‘ಉತ್ತಮ ಸಮಾಜ ಕಟ್ಟಲು ಹೆಚ್ಚಿನ ಜವಾಬ್ದಾರಿ ವಹಿಸಿ’

Team Udayavani, Jul 3, 2017, 3:05 AM IST

Vasthu-2-7.jpg

ಬೆಳ್ತಂಗಡಿ: ರಾಜಕಾರಣಿಗಳು ಒಡೆದು ಆಳುವ ನೀತಿಯನ್ನು ಅನುಸರಿಸುತ್ತಿದ್ದರೆ, ಅಧಿಕಾರಿಗಳು ಹಣ ಮಾಡುವುದೇ ತಮ್ಮ ಉದ್ದೇಶವೆಂದು ತಿಳಿದುಕೊಂಡಂತಿದೆ. ಹೀಗಾಗಿ ಇವರಿಬ್ಬರಿಂದಲೂ ಸಮಾಜ ಕಟ್ಟಲು ಸಾಧ್ಯವಿಲ್ಲ ಎಂಬುದು ನಿಶ್ಚಿತ. ಹೀಗಾಗಿ ಇಂದು ಸಮಾಜ ಪತ್ರಕರ್ತರ ಕಡೆಗೆ ನೋಡುತ್ತಿದೆ. ಉತ್ತಮ ಸಮಾಜ ಕಟ್ಟಲು ನಾವು ಹೆಚ್ಚಿನ ಜವಾಬ್ದಾರಿ ಹೊರಬೇಕಾಗಿದೆ ಎಂದು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸದಾಶಿವ ಶೆಣೈ ಹೇಳಿದರು. ಅವರು ಶನಿವಾರ ಬೆಳ್ತಂಗಡಿ ಶ್ರೀ ಗುರುನಾರಾಯಣ ಸಭಾಂಗಣದಲ್ಲಿ ಬೆಳ್ತಂಗಡಿ ತಾ| ಪತ್ರಕರ್ತರ ಸಂಘದ ವತಿಯಿಂದ ನಡೆದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವಂತಹ ಇಂದಿನ ಸನ್ನಿವೇಶದಲ್ಲಿ ಪತ್ರಕರ್ತರು ಚಳವಳಿಗಾರ, ಹೋರಾಟಗಾರರಾಗಿ ಗುರುತಿಸಿಕೊಳ್ಳುವ ಅಗತ್ಯವಿದೆ. ನ್ಯಾಯಾಂಗ, ಶಾಸಕಾಂಗದಲ್ಲೂ ಒಳ್ಳೆಯವರಿದ್ದಾರೆ. ಅವರನ್ನು ಗುರುತಿಸುವ ಕೆಲಸ ಪತ್ರಕರ್ತರಿಂದ ಆಗಬೇಕು. ಸಮಾಜದ ರೋಗವನ್ನು ನಿವಾರಿಸುವ ಕಾರ್ಯ ನಾವು ಮಾಡಬೇಕಾಗಿದೆ ಎಂದರು.

ಉಪನ್ಯಾಸ ನೀಡಿದ ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ ಅವರು, ಮೂವತ್ತೈದು ವರ್ಷಗಳ ಹಿಂದಿನ ವರದಿಗಾರಿಕೆಗೂ ಇಂದಿನದಕ್ಕೂ ಬಹಳಷ್ಟು ವ್ಯತ್ಯಾಸಗಳನ್ನು ಕಂಡಿದೆ. ಇಂದು ಸ್ವಂತಿಕೆ ಇಲ್ಲದ ವರದಿಗಾರಿಕೆಯೇ ಹೆಚ್ಚಾಗಿದೆ. ಅಚ್ಚುಕಟ್ಟುತನ, ಸ್ವಾತಂತ್ರ್ಯ, ಸಮಚಿತ್ತತೆಯಿಂದ, ಬದ್ಧತೆಯಿರುವ ಬರವಣಿಗೆಯೇ ಇಲ್ಲವಾಗಿದೆ. ಪತ್ರಕರ್ತನಿಗೆ ಸಹಜ ಕುತೂಹಲ ಇರಬೇಕೇ  ಹೊರತು ಕೆಟ್ಟ ಕುತೂಹಲ ಇರಬಾರದು. ಪ್ರತಿಯೊಬ್ಬರಿಗೂ ಸ್ವಾತಂತ್ರ್ಯ, ಅವಕಾಶ ಇದೆ. ಸ್ವಂತ ವ್ಯಾಖ್ಯಾನಕ್ಕೆ ಅವಕಾಶವಿದ್ದರೂ ಯಾಕೆ ಬರೆಯಲು ಮುಂದಾಗುತ್ತಿಲ್ಲ ಎಂದು ಪ್ರಶ್ನಿಸಿದರು. ಉದಯವಾಣಿಯ ಬೆಳ್ತಂಗಡಿಯ ವಿಶ್ರಾಂತ ಹಿರಿಯ ಪತ್ರಕರ್ತ ಅಶೋಕ್‌ ಪಿ.ಎಸ್‌. ಅವರನ್ನು ಸಮ್ಮಾನಿಸಲಾಯಿತು.

