ಮಂಗಳೂರು: ಜಿಲ್ಲಾ ಉಸ್ತುವಾರಿ ಸಚಿವರಿಂದ ಸ್ಮಾರ್ಟ್ ಸಿಟಿ ಕಾಮಗಾರಿಗಳ ಪರಿಶೀಲನೆ
Team Udayavani, May 29, 2022, 11:58 AM IST
ಮಂಗಳೂರು: ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ಮೇ.29ರ ಭಾನುವಾರ ಬೆಳಿಗ್ಗೆ ಮಂಗಳೂರು ಸ್ಮಾರ್ಟ್ ಸಿಟಿ ವತಿಯಿಂದ ಕೈಗೊಳ್ಳಲಾದ ಕಾಮಗಾರಿಗಳ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಶಾಸಕರಾದ ವೇದವ್ಯಾಸ ಕಾಮತ್, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಸ್ಮಾರ್ಟ್ ಸಿಟಿ ಎಂಡಿ ಮಹೇಂದ್ರ ಮಿಶ್ರ, ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಸ್ಮಾರ್ಟ್ ಸಿಟಿಅಧಿಕಾರಿಗಳು ಹಾಗೂ ಸಂಬಂಧಿಸಿದ ಅಧಿಕಾರಿಗಳಿದ್ದರು.