ಕಡಬ ತಾ| ಅನುಷಾನಕ್ಕೆ ಸಿದ್ಧತೆ  


Team Udayavani, May 31, 2018, 12:49 PM IST

31-may-10.jpg

ಕಡಬ : ನೂತನ ಕಡಬ ತಾ| ಅನುಷ್ಠಾನಕ್ಕೆ ಸಂಬಂಧಿಸಿ ಪುತ್ತೂರು ಸಹಾಯಕ ಕಮಿಷನರ್‌ ಕೃಷ್ಣ ಮೂರ್ತಿ ನೇತೃತ್ವದಲ್ಲಿ ಕಡಬದ ಅಂಬೇಡ್ಕರ್‌ ಭವನದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ಬುಧವಾರ ಜರಗಿತು. ನೂತನ ತಾ| ಕೇಂದ್ರದಲ್ಲಿ ವಿವಿಧ ಇಲಾಖೆಗಳ ಕಚೇರಿಗಳನ್ನು ತೆರೆಯುವುದು, ಜಮೀನು ಕಾದಿರಿಸುವುದು, ಸಿಬಂದಿ ನೇಮಕ ಕುರಿತು 10 ದಿನಗಳೊಳಗೆ ಯೋಜನೆ ಸಿದ್ಧಪಡಿಸು ವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸರಕಾರ ಹೊಸ ತಾಲೂಕು ಘೋಷಣೆ ಮಾಡಿದೆ. ಅದರ ಅನುಷ್ಠಾನಕ್ಕೆ ಹಲವಾರು ಪೂರಕ ಸಿದ್ಧತೆಗಳು ಆಗಬೇಕಿವೆ. ಈ ನಿಟ್ಟಿನಲ್ಲಿ ಎಲ್ಲ ಅಧಿಕಾರಿಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸಬೇಕಿದೆ ಎಂದರು. ಹೋಬಳಿ ರಚನೆ ಬಗ್ಗೆಯೂ ಸಹಾಯಕ ಆಯುಕ್ತರು ಮಾಹಿತಿ ಪಡೆದರು.

ಎಲ್ಲ ಗ್ರಾಮಗಳಿಗೆ ಹತ್ತಿರವಾಗುವ ಆಲಂಕಾರನ್ನು ಹೋಬಳಿ ಮಾಡುವ ಬಗ್ಗೆ ಯೋಜನೆ ತಯಾರಿಸುವಂತೆ ಸೂಚನೆ ನೀಡಿದರು.

ಕಡಬ ಪ್ರಭಾರ ತಹಶೀಲ್ದಾರ್‌ ಅನಂತ ಶಂಕರ, ಪುತ್ತೂರು ತಾ.ಪಂ. ಇಒ ಜಗದೀಶ್‌, ಕಡಬ ಕಂದಾಯ ನಿರೀಕ್ಷಕ ಕೊರಗಪ್ಪ ಹೆಗ್ಡೆ, ಕಡಬ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಸುಚಿತ್ರಾ ರಾವ್‌, ಪುತ್ತೂರು ಸಿಡಿಪಿಒ ಶಾಂತಿ ಹೆಗ್ಡೆ, ಪುತ್ತೂರು ಉಪ ನೋಂದಣಾಧಿಕಾರಿ ಸುನೀತಾ ರವಿಶಂಕರ್‌, ಅಂಗನವಾಡಿ ಮೇಲ್ವಿಚಾರಕಿ ಹೇಮಾ ರಾಮದಾಸ್‌, ಕ್ಷೇತ್ರ ಶಿಕ್ಷಣ ಸಂಯೋಜಕ ಉದಯ ಶಂಕರ್‌, ಕೃಷಿ ಅಧಿಕಾರಿ ತಿಮ್ಮಪ್ಪ ಗೌಡ, ಹಿಂದುಳಿದ ವರ್ಗಗಳ ಇಲಾಖೆಯ ಅಧಿಕಾರಿ ಕೆ. ತಾರಾನಾಥ, ಪಶು ಸಂಗೋಪನ ಇಲಾಖೆಯ ಸಹಾಯಕ ನಿರ್ದೇಶಕ ಡಾ| ಸುರೇಶ್‌ ಭಟ್‌, ಪಶು ವೈದ್ಯಾಧಿಕಾರಿ ಡಾ| ಧರ್ಮಪಾಲ ಉಪಸ್ಥಿತರಿದ್ದರು. ಸಭೆಯ ಬಳಿಕ ವಿವಿಧ ಇಲಾಖೆಗಳಿಗೆ ಕಾದಿರಿಸಿದ ಮರ್ದಾಳ ಗ್ರಾ.ಪಂ.ಗೆ ಒಳಪಟ್ಟ ಬಂಟ್ರ ಗ್ರಾಮದ ಮುಂಚಿಕಾಪು ಪ್ರದೇಶ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ಪಟ್ಟಣ ಪಂ. ಚರ್ಚೆ
ಕಡಬ ಗ್ರಾ.ಪಂ. ಅನ್ನು ಪಟ್ಟಣ ಪಂ. ಆಗಿ ಮೇಲ್ದರ್ಜೆ ಗೇರಿಸುವ ನಿಟ್ಟಿನಲ್ಲಿ ಸರಕಾರಕ್ಕೆ ವರದಿ ಸಲ್ಲಿಸಿರುವ ಮಾಹಿತಿಯನ್ನು ಕಡಬ ಪಿಡಿಒ ಚೆನ್ನಪ್ಪ ಗೌಡ ಸಹಾಯಕ ಆಯುಕ್ತರ ಮುಂದಿಟ್ಟರು. ಕಡಬ ಹಾಗೂ ಕೋಡಿಂಬಾಳ ಗ್ರಾಮಗಳನ್ನೊಳಗೊಂಡ ಪಟ್ಟಣ ಪಂ. ರಚನೆಗೆ ಯೋಜನೆ ಸಿದ್ಧಪಡಿಸಿ ಕಳುಹಿಸಲಾಗಿದೆ. ಪಟ್ಟಣ ಪಂ. 10 ಸಾವಿರಕ್ಕಿಂತ ಹೆಚ್ಚು ಜನ ಸಂಖ್ಯೆ ಬೇಕಾಗುತ್ತದೆ. ಕಡಬ, ಕೋಡಿಂಬಾಳದಲ್ಲಿ 9,500ರಷ್ಟು ಜನಸಂಖ್ಯೆ ಇದೆ ಎಂದರು. ಹಾಗಿದ್ದರೆ ಬಂಟ್ರ ಗ್ರಾಮವನ್ನು ಸೇರಿಸಿಕೊಂಡು ಯೋಜನೆ ಸಿದ್ಧಪಡಿಸಿ ಎಂದು ಎಸಿ ಸೂಚಿಸಿದರು. 

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.