ಮಂಗಳೂರು: ಕೊರಗಜ್ಜನ ಗುಡಿಯ ಎದುರು ಉಪಯೋಗಿಸಿದ ಕಾಂಡೋಮ್ ಇಟ್ಟ ಕಿಡಿಗೇಡಿಗಳು; ಪ್ರಕರಣ ದಾಖಲು
Team Udayavani, Dec 28, 2021, 2:22 PM IST
ಮಂಗಳೂರು: ಕೊರಗಜ್ಜನ ಗುಡಿಯ ಎದುರು ಉಪಯೋಗಿಸಿದ ಕಾಂಡೋಮ್ ನ್ನು ಇಟ್ಟು ಅಪವಿತ್ರಗೊಳಿಸಿದ ಘಟನೆ ನಗರದ ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಮಾರ್ನಮಿಕಟ್ಟೆ ಬಳಿ ನಡೆದಿದೆ.
ಮಂಗಳವಾರ ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿನ್ನೆ ರಾತ್ರಿ ಯಾರೋ ಕಿಡಿಗೇಡಿಗಳು ಕೃತ್ಯ ನಡೆಸಿರಬಹುದೆಂದು ಪೊಲೀಸರು ಅಂದಾಜಿಸಿದ್ದಾರೆ.