ಜನಾಶೀರ್ವಾದ ಯಾತ್ರೆ: ಕರಾವಳಿಯಲ್ಲಿ ರಾಹುಲ್‌ ಶೋ


Team Udayavani, Mar 21, 2018, 9:53 AM IST

21-March-1.jpg

ಮಹಾನಗರ : ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರ ನೇತೃತ್ವದ ಜನಾಶೀರ್ವಾದ ಯಾತ್ರೆಯ ಅಂಗವಾಗಿ ಡಾ| ಬಿ.ಆರ್‌. ಅಂಬೇಡ್ಕರ್‌ ವೃತ್ತ (ಜ್ಯೋತಿ)ದಿಂದ ನೆಹರೂ ಮೈದಾನದವರೆಗೆ ನಡೆದ ಮೆರವಣಿಗೆಯಲ್ಲಿ ಸಾವಿರಾರು ಕಾಂಗ್ರೆಸ್‌ ಕಾರ್ಯಕರ್ತರು ಪಾಲ್ಗೊಂಡರು.

ಸಂಜೆ 6.20ರ ವೇಳೆಗೆ ಆರಂಭಗೊಂಡ ಮೆರವಣಿಗೆಯು ಸುಮಾರು 7ರ ಹೊತ್ತಿಗೆ ನೆಹರೂ ಮೈದಾನವನ್ನು ತಲುಪಿತು. ಯಾತ್ರೆಯ ತೆರೆದ ಬಸ್‌ನಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ| ಜಿ. ಪರಮೇಶ್ವರ್‌ ಅವರು ಕಾರ್ಯಕರ್ತರತ್ತ ಕೈ ಬೀಸಿ ಉತ್ಸಾಹ ತುಂಬಿದರು.

ನಿಗದಿಯಂತೆ ಸಂಜೆ 5.20ಕ್ಕೆ ಮೆರವಣಿಗೆ ಆರಂಭವಾಗಬೇಕಿದ್ದರೂ ರಾಹುಲ್‌ ಗಾಂಧಿ ಸರ್ಕಿಟ್ ಹೌಸ್‌ನಲ್ಲಿ ವಿಶ್ರಾಂತಿ ಪಡೆದ ಕಾರಣ, ಒಂದು ಗಂಟೆ ತಡವಾಯಿತು. ಮುಖಂಡರು ಯಾತ್ರೆಯ ಬಸ್‌ ಸಹಿತ ಇತರ ವಾಹನಗಳ ಮೂಲಕ ಪಾಲ್ಗೊಂಡರೆ, ಜಿಲ್ಲೆಯ ಜನಪ್ರತಿನಿಧಿಗಳು ಪಾದಯಾತ್ರೆ ಮೂಲಕ ಸಾಗಿದರು. ಕಲ್ಲಡ್ಕದ ಶಿಲ್ಪಕಲಾ ಗೊಂಬೆ ಬಳಗ, ಬ್ಯಾಂಡ್‌ಸೆಟ್‌, ಹುಲಿವೇಷ, ನಾಸಿಕ್‌ ಬ್ಯಾಂಡ್‌, ಕೊಂಬು- ಜಾಗಟೆ ಮೆರವಣಿಗೆಯಲ್ಲಿದ್ದವು. ಕಾರ್ಯಕರ್ತರು ಹುಲಿವೇಷ- ನಾಸಿಕ್‌ ಬ್ಯಾಂಡ್‌ನೊಂದಿಗೆ ಕುಣಿಯುತ್ತಾ ಸಾಗಿದರು. 

ಬಿಗಿ ಪೊಲೀಸ್‌ ಬಂದೋಬಸ್ತ್
ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್‌ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಮೆರವಣಿಗೆ ಸಾಗುವ ರಸ್ತೆಯಲ್ಲಿ ಹೆಚ್ಚಿನ ಸಂಖ್ಯೆ ಪೊಲೀಸರು ಜಮಾಯಿಸಿದ್ದರು. ರಾಹುಲ್‌ ಆಗಮಿಸುವ ವೇಳೆ ಹೆಚ್ಚಿನ ಕಾರ್ಯಕರ್ತರು ಅವರ ವಾಹನದತ್ತ ಸಾಗಿದಾಗ ಪೊಲೀಸರು ಅವರನ್ನು ಚದುರಿಸಿದರು.

