ಉರ್ವದಲ್ಲಿ ಜಪಾನ್‌ ಮಾದರಿಯ ಸಬ್‌ಸ್ಟೇಷನ್‌!

ದ.ಕ. ಜಿಲ್ಲೆಯಲ್ಲಿಯೇ ಮೊದಲ ಬಾರಿಗೆ ಅನುಷ್ಠಾನ

Team Udayavani, Mar 5, 2020, 5:22 AM IST

substation

ಮಹಾನಗರ: ಕೇಂದ್ರ ಸರಕಾರದ ಸಮಗ್ರ ವಿದ್ಯುತ್‌ ಅಭಿವೃದ್ಧಿ ಯೋಜನೆಯಡಿ (ಐ.ಪಿ.ಡಿ.ಎಸ್‌.) ಮೆಸ್ಕಾಂನಿಂದ ದ.ಕ. ಜಿಲ್ಲೆಯಲ್ಲೇ ಮೊದಲ ಅತ್ಯಾಧುನಿಕ ತಂತ್ರಜ್ಞಾನದ ಜಿಐ (ಗ್ಯಾಸ್‌ ಇನ್ಸು ಲೇಟೆಡ್‌) ಸಬ್‌-ಸ್ಟೇಷನ್‌ ಮಂಗಳೂರಿನ ಉರ್ವದಲ್ಲಿ ನಿರ್ಮಾಣವಾಗುತ್ತಿದೆ.

ಸಾಕಷ್ಟು ಸ್ಥಳಾವಕಾಶ ಲಭ್ಯವಿಲ್ಲದ ನಗರ ಪ್ರದೇಶಗಳಲ್ಲಿ ಗ್ಯಾಸ್‌ ಇನ್ಸುಲೇಟೆಡ್‌ ವಿದ್ಯುತ್‌ ಉಪಕೇಂದ್ರಗಳನ್ನು ಸ್ಥಾಪಿಸಲು ಮೆಸ್ಕಾಂ ಉದ್ದೇಶಿಸಿದೆ. ಈ ಯೋಜನೆ ಯಲ್ಲಿ ಮಂಗಳೂರು, ಬಂಟ್ವಾಳ, ಉಡುಪಿ, ಸಾಲಿಗ್ರಾಮ ಜನನಿಬಿಡ ನಗರ ಪ್ರದೇಶಗಳಲ್ಲಿ ಗ್ಯಾಸ್‌ ಇನ್ಸುಲೇಟೆಡ್‌ ಸಬ್‌ಸ್ಟೇಷನ್‌ಗಳನ್ನು ಒಟ್ಟು 39 ಕೋ.ರೂ. ವೆಚ್ಚದಲ್ಲಿ ಸ್ಥಾಪಿಸುವ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ.

ಸದ್ಯ ಮಣ್ಣಗುಡ್ಡದಲ್ಲಿರುವ ಸಬ್‌ಸ್ಟೇಷನ್‌ನಲ್ಲಿ ಒತ್ತಡ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಉರ್ವ ಮಾರ್ಕೆಟ್‌ನ ಪಕ್ಕ ದಲ್ಲಿ ಹೊಸ ಸಬ್‌ಸ್ಟೇಷನ್‌ ತೆರೆಯಲು ಉದ್ದೇಶಿಸಲಾಗಿದೆ. ಸಾಮಾನ್ಯವಾಗಿ ಸಬ್‌ ಸ್ಟೇಷನ್‌ಗೆ ಹಲವು ಎಕರೆ ಭೂಮಿ ಅಗತ್ಯವಿರುವುದರಿಂದ ನಗರ ವ್ಯಾಪ್ತಿಯಲ್ಲಿ ಸ್ಥಳಾವಕಾಶ ಲಭ್ಯವಿಲ್ಲದ ಕಾರಣದಿಂದ ಗ್ಯಾಸ್‌ ಇನ್ಸುಲೇಟೆಡ್‌ ವಿದ್ಯುತ್‌ ಉಪ ಕೇಂದ್ರ ಆರಂಭಿಸಲು ನಿರ್ಧರಿಸಲಾಗಿದೆ.
ಒಟ್ಟು 12.82 ಕೋ.ರೂ. ವೆಚ್ಚದಲ್ಲಿ 8 ಎಂವಿಎ ಸಾಮರ್ಥ್ಯದ ಎರಡು ಅತ್ಯಾಧುನಿಕ ಟ್ರಾನ್ಸ್‌ಫಾರ್ಮರ್‌ಗಳನ್ನು ಇಲ್ಲಿ ನಿರ್ಮಿಸಲಾಗುತ್ತದೆ. ಮಣ್ಣಗುಡ್ಡದಲ್ಲಿ ಸದ್ಯ 10ಎಂವಿಎ ಸಾಮರ್ಥ್ಯದ ಸಬ್‌ಸ್ಟೇಷನ್‌ ಕಾರ್ಯಾಚರಿಸುತ್ತಿದೆ. ಸದ್ಯ ಕಾಮಗಾರಿ ಆರಂಭವಾಗಿದ್ದು, ಎರಡು ವರ್ಷದೊಳಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ.

