ಮಹಿಳೆ ಜತೆ ಅಶ್ಲೀಲ ವರ್ತನೆ: ಅಪರಾಧಿಗೆ ಕಾರಾಗೃಹ ಶಿಕ್ಷೆ
Team Udayavani, Jul 11, 2023, 6:35 AM IST
ಮಂಗಳೂರು: ಉರ್ವ ಠಾಣಾ ವ್ಯಾಪ್ತಿಯಲ್ಲಿ 2017ರಲ್ಲಿ ನಡೆದಿದ್ದ ಮಹಿಳೆಯ ಜತೆ ಅಶ್ಲೀಲ ವರ್ತನೆ ಪ್ರಕರಣದ ಅಪರಾಧಿ ತಲಪಾಡಿಯ ಮೊಹಮ್ಮದ್ ಮುಸ್ತಾಫನಿಗೆ ಮಂಗಳೂರಿನ ಮೂರನೇ ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾಧೀಶ ತಾರಾ ಕೆ.ಸಿ. ಅವರು ನಾಲ್ಕು ತಿಂಗಳ ಸಾದಾ ಕಾರಾಗೃಹ ಶಿಕ್ಷೆ ಮತ್ತು 2,500 ರೂ.ಗಳ ದಂಡ ವಿಧಿಸಿದ್ದಾರೆ.
ಸರಕಾರದ ಪರವಾಗಿ ಸಹಾಯಕ ಸರಕಾರಿ ಅಭಿಯೋಜಕಿ ನೇತ್ರಾವತಿ ವಾದ ಮಂಡಿಸಿದ್ದಾರೆ. ಎಎಸ್ಐ ಐತಪ್ಪ ಪ್ರಕರಣ ದಾಖಲಿಸಿದ್ದರು. ಪಿಎಸ್ಐ ಕೃಷ್ಣಾ ಬಿ. ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
ಅಪರಾಧಿಯು 2017ರ ಜೂ.29ರಂದು ಸಂಜೆ ನಗರದ ಲೇಡಿಹಿಲ್ ಬಳಿ ಬಸ್ ನಿಲ್ದಾಣ ಸಮೀಪದ ಮಹಿಳೆಯ ಮಾನಕ್ಕೆ ಕುಂದುಂಟು ಮಾಡುವ ಉದ್ದೇಶದಿಂದ ಅಶ್ಲೀಲವಾಗಿ ವರ್ತಿಸಿದ್ದ ಬಗ್ಗೆ ಪ್ರಕರಣ ದಾಖಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