ಸರಕಾರಕ್ಕೆ ತನಿಖಾ ವರದಿ ಶೀಘ್ರ ಸಲ್ಲಿಕೆ : ವಿ.ಎಸ್‌.ಉಗ್ರಪ್ಪ

Team Udayavani, Aug 2, 2017, 8:25 AM IST

Ugrappa-1-8.jpg

ವಿ.ಎಸ್‌. ಉಗ್ರಪ್ಪ ಕಾವ್ಯಾ ಸಾವಿನ ಪ್ರಕರಣದ  ಕುರಿತು ವಿಚಾರಣೆ ನಡೆಸಿದರು.

ಮೂಡಬಿದಿರೆ: ರಾಜ್ಯ ಮಹಿಳಾ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆ ಸಮಿತಿ ಅಧ್ಯಕ್ಷ, ವಿಧಾನ ಪರಿಷತ್‌ ಸ‌ದಸ್ಯ ವಿ.ಎಸ್‌. ಉಗ್ರಪ್ಪ ಮಂಗಳವಾರ ಆಳ್ವಾಸ್‌ ಶಿಕ್ಷಣ ಸಂಸ್ಥೆಗೆ ಭೇಟಿ ನೀಡಿ ಕ್ರೀಡಾ ವಿದ್ಯಾರ್ಥಿನಿ ಕಾವ್ಯಾ ಸಾವಿನ ಪ್ರಕರಣದ ಕುರಿತು ವ್ಯಾಪಕ ವಿಚಾರಣೆ ನಡೆಸಿದರು. ಪುತ್ತಿಗೆ ಹೈಸ್ಕೂಲ್‌ಗೆ, ಬಳಿಕ ವಿದ್ಯಾಗಿರಿಯ ಹಾಸ್ಟೆಲ್‌ಗೆ ಭೇಟಿ ನೀಡಿ ಕಾವ್ಯಾ ಆತ್ಮಹತ್ಯೆ ಮಾಡಿಕೊಂಡ ಕೊಠಡಿಯನ್ನು ಪರಿಶೀಲಿಸಿ ಶಿಕ್ಷಕರಿಂದ ಅವರು ಮಾಹಿತಿ ಪಡೆದುಕೊಂಡರು. ಸಂಸ್ಥೆಯ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಜತೆ ಉಗ್ರಪ್ಪ ಚರ್ಚಿಸಿದರು.

ಅಸ್ವಾಭಾವಿಕ ಸಾವು
‘ಕಾವ್ಯಾಳ ಸಾವು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುದು ಪೊಲೀಸ್‌ ತನಿಖೆ ಮತ್ತು ಮರಣೋತ್ತರ ಪರೀಕ್ಷಾ ವರದಿಯಿಂದ ಮಾತ್ರ ಗೊತ್ತಾಗಬೇಕಾಗಿದೆ. ಅದರ ಬಗ್ಗೆ ಈ ಹಂತದಲ್ಲಿ ನಾನು ಏನೂ ಹೇಳಲಾಗದು. ಇಂತಹ ದುರ್ಘ‌ಟನೆ ನಡೆಯಬಾರದಿತ್ತು. ಇದೊಂದು ಅಸ್ವಾಭಾವಿಕ ಸಾವು ಎಂದು ತೋರುತ್ತಿದ್ದು ಮೇಲ್ನೋಟಕ್ಕೆ ಕಂಡುಬಂದಿರುವ ಲೋಪ ದೋಷಗಳನ್ನು ಪರಿಶೀಲಿಸಲಾಗುತ್ತಿದೆ. ಶೀಘ್ರದಲ್ಲೇ ಸರಕಾರಕ್ಕೆ ತನಿಖಾ ವರದಿ ಸಲ್ಲಿಸಲಾಗುವುದು’ ಎಂದು ಉಗ್ರಪ್ಪ ಅವರು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

ಕಾವ್ಯಾ ಪ್ರಕರಣದ ತನಿಖಾ ವರದಿಯನ್ನು ಸರಕಾರಕ್ಕೆ ಸಲ್ಲಿಸುತ್ತೇನೆ ಎಂದು ಅವರು ಪ್ರಕಟಿಸಿದರು. ‘ಕಾವ್ಯಾ ಸಾವು ನನಗೂ ನೋವು ತಂದಿದೆ. ಪ್ರತಿಭಾನ್ವಿತ ವಿದ್ಯಾರ್ಥಿನಿ ಕಾವ್ಯಾ ಬದುಕಿರುತ್ತಿದ್ದಲ್ಲಿ ಭವಿಷ್ಯದಲ್ಲಿ ಕ್ರೀಡೆಯಲ್ಲಿ ರಾಷ್ಟ್ರ ಮಟ್ಟದ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತರುತ್ತಿದ್ದಳು’ ಎಂದು ಅಭಿಪ್ರಾಯಪಟ್ಟರು.