ವಿದ್ಯುತ್‌ ಸರಬರಾಜು
ಸದ್ಯ ಕೊಟ್ಟಾರಚೌಕಿ, ಅಶೋಕನಗರ ವ್ಯಾಪ್ತಿಗೆ ಕಾವೂರು, ಪಣಂಬೂರು ಸಬ್‌ಸ್ಟೇಷನ್‌ನಿಂದ ವಿದ್ಯುತ್‌ ಸರಬರಾಜು ಮಾಡಲಾಗುತ್ತಿದೆ. ಆದರೆ, ಉರ್ವ ಸ್ಟೇಷನ್‌ ಪೂರ್ಣವಾದ ಬಳಿಕ ಇಲ್ಲಿಂದಲೇ ಅಲ್ಲಿಗೆ ವಿದ್ಯುತ್‌ ಸರಬರಾಜು ಮಾಡಲಾಗುತ್ತದೆ.

ಏನಿದು ಜಿಐಎಸ್‌?
ವಿದ್ಯುತ್‌ ಸಬ್‌ಸ್ಟೇಷನ್‌ಗಳಲ್ಲಿ ಸಾಮಾನ್ಯವಾಗಿ ಏರ್‌ ಇನ್ಸುಲೇಟೆಡ್‌ ವಿಧಾನ ಅಳವಡಿಸಲಾಗುತ್ತದೆ. ಹೈ ವೋಲ್ಟೆಜ್‌ ವಿದ್ಯುತ್‌ ಪ್ರಸರಣವಾಗುವ ಕಾರಣ ವಿದ್ಯುತ್‌ ತಂತಿಗಳ ಮಧ್ಯೆ ಸಾಕಷ್ಟು ಅಂತರ ಅಗತ್ಯ. ಹಾಗಾಗಿ ಸಬ್‌ ಸ್ಟೇಷನ್‌ಗೆ ಸುಮಾರು ಅರ್ಧ ಎಕರೆಗಿಂತಲೂ ಹೆಚ್ಚು ಜಾಗ ಬೇಕಾಗುತ್ತದೆ. ಇದನ್ನು ನಿವಾರಿಸಲು ಜಪಾನಿನಲ್ಲಿ ಪ್ರಥಮವಾಗಿ ಗ್ಯಾಸ್‌ ಇನ್ಸುಲೇಟೆಡ್‌ ವಿಧಾನ ಅಭಿವೃದ್ಧಿ ಪಡಿಸಲಾಗಿತ್ತು. ಹೈ ವೋಲ್ಟೆಜ್‌ ವಿದ್ಯುತ್‌ ಪ್ರಸರ ಣದ ಪ್ರಮುಖ ರಚನೆಗಳನ್ನು ಕಿರಿದಾಗಿಸಿ, ಸಲ್ಪರ್‌ ಹೆಕ್ಸಾಫ‌ೂರಿಡ್‌ ಗ್ಯಾಸ್‌ ಕವಚದಲ್ಲಿ ಮುಚ್ಚಿಡುವ ವಿಧಾನ ಇದಾಗಿದೆ. ಬ್ರೇಕರ್‌, ಟ್ರಾನ್ಸಾರ್ಮರ್‌ ಯಾರ್ಡ್‌ ಸಣ್ಣ ಕಂಟ್ರೋಲ್‌ ರೂಂನಿಂದ ಇದನ್ನು ನಿಯಂತ್ರಿಸಬಹುದು. ಇದರ ನಿರ್ಮಾಣ ವೆಚ್ಚ ದುಬಾರಿಯಾದರೂ, ನಿರ್ವಹಣೆ ಮಾತ್ರ ಬಹಳಷ್ಟು ಸುಲಭ. 30×40 ಚದರ ಅಡಿ ಜಾಗದಲ್ಲಿಯೂ ಈ ಸಬ್‌ ಸ್ಟೇಷನ್‌ ನಿರ್ಮಿಸಬಹುದಾಗಿದೆ.

