ಕರಾವಳಿಯ ಕ್ರಿಕೆಟ್‌ ಪ್ರೇಮಿಗಳಿಗೆ ಅಂತಾರಾಷ್ಟ್ರೀಯ ಕ್ರೀಡಾಂಗಣ

ಕೊಣಾಜೆಯಲ್ಲಿ ಜಾಗ ನಿಗದಿಗೆ ಚಿಂತನೆ

Team Udayavani, Sep 3, 2022, 2:24 PM IST

ಕರಾವಳಿಯ ಕ್ರಿಕೆಟ್‌ ಪ್ರೇಮಿಗಳಿಗೆ ಅಂತಾರಾಷ್ಟ್ರೀಯ ಕ್ರೀಡಾಂಗಣ

ಮಹಾನಗರ: ಕ್ರಿಕೆಟ್‌ ಪ್ರೇಮಿಗಳ ಹಲವು ವರ್ಷಗಳ ಕನಸು ನನಸಾಗುವ ಕಾಲ ಸನ್ನಿಹಿತವಾಗಿದೆ. ಬೆಂಗಳೂರಿನಲ್ಲಿರು ವಂತೆಯೇ ಮಂಗಳೂರಿನಲ್ಲಿಯೂ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣ ನಿರ್ಮಾಣ ಸಾಕಾರವಾಗುತ್ತಿದೆ.

ನಗರದ ಹೊರವಲಯದಲ್ಲಿರುವ ಕೊಣಾಜೆ ಬಳಿ ನೂತನ ಕ್ರೀಡಾಂಗಣ ನಿರ್ಮಾಣಕ್ಕೆ ಈಗಾಗಲೇ ಪೂರಕ ಕೆಲಸಗಳು ನಡೆಯುತ್ತಿವೆ. ಇಲ್ಲಿನ ಸುಮಾರು 20 ಎಕರೆ ಜಾಗದಲ್ಲಿ ಕ್ರೀಡಾಂಗಣ ತಲೆ ಎತ್ತಲಿದೆ. ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌ಸಿಎ) ಅಧಿಕಾರಿಗಳು ಜಾಗ ಪರಿಶೀಲನೆ ನಡೆಸಿದ್ದು, ಲೀಸ್‌ ಪ್ರಕ್ರಿಯೆಯಲ್ಲಿ ಜಾಗ ಮೀಸಲಿಡುವುದು ಬಹುತೇಕ ಅಂತಿಮಗೊಂಡಿದೆ. ಕ್ರೀಡಾಂಗಣ ನಿರ್ಮಾಣಗೊಂಡರೆ ಅಂಡರ್‌ 18, ಭಾರತ-ಎ ಪಂದ್ಯಗಳು, ರಣಜಿ, ಮಹಿಳಾ ಕ್ರಿಕೆಟ್‌ ಸಹಿತ ರಾಷ್ಟ್ರೀಯ ಪಂದ್ಯಾವಳಿ ಆಯೋಜಿಸಲು ಅವಕಾಶ ಸಿಕ್ಕಂತಾಗುತ್ತದೆ.

ಬಹುತೇಕ ಎಲ್ಲ ಮೂಲಸೌಲಭ್ಯ ಹೊಂದಿರುವ ಮೈದಾನ ಮಂಗಳೂರಿ ನಲ್ಲಿ ಸೌಲಭ್ಯವಿಲ್ಲ. ಶಿವಮೊಗ್ಗ, ಹುಬ್ಬಳ್ಳಿ, ಮೈಸೂರು ಸಹಿತ ರಾಜ್ಯದ ಇತರ ಕೆಲವು ಜಿಲ್ಲೆಗಳಲ್ಲಿ ರಣಜಿ ಪಂದ್ಯಗಳು ಆಯೋಜನೆಗೊಳ್ಳುತ್ತಿವೆ. ಆದರೆ ಮಂಗಳೂರಿಗೆ ಈ ಸೌಭಾಗ್ಯವಿಲ್ಲ ಎಂಬುದು ಕ್ರಿಕೆಟ್‌ ಪ್ರೇಮಿಗಳ ಅಳಲು. ಕೊಣಾಜೆ ಪ್ರದೇಶದ ಪಕ್ಕದಲ್ಲಿಯೇ ಮಂಗಳೂರು ನಗರ ಇದ್ದು, ಕಾಸರಗೋಡು ಸಂಪರ್ಕವನ್ನೂ ಹೊಂದಿದೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸೀಮಿತ ದೂರ ಇರುವ ಕಾರಣ ಕೊಣಾಜೆ ಪ್ರದೇಶದ ಆಯ್ಕೆಗೆ ಹೆಚ್ಚಿನ ಪ್ರಾಶಸ್ತÂ ನೀಡಲಾಗಿದೆ.

