ಇಂಡಿಯನ್ ಡಿಜಿಟಲ್ ಯುನಿವರ್ಸಿಟಿ ಮೂಲಕ 15 ಲಕ್ಷ ಶಿಕ್ಷಕರಿಗೆ ತರಬೇತಿ
Team Udayavani, Nov 6, 2022, 9:13 AM IST
ಉಳ್ಳಾಲ : ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಅನುಷ್ಠಾನದ ಬಳಿಕ ಬದಲಾಗುತ್ತಿರುವ ಉನ್ನತ ಶಿಕ್ಷಣಕ್ಕೆ ಶಿಕ್ಷಕರನ್ನು ಸಿದ್ಧಗೊಳಿಸುವ ನಿಟ್ಟಿನಲ್ಲಿ ಇಂಡಿಯನ್ ಡಿಜಿಟಲ್ ಯುನಿವರ್ಸಿಟಿ ಮೂಲಕ 15 ಲಕ್ಷ ಶಿಕ್ಷಕರಿಗೆ ಆನ್‌ಲೈನ್ ಮತ್ತು ಆಫ್‌ಲೈನ್‌ನ ಮೂಲಕ ತರಬೇತಿ ನೀಡಲು ಉದ್ದೇಶಿಸಿದ್ದು, ದೇಶಾದ್ಯಂತ ಸುಮಾರು 100 ಕೇಂದ್ರಗಳಲ್ಲಿ ತರಬೇತಿ ನೀಡಲು ವಿ.ವಿ. ಧನಸಹಾಯ ಆಯೋಗ ಯೋಜಿಸಿದೆ ಎಂದು ಆಯೋಗದ ಅಧ್ಯಕ್ಷ ಎಂ. ಜಗದೀಶ್ ಕುಮಾರ್ ತಿಳಿಸಿದರು.
ನಿಟ್ಟೆ ವಿ.ವಿ.ಯ ಪದವಿ ಪ್ರದಾನ ಕಾರ್ಯಕ್ರಮದ ಬಳಿಕ ಸುದ್ದಿಗಾರರೊದಿಗೆ ಮಾತನಾಡಿದ ಅವರು, ಜುಲೈ 2023ರಿಂದ ಕಾರ್ಯನಿರ್ವಹಣೆ ಆರಂಭಿಸಲಿರುವ ಇಂಡಿಯನ್ ಡಿಜಿಟಲ್ ಯೂನಿವರ್ಸಿಟಿ ಮೂಲಕ ಶಿಕ್ಷಕರಿಗೆ ಭಾಗಶಃ ಆನ್‌ಲೈನ್ ಮೂಲಕ ತರಬೇತಿ ನೀಡಲು ಉದ್ದೇಶಿಸಲಾಗಿದೆ. ತರಬೇತಿಯ ವಿಧಾನಗಳನ್ನು ರೂಪಿಸಲು ಮತ್ತು ತರಬೇತಿ ಕೇಂದ್ರಗಳನ್ನು ಆಯ್ಕೆ ಮಾಡಲು ಶಿಕ್ಷಣ ಸಚಿವಾಲಯ, ಎಐಸಿಟಿಇ, ಯುಜಿಸಿ ಮತ್ತು ಇತರ ಮಧ್ಯಸ್ಥಗಾರರ ಪ್ರತಿನಿಧಿ ಗಳನ್ನು ಒಳಗೊಂಡ ಸಮಿತಿಯನ್ನು ಯುಜಿಸಿ ರಚಿಸಿದೆ. ತರಬೇತಿಗಾಗಿ ಐಐಟಿ ಮತ್ತು ಐಐಎಂ ತಜ್ಞರನ್ನು ನೇಮಿಸಿಕೊಳ್ಳಲಾಗುವುದು ಎಂದರು.
ಆಮೂಲಾಗ್ರ ಬದಲಾವಣೆ
ದೇಶದ ಉನ್ನತ ಶಿಕ್ಷಣ ವ್ಯವಸ್ಥೆಯಲ್ಲಿ ಆಮೂಲಾಗ್ರ ಬದಲಾವಣೆಗಾಗಿ ಎಐಸಿಟಿಇ, ಯುಜಿಸಿ, ಎನ್‌ಸಿಟಿಇ ಮೊದಲಾದ ಮಂಡಳಿಗಳನ್ನು ವಿಲೀನಗೊಳಿಸಿ ರಾಷ್ಟ್ರೀಯ ಉನ್ನತ ಶಿಕ್ಷಣ ನಿಯಂತ್ರಣ ಮಂಡಳಿಯನ್ನು ರಚಿಸ ಲಾಗುತ್ತಿದೆ. ವೈದ್ಯಕೀಯ, ಕಾನೂನು, ಕೃಷಿ ಸೇರಿದಂತೆ ಎಲ್ಲ ಉನ್ನತ ಶಿಕ್ಷಣ ಸಂಸ್ಥೆಗಳೂ ಇದರ ವ್ಯಾಪ್ತಿಗೆ ಬರಲಿವೆ. ನ್ಯಾಕ್, ಎನ್‌ಐಆರ್‌ಎಫ್ ಮೊದಲಾದ ಮಾನ್ಯತಾ ಸಂಸ್ಥೆಗಳನ್ನು ಒಗ್ಗೂಡಿಸಿ ನ್ಯಾಶನಲ್ ಅಕ್ರೆಡಿಟೇಷನ್ ಕೌನ್ಸಿಲನ್ನು ರಚಿಸಲಾಗುತ್ತದೆ. ಅವರು ಭಾರತೀಯ ಉನ್ನತ ಶಿಕ್ಷಣ ಆಯೋಗ ಮಸೂದೆಯನ್ನು ಕಾಯ್ದೆಯಾಗಿ ಜಾರಿಗೊಳಿಸಲು ಶಿಕ್ಷಣ ಸಂಸ್ಥೆಗಳನ್ನು ಸಜ್ಜುಗೊಳಿಸಬೇಕಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
50 ಕೊಡ್ತಿರಿ ಅಂತ ಗೊತ್ತಿದೆ,ಬೇಕಿರೋದು 123 ಸ್ಥಾನ : ಹೆಚ್.ಡಿ.ಕುಮಾರಸ್ವಾಮಿ
ಮಧ್ಯಪ್ರದೇಶದಲ್ಲಿ 230 ರಲ್ಲಿ ಬಿಜೆಪಿ 200ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ: ನಡ್ಡಾ
ಮೋದಿ ಸರಕಾರ 9 ವರ್ಷಗಳಲ್ಲಿ ಏನು ಕಡಿದು ಗುಡ್ಡೆ ಹಾಕಿದೆ: ನಲಪಾಡ್ ಪ್ರಶ್ನೆ
ಅಂದು ಮೋದಿ ಉಪನಾಮ ಟೀಕೆ…; ಇಂದು ಖುಷ್ಬು ಟ್ವೀಟ್ ವೈರಲ್
ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಬೆದರಿಕೆ ಪ್ರಕರಣ: ಆರೋಪಿ ಮುಂಬೈ ಪೊಲೀಸರ ವಶಕ್ಕೆ