ಕೆಪಿಟಿಸಿಎಲ್‌; ಇನ್ನಷ್ಟೇ ಅನುಷ್ಠಾನ
ನೆಹರೂ ಮೈದಾನದ ಬಳಿ ಇರುವ ಮೆಸ್ಕಾಂನ 33 ಕೆ.ವಿ. ಸಾಮರ್ಥ್ಯದ ಸಬ್‌ ಸ್ಟೇಷನ್‌ ಅನ್ನು ಕೆಪಿಟಿಸಿಎಲ್‌ ವತಿಯಿಂದ 110 ಕೆ.ವಿ.ಯ ಅತ್ಯಾಧುನಿಕ ತಂತ್ರಜ್ಞಾನದ ಜಿಐಎಸ್‌(ಗ್ಯಾಸ್‌ ಇನ್ಸುಲೇಟೆಡ್‌ ಸ್ಟೇಷನ್‌) ಆಗಿ ಮೇಲ್ದರ್ಜೆಗೇರಿಸುವ ಬಗ್ಗೆ ಒಂದೆರಡು ವರ್ಷದಿಂದ ಚರ್ಚೆ ನಡೆಯಿತಾದರೂ ಅದು ಇನ್ನಷ್ಟೇ ಅನುಷ್ಠಾನಗೊಳ್ಳಬೇಕಿದೆ. ಅದಕ್ಕಿಂತಲೂ ಮೊದಲು ಇದೀಗ ಮೆಸ್ಕಾಂನ ಜಿಐಎಸ್‌ ನಿರ್ಮಾಣ ಕಾಮಗಾರಿ ಉರ್ವದಲ್ಲಿ ಆರಂಭವಾಗಿದೆ.

1 ಕಿ.ಮೀ. ವ್ಯಾಪ್ತಿಯಲ್ಲಿ ಭೂಗತ ಕೇಬಲ್‌
ಕೆಪಿಟಿಸಿಎಲ್‌ನ ಕಾವೂರಿನಲ್ಲಿರುವ 220 ಕೆ.ವಿ. ಶರಾವತಿ ವಿದ್ಯುತ್‌ ಸ್ವೀಕರಣಾ ಕೇಂದ್ರದಿಂದ ಜಿಲ್ಲೆಯ ಬೇರೆ ಬೇರೆ ಭಾಗದ ಮೆಸ್ಕಾಂ ಸಬ್‌ಸ್ಟೇಷನ್‌ಗೆ ವಿದ್ಯುತ್‌ ಸರಬರಾಜಾಗುತ್ತದೆ. ಇದರಂತೆ ಮಣ್ಣಗುಡ್ಡ ಸಬ್‌ಸ್ಟೇಷನ್‌ಗೆ ವಿದ್ಯುತ್‌ ಸರಬರಾಜಾಗುತ್ತಿದೆ. ಇದೀಗ ಉರ್ವದಲ್ಲಿ ಜಿಐಎಸ್‌ ಸ್ಟೇಷನ್‌ ಆಗುವ ಕಾರಣದಿಂದ ಮಣ್ಣಗುಡ್ಡದಿಂದ ಉರ್ವದವರೆಗೆ ಸುಮಾರು 1 ಕಿ.ಮೀ. ವ್ಯಾಪ್ತಿಯಲ್ಲಿ ಭೂಗತ ಕೇಬಲ್‌ ಅಳವಡಿಸಲಾಗುತ್ತದೆ. ಇದರ ಕಾಮಗಾರಿ ಸದ್ಯ ಆರಂಭವಾಗಿದೆ ಎಂದು ಮೆಸ್ಕಾಂ ಮೂಲಗಳು ತಿಳಿಸಿವೆ.

ಕಾಮಗಾರಿ ಆರಂಭ
ಸಾಕಷ್ಟು ಸ್ಥಳಾವಕಾಶ ಲಭ್ಯವಿಲ್ಲದ ನಗರ ಪ್ರದೇಶಗಳಲ್ಲಿ ಗ್ಯಾಸ್‌ ಇನ್ಸುಲೇ ಟೆಡ್‌ ವಿದ್ಯುತ್‌ ಉಪಕೇಂದ್ರಗಳನ್ನು ಸ್ಥಾಪಿಸಲು ಮೆಸ್ಕಾಂ ಉದ್ದೇಶಿಸಿದೆ. ಈ ಯೋಜನೆಯಂತೆ ಮಂಗಳೂರಿನ ಉರ್ವದಲ್ಲಿ ಕಾಮಗಾರಿ ಆರಂಭಗೊಂಡಿದ್ದು, ಪ್ರಗತಿಯಲ್ಲಿದೆ.
 - ಸ್ನೇಹಲ್‌ ಆರ್‌., ವ್ಯವಸ್ಥಾಪಕ ನಿರ್ದೇಶಕರು-ಮೆಸ್ಕಾಂ

- ದಿನೇಶ್‌ ಇರಾ

ಟಾಪ್ ನ್ಯೂಸ್

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.