ಎರಡೂವರೆ ದಶಕದ ಬೇಡಿಕೆ
ಕರ್ನಾಟಕ ಕ್ರಿಕೆಟ್‌ ಅಸೋಸಿ ಯೇಶನ್‌ 1999ರಲ್ಲಿ ಮಂಗಳೂರಿನಲ್ಲಿ ಸುಸಜ್ಜಿತ ಕ್ರಿಕೆಟ್‌ ಮೈದಾನವನ್ನು ನಿರ್ಮಿಸುವ ಪ್ರಸ್ತಾವವನ್ನು ದ.ಕ. ಜಿಲ್ಲಾಡಳಿತದ ಮುಂದಿರಿಸಿತ್ತು. 15 ಎಕ್ರೆ ಜಾಗವನ್ನು ಜಿಲ್ಲಾಡಳಿತ ನೀಡಿದರೆ ಮೈದಾನ ನಿರ್ಮಾಣದ ಸಂಪೂರ್ಣ ವೆಚ್ಚವನ್ನು ಭರಿಸುವುದಾಗಿ ತಿಳಿಸಿತ್ತು. ಪ್ರಸ್ತಾವ ಮುಂದಿರಿಸಿ 23 ವರ್ಷಗಳಾಗಿವೆ. ಸಾಕಾರ ರೂಪ ಪಡೆಯಲಿಲ್ಲ!

2002ರಲ್ಲಿ ಪಿಲಿಕುಳದ ಪ್ರಸ್ತುತ ಇರುವ ಗಾಲ್ಫ್ ಮೈದಾನದಲ್ಲಿ ಕ್ರಿಕೆಟ್‌ ಸ್ಟೇಡಿಯಂ, ಸಮಗ್ರ ಕ್ರೀಡಾ ಸಂಕೀರ್ಣ ನಿರ್ಮಾಣದ ಪ್ರಸ್ತಾವ ಕೇಳಿಬಂತು. ಇಲ್ಲಿ ಸುಮಾರು 72 ಎಕ್ರೆ ಜಾಗವಿದೆ. ಇದನ್ನು ತಣ್ಣೀರುಬಾವಿಗೆ ವರ್ಗಾಯಿಸಿ ಇಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್‌ ಸ್ಟೇಡಿಯಂ, ಕ್ರೀಡಾಸಂಕೀರ್ಣಕ್ಕೆ ನಿರ್ಣಯಿಸಲಾಗಿತ್ತು. ಇದೂ ಮುಂದೆ ಏನೂ ಆಗಲಿಲ್ಲ. ಈ ಮಧ್ಯೆ ನಗರದ ಇತರೆಡೆಗಳಲ್ಲಿಯೂ ಸ್ಥಳ ಹುಡುಕಾಟ ನಡೆದಿತ್ತು.