ವಿದ್ಯಾರ್ಥಿಗಳಿಗೆ ಹಿತವಚನ
ವಿದ್ಯಾರ್ಥಿಗಳ ಬಳಿ ಮಾತನಾಡಿದ ಅವರು, ‘ಸಮಸ್ಯೆಗಳು ಬಂದಾಗ ಎದೆಗುಂದಬೇಡಿ, ಧೈರ್ಯದಿಂದ ನಿರ್ವಹಿಸಿರಿ. ಆತ್ಮಹತ್ಯೆಯಂಥ ಕೆಟ್ಟ ನಿರ್ಧಾರ ತೆಗೆದುಕೊಳ್ಳಬೇಡಿ. ಚೆನ್ನಾಗಿ ಓದಿ ಸಾಧನೆ ಮಾಡಿ ಎಂದು ಸಲಹೆ ನೀಡಿದರು. ಮಂಗಳೂರು ಪೊಲೀಸ್‌ ಕಮಿಷನರ್‌ ಟಿ.ಆರ್‌. ಸುರೇಶ್‌, ಎ.ಸಿ.ಪಿ. ರಾಜೇಂದ್ರ ಡಿ.ಎಸ್‌., ಎ.ಡಿ.ಸಿ. ಕುಮಾರ್‌, ಮೂಡಬಿದಿರೆ ತಹಶೀಲ್ದಾರ್‌ ಮಹಮ್ಮದ್‌ ಇಸಾಕ್‌, ಸಮಿತಿ ಸದಸ್ಯರಾದ ಡಾ| ವಸುಂಧರಾ, ವಿಮಲಾ, ಪ್ರಭಾ, ಜ್ಯೋತಿ, ಲೀಲಾ ಸಂಪಿಗೆ, ಮಹಿಳಾ ಮತ್ತು ಶಿಶು ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸುಂದರ ಪೂಜಾರಿ, ಸಿಡಿಪಿಒ ಶ್ಯಾಮಲಾ ಮತ್ತಿತರರು ಇದ್ದರು.

ರಕ್ಷಣಾ ಸೌಲಭ್ಯ ಬಲಪಡಿಸಬೇಕಾಗಿದೆ
‘ಆಳ್ವಾಸ್‌ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಕಲಿಕೆಗೆ ನೀಡುತ್ತಿರುವ ಪ್ರೋತ್ಸಾಹ, ವಿದ್ಯಾರ್ಥಿಗಳ ಸಾಧನೆ ಅಭಿನಂದನಾರ್ಹ. ಆದರೆ ಸುಮಾರು 26,000 ವಿದ್ಯಾರ್ಥಿಗಳಿರುವಲ್ಲಿ ಹೆಣ್ಮಕ್ಕಳಿಗೆ ನೀಡುವ ರಕ್ಷಣಾ ಸೌಲಭ್ಯವನ್ನು ಇನ್ನಷ್ಟು ಬಲಪಡಿಸಬೇಕಾಗಿದೆ. ಒಂದೇ ಕಟ್ಟಡದಲ್ಲಿ ತರಗತಿಗಳು ಮತ್ತು ವಿದ್ಯಾರ್ಥಿನಿಲಯ ಇರಬಾರದೆನ್ನುವುದೂ ಸೇರಿದಂತೆ ಖಾಸಗಿ ರೆಸಿಡೆನ್ಸಿ ಶಾಲೆಗಳು ಪಾಲಿಸಬೇಕಾದ ನಿಯಮಗಳನ್ನು ಪರಿಪಾಲಿಸಬೇಕಾಗಿದೆ’ ಎಂದ ಅವರು, ‘ಜಿಲ್ಲೆಯಲ್ಲಿ ಇಂತಹ 28 ಶಿಕ್ಷಣ ಸಂಸ್ಥೆಗಳು ಇವೆ. ರೆಸಿಡೆನ್ಸಿ ಶಾಲೆಗಳಿಗೆ ಸೂಕ್ತ ನಿಯಮಾವಳಿ ರೂಪಿಸಲು ಸರಕಾರದ ಗಮನ ಸೆಳೆಯಲಾಗುವುದು’
– ವಿ.ಎಸ್‌. ಉಗ್ರಪ್ಪ , ವಿಧಾನ ಪರಿಷತ್‌ ಸ‌ದಸ್ಯ

ಟಾಪ್ ನ್ಯೂಸ್

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.