ಸುಸಜ್ಜಿತ ಬಸ್‌ ತಂಗುದಾಣ ಉದ್ಘಾಟನೆ 

Team Udayavani, Jan 5, 2018, 10:40 AM IST

5-Jan-7.jpg

ಹಳೆಯಂಗಡಿ: ಇಲ್ಲಿನ ಗ್ರಾಮೀಣ ಪ್ರದೇಶದ ಅಭಿವೃದ್ಧಿಯಲ್ಲಿ ಲಯನ್ಸ್‌ ಕ್ಲಬ್‌ನ ಪಾತ್ರ ಹಿರಿದಾಗಿದೆ. 8 ವರ್ಷದ ಅವ ಧಿಯಲ್ಲಿ 80 ಲಕ್ಷಕ್ಕೂ ಮಿಕ್ಕ ಸೇವಾ ಯೋಜನೆಗಳನ್ನು ನೀಡಿರುವುದು ಶ್ಲಾಘನೀಯ ಎಂದು ಶಾಸಕ ಕೆ. ಅಭಯಚಂದ್ರ ಜೈನ್‌ ಹೇಳಿದರು. 

ಹಳೆಯಂಗಡಿ ಕೇಂದ್ರ ಪ್ರದೇಶದಲ್ಲಿ ಜ.4ರಂದು ಹಳೆಯಂಗಡಿ ಲಯನ್ಸ್‌ ಕ್ಲಬ್‌ನ ಸಂಯೋಜನೆಯಲ್ಲಿ ನಿರ್ಮಾಣವಾಗಿರುವ ಸುಸಜ್ಜಿತ ಬಸ್‌ ತಂಗುದಾಣವನ್ನು ಉದ್ಘಾಟಿಸಿ, ಅವರು ಮಾತನಾಡಿದರು. ಕ್ಲಬ್‌ ಅಧ್ಯಕ್ಷ ವಾಸು ನಾಯಕ್‌ ಅಧ್ಯಕ್ಷತೆ ವಹಿಸಿ, ಸ್ವಾಗತಿಸಿದರು.

ಲಯನ್ಸ್‌ ಜಿಲ್ಲಾ ಗವರ್ನರ್‌ ಎಚ್‌. ಆರ್‌. ಹರೀಶ್‌ ಮಾತನಾಡಿ, ಸೇವೆಯ ಮೂಲಕವೇ ಜನರಿಗೆ ಹತ್ತಿರವಾಗಿರುವ ಲಯನ್ಸ್‌ ಕ್ಲಬ್‌ ಹೆಚ್ಚು ಗ್ರಾಮೀಣ ಭಾಗದಲ್ಲಿ ವಿಸ್ತರಣೆ ಆಗುತ್ತಿದೆ. ವಿವಿಧತೆಯಲ್ಲಿ ಏಕತೆ ಕಾಣುವ ಸಾಮರಸ್ಯದ ಸೇವೆ ಇಂದಿನ ದಿನದಲ್ಲಿ ಅಗತ್ಯವಾಗಿ ಆಗಬೇಕಾಗಿದೆ ಎಂದರು.

ಮೂಲ್ಕಿ ಸೀಮೆಯ ಅರಸರಾದ ಎಂ.ದುಗ್ಗಣ್ಣ ಸಾವಂತರು, ಹಳೆಯಂಗಡಿ ಸಿ.ಎಸ್‌.ಐ. ಅಮ್ಮನ್‌ ಮೆಮೋರಿಯಲ್‌ ಚರ್ಚ್‌ನ ಸಭಾಪಾಲಕರಾದ ರೆ| ಸೆಬಾಸ್ಟಿನ್‌ ಜತ್ತನ್ನ, ಬೊಳ್ಳೂರು ಮಸೀದಿಯ ಅಲ್‌ಹಜ್‌ ಮಹಮ್ಮದ್‌ ಅಝ್ಹರ್‌ ಫೈಝಿ ಶುಭಹಾರೈಸಿದರು. ಹಳೆಯಂಗಡಿ ಗ್ರಾ.ಪಂ., ರೆ.ಜಿ.ಎ. ಬೆರ್ನಾಡ್‌ ಮೆಮೋರಿಯಲ್‌ ಟ್ರಸ್ಟ್‌ ಹಾಗೂ ಮಂಗಳೂರಿನ ಸಿಲಾ ಎಡ್ವಟೈಸರ್ ಸಂಸ್ಥೆಗಳು ತಂಗುದಾಣ ನಿರ್ಮಾಣಕ್ಕೆ ಸಹಕರಿಸಿದ್ದರಿಂದ, ಸಂಸ್ಥೆಗಳನ್ನು ಗೌರವಿಸಲಾಯಿತು.

