ಕಡಬ ಪರಿಸರದಲ್ಲೂ ವರ್ಷಧಾರೆ; ನಷ್ಟ

Team Udayavani, Apr 8, 2019, 4:57 PM IST

ಕಡಬ : ತಾಲೂಕಿನ ಹಲವೆಡೆ ಶುಕ್ರವಾರ ರಾತ್ರಿ ಸುರಿದ ಭಾರೀ ಗಾಳಿ ಮಳೆಗೆ ಕೃಷಿ ಹಾಗೂ ಸೊತ್ತುಗಳಿಗೆ ಅಪಾರ
ಹಾನಿಯಾಗಿದ್ದು, ಲಕ್ಷಾಂತರ ರೂ. ನಷ್ಟ ಸಂಭವಿಸಿದೆ.
ಐತ್ತೂರು ಗ್ರಾಮದ ಕಲ್ಲಾಜೆಯಲ್ಲಿ ಪುಟ್ಟಣ್ಣ ಗೌಡ ಎಂಬವರ ಮನೆಯ ಛಾವಣಿ ಗಾಳಿಗೆ ಕಿತ್ತು ಹೋಗಿದ್ದು, ಮನೆಯಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಸುಂಕದಕಟ್ಟೆಯ ಎಸ್‌. ಅಬ್ದುಲ್‌ ರಹಿಮಾನ್‌ ಮೂಜೂರು, ಅಬ್ದುಲ್‌ ಜಲೀಲ್‌, ಎಸ್‌.ಆದಂ, ಆದಂ ಹಾಜಿ, ಸೌದಾ ಎಂಬವರ ಮನೆಗಳಿಗೆ ಹಾನಿಯಾಗಿದೆ. ಸುಂಕದಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಛಾವಣಿ ಭಾಗಶಃ ಹಾನಿಯಾಗಿದ್ದು, ಗೋಡೆ ಬಿರುಕು ಬಿಟ್ಟಿದೆ. ಕಲ್ಲಾಜೆ ಹಾಗೂ ನೆಟ್ಟಣ ಪರಿಸರದಲ್ಲಿ ಹಲವು ಭಾರೀ ಗಾತ್ರದ ಮರಗಳು ವಿದ್ಯುತ್‌ ಲೈನ್‌ಗಳ ಮೇಲೆರಗಿ ಹತ್ತಕ್ಕೂ ಹೆಚ್ಚು ವಿದ್ಯುತ್‌ ಕಂಬಗಳು ಧರೆಗೆ ಉರುಳಿವೆ. ಪರಿಣಾಮ ಪರಿಸರದಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಿತ್ತು.
ಕಡಬ ಸಮೀಪದ ಕೇವಳ ಎಂಬಲ್ಲಿ ವಿಶ್ವನಾಥ ಗೌಡ ಎಂಬವರ ಮನೆಯ ಮೇಲೆ ಪಕ್ಕದ ಭಾರೀ ಗಾತ್ರದ ಮಾವಿನ
ಮರವೊಂದು ಉರುಳಿ ಬಿದ್ದು ಮನೆಯ ಛಾವಣಿ ಹಾನಿಯಾಗಿದೆ. ಮಾತ್ರವಲ್ಲದೆ ಮನೆಯಂಗಳದಲ್ಲಿ ನಿಲ್ಲಿಸಲಾಗಿದ್ದ ಅಟೋರಿಕ್ಷಾ ಹಾಗೂ ಬೈಕ್‌ ಸಂಪೂರ್ಣ ಜಖಂಗೊಂಡಿವೆ. ಮನೆಯವರು ಅದೃಷ್ಟವಶಾತ್‌ ಅಪಾಯದಿಂದ ಪಾರಾಗಿದ್ದಾರೆ. ವಿಶ್ವನಾಥ ಗೌಡರಿಗೆ 1 ಲಕ್ಷ ರೂ. ನಷ್ಟ ಉಂಟಾಗಿದೆ. ಸ್ಥಳಕ್ಕೆ ಕಂದಾಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