ಸ್ವಚ್ಛತೆಗೆ ಆದ್ಯತೆ
ಮೆರವಣಿಗೆಯ ಸಂದರ್ಭ ಸ್ವಚ್ಛತೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಕಾರ್ಯಕರ್ತರು ಚೀಲಗಳಿಗೆ ಕಸವನ್ನು ತುಂಬಿಸುತ್ತಿದ್ದರೂ ಸಾಕಷ್ಟು ಸಂಖ್ಯೆಯಲ್ಲಿ ನೀರಿನ ಬಾಟಲ್‌ಗ‌ಳು ರಸ್ತೆಯಲ್ಲಿ ಚೆಲ್ಲಿಕೊಂಡಿತ್ತು. ಜತೆಗೆ ಅಲ್ಲಲ್ಲಿ ಪಕ್ಷದ ಬಾವುಟಗಳೂ ಬಿದ್ದು, ಕೊಂಡಿದ್ದವು. ಒಟ್ಟಿನಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದೆ ಮೆರವಣಿಗೆ ಯಶಸ್ವಿಯಾಗಿತ್ತು. 

ವಿಮಾನ ನಿಲ್ದಾಣದಲ್ಲಿ ರಾಹುಲ್‌ಗೆ ಸ್ವಾಗತ
ಮಹಾನಗರ:
ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿನ ಜನಾಶೀರ್ವಾದ ಯಾತ್ರೆಯಲ್ಲಿ ಪಾಲ್ಗೊಳ್ಳಲು ಮಂಗಳವಾರ ಮಂಗಳೂರು ಅಂತಾ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರನ್ನು ಕೆಪಿಸಿಸಿ ಹಾಗೂ ಜಿಲ್ಲಾ ಕಾಂಗ್ರೆಸ್‌ ವತಿಯಿಂದ ಬರಮಾಡಿಕೊಳ್ಳಲಾಯಿತು.

ಬೆಳಗ್ಗೆ ಸುಮಾರು 11.30ರ ವೇಳೆಗೆ ಬಂದಿಳಿದ ರಾಹುಲ್‌ ಗಾಂಧಿ ಅವರನ್ನು ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ| ಜಿ. ಪರಮೇಶ್ವರ್‌, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌, ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್‌, ಮೇಯರ್‌ ಭಾಸ್ಕರ್‌ ಕೆ. ಸ್ವಾಗತಿಸಿದರು. ವಿಧಾನ ಪರಿಷತ್‌ ಮುಖ್ಯ ಸಚೇತಕ ಐವನ್‌ ಡಿ’ಸೋಜಾ, ಶಾಸಕ ಜೆ.ಆರ್‌. ಲೋಬೋ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಯು.ಬಿ. ವೆಂಕಟೇಶ್‌, ಮೈಸೂರು ವಿಭಾಗ ಉಸ್ತುವಾರಿ ವಿಷ್ಣುನಾಥನ್‌, ಮನಪಾ ಮುಖ್ಯಸಚೇತಕ ಎಂ. ಶಶಿಧರ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು. ಬಳಿಕ ರಾಹುಲ್‌ ಗಾಂಧಿ ಹೆಲಿಕಾಪ್ಟರ್‌ ಮೂಲಕ ಕಾಪುಗೆ ತೆರಳಿದರು. ಸಿದ್ದರಾಮಯ್ಯ, ಡಾ| ಪರಮೇಶ್ವರ್‌, ಕೆ.ಸಿ. ವೇಣುಗೋಪಾಲ್‌ ಜತೆಯಲ್ಲಿದ್ದರು. ಇದಕ್ಕಿಂತ ಮೊದಲು ಹೆಲಿಕಾಪ್ಟರ್‌ನಲ್ಲಿ ಕೇಂದ್ರ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ರಾಜ್ಯ ಇಂಧನ ಸಚಿವ ಡಿ.ಕೆ. ಶಿವಕುಮಾರ್‌ ಕಾಪುಗೆ ತೆರಳಿದ್ದರು.

ಯಾತ್ರೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆ ವತಿಯಿಂದ ಸ್ವಾಗತಿಸಲಾಯಿತು. ಜಿಲ್ಲಾಧಿಕಾರಿ ಶಶಿಕಾಂತ್‌ ಸೆಂಥಿಲ್‌, ಮೇಯರ್‌ ಭಾಸ್ಕರ್‌ ಕೆ. ಸ್ವಾಗತಿಸಿದರು. ಜಿ.ಪಂ. ಸಿಇಒ ಡಾ| ಎಂ.ಆರ್‌. ರವಿ, ಪೊಲೀಸ್‌ ಕಮಿಷನರ್‌ ಟಿ.ಆರ್‌. ಸುರೇಶ್‌ ಮತ್ತಿತರ ಅಧಿಕಾರಿಗಳು ಭಾಗವಹಿಸಿದ್ದರು. 

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.