್ಲಿ ಭಾರತೀಯರು ಕಳೆದುಕೊಂಡ ಹಣ 25,000 ಕೋಟಿ!

11-chikkodi

Chikkodi: ವ್ಯಕ್ತಿಯ ಭೀಕರ ಕೊಲೆ; ಬೆಚ್ಚಿ ಬಿದ್ದ ಜನತೆ

Innanje Railway Station; A gold chain was stolen from a woman who was traveling from Madurai to Mumbai

Innanje Railway Station; ಮಧುರೈನಿಂದ ಮುಂಬಯಿಗೆ ತೆರಳುತ್ತಿದ್ದ ಮಹಿಳೆಯ ಚಿನ್ನದ ಸರ ಕಳವು

IND-W vs SA-W; 7000 ರನ್ ದಾಖಲೆ ಬರೆದ ಸ್ಮೃತಿ ಮಂಧನಾ; ನಾಯಕಿ ಹರ್ಮನ್ ದಾಖಲೆ ಪತನ

IND-W vs SA-W; 7000 ರನ್ ದಾಖಲೆ ಬರೆದ ಸ್ಮೃತಿ ಮಂಧನಾ; ನಾಯಕಿ ಹರ್ಮನ್ ದಾಖಲೆ ಪತನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.