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಶ್ರೀನಿವಾಸ ನಾಯಕ್‌ ಇಂದಾಜೆ ಅಭ್ಯಾಗತರಾಗಿದ್ದರು. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಮನೋಹರ ಬಳಂಜ ವಹಿಸಿದ್ದರು. ಈ ಸಂದರ್ಭ ಕಳೆದ ಎಸೆಸೆಲ್ಸಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ದಾಖಲಿಸಿದ ಗುರುವಾಯನಕರೆ ಪ್ರೌಢ ಶಾಲೆ ಹಾಗೂ ಮಚ್ಚಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಕಬ್ಬಿಣದ ಕಪಾಟುಗಳನ್ನು ಕೊಡುಗೆಯಾಗಿ ನೀಡಲಾಯಿತು. ಹಾಗೆಯೇ ಕಳೆದ ಎಸೆಸೆಲ್ಸಿ  ಪರೀಕ್ಷೆಯಲ್ಲಿ ತಾಲೂಕಿನ ಸರಕಾರಿ ಪ್ರೌಢಶಾಲೆಗಳಲ್ಲಿ ಅತಿ ಹೆಚ್ಚಿನ ಅಂಕ ಪಡೆದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಚ್ಚಿನದ ನವೀನ್‌, ಮಚ್ಚಿನ ಪ್ರೌಢಶಾಲೆಯ ಸಫ್ರಿನಾ ಬಾನು, ಕಾಶೀಪಟ್ಣ ಪ್ರೌಢಶಾಲೆಯ ಪ್ರಜೇಶ್‌ ಹಾಗೂ ಗೇರುಕಟ್ಟೆ ಪ್ರೌಢಶಾಲೆಯ ಮೋಹಿನಿ ಅವರಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು. ಸಂಘದ ಕಾರ್ಯದರ್ಶಿ ಶಿಬಿ ಧರ್ಮಸ್ಥಳ ಸ್ವಾಗತಿಸಿದರು. ಕೋಶಾಧಿಕಾರಿ ದೀಪಕ್‌ ಆಠವಳೆ ಉಪನ್ಯಾಸಕರ ಪರಿಚಯ ಮಾಡಿದರು. ಜತೆ ಕಾರ್ಯದರ್ಶಿ ಪದ್ಮನಾಭ ಕುಲಾಲ್‌ ವಂದಿಸಿದರು. ಉಪಾಧ್ಯಕ್ಷ ಭುವನೇಶ್‌ ಗೇರುಕಟ್ಟೆ ಕಾರ್ಯಕ್ರಮ ನಿರ್ವಹಿಸಿದರು.

ಪತ್ರಕರ್ತ ವಸ್ತುವಲ್ಲ
ಪ್ರಾಮಾಣಿಕತೆ, ಬದ್ಧತೆ, ಸಮಚಿತ್ತತೆ ಇಲ್ಲದಿರುವವನು ಉತ್ತಮ ಪತ್ರಕರ್ತನಾಗಲು ಸಾಧ್ಯವಿಲ್ಲ. ಜಾಹೀರಾತಿನ ಪ್ರಭಾವದಿಂದಾಗಿ ಪತ್ರಿಕೆಯ ಸಂಪಾದಕನ ಗೌರವ, ಘನತೆಯೇ ಹೋಗಿದೆ. ಪತ್ರಿಕೆಗೆ ಹಾಕಿದ ಬಂಡವಾಳ ಹಿಂತಿರುಗುವ ಬಗ್ಗೆ ಚಿಂತೆ ಇರುವುದೇ ದುರಂತ. ಪತ್ರಕರ್ತ ಎಂಬುದು ವಸ್ತುವಲ್ಲ. ಆತ ಅದರಂತೆ ವರ್ತಿಸುವುದೂ ಸರಿಯಲ್ಲ.
– ಚಿದಂಬರ ಬೈಕಂಪಾಡಿ

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.