ಕರಾವಳಿಯಲ್ಲೂ ಆಕ್ಸಿಜನ್‌ಗೆ ಹೆಚ್ಚಿದ ಬೇಡಿಕೆ!

Team Udayavani, Apr 23, 2021, 7:16 AM IST

ಕರಾವಳಿಯಲ್ಲೂ ಆಕ್ಸಿಜನ್‌ಗೆ ಹೆಚ್ಚಿದ ಬೇಡಿಕೆ!

ಮಂಗಳೂರು: ಕೋವಿಡ್ ಉಲ್ಬಣಿಸುತ್ತಿರುವ ಕಾರಣ ದೇಶದ ವಿವಿಧ ಭಾಗಗಳಲ್ಲಿ ಆಕ್ಸಿಜನ್‌ (ಆಮ್ಲಜನಕ) ಬೇಡಿಕೆ ಏರಿಕೆಯಾಗುತ್ತಿರುವಂತೆ ಕರಾವಳಿ ಜಿಲ್ಲೆಗಳ ಲ್ಲಿಯೂ ಬೇಡಿಕೆ ವೃದ್ಧಿಸಿದೆ. ಆದರೆ ದ.ಕ., ಉಡುಪಿ ಜಿಲ್ಲೆಗಳಲ್ಲಿ ಸದ್ಯ ಕೊರತೆಯಿಲ್ಲ. ದ.ಕ.ದಲ್ಲಿರುವ 8 ಮೆಡಿಕಲ್‌ ಕಾಲೇಜು ಆಸ್ಪತ್ರೆಗಳು, ವೆನ್ಲಾಕ್‌ನಲ್ಲಿ ಆಕ್ಸಿಜನ್‌ ಸಂಗ್ರಹ ಸ್ಥಾವರವಿದ್ದು, 15 ದಿನಗಳಿಗೆ ಅಗತ್ಯವಿರುವಷ್ಟು ಸಂಗ್ರಹಿಸಲು ಸಾಧ್ಯವಿದೆ.

ದ.ಕ. 3 ಉತ್ಪಾದನಾ ಘಟಕ :

ದ.ಕ.ದಲ್ಲಿ ಸದ್ಯ ಸುಮಾರು 6,000 ಕ್ಯುಬಿಕ್‌ ಲೀಟರ್‌, ಉಡುಪಿಯಲ್ಲಿ 4,000 ಕ್ಯುಬಿಕ್‌ ಲೀ. ಆಕ್ಸಿಜನ್‌ ಬೇಡಿಕೆಯಿದೆ. “ಲಿಕ್ವಿಡ್‌ ಆಕ್ಸಿಜನ್‌’ ಅನ್ನು ಕೇರಳದಿಂದ ತಂದು ರೀಫಿಲ್ಲಿಂಗ್‌ ಮಾಡುವ ಒಂದು ಘಟಕ ಹಾಗೂ “ನ್ಯಾಚುರಲ್‌ ಏರ್‌’ ಅನ್ನು ಕಂಪ್ರಸ್‌ ಮಾಡಿ ಪ್ರತ್ಯೇಕಿಸಿ ಆಕ್ಸಿಜನ್‌ ತಯಾರಿಸುವ ಮತ್ತು ರೀಫಿಲ್ಲಿಂಗ್‌ ಮಾಡುವ ಎರಡು ಘಟಕಗಳು ದ.ಕ. ಜಿಲ್ಲೆಯಲ್ಲಿವೆ. ದ.ಕ. ಹಾಗೂ ಉಡುಪಿ ಜಿಲ್ಲೆಯ ಬಹುತೇಕ ಆಸ್ಪತ್ರೆಗಳಿಗೆ ಇಲ್ಲಿಂದಲೇ ಸರಬರಾಜಾಗುತ್ತಿದೆ.

ಕೊರೊನಾಕ್ಕಿಂತ ಮೊದಲು ಮಂಗಳೂರಿನ ಕೆಲವು ಆಸ್ಪತ್ರೆಗಳು 20 ಸಿಲಿಂಡರ್‌ ಸಾಮರ್ಥ್ಯದ ಒಂದು ಲಿಕ್ವಿಡ್‌ ಕಂಟೈನರ್‌ ಬಳಕೆ ಮಾಡುತ್ತಿದ್ದರೆ, ಕಳೆದ ವರ್ಷದ ಕೊರೊನಾ ವೇಳೆ ದಿನಕ್ಕೆ 4 ಲಿಕ್ವಿಡ್‌ ಕಂಟೈನರ್‌ ಬಳಕೆ ಮಾಡುತ್ತಿದ್ದವು. “ಉದಯವಾಣಿ’ ಜತೆಗೆ ಮಾತನಾಡಿದ ಆಕ್ಸಿಜನ್‌ ಪೂರೈಕೆದಾರ ನಾರಾಯಣ ಐತಾಳ ಅವರು, ಎಲ್ಲ ಆಸ್ಪತ್ರೆಗಳಿಂದ ಬೇಡಿಕೆ ಏರಿಕೆಯಾ ಗಿದೆ. ಸದ್ಯ ಕೊರತೆಯಿಲ್ಲ. ಲಿಕ್ವಿಡ್‌ ಆಕ್ಸಿಜನ್‌ ಮತ್ತು  ಇತರ ಪರಿಕರಗಳು ಸೂಕ್ತ ರೀತಿಯಲ್ಲಿ ದೊರೆತರೆ ಪೂರೈಕೆ ಸಮಸ್ಯೆ ಆಗಲಾರದು ಎಂದರು.

