ಭಾರತ ಶಿಕ್ಷಣ ರಥಯಾತ್ರೆ ಪ್ರಧಾನಿ ಆಶಯಕ್ಕೆ ಪೂರಕ

ರಥಯಾತ್ರೆ ಸಮಾರೋಪದಲ್ಲಿ ಸಂಸದ ನಳಿನ್‌

Team Udayavani, Aug 2, 2019, 9:45 AM IST

ಬಂಟ್ವಾಳ: ದೇಶದಲ್ಲಿ ಹೊಸ ಶಿಕ್ಷಣ ನೀತಿ ಜಾರಿಗೆ ಬರುತ್ತಿರುವ ಕಾಲಘಟ್ಟದಲ್ಲಿ ಪ್ರಕಾಶ್‌ ಅಂಚನ್‌ ನೇತೃತ್ವದ ತಂಡವು ಸಮಾನ ಶಿಕ್ಷಣ
ಜಾರಿಗಾಗಿ ಭಾರತ ಶಿಕ್ಷಣ ರಥಯಾತ್ರೆ ನಡೆಸಿರುವುದು ಅರ್ಥಪೂರ್ಣ ವಾಗಿದೆ. ಇದು ಪ್ರಧಾನಿ ಮೋದಿ ಅವರ ಆಶಯಕ್ಕೂ ಪೂರಕವಾಗಿದೆ ಎಂದು ಎಂದು ದಕ್ಷಿಣ ಕನ್ನಡ ಸಂಸದ ನಳಿನ್‌ ಕುಮಾರ್‌ ಕಟೀಲು ಹೇಳಿದರು.

ಅವರು ಗುರುವಾರ ಹೊಸದಿಲ್ಲಿಯ ಜಂತರ್‌ ಮಂತರ್‌ನಲ್ಲಿ ಸರಕಾರಿ ಶಾಲೆ ಉಳಿಸಿ ಬೆಳೆಸಿ ರಾಜ್ಯ ಸಮಿತಿ ಹಾಗೂ ಶ್ರೀ ದುರ್ಗಾ ಚಾರಿಟೆಬಲ್‌ ಟ್ರಸ್ಟ್‌ ಸಹಯೋಗದಲ್ಲಿ “ಒಂದೇ ದೇಶ ಒಂದೇ ಶಿಕ್ಷಣ’ ಜಾರಿಗಾಗಿ ನಡೆದ ಬೃಹತ್‌ ಧರಣಿ ಸತ್ಯಾಗ್ರಹ ಹಾಗೂ ಭಾರತ ಶಿಕ್ಷಣ ರಥಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ಬಂಟ್ವಾಳದ ಯುವಕರ ತಂಡ ವೊಂದು ಆದರ್ಶ ಶಾಲೆಯನ್ನು ನಿರ್ಮಿಸಿ, ಜಿಲ್ಲೆಯಲ್ಲಿ ಸರಕಾರಿ ಶಾಲೆಯನ್ನು ಉಳಿಸುವ ಪ್ರಯತ್ನ ನಡೆಸಿ ದೇಶಾದ್ಯಂತ ಎಲ್ಲರಿಗೂ ಸಮಾನ ಶಿಕ್ಷಣ ಸಿಗಬೇಕೆಂಬ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶದಿಂದ ಹೊಸದಿಲ್ಲಿಗೆ ಬಂದು ಹೋರಾಟ ನಡೆಸುತ್ತಿರುವುದು ಅಭಿನಂದನೀಯ ಎಂದರು.

ಮೈಸೂರು-ಕೊಡಗು ಸಂಸದ ಪ್ರತಾಪ್‌ಸಿಂಹ ಮಾತನಾಡಿ, ಕೇಂದ್ರ ಸರಕಾರ ಶಿಕ್ಷಣ ಕ್ಷೇತ್ರದ ಸುಧಾರಣೆಗೆ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿ ಸಿದೆ. ಒಂದೇ ಶಿಕ್ಷಣ ನೀತಿ ಜಾರಿ ಬಂದರೆ ಎಲ್ಲರಿಗೂ ಉಪಯೋಗವಾಗಲಿದೆ ಎಂದು ಹೇಳಿದರು.

ಬೀದರ್‌ ಸಂಸದ ಭಗವಾನ್‌ ಕೂಬಾ ಧರಣಿಯಲ್ಲಿ ಪಾಲ್ಗೊಂಡಿದ್ದರು.
ಪ್ರಕಾಶ್‌ ಅಂಚನ್‌ ಮಾತನಾಡಿ, ಆರ್ಥಿಕವಾಗಿ ಹಿಂದುಳಿದ ಕುಟುಂಬ ಗಳ ಮಕ್ಕಳ ವಿದ್ಯಾಭ್ಯಾಸ, ಸರಕಾರಿ ಶಾಲೆಗಳ ಉಳಿವು ಹಾಗೂ ಪ್ರತಿರಾಜ್ಯ ಗಳ ಮಾತೃಭಾಷೆಯೊಂದಿಗೆ ಆಂಗ್ಲ ಹಾಗೂ ಹಿಂದಿ ಭಾಷೆ ಕಲಿಕೆಗೆ ಅವಕಾಶ ನೀಡಬೇಕೆಂದು ಭಾರತ ರಥಯಾತ್ರೆಯನ್ನು ಕೈಗೊಳ್ಳಲಾಗಿತ್ತು. ದೇಶದಲ್ಲಿ ಸಮಾನ ಶಿಕ್ಷಣ ಪದ್ಧತಿಯ ಜಾರಿ ನಮ್ಮ ಆಗ್ರಹವಾಗಿದೆ ಎಂದರು.
ಸರಕಾರಿ ಶಾಲೆ ಉಳಿಸಿ ಬೆಳೆಸಿ ರಾಜ್ಯ ಸಮಿತಿಯ ಪುರುಷೋತ್ತಮ ಅಂಚನ್‌, ಸಂದೀಪ್‌ ಸಾಲ್ಯಾನ್‌, ಮಯೂರಕೀರ್ತಿ, ಜೇಸಿಐ ಬಂಟ್ವಾಳದ ಅಧ್ಯಕ್ಷ ಯತೀಶ್‌ ಕರ್ಕೇರ, ತಾ.ಪಂ. ಸದಸ್ಯ ಗಣೇಶ್‌ ಸುವರ್ಣ, ಭುವನೇಶ್‌ ಪಚ್ಚಿನಡ್ಕ, ಮೊದಲಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಜೇಸಿಐ ಬಂಟ್ವಾಳ, ಹಿಂದೂ ಯುವಶಕ್ತಿ ಆಲಡ್ಕ, ನೇತಾಜಿ ಫೌಂಡೇಶನ್‌ ಚಿಕ್ಕಬಳ್ಳಾಪುರ ಬೆಂಬಲ ವ್ಯಕ್ತಪಡಿಸಿ ಧರಣಿಯಲ್ಲಿ ಪಾಲ್ಗೊಂಡಿತ್ತು.