ಹಳೆಯಂಗಡಿ ಲಯನ್ಸ್‌ ಕ್ಲಬ್‌ ಸ್ಥಾಪಕಾಧ್ಯಕ್ಷ ಚಂದ್ರಶೇಖರ ನಾನಿಲ್‌, ಲಿಯೋ ಸ್ಥಾಪಕಾಧ್ಯಕ್ಷ ಪ್ರಜ್ವಲ್‌ ಪೂಜಾರಿ, ಹಳೆಯಂಗಡಿ ಗ್ರಾ.ಪಂ. ಅಧ್ಯಕ್ಷೆ ಜಲಜಾ, ಉಪಾಧ್ಯಕ್ಷೆ ಪದ್ಮಾವತಿ ಶೆಟ್ಟಿ, ಮಂಗಳೂರು ನಗರಾಭಿವೃದ್ಧಿ ಪ್ರಾ ಧಿಕಾರದ ಸದಸ್ಯ ಎಚ್‌.ವಸಂತ ಬೆರ್ನಾಡ್‌, ರೆ.ಜಿ.ಎ.ಬೆರ್ನಾಡ್‌ ಮೆಮೋರಿಯಲ್‌ ಟ್ರಸ್ಟ್‌ನ ಟ್ರಸ್ಟಿ ರೊಲಾಂಡ್‌ ಪ್ರದೀಪ್‌ ಬೆರ್ನಾಡ್‌, ಕಿಲ್ಪಾಡಿ ಗ್ರಾ.ಪಂ. ಮಾಜಿ ಅಧ್ಯಕ್ಷ ಧನಂಜಯ ಕೋಟ್ಯಾನ್‌ ಮಟ್ಟು, ಮಾಜಿ ಜಿ.ಪಂ. ಅಧ್ಯಕ್ಷೆ ಸುಗಂಧಿ ಕೊಂಡಾಣ, ಉಪಾಧ್ಯಕ್ಷೆ ಶಾಲೆಟ್‌ ಪಿಂಟೋ, ಸದಸ್ಯರಾದ ಅಬ್ದುಲ್‌ ಖಾದರ್‌, ಅನಿಲ್‌ ಸಸಿಹಿತ್ಲು, ಅಬ್ದುಲ್‌ ಅಝೀಜ್‌, ಹಮೀದ್‌ ಸಾಗ್‌, ಪಿಡಿಒ ಅಬೂಬಕ್ಕರ್‌, ಕಾರ್ಯದರ್ಶಿ ಕೇಶವ ದೇವಾಡಿಗ, ರಿಕ್ಷಾ ಯೂನಿಯನ್‌ ಅಧ್ಯಕ್ಷ ಚಂದ್ರಶೇಖರ ಕದಿಕೆ, ಉದ್ಯಮಿ ಶಶೀಂದ್ರ ಮುದ್ದು ಸಾಲ್ಯಾನ್‌, ಸಾಮಾಜಿಕ ಕಾರ್ಯಕರ್ತೆಯರಾದ ವೀಣಾ ಕಾಮತ್‌, ನಂದಾ ಪಾಯಸ್‌, ಮೆಸ್ಕಾಂ ಸಲಹ ಸಮಿತಿಯ ಸದಸ್ಯ ಧರ್ಮಾನಂದ ಶೆಟ್ಟಿಗಾರ್‌ ತೋಕೂರು, ಲಯನ್ಸ್‌ ಕ್ಲಬ್‌ನ ಯಾದವ ದೇವಾಡಿಗ, ಮೆಲ್ವಿನ್‌ ಡಿ’ಸೋಜಾ, ರಮೇಶ್‌ ಬಂಗೇರ, ಬ್ರಿಜೇಶ್‌ ಕುಮಾರ್‌, ಶರತ್‌, ಯಶೋಧರ ಸಾಲ್ಯಾನ್‌ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಡಾ| ಗಣೇಶ್‌ ಅಮೀನ್‌ ಸಂಕಮಾರ್‌ ಪ್ರಸ್ತಾವನೆಗೈದರು. ಭಾಸ್ಕರ ಸಾಲ್ಯಾನ್‌ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.