ಕೈಗಾರಿಕೆಗಳಿಗೆ ಕಡಿತ? :

ಮಂಗಳೂರು ಸೇರಿದಂತೆ ರಾಜ್ಯದ  ವಿವಿಧ ಕೈಗಾರಿಕೆಗಳಿಗೆ ವೆಲ್ಡಿಂಗ್‌, ಕಟ್ಟಿಂಗ್‌, ಫ್ಯಾಬ್ರಿಕೇಶನ್‌ ಸೇರಿದಂತೆ ವಿವಿಧ ಕಾರಣಕ್ಕೆ ಆಕ್ಸಿಜನ್‌ ಸಿಲಿಂಡರ್‌ ಬೇಕಾ ಗುತ್ತದೆ. ಕಳೆದ ವರ್ಷ ಕೊರೊನಾ ಸಂದರ್ಭ ವೈದ್ಯಕೀಯ ಆಕ್ಸಿಜನ್‌ ಕೊರತೆಯಾದ ಕಾರಣಕೈಗಾರಿಕಾ ಆಕ್ಸಿಜನ್‌ ಸಿಲಿಂಡರ್‌ಗಳನ್ನೇ ಆಸ್ಪತ್ರೆಗಳಲ್ಲಿ ಬಳಸುವಂತೆ ಸರಕಾರ ಸೂಚಿಸಿತ್ತು. ಸದ್ಯ ಕೈಗಾರಿಕೆಗಳಿಗೆ ಆಕ್ಸಿಜನ್‌ ಸಿಲಿಂಡರ್‌ ನೀಡಲಾಗುತ್ತಿದೆ. ಯಾವುದೇ ಸಂದರ್ಭದಲ್ಲಿ ವೈದ್ಯಕೀಯ ಬಳಕೆಗೆ ಅಗತ್ಯವಿದ್ದರೆ ಕೈಗಾರಿಕೆಗೆ ನೀಡುವ ಆಕ್ಸಿಜನ್‌ ಕಡಿತ ಮಾಡುವ ಬಗ್ಗೆ ಜಿಲ್ಲಾಡಳಿತ ಚಿಂತನೆ ನಡೆಸಿದೆ.

ಜಿಲ್ಲೆಯಲ್ಲಿ ಆಕ್ಸಿಜನ್‌ ಕೊರತೆಯಿಲ್ಲ. ಆವಶ್ಯಕತೆ ಯಷ್ಟನ್ನು ಮಂಗಳೂರಿನಲ್ಲೇ ಉತ್ಪಾದಿಸಲಾಗುತ್ತಿದೆ. ಮುಂದೆಯೂ ಸಮಸ್ಯೆ ಆಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾ ಔಷಧ ನಿಯಂತ್ರಕರ ಸಮಿತಿ ರಚಿಸಲಾಗಿದೆ. ರಾಜ್ಯದ ಎಲ್ಲ ಆಕ್ಸಿಜನ್‌ ಪೂರೈಕೆ ಮಾಡುವವರು ಹಾಗೂ ಅಧಿಕಾರಿಗಳು ಈ ಸಮಿತಿಯಲ್ಲಿದ್ದಾರೆ. – ಡಾ| ರಾಜೇಂದ್ರ ಕೆ.ವಿ.,  ಜಿಲ್ಲಾಧಿಕಾರಿ

ಟಾಪ್ ನ್ಯೂಸ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-wenlock

Wenlockನಲ್ಲಿ ಮೂಲಸೌಕರ್ಯ ಕೊರತೆ; ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಪೊಲೀಸ್‌ಗೆ ದೂರು

6-mng

Nandini Brand: 50 ಐಸ್‌ ಕ್ರೀಂ ಮಾರುಕಟ್ಟೆಗೆ

5-mng

Mangaluru: ರೋಗಿಗಳಲ್ಲಿ ಭರವಸೆ ತುಂಬುವ ಕೆಲಸವಾಗಲಿ: ರೈ| ರೆ| ಡಾ| ಸಲ್ಡಾನ್ಹಾ

Rain ಮಾ. 20 – 24 ಕೆಲವೆಡೆ ಸಾಮಾನ್ಯ ಮಳೆ ಸಾಧ್ಯತೆ

Rain ಮಾ. 20 – 24 ಕೆಲವೆಡೆ ಸಾಮಾನ್ಯ ಮಳೆ ಸಾಧ್ಯತೆ

Lok Sabha Election 2024: ಗಡಿ ಭಾಗಗಳಲ್ಲಿ ತಪಾಸಣೆ ಬಿರುಸು

Lok Sabha Election 2024: ಗಡಿ ಭಾಗಗಳಲ್ಲಿ ತಪಾಸಣೆ ಬಿರುಸು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.