ಕೇಂದ್ರ ಸಚಿವರಿಗೆ ಮನವಿ
ದೇಶಾದ್ಯಂತ ಮಾತೃಭಾಷೆಯೊಂದಿಗೆ ಇಂಗ್ಲಿಷ್‌ ಹಾಗೂ ಹಿಂದಿ ಶಿಕ್ಷಣ ಕಡ್ಡಾಯ, 1ರಿಂದ 12ನೇ ತರಗತಿವರೆಗೆ ಉಚಿತ ಕಡ್ಡಾಯ ಶಿಕ್ಷಣ, ಸಮಾನ ಶುಲ್ಕ ಹಾಗೂ ಶಿಕ್ಷಣ ಜಾರಿ, ಪ್ರತಿ ರಾಜ್ಯದಲ್ಲೂ ಶಿಕ್ಷಣಕ್ಕಾಗಿ ಶೇ. 25 ಅನುದಾನ ಮೀಸಲು ಮೊದಲಾದ ಬೇಡಿಕೆಗಳ ಮನವಿಯನ್ನು ಕೇಂದ್ರ ಮಾನವ ಸಂಪದ ಸಚಿವ ರಮೇಶ್‌ ಪೋಕ್ರಿಯಾಲ್‌ ಅವರಿಗೆ ನೀಡಲಾಯಿತು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಭತ್ತದ ಸಸಿಗಳನ್ನು ನಾಟಿ ಮಾಡಲು ಹಲವು ಜನರ ಸಹಾಯ ಬೇಕಾಗುತ್ತದೆ. ಅಲ್ಲದೆ, ಅದಕ್ಕೆ ಸಮಯವೂ ವ್ಯಯವಾಗುತ್ತದೆ. ಈ ವೆಚ್ಚವನ್ನು ಮತ್ತು ಸಮಯವನ್ನು ಉಳಿಸಲು ರೈಸ್‌...

  • ಜಮನಾಪುರಿ ಮೇಕೆಗಳನ್ನು ಹಾಲು ಮತ್ತು ಮಾಂಸಕ್ಕಾಗಿ ಸಾಕುತ್ತಾರೆ. ಇವುಗಳ ಮಾಂಸದಲ್ಲಿ ಕೊಬ್ಬಿನಂಶ ಕಡಿಮೆ. ಮೂರು ವರ್ಷಗಳಲ್ಲಿ 120 ಕೆ.ಜಿ.ವರೆಗೂ ಬೆಳೆಯುವ ಇವುಗಳು,...

  • ನಾಯಿ ನಿಯತ್ತಿನ ಪ್ರಾಣಿ. ಈ ಚಿತ್ರದಲ್ಲಿ ಕಾಣುತ್ತಿರುವುದು ರೋಬೋಟ್‌ ನಾಯಿ. ಮನುಷ್ಯ ಹೇಳಿದಷ್ಟನ್ನು ಮಾತ್ರವೇ ಮಾಡುವುದರಿಂದ ಇದು ಜೀವಂತ ನಾಯಿಗಿಂತಲೂ ಹೆಚ್ಚು...

  • ಬೆಂಗಳೂರು: "ಇವನಾರವ ಇವನಾರವ ಎಂದೆನಿಸದಿರಯ್ಯ, ಇವ ನಮ್ಮವ ಇವ ನಮ್ಮವ...' ಎಂಬುದು ಸಮಾಜದ ಪ್ರಸ್ತುತ ಮೂಲಮಂತ್ರ ಆಗಬೇಕು. ಆ ಮೂಲಕ ಲೋಕ ಕಲ್ಯಾಣಕ್ಕೆ ಕಂಕಣ ತೊಡಬೇಕು... ನಗರದ...

  • ಅತ್ತ ಸರ್ಕಾರ ಮಾರ್ಚ್‌ 5ರಂದು ಮಂಡನೆಯಾಗಲಿರುವ ರಾಜ್ಯ ಬಜೆಟ್‌ಗೆ ಸಜ್ಜಾಗುತ್ತಿದ್ದರೆ, ಇತ್ತ ಸ್ಥಳೀಯ ಸಂಸ್ಥೆಗಳು ಬೆಂಗಳೂರಿಗೆ ಏನೇನು ಅವಶ್ಯಕತೆ ಇದೆ ಎಂಬುದರ...