ಬೈಕಂಪಾಡಿ, ತಣ್ಣೀರುಬಾವಿ, ಬೊಂದೇಲ್‌ ಪ್ರಸ್ತಾವನೆಯಾಗಿ ಅಲ್ಲೇ ಬಾಕಿಯಾಗಿದೆ. ಇದೆಲ್ಲದರ ನಡುವೆ ಕೆಂಜಾರಿನಲ್ಲಿ ಮಂಗಳೂರು ವಿಮಾನ ನಿಲ್ದಾಣದ ಬಳಿ 30 ಎಕ್ರೆ ಜಾಗವನ್ನು ಕ್ರಿಕೆಟ್‌ ಆಸೋಸಿಯೇಶನ್‌ಗೆ
30 ವರ್ಷಗಳ ಅವಧಿಗೆ ಲೀಸ್‌ಗೆ ನೀಡುವ ಬಗ್ಗೆಯೂ ಇನ್ನೊಂದು ಪ್ರಸ್ತಾವ ಕೇಳಿ ಬಂದಿತ್ತು. ಬಳಿಕ ಮೇರಿಹಿಲ್‌ನಲ್ಲಿಯೂ ಜಾಗ ಮೀಸಲಿ ಡುವ ಪ್ರಸ್ತಾವವಿತ್ತು.

ಭಾರತ ತಂಡದಲ್ಲಿ ಕರಾವಳಿಗರು
ಭಾರತ ತಂಡಕ್ಕೆ ಕರಾವಳಿ ಮೂಲಕ ಹಲವು ಕ್ರಿಕೆಟಿಗರು ಕೊಡುಗೆ ನೀಡಿದ್ದಾರೆ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಎಲ್ಲ ಮಾದರಿಯ ಕ್ರಿಕೆಟ್‌ನಲ್ಲಿ ಮಿಂಚಿತ್ತಿರುವ ಮಂಗಳೂರು ಮೂಲದ ಕೆ.ಎಲ್‌. ರಾಹುಲ್‌ ಬಾಲ್ಯದ ದಿನಗಳಲ್ಲಿ ಮಂಗಳೂರಿನ ನೆಹರೂ ಮೈದಾನದಲ್ಲಿಯೇ ಕ್ರಿಕೆಟ್‌ ಅಭ್ಯಾಸ ಮಾಡುತ್ತಿದ್ದರು. ಅಲ್ಲದೆ ಬುಧಿ ಕುಂದರನ್‌, ರಘುರಾಮ್‌ ಭಟ್‌, ಅನಿಲ್‌ ಕುಂಬ್ಳೆ, ಶ್ಯಾಮ್‌ಚಂದ್ರ ಭಟ್‌, ಪಿ.ವಿ. ಶಶಿಕಾಂತ್‌, ದಯಾನಂದ ಕಾಮತ್‌, ರವಿ ಶಾಸ್ತ್ರಿ, ಸಂಜಯ್‌ ಮಂಜೇಕರ್‌ ಸಹಿತ ಮತ್ತಿತರರು ಮೂಲತಃ ಕರಾವಳಿಯವರು. ಆದರೂ ಕರಾವಳಿ ಭಾಗದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣವಿಲ್ಲ ಎಂಬ ಕೊರಗು ಹಲವು ವರ್ಷಗಳಿಂದ ಇತ್ತು.

ಪೂರಕ ಪ್ರಕ್ರಿಯೆ ನಡೆಯುತ್ತಿದೆ
ಮಂಗಳೂರಿನ ಕೊಣಾಜೆ ಬಳಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣ ನಿರ್ಮಾಣಕ್ಕೆ ಪೂರಕ ಪ್ರಕ್ರಿಯೆಗಳಾಗಿ ಪತ್ರ ವ್ಯವಹಾರ ನಡೆಯುತ್ತಿದ್ದು, ಕಂದಾಯ ಇಲಾಖೆ ಜತೆ ಮಾತುಕತೆ ಜರಗಬೇಕಿದೆ. ಕೆಎಸ್‌ಸಿಎ ಕಾರ್ಯದರ್ಶಿ ಸಹಿತ ಮ್ಯಾನೇಜಿಂಗ್‌ ಕಮಿಟಿ ಸದಸ್ಯರು, ವಲಯ ಇನ್‌ಚಾರ್ಜ್‌, ಜಿಲ್ಲಾಧಿಕಾರಿಗಳು ಕ್ರೀಡಾಂಗಣ ನಿರ್ಮಾಣವಾಗುವ ಪ್ರದೇಶ ವೀಕ್ಷಿಸಲಾಗಿದೆ. ಕ್ರೀಡಾಂಗಣ ನಿರ್ಮಾಣಗೊಂಡರೆ ಇಲ್ಲಿನ ಹಲವಾರು ಕ್ರೀಡಾಪಟುಗಳಿಗೆ ಉತ್ತೇಜನ ಸಿಗುವಂತಾಗುತ್ತದೆ.
– ರತನ್‌ ಕುಮಾರ್‌, ಕೆಎಸ್‌ಸಿಎ ಮಂಗಳೂರು ವಲಯ ಸಂಚಾಲಕರು

– ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

Panaji: ಗೋವಾದ ಸಂರಕ್ಷಿತ ಅರಣ್ಯ ಪ್ರದೇಶಗಳಲ್ಲಿನ ಜಲಪಾತಗಳಿಗೆ ಪ್ರವಾಸಿಗರಿಗೆ ಪ್ರವೇಶ ನಿಷೇಧ

Panaji: ಗೋವಾದ ಸಂರಕ್ಷಿತ ಅರಣ್ಯ ಪ್ರದೇಶಗಳಲ್ಲಿನ ಜಲಪಾತಗಳಿಗೆ ಪ್ರವೇಶ ನಿಷೇಧ

Assam: ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ 48 ಕೋಟಿ ರೂ. ಮೌಲ್ಯದ ಡ್ರಗ್ಸ್‌ ವಶ

Assam: ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ 48 ಕೋಟಿ ರೂ. ಮೌಲ್ಯದ ಡ್ರಗ್ಸ್‌ ವಶ

ಸರಕಾರ ನಿಮ್ಮ ಜೊತೆಗಿದೆ, ಅಂಗನವಾಡಿ ಕಾರ್ಯಕರ್ತರು ಆತಂಕ ಪಡಬೇಕಾಗಿಲ್ಲ: ಸಚಿವ ಈಶ್ವರ ಖಂಡ್ರೆ

ಸರಕಾರ ನಿಮ್ಮ ಜೊತೆಗಿದೆ, ಅಂಗನವಾಡಿ ಕಾರ್ಯಕರ್ತರು ಆತಂಕ ಪಡಬೇಕಾಗಿಲ್ಲ: ಸಚಿವ ಈಶ್ವರ ಖಂಡ್ರೆ

Udupi: ಪೆಟ್ರೋಲ್ ಪಂಪ್‌ನಲ್ಲಿ ಅಗ್ನಿ ಅವಘಡ… ಕಾರ್ಮಿಕರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

Udupi: ಪೆಟ್ರೋಲ್ ಪಂಪ್‌ನಲ್ಲಿ ಅಗ್ನಿ ಅವಘಡ… ಕಾರ್ಮಿಕರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

Udupi: ಸೆಲೂನ್‌ ಸಿಬಂದಿಯ ಕೊಲೆ ಯತ್ನ ಪ್ರಕರಣ… ಮೂವರು ಅರೆಸ್ಟ್

Udupi: ಸೆಲೂನ್‌ ಸಿಬಂದಿಯ ಕೊಲೆ ಯತ್ನ ಪ್ರಕರಣ… ಮೂವರು ಅರೆಸ್ಟ್

Share Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ಜಿಗಿತ; ಲಾಭ ಗಳಿಸಿದ ಷೇರು ಯಾವುದು?

Share Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ಜಿಗಿತ; ಲಾಭ ಗಳಿಸಿದ ಷೇರು ಯಾವುದು?

7-chitradurga

ಒತ್ತಡಕ್ಕೆ ಮಣಿಯದೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆಯಾಗಲಿ; ಬಿ.ವೈ.ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udayavani Campaign: ಈ ಊರಿಗೆ ದಿನಕ್ಕೆ 7 ವಿಮಾನ ಬರ್ತದೆ, ಆದ್ರೆ ಬಸ್‌ ಎರಡೇ!

Udayavani Campaign: ಈ ಊರಿಗೆ ದಿನಕ್ಕೆ 7 ವಿಮಾನ ಬರ್ತದೆ, ಆದ್ರೆ ಬಸ್‌ ಎರಡೇ!

1,312 ಮಕ್ಕಳಿಗೆ 1 ಕೋ. ರೂ ಮೊತ್ತದ ಚೆಕ್‌ ವಿತರಣೆ

1,312 ಮಕ್ಕಳಿಗೆ 1 ಕೋ. ರೂ ಮೊತ್ತದ ಚೆಕ್‌ ವಿತರಣೆ

Kannada ಮಾತನಾಡಲು ಬಾರದ ಶಿಕ್ಷಣ ಸಚಿವರು : ಭೋಜೇಗೌಡ ಟೀಕೆ

Kannada ಮಾತನಾಡಲು ಬಾರದ ಶಿಕ್ಷಣ ಸಚಿವರು: ಭೋಜೇಗೌಡ ಟೀಕೆ

mಕರಾವಳಿಯಲ್ಲಿ ಸಂಭ್ರಮದ ಬಕ್ರೀದ್‌ ಆಚರಣೆ; ಮಸೀದಿಗಳಲ್ಲಿ ಪ್ರಾರ್ಥನೆ

ಕರಾವಳಿಯಲ್ಲಿ ಸಂಭ್ರಮದ ಬಕ್ರೀದ್‌ ಆಚರಣೆ

Rain ಕರಾವಳಿಯ ವಿವಿಧೆಡೆ ಸಾಧಾರಣ ಮಳೆ

Rain ಕರಾವಳಿಯ ವಿವಿಧೆಡೆ ಸಾಧಾರಣ ಮಳೆ

MUST WATCH

udayavani youtube

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬ್ಬಂದಿಯ ಕೊ*ಲೆ ಯತ್ನ

udayavani youtube

ಕಮಲಶಿಲೆ ದೇಗುಲದಿಂದ ಗೋ ಕಳವು ಯತ್ನ ವಿಫಲ

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಹೊಸ ಸೇರ್ಪಡೆ

Udayavani Campaign: ಈ ಊರಿಗೆ ದಿನಕ್ಕೆ 7 ವಿಮಾನ ಬರ್ತದೆ, ಆದ್ರೆ ಬಸ್‌ ಎರಡೇ!

Udayavani Campaign: ಈ ಊರಿಗೆ ದಿನಕ್ಕೆ 7 ವಿಮಾನ ಬರ್ತದೆ, ಆದ್ರೆ ಬಸ್‌ ಎರಡೇ!

12

Online ಗೇಮ್‌ ಚಟಕ್ಕೆ ಬಿಎಸ್‌ಸಿ ಮೊದಲ ವರ್ಷದ ವಿದ್ಯಾರ್ಥಿನಿ ಬಲಿ

11-

Yadagiri: ಬಾಲ್ಯ ವಿವಾಹ ವಿರುದ್ಧ ಹೋರಾಡೋಣ: ಶಾಸಕ ಕಂದಕೂರು ಕರೆ

Panaji: ಗೋವಾದ ಸಂರಕ್ಷಿತ ಅರಣ್ಯ ಪ್ರದೇಶಗಳಲ್ಲಿನ ಜಲಪಾತಗಳಿಗೆ ಪ್ರವಾಸಿಗರಿಗೆ ಪ್ರವೇಶ ನಿಷೇಧ

Panaji: ಗೋವಾದ ಸಂರಕ್ಷಿತ ಅರಣ್ಯ ಪ್ರದೇಶಗಳಲ್ಲಿನ ಜಲಪಾತಗಳಿಗೆ ಪ್ರವೇಶ ನಿಷೇಧ

10-

Chikkamagaluru: ಪೆಟ್ರೋಲ್-ಡಿಸೇಲ್ ಬೆಲೆಏರಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.